ಬಾಹುಬಲಿ, ಅರುಧಂತಿ ಮುಂತಾದ ಹಿಟ್ ಸಿನಿಮಾ ನೀಡಿರುವ ಬಹುಭಾಷಾ ನಟಿ ಅನುಷ್ಕಾ ಶರ್ಮಾ ಸಾಮಾಜಿಕ ಜಾಲತಾಣಗಳಿಂದ ದೂರವಿರಲು ನಿರ್ಧರಿಸಿದ್ದಾರೆ.ಈ ಕುರಿತು ಇನ್ ಸ್ಟಾಗ್ರಾಮ್ ನಲ್ಲಿ ಕೈ ಬರಹದ ಚಿತ್ರವನ್ನು ಹಂಚಿಕೊಂಡಿರುವ ಅನುಷ್ಕಾ ಶೆಟ್ಟಿ, ಜಗತ್ತಿನೊಂದಿಗೆ ಬೆರೆಯಲು ಹಾಗೂ ಸ್ಕ್ರೋಲಿಂಗ್ ಗಿಂತ ಬೇರೆ ಕೆಲಸ ಮಾಡುವುದಕ್ಕಾಗಿ ಕೆಲ ಕಾಲ ಸಾಮಾಜಿಕ ಜಾಲತಾಣಗಳಿಂದ ದೂರು ಉಳಿಯುವುದಾಗಿ ಫೋಸ್ಟ್ ಮಾಡಿದ್ದಾರೆ.ಇತ್ತೀಚಿಗೆ ಬಿಡುಗಡೆಯಾದ ಕ್ರಿಶ್ ಜಗಲಮರುಡು ನಿರ್ದೇಶನದ ‘ಘಾಟಿ’ ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ ಅಭಿನಯಿಸಿದ್ದರು. ಆದರೆ, ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿತ್ತು.ಈ ಸಿನಿಮಾದ ಸೋಲಿನ ನಂತರ ಸೋಶಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ನೆಗೆಟಿವ್ ಕಾಮೆಂಟ್ ಗಳು ಬರುತ್ತಿದ್ದವು. ಹೀಗಾಗಿ ಅನುಷ್ಕಾ ಶೆಟ್ಟಿ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆಯೇ ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







