Author: Times of bayaluseeme
ಚಿತ್ರದುರ್ಗ: ವಿಶ್ಚ ಪರಿಸರ ದಿನಾಚರಣೆ ಪ್ರಯುಕ್ತ ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣಗೊಳಿಸುವುದು ಎಂಬ ಘೋಷವಾಕ್ಯದಡಿ ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು. ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಶಾಖೆ ಚಿತ್ರದುರ್ಗ, ಕಲಾ ಚೈತನ್ಯ ಸೇವಾ ಸಂಸ್ಥೆ ವತಿಯಿಂದ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು. ನಗರದ ಕ್ರೀಡಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ 25ಕ್ಕೂ ಹೆಚ್ಚು ಶಾಲೆಗಳ, ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿ, ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣ ಕುರಿತು ಸುಂದರ ರೇಖಾಚಿತ್ರ ಬಿಡಿಸಿ ಸಂಭ್ರಮಿಸಿದ್ರು. ಈ ವೇಳೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾತ ವಿತರಣೆ ಕೂಡ ಮಾಡಲಾಯಿತು. ಇದೆ ವೇಳೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಇಂದಿನ ಮಕ್ಕಳೆ ನಾಳಿನ ಪ್ರಜೆಗಳು. ಅವರಲ್ಲಿ ಈ ಜಾಗೃತಿ ಮೂಡಿದ್ರೆ ಮಾತ್ರ ಸಮಾಜದಲ್ಲಿ ಜಾಗೃತಿ ಮೂಡಲು ಸಾಧ್ಯ ಎಂದು ಹೇಳಿದರು. ಇನ್ನು ಮಕ್ಕಳ ಈ ಚಿತ್ರಬಿಡಿಸಿ ಸಾಮಾಜಿಕ ಪ್ರಜ್ಞೆ ಮೆರೆದ ಬಗೆಗೆ ಕಲಾ ಬಳಗದ ಸದಸ್ಯರು ಸಂತಸ ವ್ಯಕ್ತಪಡಿಸಿದ್ರು.
ಚಿತ್ರದುರ್ಗ ಜೂ. 26 ಸುಮಾರು 4 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಪಂಗಡಗಳ ಜನರು ವಾಸಿಸುತ್ತಿರುವ ಚಿತ್ರದುರ್ಗ ಜಿಲ್ಲೆಗೆ ಹಾಲಿ ಇರುವ ಏಕಲವ್ಯ ವಸತಿ ಶಾಲೆಯ ಜೊತೆಗೆ ಇನ್ನೊಂದು ಹೆಚ್ಚುವರಿ ಏಕಲವ್ಯ ವಸತಿ ಶಾಲೆಯನ್ನು ಮಂಜೂರು ಮಾಡಲು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರಿಗೆ ಶಿಫಾರಸ್ಸು ಮಾಡುವಂತೆ ಸಂಸದ ಗೋವಿಂದ ಎಂ.ಕಾರಜೋಳ ರವರು ನಿನ್ನೆ ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ರಾಷ್ಟ್ರೀಯ ಬಿ.ಜೆ.ಪಿ.ಅಧ್ಯಕ್ಷರಾದ ಜೆ.ಪಿ.ನಡ್ಡಾರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಚಿತ್ರದುರ್ಗ ಜಿಲ್ಲೆಯಲ್ಲಿ ಸಾಕಷ್ಟು ಪರಿಶಿಷ್ಟ ಪಂಗಡಕ್ಕೆ ಸೇರಿದವರ ಜನಸಂಖ್ಯೆಯಿದೆ, ಅದರಲ್ಲೂ ಚಳ್ಳಕೆರೆ ಹಾಗೂ ಮೊಳಕಾಲ್ಲೂರು ತಾಲ್ಲೂಕುಗಳಲ್ಲಿ ಅತಿ ಹೆಚ್ಚು ಪರಿಶಿಷ್ಟ ವರ್ಗದ ಜನರು ವಾಸಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಹಾಲಿ ಇರುವ ಏಕಲವ್ಯ ವಸತಿ ಶಾಲೆ ಬೇಡಿಕೆಯನ್ನೂ ಪೂರೈಸಲಾಗುತ್ತಿಲ್ಲ, ಪರಿಶಿಷ್ಟ ವರ್ಗಗಳ ಮಕ್ಕಳೂ ಕೂಡ ಗುಣಮಟ್ಟದ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕು ಎನ್ನುವ ಆಶಯ ನನ್ನದಾಗಿದೆ ಎಂಬದನ್ನು ಸಚಿವರಿಗೆ ಸಂಸದರು ಮನದಟ್ಟು ಮಾಡಿದ್ದಾರೆ. ಏಕಲವ್ಯ ವಸತಿ ಶಾಲೆಗೆ ಅಗತ್ಯವಾಗಿರುವ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಹಿನ್ನಲೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸಾರ್ವಜನಿಕ ಜಾಗೃತಿ ಜಾಥಾ ನಡೆಸಿದರು. ಜಾಗೃತಿ ಜಾಥಾಕ್ಕೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ಚಾಲನೆ ನೀಡಿ ಮಾತನಾಡಿದ ಅವರು ಇಂದಿನ ಯುವ ಜನತೆ ಮಾದಕ ವ್ಯಸನದಿಂದ ದೂರ ಉಳಿಯಬೇಕು. ಸದೃಢ ಭಾರತಕ್ಕೆ ಯುವಜನತೆಯ ಶಕ್ತಿ ಮುಖ್ಯ ಜೊತೆಗೆ ಇಂತಹ ದುಶ್ಚಟಗಳ ವಿರುದ್ಧ ಸಾರ್ವಜನಿಕರು ಸಹ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು. ಬಳಿಕ ನಗರದ ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಡಿಸಿ ವೃತ್ತದವರೆಗೆ ಬೃಹತ್ ಜಾಥಾ ನಡೆಯಿತು. ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವು ಸಂಘ ಸಂಸ್ಥೆಗಳು ಸಾಥ್ ನೀಡಿದರು.
ಚಿತ್ರದುರ್ಗ ಜೂ. 25 ನಗರದ ಪತಂಜಲಿ ಆಸ್ಪತ್ರೆಯ ಸಮೀಪದ ಅಸರ್ ಮೊಹಲ್ಲಾ ನಿವಾಸಿ ಅಮ್ಜದ್ ಖಾನ್ (58 ವರ್ಷ) ಇಂದು ಬೆಳಿಗ್ಗೆ 6:30ರ ವೇಳೆಗೆ ಹೃದಯಾಘಾತದಿಂದ ನಿಧನರಾದರು. ಕೆ.ಎಸ್. ಸಿ.ಎ. ಕ್ರಿಕೆಟ್ ನಲ್ಲಿ ಮಾನ್ಯತೆ ಪಡೆದಿರುವ ಏಕೈಕ ಅಂಪೈರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ಸಂಜೆ ನಗರದ ಮೆದೇಹಳ್ಳಿ ರಸ್ತೆಯ ಖಬರಸ್ಥಾನದಲ್ಲಿ ನೆರವೇರಿಸಲಾಯಿತೆಂದು ಕುಟುಂಬದ ಮೂಲಗಳು ತಿಳಿಸಿವೆ.
ದಾವಣಗೆರೆ ಜೂ.24, ನಗರದ ಆದರ್ಶ ಯೋಗ ಪ್ರತಿಷ್ಠಾನ (ರಿ), ದಾವಣಗೆರೆ ಶ್ರೀ ಮಹಮ್ಮಾಯಿ ವಿಶ್ವಯೋಗ ಮಂದಿರ ಹಾಗೂ ಯೋಗ ಚಿಕಿತ್ಸಾ ಕೇಂದ್ರದ ಸಂಸ್ಥಾಪಕರಾದ ಯೋಗಾಚಾರ್ಯ ಶ್ರೀ ಡಾ|| ರಾಘವೇಂದ್ರ ಗುರೂಜಿಯವರಿಗೆ ಕರ್ನಾಟಕ ಯೋಗ ಶಿಕ್ಷಕರ ಒಕ್ಕೂಟ (ರಿ), ಮೈಸೂರು ವತಿಯಿಂದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತವಾಗಿ ಜೂನ್ 22, 2025 ರ ಭಾನುವಾರದಂದು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ದ್ವಿತೀಯ ರಾಜ್ಯಮಟ್ಟದ ಯೋಗ ಸಮ್ಮೇಳನದಲ್ಲಿ ಯೋಗ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದಿರುವ ನಾಡಿನ ಹಿರಿಯ ಯೋಗ ಗುರು, ಯೋಗ ತಜ್ಞ ಡಾ|| ರಾಘವೇಂದ್ರ ಗುರೂಜಿಯವರಿಗೆ “ಯೋಗ ರತ್ನಾಕರ” ಎಂಬ ಅತ್ಯುನ್ನತವಾದ ಬಿರುದು ಪ್ರದಾನ ಮಾಡಲಾಯಿತು. ಯೋಗ ನಗರಿ ಮೈಸೂರಿನ ಕಲಾ ಮಂದಿರದಲ್ಲಿ ಯೋಗ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ನೀಡಿರುವ ಡಾ|| ರಾಘವೇಂದ್ರ ಗುರೂಜಿಯವರಿಗೆ ಸಮ್ಮೇಳನದ ಸರ್ವಾಧ್ಯಕ್ಷರು ಆದ ಪ್ರೊ|| ರಾಮಚಂದ್ರ ಜಿ. ಭಟ್ ಕೋಟೆಮನೆ, ವೇದ ವಿಜ್ಞಾನ ಗುರುಕುಲ ಬೆಂಗಳೂರು, ವೈದ್ಯ ಸಾಹಿತಿ ಹಾಗೂ ಸಮ್ಮೇಳನದ ಕಾರ್ಯಾಧ್ಯಕ್ಷರಾದ ಡಾ|| ಎಸ್.ಪಿ. ಯೋಗಣ್ಣ, ರಾಜೀವ್‍ಗಾಂಧಿ ಆರೋಗ್ಯ…
ಬೆಂಗಳೂರು, ಜೂ.25 “ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಹೀಗಾಗಿ ಜನರು ಈ ಅನುಮತಿಗಳು ಇಲ್ಲದೆ ಮನೆ ಕಟ್ಟಬೇಡಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿದ ಶಿವಕುಮಾರ್ ಅವರು ಈ ವಿಚಾರಗಳನ್ನು ತಿಳಿಸಿದರು. ಇಡೀ ದೇಶಕ್ಕೆ ಈ ತೀರ್ಪು ಆನ್ವಯವಾಗಲಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಎದುರಾಗಲಿದೆ. ಇದುವರೆಗೂ 2.50 ಲಕ್ಷ ಜನ ಹಳ್ಳಿಗಳು ಹಾಗೂ ನಗರ ಪ್ರದೇಶಗಳಲ್ಲಿ ಕಟ್ಟಡ ನಕ್ಷೆ ಅನುಮತಿ ಪಡೆಯದೇ ಮನೆ ಕಟ್ಟಿಕೊಂಡು, ವಿದ್ಯುತ್ ಹಾಗೂ ನೀರಿನ ಸಂಪರ್ಕಕ್ಕೆ ಅರ್ಜಿ ಹಾಕಿದ್ದಾರೆ. ಈ ವಿಚಾರವಾಗಿ ಕಾನೂನು ಸಲಹೆಗಾರರ ಜತೆ ಈ ವಿಚಾರವಾಗಿ ಚರ್ಚಿಸಿ, ಸಾರ್ವಜನಿಕರಿಗೆ ಹೇಗೆ ನೆರವಾಗಬಹುದು ಎಂದು ಅಭಿಪ್ರಾಯ ಕೇಳಿದ್ದೇನೆ ಎಂದು ತಿಳಿಸಿದರು. ಕೆಲವು ಸಾರ್ವಜನಿಕರು ಕೆಇಬಿಗೆ ಠೇವಣಿ ಪಾವತಿ ಮಾಡಿದ್ದು, ಈ ವಿಚಾರವಾಗಿ ಯಾವ ರೀತಿ ಕ್ರಮ ಕೈಗೊಳ್ಳಬಹುದು…
ಚಿತ್ರದುರ್ಗ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹುಟ್ಟುಹಬ್ಬದ ಹಿನ್ನಲೆ ಇಂದು ಚಿತ್ರದುರ್ಗದ ಗೋನೂರು ನಿರಾಶ್ರಿತರ ಕೇಂದ್ರದಲ್ಲಿ ಸಚಿವರ ಬೆಂಬಲಿಗರು, ಅಭಿಮಾನಿಗಳು ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಬರ್ತಡೇ ಆಚರಿಸಿದರು. ಇನ್ನು ನಿರಾಶ್ರಿತರ ಕೇಂದ್ರದಲ್ಲಿ ರೆಡ್ಡಿ ಸಮುದಾಯದ ವತಿಯಿಂದ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಲಾಯಿತು. ಈ ವೇಳೆ ನಿರಾಶ್ರಿತರ ಕೇಂದ್ರದಲ್ಲಿನ ನಿರಾಶ್ರಿತರಿಗೆ ಹಣ್ಣು ಹಂಪಲು ಹಾಗೂ ಬಟ್ಟೆ ವಿತರಣೆ ಮಾಡಲಾಯಿತು. ರೆಡ್ಡಿ ಸಮುದಾಯದಿಂದ ನಡೆದ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ ರವರಿಗೆ ಹುಟ್ಟುಹಬ್ಬದ ಶುಭ ಕೋರಿದ್ರು. ಈ ವೇಳೆ ತಾಲೂಕಿನ ರೆಡ್ಡಿ ಸಮುದಾಯದ ಮುಖಂಡರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.
ಚಿತ್ರದುರ್ಗ: ವರ್ಷಾಂತ್ಯಕ್ಕೆ ಸಿಎಂ ಸ್ಥಾನದಿಂದ ಸಿದ್ಧರಾಮಯ್ಯ ಉದರೋಗ್ತಾರೆ, ಆಮೇಲೆ ಕಾಂಗ್ರೆಸ್ ಅಧಿಕಾರದಲ್ಲಿ ಇರತ್ತೋ ಇಲ್ವೋ ದೇವರಿಗೇ ಗೊತ್ತು ಅಂತಾ ಮೊಳಕಾಲ್ಮೂರು ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಭವಿಷ್ಯ ನುಡಿದಿದ್ದಾರೆ. ಮೊಳಕಾಲ್ಮೂರು ಪಟ್ಟಣದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ವಯಸ್ಸಾದ ಶಾಸಕರು ಈಗ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಬಿ.ಆರ್ ಪಾಟೀಲ್, ರಾಜುಕಾಗೆ ಹಾಗೂ ಇವರ ಸರತಿ ಕೂಡ ಆಯ್ತು. ಇನ್ನು ಭಾಗ್ಯಗಳನ್ನು ಕೊಟ್ಟ ಕಾಂಗ್ರೆಸ್ ಸರ್ಕಾರಕ್ಕೆ ಅಭಿವೃದ್ಧಿಗೆ ಅನುದಾನ ಪಾಪ ಎಲ್ಲಿಂದ ಬರಬೇಕು ಎಂದು ಪರೋಕ್ಷವಾಗಿ ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿಕೆಗೆ ಟಾಂಗ್ ಕೊಟ್ಟರು. ಸಿದ್ಧರಾಮಯ್ಯ ಇನ್ನು 4 ತಿಂಗಳು ಮಾತ್ರ ಸಿಎಂ ಆಗಿರ್ತಾರೆ. ನವೆಂಬರ್, ಡಿಸೆಂಬರ್ ಅಷ್ಟೊತ್ತಿಗೆ ಸಿಎಂ ಸ್ಥಾನದಿಂದ ಉದುರಿ ಹೋಗ್ತಾರೆ, ಇಲ್ಲ ಕಿತ್ತು ಹೊಗೆಯುತ್ತಾರೆ ನಂತ್ರ ಸರ್ಕಾರ ಇರತ್ತೋ ಇಲ್ವೋ ಅಂತ ದೇವರಿಗೆ ಗೊತ್ತು ಎಂದು ವ್ಯಂಗ್ಯವಾಡಿದರು.
ಗ್ರಾಮ ಪಂಚಾಯತಿಗಳ ಲೆಕ್ಕ ಪರಿಶೋಧನಾ ವರದಿಯಲ್ಲಿನ ಆಡಿಟ್ ಆಕ್ಷೇಪಣೆಗಳು ಮತ್ತು ವಸೂಲಾತಿ ಕಂಡಿಕೆಗಳ ತೀರುವಳಿಗಾಗಿ 100 ದಿನಗಳ ಗ್ರಾಮ ಪಂಚಾಯತಿ ಲೆಕ್ಕಪರಿಶೋಧನ ಅಭಿಯಾನ ಆರಂಭಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 2014-15ನೇ ಸಾಲಿನ ಗ್ರಾಮ ಪಂಚಾಯತಿಗಳ ಲೆಕ್ಕ ಪರಿಶೋಧನಾ ವರದಿಯ ಆಡಿಟ್ ಕಂಡಿಕೆಗಳ ಕುರಿತು ಕರ್ನಾಟಕ ವಿಧಾನ ಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಯು ತೀವ ಅಸಮಾಧಾನ ಹಾಗೂ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಲೆಕ್ಕ ಪರಿಶೋಧನಾ ವರದಿಗಳಲ್ಲಿನ ಆಕ್ಷೇಪಣೆ ಮತ್ತು ವಸೂಲಾತಿ ಕಂಡಿಕೆಗಳ ತೀರುವಳಿಗೆ ನಿಯಮಾನುಸಾರ ಕ್ರಮ ಜರುಗಿಸಲು 100 ದಿನಗಳ ಗ್ರಾಮ ಪಂಚಾಯಿತಿಗಳ ಲೆಕ್ಕ ಪರಿಶೋಧನಾ ಅಭಿಯಾನವನ್ನು ಜೂನ್ 10ರಿಂದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ವಿಧಾನ ಸಭೆ ಹಾಗೂ ಪರಿಷತ್ ಸಂಬಂಧಿಸಿದ ಸಭೆಗಳಲ್ಲಿ ಗ್ರಾಮ ಪಂಚಾಯತಿಗಳಲ್ಲಿ ಬಾಕಿ ಇರುವ ಲೆಕ್ಕ ಪರಿಶೋಧನೆ ಕಂಡಿಕೆಗಳು…
ನವದಹಲಿ, ಜೂನ್ 25 ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಲೋಕಸಭಾಧ್ಯಕ್ಷರಾದ ಓಂ.ಬಿರ್ಲಾ ಅವರನ್ನು ಇಂದು ನವ ದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು 2025ರ ಸೆಪ್ಟೆಂಬರ್ 9 ಮತ್ತು 10ರಂದು ನಡೆಸಲು ಕರ್ನಾಟಕವನ್ನು ಆಯ್ಕೆ ಮಾಡಿದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು. ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಗಳು ಭಾಗವಹಿಸುವುದಲ್ಲದೇ ಪ್ರಪ್ರಥಮ ಬಾರಿಗೆ ಅಂತರಾಷ್ಟ್ರೀಯ ಮಟ್ಟದ ಕಾಮನ್ ವೆಲ್ತ್ ದೇಶಗಳ ಪೀಠಾಸೀನಾಧಿಕಾರಿಗಳನ್ನು ಆಹ್ವಾನಿಸುವ ಕುರಿತು ಮತ್ತು ಸಮ್ಮೇಳನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸಹ ಸಮಾಲೋಚನೆ ನಡೆಸಿದರು. ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 8, 2025 ರಂದು ವಿಧಾನಸೌಧದ ಬೃಹತ್ ಮೆಟ್ಟಲುಗಳ ಮೇಲೆ ಹಮ್ಮಿಕೊಳ್ಳುವ ಬಗ್ಗೆ ಹಾಗೂ ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ಜಾರಿಗೆ ತಂದಿರುವ ಅನೇಕ ಪ್ರಗತಿ ಪರ ಬದಲಾವಣೆಗಳನ್ನು ಸಹ ಲೋಸಭಾಧ್ಯಕ್ಷರ ಗಮನಕ್ಕೆ ತಂದರು. ಬೆಂಗಳೂರು, ಅಂತರಾಷ್ಟ್ರೀಯವಾಗಿ ಸಿಲಿಕಾನ್ ಸಿಟಿಯಾಗಿರುವುದರಿಂದ ಇಂತಹ ಸಮ್ಮೇಳನಗಳನ್ನು ನಡೆಸುತ್ತಿರುವುದು ಅತ್ಯಂತ ಸೂಕ್ತ ಎಂದು ಲೋಕಸಭಾಧ್ಯಕ್ಷರು…
Subscribe to Updates
Get the latest creative news from FooBar about art, design and business.
