ಕೊಪ್ಪಳ: ಐತಿಹಾಸಿಕ ಪ್ರಸಿದ್ಧ ಆಂಜನೇಯ ಜನ್ಮಸ್ಥಳಕ್ಕೆ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್ಭೇಟಿ ನೀಡಿದ ವೇಳೆ ಪೂಜೆ, ಆರತಿ ಮಾಡಲು ಅರ್ಚಕ ವಿದ್ಯಾದಾಸ ಬಾಬಾ ನಿರಾಕರಿಸಿದ ಘಟನೆ ಭಾನುವಾರ ನಡೆದಿದೆ. ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿ ಬಂದ ನಂತರ ಮೊದಲ ಬಾರಿಗೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಏರಿ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಲು ಸುರೇಳ ಇಟ್ನಾಳ ಹೋಗಿದ್ದರು. ಈ ವೇಳೆ ದೇವಸ್ಥಾನದಲ್ಲಿದ್ದ ವಿದ್ಯಾದಾಸ ಬಾಬಾ ತಾವು ಪೂಜೆ ಮಾಡದೆ, ನೀವು ಮುಜರಾಯಿ ಇಲಾಖೆಯಿಂದ ನೇಮಕಗೊಂಡ ಅರ್ಚಕರನ್ನು ಕರೆದುಕೊಂಡು ಬಂದಿದ್ದೀರಿ. ಅವ ರಿಂದಲೇ ಪೂಜೆ ಮಾಡಿಸಿ ಎಂದು ಹೇಳಿದರು. ಕೊನೆಗೆ ಇಲಾಖೆಯಿಂದ ನೇಮಕ ಗೊಂಡಿದ್ದ ಅರ್ಚಕರುಜಿಲ್ಲಾಧಿಕಾರಿಗಳಿಂದ ಸಂಕಲ್ಪ ಮಾಡಿಸಿ ಪೂಜೆ ನೆರವೇರಿಸಿದರು. ಇತ್ತೀಚಿಗೆ ವಿದ್ಯಾದಾಸಾ ಬಾಬಾ ಅವರು ಆಂಜನೇಯಸ್ವಾಮಿ ಮುಂದೆ ಕಾಣಿಕೆ ಪೆಟ್ಟಿಗೆ ಇಟ್ಟಿರುವುದಕ್ಕೆ ಇಲಾಖೆ ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡಿದ್ದರು. ಅಲ್ಲದೇ ಈ ವಿಷಯವಾಗಿ ನ್ಯಾಯಾಂಗದ ಮೆಟ್ಟಿಲು ಏರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



