ದಾವಣಗೆರೆ: ರಂಭಾಪುರಿ ಶ್ರೀಗಳ ಹೇಳಿಕೆ ಖಂಡಿಸಿ ಇಂದು ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ ದಾವಣಗೆರೆಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.ಇದೆ ವೇಳೆ ಮಾದರ ಚೆನ್ನಯ್ಯ ಸ್ವಾಮೀಜಿ ಮಾತನಾಡಿ, ಮಾನವ ಧರ್ಮಕ್ಕೆ ಜಯವಾಗಲಿ ಎಂದು ಹೇಳುತ್ತಾರೆ. ಎಲ್ಲಾ ಸಮಾಜದ ಜನರು ಒಳ್ಳೆಯದೇ ಆಗಬೇಕು ಎನ್ನುವುದು ಇದರ ಅರ್ಥ. ಆದರೆ ಇವರು ಹೇಳಿಕೆ ನೀಡಿದ್ದು ಮಾನವ ಧರ್ಮಕ್ಕೆ ಅಪಮಾನ ಮಾಡಿದ್ದಂತಿದೆ.ಜಾತಿಗೊಂದು ಮಠಾಧೀಶರು ಸಮಾಜವನ್ನು ಜಾಗೃತಿ ಮಾಡುವ ಕೆಲಸ ಮಾಡುತ್ತಾ ಬಂದಿವೆ. ಜೊತೆಗೆ ಸಮಾಜದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಇಂತಹ ವ್ಯವಸ್ಥೆಯಲ್ಲಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಕೂಡಲೇ ಹೇಳಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಇನ್ನು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮಾತನಾಡಿ, ನಿಮ್ಮ ಮಠ ಜಾತ್ಯಾತೀತವೆ..? ನಿಮ್ಮ ಮಠದಲ್ಲಿ ಎಷ್ಟು ಜನರಿಗೆ ಜಾತ್ಯಾತೀತತೆ ನಡೆಸಿಕೊಂಡಿದ್ದೀರಾ.. ಸರ್ವ ಸಮುದಾಯಗಳಿಗೆ ಉದ್ಯೋಗ ಕೊಡಿಸಿದ್ದೀರಾ..? ಚಾಲಕ, ಸಹಚರ ಹಾಗೂ ಟ್ರಸ್ಟಿಗಳನ್ನು ಬೇರೆ ಜಾತಿಯವರನ್ನು ನೀವು ಇಟ್ಟುಕೊಂಡಿದ್ದೀರಾ ಎಂದು ರಂಭಾಪುರಿ ಶ್ರೀಗಳಿಗೆ ಪ್ರಶ್ನೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕಾಗಿನೆಲೆ ಕನಕ ಗುರುಪೀಠದ ಶ್ರೀ ಸೇರಿದಂತೆ 15ಕ್ಕೂ ಹೆಚ್ಚು ಮಠಾಧೀಶರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



