Author: Times of bayaluseeme
ಚಿತ್ರದುರ್ಗ: ಇಸ್ರೇಲ್ ಹಾಗೂ ಇರಾನ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾದ್ದು, ಇರಾನ್ ದೇಶದಲ್ಲಿ ನೆಲೆಸಿರುವ ವಿದೇಶಿಗರಲ್ಲಿ ಆಂತಕ ಉಂಟುಮಾಡಿದೆ. ಕರ್ನಾಟಕ ರಾಜ್ಯದ 9 ವಿದ್ಯಾರ್ಥಿಗಳು ಇರಾನ್ ರಾಜಧಾನಿ ತೆಹರಾನ್ ಸಮೀಪದ ಶಾಹಿದ್ ಬೇಹಸ್ತಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಸದ್ಯ ಬೆಂಗಳೂರಿನ ವಿದ್ಯಾರ್ಥಿ ನದೀಮ್ ಹುಸೇನ್ ಪೋಷಕರು, ಬೆಂಗಳೂರಿನ ಅನಿವಾಸಿ ಭಾರತೀಯ ಸಮಿತಿ ಕರೆ ನದೀಮ್ ಹುಸೇನ್ ಅವರನ್ನು ಹಿಂದಿರುಗಿ ದೇಶಕ್ಕೆ ಕರೆತರುವಂತೆ ಮನವಿ ಮಾಡಿದ್ದಾರೆ. ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಕರ್ನಾಟಕ ವಿದ್ಯಾರ್ಥಿಗಳನ್ನು ಇರಾನ್‌ನಿಂದ ಕರೆತರಲು ಕ್ರಮ ಕೈಗೊಳ್ಳುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರದ ಮುಖೇನ ಕೋರಿದ್ದಾರೆ. ಇದರೊಂದಿಗೆ ಸಂಬAದ ಪಟ್ಟದ ಅಧಿಕಾರಿಗಳೊಂದಿಗೆ ನಿರಂತರವಾಗಿ ದೂರವಾಣಿ ಸಂಪರ್ಕದಲ್ಲಿ ಇದ್ದಾರೆ. ಇಸ್ರೇಲ್ ಹಾಗೂ ಇರಾನ್ ನಡುವಿನ ಪರಿಸ್ಥಿತಿ ಅವಲೋಕಿಸಿ ವಿದ್ಯಾರ್ಥಿಗಳನ್ನು ಕರೆತರುವುದಾಗಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದ್ದಾರೆ.
ಬೆಂಗಳೂರು, ಜೂನ್ 07: ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಅವರು ಇಂದು ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಗೌರವಾನ್ವಿತ ಉಪ ರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಮಯದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ. ಸುಧಾಕರ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ವೀರಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್. ಜಿ. ಉಪಸ್ಥಿತರಿದ್ದರು.
ಚಿತ್ರದುರ್ಗ ಜೂನ್ 05 : ವಿಶ್ವ ಪರಿಸರ ದಿನಾಚರಣೆಯಂದು ಮಾತ್ರ ಪರಿಸರದ ಬಗ್ಗೆ ಕಾಳಜಿ ತೋರಿದರೆ ಸಾಲದು. ಪ್ರತಿ ದಿನವೂ ಪರಿಸರ ಪ್ರಜ್ಞೆ ಹೊಂದುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೀರಣ್ಣ ಸೋಮಶೇಖರ್ ಹೇಳಿದರು. ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ), ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಹಾಗೂ ಚಿತ್ರದುರ್ಗ ನಗರಸಭೆ ಸಹಯೋಗದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪರಿಸರ ರಕ್ಷಣೆ ಕೇವಲ ಅರಣ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳ ಕೆಲಸವಲ್ಲ. ಅದು ಪ್ರತಿಯೊಬ್ಬರ ಕೆಲಸ ಮತ್ತು ಜವಾಬ್ದಾರಿಯಾಗಿದ್ದು, ಪರಿಸರ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಸಾರ್ವಜನಿಕರು ತಮ್ಮ ಜನ್ಮ ದಿನಾಚರಣೆ ಅಂಗವಾಗಿ ಕನಿಷ್ಟ ಒಂದು…
ಚಿತ್ರದುರ್ಗ, ಜೂನ್.05: ಜೂನ್ 9 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದೆ. ಜಿಲ್ಲೆಯಲ್ಲಿ 8658 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 06 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ. ನಿಯಾಮಾನುಸಾರ ಪರೀಕ್ಷಾ ಕಾರ್ಯನಿರ್ವಹಿಸುವಂತೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-3 ರ ಪರೀಕ್ಷಾ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ಸಹ ಗಂಭೀರವಾಗಿ ಪರಿಗಣಿಸಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರೀಕ್ಷೆಯ ವೆಬ್ ಕಾಸ್ಟಿಂಗ್ ಮಾಡಲಾಗುವುದು. ಯಾವುದೇ ಅಕ್ರಮಗಳು ಕಂಡುಬAದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಕ್ರಮದಲ್ಲಿ ಭಾಗಿಯಾದವರ ವಿರುದ್ದ ಎಫ್.ಐ.ಆರ್ ಸಹ ದಾಖಲಾಗುತ್ತದೆ. ಅಧಿಕಾರಿ ಹಾಗೂ ಸಿಬ್ಬಂದಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷಾ ಪಾವಿತ್ರತೆ ಕಾಪಾಡಿ ಪರೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದರು. ಶಾಲೆ ಹಾಗೂ…
ಕರ್ನಾಟಕಕ್ಕೆ ಮುಂದಿನ ಏಳು ದಿನಗಳ ಹವಾಮಾನ ಮುನ್ಸೂಚನೆ ಮತ್ತು ಎಚ್ಚರಿಕೆ ದಿನ 2: 04-ಜೂನ್-2025 ಕರಾವಳಿ ಕರ್ನಾಟಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ: ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ. ಉತ್ತರ ಒಳನಾಡಿನ ಕರ್ನಾಟಕ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಹಾವೇರಿ, ಬೆಳಗಾವಿ, ಧಾರವಾಡ: ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (40-50 ಕಿ.ಮೀ/ಗಂಟೆ) ಹಗುರ ಮಳೆ/ಗುಡುಗು ಸಹಿತ ಮಳೆ. ದಕ್ಷಿಣ ಒಳನಾಡಿನ ಕರ್ನಾಟಕ ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಕೊಡಗು, ತುಮಕೂರು: ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (30-40 ಕಿ.ಮೀ/ಗಂಟೆ) ಹಗುರ ಮಳೆ/ಗುಡುಗು ಸಹಿತ ಮಳೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ: ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ (30-40 ಕಿ.ಮೀ/ಗಂಟೆ) ಹಗುರ ಮಳೆ/ಗುಡುಗು ಸಹಿತ ಮಳೆ. ದಿನ 3: 05-ಜೂನ್-2025 ಕರಾವಳಿ ಕರ್ನಾಟಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ: ಹಲವೆಡೆ ಹಗುರದಿಂದ ಸಾಧಾರಣ ಮಳೆ. ಉತ್ತರ ಒಳನಾಡಿನ ಕರ್ನಾಟಕ…
ಬೆಂಗಳೂರು, ಜೂ.3: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ್ದ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಅವರೊಂದಿಗೆ ಸಮಾಲೋಚಿಸಿದ ಅವರು, ವನ್ಯಜೀವಿ, ಅರಣ್ಯ, ಪರಿಸರದ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿ ಹೊಂದಿರುವ ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಇಲ್ಲದೆ ಅರಣ್ಯ, ವನ್ಯಜೀವಿ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಇದು ಅವರ ಪರಿಸರ ಕಾಳಜಿ, ಬದ್ಧತೆಗೆ ಸಾಕ್ಷಿಯಾಗಿದೆ ಎಂದರು. ತಮ್ಮ ಲೆಗ್ ಸ್ಪಿನ್ ಮೋಡಿಯಿಂದ ಭಾರತ ತಂಡದ ಹಲವು ಗಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಕುಂಬ್ಳೆ ಅವರು ಕರ್ನಾಟಕದ ಅಷ್ಟೇ ಅಲ್ಲ ಭಾರತದ ಹೆಮ್ಮೆಯ ಪುತ್ರರಾಗಿದ್ದಾರೆ. ಜಿಂ ಲೇಕರ್ ಬಳಿಕ ಒಂದು ಟೆಸ್ಟ್ ಪಂದ್ಯದ ಒಂದು ಇನ್ನಿಂಗ್ಸ್ ನಲ್ಲಿ ಎಲ್ಲ 10 ವಿಕೆಟ್ ಪಡೆದ ಸಾಧನೆ ಮಾಡೆದ ಮಾಂತ್ರಿಕ…
ಚಿತ್ರದುರ್ಗ ಜೂ.02: ಸಮಾಜದಲ್ಲಿ ಪ್ರತಿ ಮಹಿಳೆಯು ತಮ್ಮದೇಯಾದ ಹಣಕಾಸಿನ ಸ್ವಾತಂತ್ರ್ಯ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು ಎಂದು ಹಿರಿಯ ವಕೀಲೆ ಡಿ.ಕೆ.ಶೀಲಾ ಹೇಳಿದರು. ನಗರದ ಸ್ಟೇಡಿಯಂ ರಸ್ತೆಯ ಜಿ.ಜಿ.ಸಮುದಾಯ ಭವನದಲ್ಲಿ ಸೋಮವಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಐಕ್ಯೂಎಸಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಪ್ರತಿಭೋತ್ಸವ ಸಮಾರಂಭ”ದಲ್ಲಿ ಅವರು ಮಾತನಾಡಿದರು. ನಮ್ಮಿಂದ ಹಾಗೂ ನಮ್ಮ ಕುಟುಂಬದಿಂದಲೇ ಸಮಾನತೆ ಶುರುವಾಗಬೇಕು. ಪೋಷಕರು ಗಂಡು, ಹೆಣ್ಣು ಇಬ್ಬರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು. ನಮ್ಮನ್ನು ನಾವು ಬದಲಾಯಿಸಿಕೊಳ್ಳುವ ಮೂಲಕ ಬದಲಾವಣೆ ಪ್ರಾರಂಭವಾಗಬೇಕು ಎಂದು ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ ಮಾತನಾಡಿ, ವಿದ್ಯಾರ್ಥಿಗಳು ತಂದೆ-ತಾಯಿ ಹಾಗೂ ಕುಟುಂಬಕ್ಕೆ ಉತ್ತಮ ಹೆಸರು ತರುವ ಮೂಲಕ ಸ್ವಾವಲಂಬಿಗಳಾಗಿ, ಆರ್ಥಿಕ ಸ್ವಾತಂತ್ರ್ಯದಲ್ಲಿ ಯಶಸ್ವಿಗಳಾಗಬೇಕು. ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಕಂಡ ಮಹಿಳೆಯರು ನೀವಾಗಬೇಕು ಎಂದು ತಿಳಿಸಿದ ಅವರು, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು. ಮಹಿಳಾ ಕಾಲೇಜಿನ…
ಬೆಂಗಳೂರು, ಜೂನ್ 2: ಹೇಮಾವತಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಎಲ್ಲ ರೈತರನ್ನು ಹಾಗೂ ಸರ್ವಪಕ್ಷಗಳ ಪ್ರಮುಖರನ್ನು ಕರೆದು ಸಭೆ ಮಾಡಿ ಚರ್ಚಿಸಬೇಕು. ರೈತರ ವಿರುದ್ಧ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿಗೆ ಹೇಮಾವತಿ ನೀರು ನೀಡಲು ತುಮಕೂರಿನ ರೈತರು ಪ್ರತಿಭಟಿಸುತ್ತಿರುವಾಗ, ಎರಡೂ ಜಿಲ್ಲೆಗಳ ಪ್ರತಿನಿಧಿಗಳು ಹಾಗೂ ರೈತರ ಜೊತೆ ಸರ್ಕಾರ ಚರ್ಚಿಸಬೇಕಿತ್ತು. ಈ ಕೆಲಸವನ್ನು ಸರ್ಕಾರ ಮಾಡದೆಯೇ ರೈತರ ನಡುವೆಯೇ ಎತ್ತಿ ಕಟ್ಟುವ ಕೆಲಸ ಮಾಡಿದೆ. ರೈತರಿಗೆ ಮನವರಿಕೆ ಮಾಡುವ ಬದಲು ಬೆದರಿಕೆ ಹಾಕುವುದು ಒಳ್ಳೆಯದಲ್ಲ. ಎಲ್ಲ ರೈತರನ್ನು ಸಮಭಾವದಿಂದ ನೋಡಬೇಕೆ ಹೊರತು, ಮಠಾಧೀಶರ ಮೇಲೆ, ಜನಪ್ರತಿನಿಧಿಗಳ ಮೇಲೆ ಕೇಸು ಹಾಕಬಾರದು. ಕಾಂಗ್ರೆಸ್‌ನ ಶಾಸಕರೇ ಆದ ಗುಬ್ಬಿ ಶ್ರೀನಿವಾಸ್ ಕೂಡ ಇದರ ವಿರುದ್ಧ ನಿಂತಿದ್ದಾರೆ ಎಂದರು. ರೈತರ ವಿರುದ್ಧ ಪ್ರಕರಣ ದಾಖಲಿಸುವುದು ಅಕ್ಷಮ್ಯ ಅಪರಾಧ. ರೈತರ ಜೊತೆಗೆ ಚರ್ಚಿಸಿ ಸಮನ್ವಯ ಸಾಧಿಸಬೇಕು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕುರ್ಚಿ ಹೋದರೆ ಅಧಿಕಾರವೇ ಇರುವುದಿಲ್ಲ.…
ಬೆಂಗಳೂರು: ಸಭೆಯ ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನೀಡಿದ ಸೂಚನೆಗಳು ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ, ಸಿಇಒ, ಎಸ್ಪಿಗಳ ಜವಾಬ್ದಾರಿ ತಾನೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು. ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳು, ತೆಗೆದುಕೊಂಡ ನಿರ್ಣಯಗಳಲ್ಲಿ ಕೆಲವು ಇಲಾಖೆಗಳು ಶೇ100 ರಷ್ಟು ಪ್ರಗತಿ ತೋರಿಸಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ರಾಜಿ ಇಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರವಾಗಿ ಕ್ರಮ ಕೈಗೊಳ್ಳುವುದು ನಮಗೆ ಅನಿವಾರ್ಯ ಆಗುತ್ತದೆ. ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒ ಗಳು ತಮ್ಮ ಅಹಂ ಬದಿಗೊಟ್ಟಿ ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ.…
ಚಿತ್ರದುರ್ಗ ಮೇ 29: ಲ್ಯಾಂಡ್ ಬೀಟ್ ನಡೆಸುವ ಮೂಲಕ ಕಂದಾಯ ಇಲಾಖೆಯ ಭೂಮಿ ಸರ್ವೇ ನಡೆಸಿ, ಅನಧಿಕೃತ ಭೂಮಿ ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಪ್ರಯತ್ನಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಸೂಚನೆ ನೀಡಿದರು. ಬೆಂಗಳೂರು ವಿಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಗುರುವಾರ ಕಂದಾಯ ಇಲಾಖೆ ವಿಷಯಗಳ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಅವರು ಮಾತನಾಡಿದರು. ವಿವಿಧ ಇಲಾಖೆಗಳ ಕಚೇರಿ ನಿರ್ಮಾಣಕ್ಕೆ ಕಂದಾಯ ಭೂಮಿ ಮಂಜೂರು ಮಾಡುವಂತೆ ಕೋರಿ ಸಲ್ಲಿಸಲಾದ ಸಾಕಷ್ಟು ಅರ್ಜಿಗಳು ಜಿಲ್ಲಾಧಿಕಾರಿಗಳ ಮುಂದಿವೆ. ಪೊಲೀಸ್, ಶಿಕ್ಷಣ, ಆರೋಗ್ಯ ಇಲಾಖೆಗಳಿಗೆ ನಗರಕ್ಕೆ ಹತ್ತಿರದಲ್ಲಿಯೇ ಸ್ಥಳಗಳನ್ನು ಮಂಜೂರು ಮಾಡಬೇಕು. ಜಿಲ್ಲಾಧಿಕಾರಿಗಳು ಭೂ ಒತ್ತುವರಿ ತೆರವು ಮಾಡಿ, ಅಗತ್ಯ ಇರುವ ಕಡೆ ಸಂಬಂಧಿಸಿದ ಇಲಾಖೆಗಳಿಗೆ ಭೂಮಿ ನೀಡಲು ಮುಂದಾಗಬೇಕು ಎಂದು ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಹೇಳಿದರು. ಫಾರಂ 53 ಹಾಗೂ 57 ಅಡಿ ಉಳುಮೆ ಮಾಡುತ್ತಿರುವ ಹಾಗೂ ಜಮೀನು ಮಂಜೂರು ಮಾಡಲು…
Subscribe to Updates
Get the latest creative news from FooBar about art, design and business.
