ನವದೆಹಲಿ: ಜೂ.12ರಂದು ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನದ ಭೀಕರ ದುರಂತಕ್ಕೆ ಇಂಧನ ಸ್ವಿಚ್ ಆಫ್ ಆಗಿದ್ದೇ ಕಾರಣ ಎಂಬ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಇಂಧನ ಸ್ವಿಚ್‌ಗಳು ಆಫ್ ಆದವು. ಕೂಡಲೇ ಒಬ್ಬ ಪೈಲಟ್ ‘ಏಕೆ ಆಫ್ ಮಾಡಿದೆ’ ಎಂದು ಕೇಳುತ್ತಾರೆ. ‘ನಾನು ಮಾಡಿಲ್ಲ’ ಎಂದು ಮತ್ತೊಬ್ಬರು ಹೇಳು ವುದು ವಿಮಾನದಲ್ಲಿ ರೆಕಾರ್ಡ್ ಆಗಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಎರಡೂ ಎಂಜಿನ್‌ಗಳು ವಿಫಲವಾಗಿ, 32 ಸೆಕೆಂಡ್ ಗಳಲ್ಲಿ ವಿಮಾನ ಪತನವಾಗುತ್ತದೆ. ಸದ್ಯಕ್ಕೆ ವಿಧ್ವಂಸಕ ಕೃತ್ಯದ ಕುರಿತು ಮಾಹಿತಿ ಸಿಕ್ಕಿಲ್ಲ ಎಂದು ವಿಮಾನ ಅಪಘಾತ ತನಿಖಾ ದಳ (ಎಎಐಬಿ) ಶುಕ್ರವಾರ ತಡರಾತ್ರಿ ತನಿಖಾ ವರದಿ ಬಿಡುಗಡೆ ಮಾಡಿದೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



