ಬೆಂಗಳೂರು: ಮತದಾರರಿಗೆ ಗ್ಯಾರಂಟಿ ಕಾರ್ಡ್ ಗಳನ್ನ ಹಂಚುವ ಮೂಲಕ ಚುನಾವಣಾ ಅಕ್ರಮ ಎಸಗಿದ ಆರೋಪದಲ್ಲಿ ದಾವಣಗೆರೆ ಕಾಂಗ್ರೆಸ್ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಡಾ.ಪ್ರಭಾ ಮಲ್ಲಿಕಾರ್ಜುನ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯತ್ರಿ ಸಿದ್ದೇಶ್ವರ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ಪೀಠ, ಅರ್ಜಿಯನ್ನು ತಿರಸ್ಕರಿಸಿದೆ.
ಮತದಾರರನ್ನು ಸೆಳೆಯಲು ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗುವ ಭರವಸೆ ಅಥವಾ ಘೋಷಣೆಗಳನ್ನು ಪ್ರಜಾಪ್ರತಿನಿಧಿ ಕಾಯ್ದೆ-1951ಎ ಸೆಕ್ಷನ್ 123 (1) ಎ)(ಬಿ) ಅಡಿ ಚುನಾವಣಾ ಅಕ್ರಮಗಳೆಂದು ಹೇಳಲಾಗದು ಎಂದು ತಿಳಿಸಿದೆ. ಅದೇ ರೀತಿ ಚುನಾವಣಾ ತಕರಾರು ಅರ್ಜಿಗಳನ್ನು ಸಲ್ಲಿಸಿದಾದ ಸಿಪಿಸಿ ಆರ್ಡರ್ 7 ರೂಲ್ 11 (ಎ) ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 86 (1)ರ ಅನ್ವಯ ಕೆಲವು ಕಾನೂನು ಪ್ರಕ್ರಿಯೆಗಳನ್ನು ಅರ್ಜಿದಾರರು ಪಾಲಿಸಿದಿದ್ದರೆ ಆರಂಭಿಕ ಹಂತದಲ್ಲೇ ಅಂತಹ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಬಹುದು. ಈ ಅಧಿಕಾರದಡಿ ಹೈಕೋರ್ಟ್ ಪ್ರಭಾ ಮಲ್ಲಿಕಾರ್ಜುನ್ ಅವರ ವಿರುದ್ಧದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.ಪ್ರಭಾ ಮಲ್ಲಿಕಾರ್ಜುನ್ ಅವರು ಗ್ಯಾರಂಟಿ ಕಾರ್ಡ್ ವಿತರಿಸಿ ಮತದಾರರಿಗೆ ಆಮಿಷವೊಡ್ಡಿರುವುದೇ ಅಲ್ಲದೆ, ಮಹಿಳೆಯರಿಗೆ 1 ಲಕ್ಷ ಕೊಡುವುದಾಗಿ ಭರವಸೆ ನೀಡಿದ್ದರು. ಇದು ಪ್ರಜಾಪ್ರತಿನಿಧಿ ಕಾಯ್ದೆಗೆ ವಿರುದ್ಧವಾಗಿದ್ದು, ಮತದಾರರಿಗೆ ಲಂಚದ ಆಮಿಷ ಒಡ್ಡಿದ್ದಾರೆ ಮತ್ತು ಚುನಾವಣಾ ಅಕ್ರಮಗಳನ್ನು ನಡೆಸಿ ಅವರು ಆಯ್ಕೆಯಾಗಿದ್ದಾರೆ. ಆದ್ದರಿಂದ ಅವರ ಆಯ್ಕೆಯನ್ನು ಅಸಿಂಧು ಎಂಬುದಾಗಿ ಘೋಷಿಸಬೇಕು ಎಂದು ಗಾಯಿತ್ರಿ ಸಿದ್ದೇಶ್ವರ್ ಕೋರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



