ಈ ವರ್ಷ ಪ್ರಭಾಸ್ ನಟನೆಯ ಯಾವುದೇ ಸಿನಿಮಾ ಬಿಡುಗಡೆ ಆಗಿಲ್ಲ. ‘ದಿ ರಾಜಾ ಸಾಬ್’ ಸಿನಿಮಾ ನೋಡಲು ಕಾದಿದ್ದ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಯಾಕೆಂದರೆ, ಈ ಚಿತ್ರದ ಬಿಡುಗಡೆ ದಿನಾಂಕ ಮೇಲಿಂದ ಮೇಲೆ ಬದಲಾಗುತ್ತಲೇ ಇದೆ. ಇನ್ನೂ ಈ ಚಿತ್ರಕ್ಕೆ ಶೂಟಿಂಗ್ ಮುಗಿದಿಲ್ಲ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ‘ದಿ ರಾಜಾ ಸಾಬ್’ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕೆಲಸಗಳು ತಡ ಆಗುತ್ತಿರುವುದರಿಂದ ರಿಲೀಸ್ ಡೇಟ್ ಮುಂದೂಡಲಾಗಿದೆ. ಹಾಗಾದರೆ ಪ್ರಭಾಸ್ ಅಭಿಮಾನಿಗಳು ‘ದಿ ರಾಜಾ ಸಾಬ್’ (The Raja Saab) ಸಿನಿಮಾ ನೋಡುವುದು ಯಾವಾಗ? 2026ರಲ್ಲಿ!ಹೌದು, ‘ದಿ ರಾಜಾ ಸಾಬ್’ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. 2026ರ ಜನವರಿ 9ರಂದು ಈ ಸಿನಿಮಾ ಬಿಡುಗಡೆ ಆಗಲಿದೆ! ಮೊದಲು ಇದ್ದ ಪ್ಲ್ಯಾನ್ ಬೇರೆಯೇ ಆಗಿತ್ತು. 2025ರ ಏಪ್ರಿಲ್ ತಿಂಗಳಲ್ಲಿ ‘ದಿ ರಾಜಾ ಸಾಬ್’ ಚಿತ್ರವನ್ನು ತೆರೆಕಾಣಿಸಲು ನಿರ್ಧರಿಸಲಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ನಂತರ ಡಿಸೆಂಬರ್ 5ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಅದು ಕೂಡ ಸಾಧ್ಯವಾಗುತ್ತಿಲ್ಲ.
ಒಂದಲ್ಲಾ ಒಂದು ಕಾರಣಕ್ಕೆ ‘ದಿ ರಾಜಾ ಸಾಬ್’ ಸಿನಿಮಾದ ರಿಲೀಸ್ ದಿನಾಂಕ ಮುಂದೂಡಿಕೆ ಆಗುತ್ತಲೇ ಇದೆ. ಇದು ಪ್ರಭಾಸ್ ಅವರು ನಟಿಸಿರುವ ಮೊದಲ ಹಾರರ್ ಸಿನಿಮಾ. ಆ ಕಾರಣದಿಂದ ಅಭಿಮಾನಿಗಳಿಗೆ ಸಹಜವಾಗಿಯೇ ಹೆಚ್ಚು ನಿರೀಕ್ಷೆ ಇದೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ನೋಡಿ ಅಭಿಮಾನಿಗಳಿಗೆ ಥ್ರಿಲ್ ಆಗಿದೆ. ಆದರೆ ಶೂಟಿಂಗ್ ವಿಳಂಬ ಆಗುತ್ತಲೇ ಇದೆ.
‘ದಿ ರಾಜಾ ಸಾಬ್’ ಸಿನಿಮಾ 2026ರ ಜನವರಿ 9ರಂದು ಬಿಡುಗಡೆ ಆದರೆ ಪೈಪೋಟಿ ಜಾಸ್ತಿ ಇರಲಿದೆ. ಅದು ಸಂಕ್ರಾಂತ್ರಿ ಹಬ್ಬದ ಸಮಯ. ಆ ಸಂದರ್ಭದಲ್ಲಿ ತೆಲುಗು ಮತ್ತು ತಮಿಳಿನಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತವೆ. ಈಗಾಗಲೇ ಒಂದಷ್ಟು ಸಿನಿಮಾಗಳು ತಮ್ಮ ರಿಲೀಸ್ ದಿನಾಂಕವನ್ನು ಘೋಷಿಸಿಕೊಂಡಿವೆ. ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಕೂಡ ಜನವರಿ 9ಕ್ಕೆ ರಿಲೀಸ್ ಆಗಲಿದೆ.ವರದಿಗಳ ಪ್ರಕಾರ, ಪ್ರಭಾಸ್ ಅವರು ಅಕ್ಟೋಬರ್ ತಿಂಗಳಲ್ಲಿ ‘ದಿ ರಾಜಾ ಸಾಬ್’ ಸಿನಿಮಾದ ಶೂಟಿಂಗ್ ಮುಗಿಸಿಕೊಳ್ಳಲಿದ್ದಾರೆ. ಆ ಬಳಿಕ ಅವರು ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ. ಆ ಸಿನಿಮಾ ಮೇಲೆ ಕೂಡ ಅಭಿಮಾನಿಗಳು ಸಖತ್ ನಿರೀಕ್ಷೆ ಇದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







