ಬೆಂಗಳೂರು: ಇಷ್ಟು ದಿನ ರಾಷ್ಟ್ರೀಯ ಹಬ್ಬಗಳ ಆಚರಣೆ ವೇಳೆ ಮಹಾತ್ಮ ಗಾಂಧೀಜಿಯವರ ಭಾವಚಿತ್ರವನ್ನಿರಿಸಿ ಪುಷ್ಪಾರ್ಚನೆ ಮಾಡಲಾಗುತ್ತಿತ್ತು. ಆದರೆ ಈಗ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದ್ದು, ಇನ್ಮುಂದೆ ಪ್ರತಿವರ್ಷ ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ.ಇನ್ನು ನವೆಂಬರ್ 26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಆದೇಶ ಹೊರಡಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







