Author: Times of bayaluseeme
ಚಿತ್ರದುರ್ಗ ಮೇ29: ಜಿಲ್ಲೆಯಾದ್ಯಂತ ಏಕಕಾಲಕ್ಕೆ ಗುರುವಾರ ಶಾಲೆಗಳು ಆರಂಭವಾಗಿದ್ದು, ಮೊದಲ ದಿನವೇ ಮಕ್ಕಳು ಉತ್ಸಾಹದಿಂದ ಶಾಲೆಗಳತ್ತ ಹೆಜ್ಜೆ ಹಾಕಿದರು. ಹೊಸ ಹುರುಪಿನೊಂದಿಗೆ ತರಗತಿಗೆ ಹಾಜರಾದರು. ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಲೆಗಳಲ್ಲಿ ತಳಿರು ತೋರಣ ಕಟ್ಟುವ ಮೂಲಕ ಶಿಕ್ಷಕರು ಮಕ್ಕಳನ್ನು ಸಂಭ್ರಮದಿಂದ ಬರ ಮಾಡಿಕೊಂಡರು. ಎತ್ತಿನಗಾಡಿಯಲ್ಲಿ ಮೆರವಣಿಗೆ, ಗುಲಾಬಿ ಹೂ, ಸಮವಸ್ತ್ರ ವಿತರಣೆ, ಪುಠ್ಯಪುಸ್ತಕ ವಿತರಣೆ ಸೇರಿದಂತೆ ಹೀಗೆ ವಿವಿಧ ಬಗೆಯಲ್ಲಿ ಮಕ್ಕಳನ್ನು ಸ್ವಾಗತಿಸಲಾಯಿತು. ಶಿಕ್ಷಣದ ಶಕ್ತಿಯಿಂದ ಜ್ಞಾನದ ಬೆಳಕು ಹೆಚ್ಚಾಗಲಿ: ಶಿಕ್ಷಣವೇ ಶಕ್ತಿ, ಶಿಕ್ಷಣ ಕಲಿತ ವ್ಯಕ್ತಿ ತನ್ನ ಜೀವನವನ್ನು ಉತ್ತಮವಾಗಿ ನಿರ್ವಹಿಸಿ, ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡುವರು. ಶಾಲೆಗಳು ಶಿಕ್ಷಣ ನೀಡುವ ಕೇಂದ್ರಗಳಾಗಿದ್ದು, ಅರ್ಹ ವಯಸ್ಸಿನ ಮಕ್ಕಳನ್ನು ಶಾಲೆಗೆ ಸೇರಿಸಿ, ನಿಯಮಿತವಾಗಿ ಶಾಲೆಗೆ ಕಳುಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಮೆದೇಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನ “ಶಾಲಾ ಪ್ರಾರಂಭೋತ್ಸವ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳಿಗೆ ಉಚಿತ…
ಚಿತ್ರದುರ್ಗ ಮೇ27: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ನಡೆದಿರುವ ಸಮೀಕ್ಷೆ ಕಾರ್ಯದ ಅವಧಿಯನ್ನು ಜೂನ್ 01 ರವರೆಗೆ ಮರು ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕಾರ್ಯ ಕಳೆದ ಮೇ 05 ರಿಂದ ಆರಂಭಗೊಂಡಿದ್ದು, ಕಾರ್ಯದರ್ಶಿಗಳು, ಏಕ ಸದಸ್ಯ ಆಯೋಗ, ಬೆಂಗಳೂರು ಅವರ ಆದೇಶದಂತೆ ಮನೆ ಮನೆ ಭೇಟಿ ನೀಡಿ ಸಮೀಕ್ಷೆ ನಡೆಸುವ ಕಾರ್ಯವನ್ನು ಮೇ29 ರವರೆಗೆ ಕೈಗೊಳ್ಳಲು ಮರು ವಿಸ್ತರಿಸಲಾಗಿದೆ. ಪರಿಷ್ಕøತ ವೇಳಾಪಟ್ಟಿಯಂತೆ ಮೊದಲನೆ ಹಂತದಲ್ಲಿ ಮನೆ ಮನೆ ಭೇಟಿ ನೀಡಿ ಕೈಗೊಳ್ಳುವ ಸಮೀಕ್ಷಾ ಕಾರ್ಯವು ಮೇ. 29 ರವರೆಗೆ ಜರುಗಲಿದೆ. ಎರಡನೆ ಹಂತದಲ್ಲಿ, ಸಮೀಕ್ಷೆ ಬ್ಲಾಕ್‍ಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು, ಮನೆ-ಮನೆ ಭೇಟಿ ಅವಧಿಯಲ್ಲಿ…
ಚಿತ್ರದುರ್ಗ ಮೇ 27: ಬದುಕಿಗೆ ಕಣ್ಣುಗಳು ಬಹಳ ಅವಶ್ಯಕವಾಗಿದ್ದು, ಕಾಲಕಾಲಕ್ಕೆ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು. ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ನಗರಸಭೆ ಹಾಗೂ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಜೀವನದ ಎಲ್ಲ ಚಟುವಟಿಕೆಗಳಿಗೆ ಮೂಲ ಕಣ್ಣು. ಕಣ್ಣುಗಳು ನಮ್ಮ ಆತ್ಮದ ಕಿಟಕಿಗಳಿದ್ದಂತೆ, ಕಣ್ಣಿನ ಬಗ್ಗೆ ಕಾಳಜಿ, ರಕ್ಷಣೆ ವಹಿಸುವುದು ಅತ್ಯಂತ ಅವಶ್ಯಕವಾಗಿದ್ದು, ಉಚಿತ ಕಣ್ಣಿನ ತಪಾಸಣಾ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಕಣ್ಣಿನ ತಪಾಸಣೆ ಮಾಡಿಸಿಕೊಂಡು ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳಿ ಎಂದರು. ಹೊರ ಜಗತ್ತನ್ನು ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ ಅವರು, ವ್ಯಕ್ತಿಯ ಮರಣದ ನಂತರ ನೇತ್ರದಾನಕ್ಕೆ ಅವಕಾಶವಿದ್ದು, ಕಣ್ಣುಗಳನ್ನು ದಾನ ಮಾಡುವ…
ಬೆಂಗಳೂರು, ಮೇ 27: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಕೋವಿಡ್ ಮುನ್ನೆಚ್ಚರಿಕಾ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗೋಷ್ಠಿ ನಡೆಸಿದರು. ಕೋವಿಡ್ ಪ್ರಕರಣಗಳು ದಿನದಿಂದ ಹೆಚ್ಚಾಗುತ್ತಿದೆ. ಆದರೆ ಇದರ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ. ಗರ್ಭಿಣಿ ಹೆಣ್ಣು ಮಕ್ಕಳು ಮಾಸ್ಕ್ ಬಳಕೆ ಮಾಡಬೇಕು. ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದೆ. ಜನರು ಕೂಡ ನಮ್ಮೊಂದಿಗೆ ಕೈ ಜೋಡಿಸಬೇಕು ಎಂದು ಸಚಿವರು ತಿಳಿಸಿದರು. ಶಾಲೆಗಳು ಬೇಸಿಗೆ ರಜೆ ಬಳಿಕ ಪ್ರಾರಂಭವಾಗುತ್ತದೆ. ವಿದ್ಯಾರ್ಥಿಗಳಿಗೆ ಜ್ವರ, ಶೀತ, ಕೆಮ್ಮು ಇದ್ದರೆ ಶಾಲೆಗಳಿಗೆ ಕಳುಹಿಸಿಕೊಡಬಾರದು. ಒಂದು ವೇಳೆ ಶಾಲೆಯಲ್ಲಿ ಮಕ್ಕಳಿಗೆ ಶೀತ, ನೆಗಡಿ ಬಂದರೆ…
ಬೆಂಗಳೂರು, ಮೇ 27: ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು. ಯಾವುದೇ ಸಂಭಾವನೆ ಇಲ್ಲ: ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.
ನವದೆಹಲಿ, ಮೇ 25, 2025: ಪಿಎಂ ಇ-ಡ್ರೈವ್ ಯೋಜನೆಯಡಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆಗೆ 2000 ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡಿರುವ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಇಂದು ಸಂಜೆ ದೆಹಲಿಯಲ್ಲಿ ಭೇಟಿಯಾಗಿ ಧನ್ಯವಾದ ಸಲ್ಲಿಸಿದರು. ದೆಹಲಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ಅಧಿಕೃತ ನಿವಾಸದಲ್ಲಿ ನಡೆದ ಭೇಟಿಯಲ್ಲಿ ತೆಲಂಗಾಣ ಸಿಎಂ, ಉನ್ನತ ಅಧಿಕಾರಿಗಳು ಮತ್ತು ಸಂಸದರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ, ಹೈದರಾಬಾದ್‌ಗೆ ಇನ್ನಷ್ಟು ಎಲೆಕ್ಟ್ರಿಕ್ ಬಸ್‌ಗಳ ಹಂಚಿಕೆಗಾಗಿ ರೇವಂತ್ ರೆಡ್ಡಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕುಮಾರಸ್ವಾಮಿ, ಮುಂದಿನ ಹಂತದಲ್ಲಿ ಹೆಚ್ಚಿನ ಬಸ್‌ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಿದರು. ಅಲ್ಲದೆ, ತೆಲಂಗಾಣಕ್ಕೆ ಭೇಟಿ ನೀಡುವಂತೆ ಸಿಎಂ ರೇವಂತ್ ರೆಡ್ಡಿ, ಸಚಿವ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದರು. ಇದಕ್ಕೆ ಒಪ್ಪಿಗೆ ನೀಡಿದ ಸಚಿವರು, ಆದಷ್ಟು ಬೇಗ ತೆಲಂಗಾಣಕ್ಕೆ ಭೇಟಿ ನೀಡುವುದಾಗಿ ತಿಳಿಸಿದರು. ಈ ಭೇಟಿಯು ತೆಲಂಗಾಣದ ಸಾರಿಗೆ ವ್ಯವಸ್ಥೆಯನ್ನು…
ಬೆಂಗಳೂರಿನ ಫುಟ್ ಪಾತ್ ಅಂಗಡಿಗಳನ್ನು ತೆರವು, ವ್ಯಾಪಾರಿಗಳಿಗೆ ವಾಹನ ಸೌಲಭ್ಯ ಕಾನೂನು ಬಾಹಿರವಾಗಿ ಹಾಕಿರುವ ಆಪ್ಟಿಕಲ್ ಕೇಬಲ್ ಕತ್ತರಿಸಲು ಸೂಚನೆ ರಸ್ತೆ ಅಗಲೀಕರಣಕ್ಕೆ ಶಾಸಕರು ಶಿಫಾರಸ್ಸು ಮಾಡಿದರೆ ಟಿಡಿಆರ್ ನೀಡಲು ಸಿದ್ಧ ಮಳೆಯಿಂದ ಮನೆಯೊಳಗೆ ನೀರು ನುಗ್ಗಿರುವವರಿಗೆ 10 ಸಾವಿರ ಪರಿಹಾರ ಕೆಂಪೇಗೌಡ ಬಡಾವಣೆಯ ಬಿಡಿಎ ಜಾಗದಲ್ಲಿ ಸ್ಕೈ ಡೆಕ್ ನಿರ್ಮಾಣ ಬೆಂಗಳೂರು, ಮೇ 24: “ಸೆಪ್ಟೆಂಬರ್ 15ರ ಒಳಗಾಗಿ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. “ವಿರೋಧ ಪಕ್ಷದ ನಾಯಕರು ಸೇರಿದಂತೆ ಇನ್ನೂ ಮೂರ್ನಾಲ್ಕು ಶಾಸಕರ ಜತೆ ಚರ್ಚೆ ಮಾಡುತ್ತೇನೆ. ಎಲ್ಲರ ಸಲಹೆ ಪಡೆದ ಬಳಿಕ ಸಚಿವ ಸಂಪುಟದಲ್ಲಿ ಪ್ರಸ್ತಾಪ ಮಾಡಿ ಅಂತಿಮ ತೀರ್ಮಾನ ಮಾಡಲಾಗುವುದು” ಎಂದರು. ಗ್ರೇಟರ್ ಬೆಂಗಳೂರು ಸಭೆ ನಂತರ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. “ಮೇ 15ರಿಂದ ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಜಿಎ) ಆಗಿ ಪರಿವರ್ತನೆಗೊಳ್ಳಲು…
ಬೆಂಗಳೂರು, ಮೇ 24: “ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆ ಆರ್ ಎಸ್ ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. “ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ” ಎಂದು ಮಾಹಿತಿ ನೀಡಿದರು. “ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾಕಡೆ ಆಗುತ್ತದೆ.…
ಚಿತ್ರದುರ್ಗ ಮೇ 23: ಬಯಲುಸೀಮೆ ಹಾಗೂ ಕೋಟೆಯ ನಾಡು ಎನಿಸಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ಜಾರಿ ಮಾಡಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆ ಕತ್ತಲೆಯನ್ನು ದೂರ ಮಾಡಿದ್ದು, ಮನೆ ಮನೆಗೂ ಬೆಳಕು ಚೆಲ್ಲುವಂತೆ ಮಾಡಿದೆ. ರಾಜ್ಯ ಸರ್ಕಾರದ ಇಂಧನ ಇಲಾಖೆ ಮೂಲಕ ಜಾರಿ ಮಾಡಲಾದ ಗೃಹಜ್ಯೋತಿ ಯೋಜನೆ ಚಿತ್ರದುರ್ಗ ಜಿಲ್ಲೆಯಲ್ಲಿ ಕೆಲವೇ ದಿನಗಳಲ್ಲಿ ಅತ್ಯಂತ ಜನಪ್ರಿಯವಾಗಿದ್ದು, ಕೇವಲ ಬಡವರ ಮನೆ ಬೆಳಗುವುದು ಮಾತ್ರವಲ್ಲ, ವಿದ್ಯುತ್ ಬಿಲ್ ಭಾರ ಹೋರುತ್ತಿದ್ದ ಮಧ್ಯಮ ವರ್ಗದ ಕುಟುಂಬಗಳು ಕೂಡ ಇದರ ಫಲಾನುಭವ ಪಡೆದು ಬಿಲ್ ಕಟ್ಟುವ ಶ್ರಮ, ಕತ್ತಲೆ ಛಾಯೆಯನ್ನೂ ದೂರ ಮಾಡಿಕೊಂಡಿದ್ದಾರೆ. ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯು ಯಶಸ್ವಿಯಾಗಿ ಜಾರಿಗೊಂಡು ಎರಡು ವರ್ಷ ಪೂರ್ಣಗೊಳಿಸುವತ್ತ ಹೆಜ್ಜೆ ಹಾಕುತ್ತಿದೆ. ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಗೆ ಅಭೂತ ಪೂರ್ವ ಸ್ಪಂದನೆ ಸಿಕ್ಕಿದೆ. ಜಿಲ್ಲೆಯಾದ್ಯಂತ ಗೃಹಜ್ಯೋತಿ ಅತ್ಯಂತ ಜನಪ್ರಿಯ ಯೋಜನೆಯಾಗಿದ್ದು, ಬಹುತೇಕ ಫಲಾನುಭವಿಗಳು ನೋಂದಣಿ ಮಾಡಿಕೊಂಡು ಈ ಸೌಲಭ್ಯದ ಸದುಪಯೋಗ ಪಡೆದುಕೊಂಡಿದ್ದಾರೆ. ಡಾ.ಬಾಬಾ…
ಮೈಸೂರು(ಕೆ.ಆರ್.ನಗರ), ಮೇ 23 : ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ ಎಂದು ಮರುಪ್ರಶ್ನಿಸಿದರು. ಇ.ಡಿ ಹಾಗೂ ಐ.ಟಿ ದಾಳಿಗಳು ರಾಜಕೀಯ ಪ್ರೇರಿತವಾಗಬಾರದು ಜಾರಿನಿರ್ದೇಶನಾಲಯ ತನ್ನ ಎಲ್ಲೆಯನ್ನು ಮೀರುತ್ತಿರುವ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಗಮನಿಸಿರುವ ಕುರಿತು ಪತ್ರರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇ.ಡಿ ಯವರು, ಐ.ಟಿ.ಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು. ಪ್ರಸ್ತುತ…
Subscribe to Updates
Get the latest creative news from FooBar about art, design and business.
