ಚಿತ್ರದುರ್ಗ: ಕ್ಷಯ ನಿರ್ಮೂಲನೆಗೆ ಸಮುದಾಯದ ಸಹಭಾಗಿತ್ವ ಬಹು ಮುಖ್ಯ. ಕ್ಷಯರೋಗದ ಲಕ್ಷಣಗಳು ಕಂಡುಬಂದ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಫ ಪರೀಕ್ಷೆ ಮಾಡಿಸಿ, ರೋಗ ದೃಢಪಟ್ಟಲ್ಲಿ ಉಚಿತವಾಗಿ ಸರ್ಕಾರದಿಂದ ಮನೆಯ ಬಾಗಿಲಿಗೆ ಔಷಧಿ ಒದಗಿಸಲಾಗುತ್ತದೆ. ಶೀಘ್ರ ಪತ್ತೆ ತ್ವರಿತ ಚಿಕಿತ್ಸೆಯಿಂದ ಕ್ಷಯ ರೋಗವನ್ನು ಸಂಪೂರ್ಣವಾಗಿ ತೊಲಗಿಸಬಹುದು ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಆರೋಗ್ಯ ಇಲಾಖೆ, ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿಗಳ ಕಚೇರಿ, ಸ್ವಾಮಿ ವಿವೇಕಾನಂದ ಯೂತ್ ಮೊಮೆಂಟ್, ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿ ಸಹಯೋಗದಲ್ಲಿ ಕ್ಷಯರೋಗದ ಚಿಕಿತ್ಸೆ ಸಂಪೂರ್ಣವಾಗಿ ಪಡೆದು ಒಂದು ವರ್ಷವಾದ ಫಲಾನುಭವಿಗಳು, ರೋಗಿಯ ಮನೆಯ ಸಂಪರ್ಕಿಗಳು, ಮಧುಮೇಹ ಇರುವ ಸಾರ್ವಜನಿಕರಿಗೆ ಡಿಜಿಟಲ್ ಎಕ್ಸ್ ರೇ ಮುಖಾಂತರ ಉಚಿತವಾಗಿ ಕ್ಷಯ ಪತ್ತೆ ಹಚ್ಚುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಚಿಕಿತ್ಸೆ ಪಡೆಯದ ಕ್ಷಯ ರೋಗಿಯು ಕೆಮ್ಮುವುದರಿಂದ ಸೀನುವುದರಿಂದ ಕ್ಷಯ ರೋಗವು ಒಬ್ಬರಿಂದ ಮತ್ತೊಬ್ಬರಿಗೆ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಹರಡುವ ಸಾಧ್ಯತೆ ಇದೆ. ರೋಗಿಯು ವೈದ್ಯರ ಸಲಹೆಯಂತೆ ಚಿಕಿತ್ಸೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿದರೆ ರೋಗ ನಿರ್ಮೂಲನೆ ಹತೋಟಿಗೆ ತರಲು ಸಾಧ್ಯ ಎಂದರು.ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಪ್ರವೀಣ್ ಮಾತನಾಡಿ, ರೋಗ ಬಂದಮೇಲೆ ಕಷ್ಟಪಡುವುದಕ್ಕಿಂತ ರೋಗ ಭಾರದಂತೆ ಮುಂಜಾಗ್ರತೆ ವಹಿಸುವುದು ಬಹು ಮುಖ್ಯ ಎಂದರು, ಎಲ್ಲರೂ ಒಟ್ಟಾಗಿ ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಕೈಜೋಡಿಸೋಣ ಎಂದರು.ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ. ಮಾತನಾಡಿ, ಬಡವ ಬಲ್ಲಿದನೆಂಬ, ಗಂಡು ಹೆಣ್ಣೆಂಬ, ಭೇದವಿಲ್ಲದೆ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಯಾರಿಗಾದರೂ ಕ್ಷಯ ರೋಗ ಬರುವ ಸಾಧ್ಯತೆ ಇರುವುದರಿಂದ ಪೌಷ್ಟಿಕಾಂಶ ಉಳ್ಳ ಸಮತೋಲನ ಆಹಾರ ಸೇವನೆ ಮಾಡಿ, ಜೀವನ ಶೈಲಿ ಬದಲಾವಣೆ ಮಾಡಿಕೊಂಡು ಧೂಮಪಾನ ಮದ್ಯಪಾನದಿಂದ ದೂರ ಇರುವ ಮುಖಾಂತರ ರೋಗ ಹತೋಟಿಗೆ ಶ್ರಮಿಸಬೇಕೆಂದರು.ಕಾರ್ಯಕ್ರಮದಲ್ಲಿ 80 ಜನರು ಕ್ಷಯರೋಗದ ಪರೀಕ್ಷೆಗೆ ಒಳಪಟ್ಟಿದು,್ದ ಎಂಟು ಜನರಿಗೆ ಸಂಶಯಾಸ್ಪದ ಕ್ಷಯ ರೋಗ ಇರಬಹುದೆಂದು ಶಂಕಿಸಲಾಗಿ ಹೆಚ್ಚಿನ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಡಾ ಸುಶ್ಮಿತಾ, ಎ.ಸಿ.ಎಫ್. ಸಂಯೋಜಕ ಹರೀಶ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆಂಜನೇಯ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿನಯ್ ಸಿಂದ್ಯಾ, ಕೆಂಚಪ್ಪ, ಸಂದೀಪ್, ಮಹಾಂತೇಶ, ಐಸಿಟಿಸಿ ಕೌನ್ಸಲರ್ ರಮೇಶ್, ಪ್ರಯೋಗಶಾಲ ತಂತ್ರಜ್ಞಾಧಿಕಾರಿ ಸತೀಶ್, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ರಜಿಯಾಬೇಗಂ, ಆಶಾ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







