ನವದೆಹಲಿ: ಲಂಡನ್‌ಗೆ ತೆರಳಬೇಕಿದ್ದ ಏರ್ ಇಂಡಿಯಾದ ಬೋಯಿಂಗ್ 787-9 ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಸ್ಥಗಿತಗೊಳಿಸಿದ ಘಟನೆ ಗುರುವಾರ ನಡೆದಿದೆ.ಇಂದು ದೆಹಲಿಯಿಂದ ಲಂಡನ್‌ಗೆ ಹಾರಾಟ ಆರಂಭಿಸಿದ AI2017 ವಿಮಾನದಲ್ಲಿ ಕೂಡಲೇ ತಾಂತ್ರಿಕ ಸಮಸ್ಯೆ ಕಂಡುಬಂದಿದೆ. ತದನಂತರ ಅದು ಬೇ ಗೆ ಮರಳಿದೆ.ಕಾಕ್‌ಪಿಟ್ ಸಿಬ್ಬಂದಿ ಮಾರ್ಗಸೂಚಿಗಳನ್ನು ಅನುಸರಿಸಿ ಟೇಕಾಫ್ ಸ್ಥಗಿತಕ್ಕೆ ನಿರ್ಧರಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ತಪಾಸಣೆಗಾಗಿ ಲ್ಯಾಂಡಿಂಗ್ ಮಾಡಿದರು ಎಂದು ಏರ್‌ಲೈನ್ ವಕ್ತಾರರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಪ್ರಯಾಣಿಕರ ಅನುಕೂಲಕ್ಕಾಗಿ ಈ ವಿಮಾನದ ಬದಲಿಗೆ ಪರ್ಯಾಯ ವಿಮಾನವನ್ನು ನಿಯೋಜಿಸಲಾಗಿದೆ ಎನ್ನಲಾಗಿದೆ. ಈ ಅನಿರೀಕ್ಷಿತ ವಿಳಂಬದಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ಏರ್ ಲೈನ್ಸ್ ವಿಷಾಧ ವ್ಯಕ್ತಪಡಿಸಿದೆ. ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದು ತಿಳಿದುಬಂದಿಲ್ಲ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



