Author: Times of bayaluseeme
ಚಿತ್ರದುರ್ಗ : ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ 25 ವರ್ಷದೊಳಗಿನ ರಾಜ್ಯ ಮಟ್ಟದಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನವನ್ನು ಎಸ್.ಬಿ.ಐ. ಲೈಫ್ ತಂಡ ಪಡೆದುಕೊಂಡಿತು.ಕೆಳಗೋಟೆ ಕಿಂಗ್ಸ್ ಎರಡನೆ ಬಹುಮಾನಕ್ಕೆ ತೃಪ್ತಿಪಟ್ಟುಕೊಂಡರೆರಾಯಲ್ ಸೇನಾ ಮೂರನೆ ಬಹುಮಾನ ಧಕ್ಕಿಸಿಕೊಂಡಿತು.ಕೆಳಗೋಟೆ ಕಿಂಗ್ಸ್ ತಂಡದ ಧನುಶ್ ಬೆಸ್ಟ್ ರೈಡರ್, ಎಸ್.ಬಿ.ಐ. ಲೈಫ್‍ನ ಆಕಾಶ್‍ಗೌಡ ಬೆಸ್ಟ್ ಕ್ಯಾಚರ್, ಎಸ್.ಬಿ.ಐ. ನ ಕಿರಣ್‍ಗೌಡಬೆಸ್ಟ್ ಆಲ್ ರೌಂಡರ್ ಆಗಿ ಪಂದ್ಯಾವಳಿಯಲ್ಲಿ ಹೊರಹೊಮ್ಮಿದರು.ಜಯಶಾಲಿಗಳಿಗೆ ಆಕರ್ಷಕ ಕಪ್ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಚಿತ್ರದುರ್ಗ: ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಕೊಟ್ಟಾಗ ರಾಷ್ಟ್ರ ಮಟ್ಟದಲ್ಲಿ ಬೆಳೆಯಲು ಸಾಧ್ಯ ಎಂದು ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿಗಳು ಹೇಳಿದರು.ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಬೆಂಗಳೂರು ಹಾಗೂ ಚಿತ್ರದುರ್ಗ ಜಿಲ್ಲಾಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ನಗರದ ಹಳೆ ಮಾಧ್ಯಮಿಕ ಶಾಲಾಆವರಣದಲ್ಲಿ ನಡೆದ 25 ವರ್ಷದೊಳಗಿನ ರಾಜ್ಯ ಮಟ್ಟದ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ-2025 ಪ್ರೀಮಿಯರ್ಲೀಗ್ ಸೀಸನ್-4 ಫೈನಲ್ ಪಂದ್ಯ ವೀಕ್ಷಿಸಿ ಮಾತನಾಡಿದರು.ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಕಬಡ್ಡಿ ಪಂದ್ಯಾವಳಿಗೆ ಮೊದಲಿನಿಂದಲೂಸಹಕಾರ ನೀಡುತ್ತಿದ್ದಾರೆ. ಈ ಹಿಂದೆ ಚಿತ್ರದುರ್ಗದಲ್ಲಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾವಳಿ ನಡೆದಿತ್ತು. ಮುರುಗೇಶ್ ಮತ್ತವರತಂಡದವರು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ಆಯೋಜಿಸಿರುವುದು ಅತ್ಯಂತ ಖುಷಿಯ ಸಂಗತಿ. ಒಂದುಕಾಲದಲ್ಲಿ ಚಿತ್ರದುರ್ಗ ಕುಸ್ತಿಗೆ ಹೆಸರುವಾಸಿಯಾಗಿತ್ತು. ಈಗ ಕಬಡ್ಡಿಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ. ಕೇವಲ ಕ್ರಿಕೇಟಿಗಷ್ಟೆಆದ್ಯತೆ ನೀಡುವ ಬದಲು ಕಬಡ್ಡಿ ಪಟುಗಳಿಗೆ ಬೆಂಬಲ ಸಿಕ್ಕಾಗ ರಾಷ್ಟ್ರ ಮತ್ತು…
ಚಿತ್ರದುರ್ಗ : ಅಲೆಮಾರಿ, ಅರೆ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿಯನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಜಿಲ್ಲೆಯ 49 ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯಗಳ ವತಿಯಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು.ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಪಲ್ಲವಿ ಹಾಗೂ ಅವರ ಆಪ್ತಕಾರ್ಯದರ್ಶಿ ಆನಂದ ಏಕಲವ್ಯ ವಿರುದ್ದ ಧಿಕ್ಕಾರಗಳನ್ನು ಕೂಗಿದರು.ಬೆಂಗಳೂರಿನ ಗಾಂಧಿಭವನದಲ್ಲಿ ಕಳೆದ ಐದರಂದು ಮಾಜಿ ಸಚಿವ ಹೆಚ್.ಆಂಜನೇಯ ನೇತೃತ್ವದಲ್ಲಿ ನಡೆದ 49 ಅಲೆಮಾರಿ ಮತ್ತುಅರೆ ಅಲೆಮಾರಿ ಜಾತಿಗಳ ಸಭೆಯಲ್ಲಿ ಏಕಾಏಕಿ ನುಗ್ಗಿದ ಪಲ್ಲವಿ ಹಾಗೂ ಆನಂದ ಏಕಲವ್ಯ ಇವರುಗಳು ಗದ್ದಲ ಉಂಟು ಮಾಡಿಅಲೆಮಾರಿ ಸಮುದಾಯಗಳ ಮಧ್ಯೆ ಭಿನ್ನಾಭಿಪ್ರಾಯ ಮೂಡಿಸಿದ್ದಾರೆ. ನೂರಾರು ವರ್ಷಗಳಿಂದಲೂ ಬೀದಿ ಬದಿಯ ಟೆಂಟ್‍ಗಳಲ್ಲಿವಾಸಿಸುತ್ತಿರುವ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗಕ್ಕೆ ಇದುವರೆವಿಗೂ ಸರ್ಕಾರದಿಂದ ಮೂಲಭೂತ ಸೌಲಭ್ಯಗಳು ಸಿಕ್ಕಿಲ್ಲ. ಇಂತಹ ನಿರ್ಲಕ್ಷಿತ ಸಮುದಾಯಗಳ ಅಭಿವೃದ್ದಿಗೆ ಶ್ರಮಿಸಬೇಕೆ ವಿನಃ ಗೊಂದಲ ಸೃಷ್ಠಿಸಬಾರದು. ಹಾಗಾಗಿ ನಿಗಮದ ಅಧ್ಯಕ್ಷೆ ಪಲ್ಲವಿಮತ್ತು ಆಪ್ತ ಕಾರ್ಯದರ್ಶಿ ಆನಂದ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪ ಒಂದೆಡೆಯಾದರೆ, ಮತ್ತೊಂದೆಡೆ ಜೈಲುಗಳಲ್ಲಿ ನಡೆಯುತ್ತಿರುವ ವಿಪರೀತ ಅಕ್ರಮಗಳ ಬಗ್ಗೆ ಸರಣಿ ವರದಿಗಳಾಗುತ್ತಿರುವ ಸಂದರ್ಭದಲ್ಲೇ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ.ಬೆಂಗಳೂರು ಸಂಚಾರ ಪೊಲೀಸ್ ವಿಭಾಗದ ಡಿಐಜಿ ಎಂ.ಎನ್. ಅನುಚೇತ್, ದಕ್ಷಿಣ ಕನ್ನಡದ ಕಾನೂನು ಸುವ್ಯವಸ್ಥೆ ಡಿಸಿಪಿ ಜಿತೇಂದ್ರ ಕುಮಾರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಅಕ್ಷಯ್ ಮಚೀಂದ್ರ – ಡಿಸಿಪಿ, ಬೆಂಗಳೂರೂ ಕೇಂದ್ರ ವಿಭಾಗ ಅಜಯ್ ಹಿಲೋರಿ – ಜಂಟಿ ಪೊಲೀಸ್ ಆಯುಕ್ತ, ಅಪರಾಧ ವಿಭಾಗ ಪರಶುರಾಮ್ – ಡಿಸಿಪಿ, ವೈಟ್ ಫೀಲ್ಡ್ ವಿಭಾಗ ಕಾರ್ತಿಕ್ ರೆಡ್ಡಿ – ಜಂಟಿ ಪೊಲೀಸ್ ಆಯುಕ್ತ, ಸಂಚಾರ ವಿಭಾಗ ಅನೂಪ್…
ಯಶಸ್ವಿ ಬಾಹ್ಯಾಕಾಶ ಯಾನ ಮುಕ್ತಾಯಗೊಳಿಸಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಅವರಿದ್ದ ತಂಡ ಇಂದು ಡ್ರ್ಯಾಗನ್ ನೌಕೆಯ ಮೂಲಕ ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ.ನಾವು ಮನೆಗೆ ಮರಳಿದ್ದೇವೆ ಆಕ್ಸಿಯಮ್ -4 ಮಿಷನ್ ಕಮಾಂಡರ್ ಪೆಗ್ಗಿ ವಿಟ್ಸನ್, ಜುಲೈ 15 ರಂದು ಪೆಸಿಫಿಕ್ ಮಹಾಸಾಗರದ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಡ್ರ್ಯಾಗನ್ ಎಂದು ಕರೆಯಲ್ಪಡುವ ಬಾಹ್ಯಾಕಾಶ ನೌಕೆ ಇಳಿದ ಸ್ವಲ್ಪ ಸಮಯದ ನಂತರ, ಮಧ್ಯಾಹ್ನ 3.02 ಕ್ಕೆ ಆಕ್ಸಿಯಮ್ ಸ್ಪೇಸ್‌ನ ಕಮಾಂಡ್ ಕಂಟ್ರೋಲ್ ಸೆಂಟರ್‌ಗೆ ತಿಳಿಸಿದ ಸಂದೇಶ ಇದಾಗಿದೆ. ಪೆಗ್ಗಿ ವಿಟ್ಸನ್ ಸಂದೇಶಕ್ಕೆ ಕಮಾಂಡ್ ಕೇಂದ್ರ “ಮನೆಗೆ ಸ್ವಾಗತ” ಎಂದು ಉತ್ತರಿಸಿದೆ. ಇದಕ್ಕೆ ಪೆಗ್ಗಿ ಉತ್ತರಿಸುತ್ತಾ, “ಮಹಾ ಸವಾರಿ ಮತ್ತು ಸುರಕ್ಷಿತ ಪ್ರಯಾಣಕ್ಕಾಗಿ ಧನ್ಯವಾದಗಳು.” ಗ್ರೇಸ್‌ನಲ್ಲಿರುವ ಸಿಬ್ಬಂದಿ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಆಕ್ಸಿಯಮ್ -4 ವಾಣಿಜ್ಯ ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಕಳೆದ 21 ದಿನಗಳ ನಂತರ, ಮಿಷನ್ ಪೈಲಟ್ ಆಗಿದ್ದ ಗ್ರೂಪ್ ಕ್ಯಾಪ್ಟನ್ ಮತ್ತು ಮಿಷನ್ ಪೈಲಟ್…
ಚಿತ್ರದುರ್ಗ: ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ನಗರದ ಸ್ವಾಮಿ ವಿವೇಕಾನಂದ ನಗರ ಸರ್ಕಾರಿ ಶಾಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ್ ಮಾತನಾಡಿ, ಹೆಣ್ಣು ಮಕ್ಕಳಿಗೆ 18 ವರ್ಷ ತುಂಬುವವರೆಗೆ ಮದುವೆ ಮಾಡಬಾರದು. ಶಿಕ್ಷಣ ಕೊಡಿಸಬೇಕು. ಮೊರಾರ್ಜಿ ವಸತಿ ಶಾಲೆ, ನವೋದಯ ಇತ್ಯಾದಿ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರ ಉಚಿತ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಇದರ ಸದುಪಯೋಗಪಡಿಸಿಕೊಳ್ಳಬೇಕು. ಬಾಲ್ಯ ವಿವಾಹ ಪ್ರಕರಣಗಳು ಕಂಡು ಬಂದಲ್ಲಿ ಬೇಜವಾಬ್ದಾರಿ ಮಾಡದೆ ಸಂಬಂಧಪಟ್ಟ ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿಗೆ, ಮಕ್ಕಳ ಸಹಾಯವಾಣಿ 1098 ಗೆ ಮಾಹಿತಿ ನೀಡಬೇಕು. ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಮಾತನಾಡಿ, ಬಾಲ್ಯ ವಿವಾಹ ಕಡಿಮೆ ಮಾಡಲು ತಾಯಂದಿರು ಮತ್ತು ಕಿಶೋರಿಯರಿಬ್ಬರೂ ಜಾಗೃತರಾಗಬೇಕು. ಮೊಬೈಲ್ ತಂತ್ರಜ್ಞಾನವನ್ನು ಧನಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ನಿರ್ಮಲ, ಜೆಂಡರ್ಸ್ ಸ್ಪೆಷಲಿಸ್ಟ್ ಗೀತಾ, ಮಕ್ಕಳ…
ಚಿತ್ರದುರ್ಗ: ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಯಡಿಯಲ್ಲಿ ಹುಲ್ಲೂರು, ಸಿಂಗಾಪುರ, ಹುಲ್ಲೂರು ನಾಯಕರಹಟ್ಟಿ ಗ್ರಾಮಗಳಲ್ಲಿಶಾಸಕ ಕೆ.ಸಿ.ವೀರೇಂದ್ರ ಪಪ್ಪಿರವರು ಸಿ.ಸಿ.ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದರು.ಹುಲ್ಲೂರು ಗ್ರಾಮದಲ್ಲಿ ಐವತ್ತು ಲಕ್ಷ ರೂ. ಸಿಂಗಾಪುರ ಹಾಗೂ ಹುಲ್ಲೂರು ನಾಯಕರಹಟ್ಟಿಯಲ್ಲಿ ತಲಾ ಹತ್ತು ಲಕ್ಷ ರೂ.ಗಳವೆಚ್ಚದಲ್ಲಿರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು ನಿಗಧಿತ ಸಮಯದಲ್ಲಿ ಕಾಮಗಾರಿಗಳನ್ನುಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.ಹುಲ್ಲೂರು ಗ್ರಾಮ ಪಂಚಾಯಿತಿ ಮುಖಂಡ ಹೆಚ್.ಎಂ.ಮಂಜುನಾಥ್, ಕಲ್ಲೇಶ್, ಸ್ವಾಮಿ, ರವಿಕುಮಾರ್, ಯೋಗೀಶ್, ನಯನಹಾಗೂ ಗ್ರಾಮದ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಚಿತ್ರದುರ್ಗ: ಭಾರತ್ ಸಂಚಾರ ನಿಗಮದಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವನೌಕರರಿಗೆ ಕೇಂದ್ರ ಸರ್ಕಾರ ತುಂಬಾ ಅನ್ಯಾಯ ಮಾಡುತ್ತಿದೆ.ನೌಕರರ ಪಿಂಚಣಿ ವಿಷಯದಲ್ಲಿ ಆಗಿರುವ ದೊಡ್ಡ ಪ್ರಮಾಣದ ಈಲೋಕಪವನ್ನು ಕೂಡಲೇ ಸರಿ ಪಡಿಸಿ ನ್ಯಾಯಯುತವಾದನಿರ್ಧಾರ ಕೈಗೊಳ್ಳಬೇಕು ಎಂದು ಬಿಎಸ್‍ಎನ್‍ಎಲ್ ಪಿಂಚಣಿದಾರರುಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆಚಿತ್ರದುರ್ಗದಲ್ಲಿ ಅಖಿಲ ಭಾರತೀಯ ಬಿಎಸ್‍ಎನ್‍ಎಲ್ ಪಿಂಚಣಿದಾರರಕ್ಷೇಮಾಭಿವೃದ್ದಿ ಸಂಘದ ಜಿಲ್ಲಾ ಸಮಿತಿಯ ಅಧ್ಯಕ್ಷಬೋರಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಿದಅಧಿವೇಶನದಲ್ಲಿ ಕೇಂದ್ರ ಸರ್ಕಾರದ ನೌಕರರ ವಿರೋಧಿ ನೀತಿಯ ವಿರುದ್ದ ತೀವ್ರ ಅಸಮಧಾನ ವ್ಯಕ್ತವಾಯಿತುಸಭೆಯಲ್ಲಿ ಭಾಗವಹಿಸಿದ್ದ ಬಹಳಷ್ಟು ಮಂದಿ ನೌಕರರರು,ಸಂಘದ ವಿವಿಧ ಹಂತದ ಪದಾಧಿಕಾರಿಗಳು ಬಿಎಸ್‍ಎನ್‍ಎಲ್ ನೌಕರರಿಗೆಪ್ರತಿ ಹಂತದಲ್ಲಿಯೂ ಆಗುತ್ತಿರುವ ಅನ್ಯಾಯದ ವಿರುದ್ದ ದ್ವನಿಎತ್ತಿದರು. ಕೇಂದ್ರ ಸರ್ಕಾರ ತನ್ನ ತಾರತಮ್ಯ ನೀತಿಯನ್ನುಬದಲಾಯಿಸಿಕೊಂಡು ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡಬೇಕುಎಂದು ಸಭೆ ಒಕ್ಕೋರಲಿನಿಂದ ಆಗ್ರಹಿಸಿತುಈ ಸಭೆಯಲ್ಲಿ ವಿಶೇಷ ಅತಿಥಿಗಳಾಗಿ ಪಾಲ್ಗೊಂಡಿದ್ದ ಅಖಿಲ ಭಾರತೀಯಬಿಎಸ್‍ಎನ್‍ಎಲ್ ಪಿಂಚಣಿದಾರರ ಕ್ಷೇಮಾಭಿವೃದ್ದಿ ಸಂಘದ ವಲಯಮಟ್ಟದ ಕಾರ್ಯದಶಿ ಜಯಶಂಕರ್ ಅವರು ಈ ಸಂದರ್ಭದಲ್ಲಿಮಾತನಾಡಿ, ಕೇಂದ್ರ ಸರ್ಕಾರವು ನಮ್ಮ ನೌಕರರಿಗೆ ನಿಜಕ್ಕೂಅನ್ಯಾಯ ಮಾಡುತ್ತಿದೆ ಎನ್ನುವ ಭಾವ ವ್ಯಕ್ತವಾಗಿದೆ ಸರ್ಕಾರತನ್ನ ನಿಲುವನ್ನು ಬದಲಾಯಿಸಿಕೊಂಡು…
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಭೂ ಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೆಐಎಡಿಬಿಯಿಂದ 13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನ ವಿರೋಧಿಸಿ ರೈತರು ಸುಮಾರು 1,200ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿದ್ದರು. ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೊನೆಗೂ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧರಿಸಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರ ಜೊತೆಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಚನ್ನರಾಯಪಟ್ಟಣ ಸುತ್ತಮುತ್ತಲಿನ 13 ಗ್ರಾಮಗಳ ಭೂ ಸ್ವಾಧೀನಕ್ಕೆ ಕೆಐಎಡಿಬಿಗೆ ಭೂಮಿ ನೀಡಲು ರೈತರು, ಸಂಘಟನೆಗಳು ಒಪ್ಪುತ್ತಿಲ್ಲ. ರಾಜ್ಯ ಸರ್ಕಾರ ಸಾಧಕ-ಭಾದಕಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು. 1,777 ಎಕರೆ ಡಿನೋಟಿಫಿಕೇಷನ್ ಕೈಬಿಟ್ಟಿದ್ದೇವೆ. ಆದರೆ, ಭೂಮಾಲೀಕರು ಸ್ವಯಂ ಪ್ರೇರಿತರಾಗಿ ಭೂಮಿ ನೀಡಲು ಮುಂದಾದರೆ ಖರೀದಿಸುತ್ತೇವೆ. ಆದರೆ, ಬಲವಂತವಾಗಿ ಖರೀದಿಸುವುದಿಲ್ಲ ಸ್ವಯಂ ಪ್ರೇರಿತರಾಗಿ ಭೂಮಿ ನೀಡುವವರಿಗೆ ಸೂಕ್ತ ಪರಿಹಾರ ನೀಡುತ್ತೇವೆ. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು ಎಂಬುದು ನಮ್ಮ…
ಬೆಂಗಳೂರು: ರಾಜ್ಯದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸರಣಿ ಸಭೆಗಳನ್ನು ನಡೆಸುತ್ತಿದ್ದು, ಶಾಸಕರ ದೂರುಗಳನ್ನು ಆಲಿಸಿದ ಬಳಿಕ ಇದೀಗ ಸಚಿವರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಸಭೆಗಳು ನವೆಂಬರ್ ನಂತರ ನಡೆಯಲಿರುವ ಸಂಭಾವ್ಯ ಸಚಿವ ಸಂಪುಟ ಪುನರಾಚನೆಗೆ ಮುಂಚಿತವಾಗಿ ನಡೆಸಲಾಗುತ್ತಿರುವ ಸಚಿವರ ಕಾರ್ಯಕ್ಷಮತೆಗಳ ಮೌಲ್ಯಮಾಪನ ಎಂದು ಹೇಳಲಾಗುತ್ತಿದೆ. ಸುರ್ಜೇವಾಲಾ ಅವರು ಸಿದ್ದರಾಮಯ್ಯ ಅವರ ಆಪ್ತರು ಎಂದು ಪರಿಗಣಿಸಲಾದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಪೌರಾಡಳಿತ ಸಚಿವ ರಹೀಮ್ ಖಾನ್ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು. ಸುರ್ಜೇವಾಲಾ ಅವರು ಮೊದಲು ಶಾಸಕರೊಂದಿಗೆ ಸಭೆ ನಡೆಸಿದ್ದು, ಸಿದ್ದು ಆಪ್ತರಲ್ಲಿ ಅಸಮಾಧಾನ ತರಿಸಿತ್ತು. ಏಕೆಂದರೆ, ಡಿ.ಕೆ.ಶಿವಕುಮಾರ್ ಪರವಿದ್ದ ಶಾಸಕರು ಮುಖ್ಯಮಂತ್ರಿ ಬದಲಾವಣೆಯನ್ನು ಬಯಸಿದ್ದರು. ಹೀಗಾಗಿಯೇ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ 5 ವರ್ಷವೂ ನಾನೇ ಸಿಎಂ ಎಂದು ಪ್ರತಿಪಾದಿಸಿದ್ದರು ಎಂದು…
Subscribe to Updates
Get the latest creative news from FooBar about art, design and business.