ಬೆಂಗಳೂರು: ಧರ್ಮಸ್ಥಳ ಪ್ರಕರಣ ಕುರಿತು ದೇಶ ಹಾಗೂ ನಾಡಿನಾದ್ಯಂತ ತೀವ್ರ ಚರ್ಚೆಯಾಗುತ್ತಿರುವಂತೆಯೇ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಹಕಾರ ಸಚಿವ ಕೆ. ಎನ್, ರಾಜಣ್ಣ ಭಾನುವಾರ ತಮ್ಮದೇ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.ದೇವಸ್ಥಾನ ವ್ಯಾಪ್ತಿಯಲ್ಲಿ ಶವ ಹೂತಿದ್ದೇನೆ ಎಂದು ದೂರು ನೀಡಲು ಬಂದ ವ್ಯಕ್ತಿಯು ತಂದಿದ್ದ ಬುರುಡೆಯ ಪೂರ್ವಾಪರಗಳನ್ನು ವಿಚಾರಿಸದೆ ತನಿಖೆಗೆಆದೇಶಿಸಿದ್ದುಸರಿಯಾದಕ್ರಮವಲ್ಲಎಂದಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂಮಿಯಲ್ಲಿ ಹೂತ ನಂತರ ಮೃತದೇಹವನ್ನು ಹೊರತೆಗೆಯಲು ಕಾನೂನಿನಲ್ಲಿ ನಿರ್ದಿಷ್ಟ ನಿಯಮಗಳಿವೆ. ತಾಲ್ಲೂಕು ಮ್ಯಾಜಿಸ್ಟ್ರೇಟ್ ಅವರ ಅನುಮತಿ ಮತ್ತು ಉಪಸ್ಥಿತಿಯಲ್ಲಿ ಮಾತ್ರ ದೇಹವನ್ನು ಹೊರತೆಗೆಯಬೇಕು, ಇದನ್ನು ‘ಎಕ್ಸ್ಯೂಮ್’ ಎನ್ನಲಾಗುತ್ತದೆ ಎಂದು ತಿಳಿಸಿದರು.ಆದರೆ, ಈ ಪ್ರಕರಣದಲ್ಲಿ ತಲೆಬುರುಡೆಯನ್ನು ಕಾನೂನುಬಾಹಿರವಾಗಿ ತರಲಾಗಿದ್ದು, ಇದನ್ನು ಎಲ್ಲಿಂದ, ಹೇಗೆ ಮತ್ತು ಯಾರ ಆದೇಶದ ಮೇರೆಗೆ ತೆಗೆಯಲಾಗಿದೆ ಎಂಬುದನ್ನು ಮೊದಲು ತನಿಖೆ ಮಾಡಬೇಕು ಎಂದು ರಾಜಣ್ಣ ಒತ್ತಾಯಿಸಿದ್ದಾರೆ. ಇದು ಕೇವಲ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯುವ ವ್ಯವಸ್ಥಿತ ಸಂಚು ಎಂದು ಅವರು ಆರೋಪಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







