Author: Times of bayaluseeme
ಧನಶ್ರೀ ವರ್ಮಾ ಮಾರ್ಚ್ 20, 2025 ರಂದು ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಅವರಿಂದ ವಿಚ್ಛೇದನ ಪಡೆಯುವುದಾಗಿ ಅಧಿಕೃತವಾಗಿ ಘೋಷಿಸಿದರು. ವಿಚ್ಛೇದನದ ನಂತರ ಧನಶ್ರೀ ವರ್ಮಾ ಸರಣಿ ಚಲನಚಿತ್ರಗಳು ಮತ್ತು ಸಂಗೀತ ಆಲ್ಬಮ್‌ಗಳಲ್ಲಿ ನಿರತರಾಗಿದ್ದಾರೆ. ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಅವರ ಮಾಜಿ ಪತ್ನಿ ಧನಶ್ರೀ ವರ್ಮಾ ಸದ್ಯ ರಿಯಾಲಿಟಿ ಶೋ, ಸಿನಿಮಾ ಹಾಗೂ ಆಲ್ಬಂ ಸಾಂಗ್ ಮೂಲಕ ಮಿಂಚುತ್ತಿದ್ದಾರೆ. ಇದರ ನಡುವೆ ಬಿಗ್ ಬಾಸ್ ಹಿಂದಿ ಸೀಸನ್ 19ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿದೆ. ತಮ್ಮ ವೀಡಿಯೊಗಳಿಂದ ಜನಪ್ರಿಯತೆ ಗಳಿಸಿದ ಧನಶ್ರೀ ವರ್ಮಾ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಅವರನ್ನು ಪ್ರೀತಿಸಿ 2020ರಲ್ಲಿ ವಿವಾಹವಾದರು. ಆದರೆ ಮದುವೆಯಾದ ಕೆಲ ವರ್ಷಗಳಲ್ಲಿಯೇ ಇಬ್ಬರೂ ವಿಚ್ಛೇದನ ಪಡೆದು ಬೇರ್ಪಟ್ಟಿದ್ದಾರೆ. ಧನಶ್ರೀ ವರ್ಮಾ-ಚಹಾಲ್ ಡಿವೋರ್ಸ್: ವಿಚ್ಛೇದನ ಪಡೆದ ಬಳಿಕ ಧನಶ್ರೀ ವರ್ಮಾ ಯುಜ್ವೇಂದ್ರ ಚಾಹಲ್ ಅವರಿಂದ 40 ಕೋಟಿ ರೂ. ಜೀವನಾಂಶ ಪಡೆದಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಆದರೆ, ಚಾಹಲ್ ಮತ್ತು ಧನಶ್ರೀ ವರ್ಮಾ ಈ…
ಇತ್ತೀಚಿನ ದಿನಗಳಲ್ಲಿ ಬೆನ್ನು ನೋವು ಎಲ್ಲರಲ್ಲೂ ಸಾಮಾನ್ಯವಾಗಿದೆ. ಇಡೀ ದಿನ ಕಚೇರಿಯಲ್ಲಿ ಕುಳಿತು ಕೆಲಸ ಮಾಡುವುದರಿಂದ ಅತಿಯಾಗಿ ಬೆನ್ನು ನೋವು ಕಾಣಿಸಿಕೊಂಡು ನೋವು ಅನುಭವಿಸುತ್ತಿರಬಹುದು. ಹಾಗಾದ್ರೆ ಬೆನ್ನು ನೋವು ಕಂಡು ಬಂದ್ರೆ ಕೂಡಲೇ ಈ ಮನೆ ಮದ್ದುಗಳನ್ನು ಅನುಸರಿಸಿ ಬೆನ್ನು ನೋವು ನಿವಾರಿಸಿಕೊಳ್ಳಿ.ನ್ನು ನೋವು ಪರಿಹಾರಕ್ಕೆ ಮನೆಮದ್ದುಗಳು: ಶಾಖ ಮತ್ತು ಶೀತ ಚಿಕಿತ್ಸೆ: ಬೆಚ್ಚಗಿನ ಶಾಖದ ಅನ್ವಯವು ಸ್ನಾಯುಗಳನ್ನು ಸಡಿಲಗೊಳಿಸಲು ಸಹಾಯ ಮಾಡುತ್ತದೆ ಮತ್ತು ನೋವನ್ನು ಕಡಿಮೆ ಮಾಡುತ್ತದೆ, ಆದರೆ ಶೀತ ಚಿಕಿತ್ಸೆಯು ಊತವನ್ನು ಕಡಿಮೆ ಮಾಡುತ್ತದೆ. ವ್ಯಾಯಾಮ ಮತ್ತು ಸ್ಟ್ರೆಚಿಂಗ್: ನಿಯಮಿತ ವ್ಯಾಯಾಮ, ವಿಶೇಷವಾಗಿ ಬೆನ್ನು ಮತ್ತು ಬೆನ್ನಿನ ಸ್ನಾಯುಗಳನ್ನು ಬಲಪಡಿಸುವ ವ್ಯಾಯಾಮಗಳು, ನೋವನ್ನು ಕಡಿಮೆ ಮಾಡಲು ಮತ್ತು ಭವಿಷ್ಯದ ನೋವು ತಡೆಯಲು ಸಹಾಯ ಮಾಡುತ್ತದೆ. ನೋವು ನಿವಾರಕಗಳು: ನೋವು ನಿವಾರಕ ಮಾತ್ರೆಗಳು ಅಥವಾ ಕ್ರೀಮ್‌ಗಳನ್ನು ಬಳಸುವುದರಿಂದ ನೋವನ್ನು ತಾತ್ಕಾಲಿಕವಾಗಿ ಕಡಿಮೆ ಮಾಡಬಹುದು, ಆದರೆ ವೈದ್ಯರ ಸಲಹೆ ಪಡೆಯುವುದು ಉತ್ತಮ. ಉತ್ತಮ ಭಂಗಿ ಕುಳಿತುಕೊಳ್ಳುವಾಗ ಮತ್ತು ನಿಂತಿರುವಾಗ ಉತ್ತಮ…
ಹೈದರಾಬಾದ್: ತೆಲುಗು ಚಿತ್ರರಂಗದ ಹಿರಿಟ ನಟ ಕೋಟ ಶ್ರೀನಿವಾವಾಸ ರಾವ್ (83) ಅವರು ಇಂದು ವಿಧಿವಶರಾಗಿದ್ದಾರೆ.ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿಯೇ ಇಂದು ಮುಂಜಾನೆ 4 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.ಹ ರಿಯ ನಟ ವಯೋಸಹಜ ಕಾಯಿಲೆ ಹಾಗೂ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳಿಂದ ಅವರಿಗೆ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ಕೋಟ ಶ್ರೀನಿವಾಸ ರಾವ್ ಜುಲೈ 10, 1942 ರಂದು ಕೃಷ್ಣ ಜಿಲ್ಲೆಯ ಕಂಕಿಪಡುವಿನಲ್ಲಿ ಜನಿಸಿದರು. 4 ದಶಕಗಳ ಕಾಲ ಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿದ ಅವರು, ತಮ್ಮ ವೃತ್ತಿಜೀವನದಲ್ಲಿ ಹಲವು ವಿಶಿಷ್ಟ ಪಾತ್ರಗಳನ್ನು ನಿರ್ವಹಿಸಿದ್ದಾರೆ. ರಂಗಭೂಮಿಯ ಹಿನ್ನಲೆಯಿಂದ ಬಂದ ಶ್ರೀನಿವಾಸ ರಾವ್, ಹಲವು ವರ್ಷಗಳ ಕಾಲ ಚಿತ್ರಪ್ರೇಮಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.1978ರಲ್ಲಿ ‘ಪ್ರಾಣಂ ಖರೀಧು’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಇವರು, ತಮಿಳು, ಹಿಂದಿ ಮತ್ತು ಕನ್ನಡ, ಮಲಯಾಳಂ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇಲ್ಲಿಯವರೆಗೆ 750ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಕೋಟ…
ನವದೆಹಲಿ: ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, 26/11 ಮುಂಬೈ ದಾಳಿ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್, ಕೇರಳ ಬಿಜೆಪಿ ನಾಯಕ ಸಿ. ಸದಾನಂದನ್ ಮಾಸ್ಟರ್ ಮತ್ತು ಇತಿಹಾಸಗಾರ್ತಿ ಮೀನಾಕ್ಷಿ ಜೈನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ. ಈ ಸಂಬಂಧ ಶನಿವಾರ ತಡರಾತ್ರಿ ಅಧಿಸೂಚನೆ ಹೊರಡಿಸಲಾಗಿದ್ದು, ನಾಲ್ವರನ್ನು ಮೇಲ್ಮನೆಗೆ ರಾಷ್ಟ್ರಪತಿ ನಾಮನಿರ್ದೇಶನ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಸಂವಿಧಾನದ 80 (1)ಎ ವಿಧಿಯಡಿ ನೀಡಲಾದ ವಿಶೇಷ ಅಧಿಕಾರದಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಉಜ್ವಲ್ ನಿಕಮ್: ಈ ನಾಮನಿರ್ದೇಶನವನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಉಜ್ವಲ್ ನಿಕಮ್ ಅವರು ವಕೀಲರಾಗಿ ಮಾತ್ರವಲ್ಲದೇ ಪ್ರಮುಖ ಪ್ರಕರಣಗಳಲ್ಲಿ ನ್ಯಾಯಕ್ಕಾಗಿ ಮುಂಚೂಣಿ ಪಾತ್ರ ವಹಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ. ಮುಂಬೈ ದಾಳಿ ಪ್ರಕರಣದಲ್ಲಿ ಸರ್ಕಾರದ ವಕೀಲರಾಗಿ…
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗ್ಯಾರಂಟಿ ಯೋಜನೆ ಬಗ್ಗೆ ಮಹಿಳಾ ಅಧಿಕಾರಿ ಟೀಕೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರದ ಬೆನ್ನಲ್ಲೇ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಇಲ್ಲಿನ ಉಪನೋಂದಣಾಧಿಕಾರಿ ರಾಧಮ್ಮರನ್ನು ಎತ್ತಗಂಡಿ ಮಾಡಿ ಜಿಲ್ಲಾ ಕೇಂದ್ರದ ಕಚೇರಿಗೆ ನಿಯೋಜಿಸಿದ್ದಾರೆ.ಜಮೀನು ಹಾಗೂ ನಿವೇಶನದ ಖಾತೆ ನೋಂದಣಿಗೆ ಸಂಬಂಧಪಟ್ಟಂತೆ ಇಲ್ಲಿನ ಉಪ ನೋಂದಣಾಧಿಕಾರಿ ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಇಲಾಖೆಯ ಪ್ರತಿಯೊಂದು ಕೆಲಸಕ್ಕೆ ಇಂತಿಷ್ಟು ಲಂಚ ನೀಡುವ ಅನಿರ್ವಾಯತೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಎರಡು ದಿನಗಳ ಹಿಂದಷ್ಟೇ ರೈತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಲಿಖಿತ ದೂರು ಸಲ್ಲಿಸಿದ್ದರು. ಈ ವಿವಾದ ತಣ್ಣಗಾಗುವ ಮೊದಲೇ ಅಧಿಕಾರಿ ರಾಧಮ್ಮ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಕುರಿತು ಟೀಕೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ತುಮಕೂರು ಜಿಲ್ಲಾಧಿಕಾರಿ ವರ್ಗಾವಣೆ ಮಾಡಿದ್ದಾರೆ. ಪಾವಗಡ ಉಪ ನೋಂದಣಾಧಿಕಾರಿ ರಾಧಮ್ಮ ಮಾತನಾಡಿದ ವಿಡಿಯೋದಲ್ಲಿ, ಕಾಂಗ್ರೆಸ್ ಏನ್ ದಬ್ಬಾಕಿರೋದು..? ಗಾಂಧಿಜೀ ಹೆಂಡತಿ ಮುಸ್ಲಿಂ, ಇಂದಿರಾಗಾಂಧಿ ಗಂಡ ಮುಸ್ಲಿಂ, ಸಂಪೂರ್ಣ ಅಧಿಕಾರ…
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಮಾಧ್ಯಮದಲ್ಲಿ ಚರ್ಚೆ ಆಗುತ್ತಿದೆಯೇ ಹೊರತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಎಐಸಿಸಿ ವರಿಷ್ಠ ಸುರ್ಜೇವಾಲಾ ಈ ಬಗ್ಗೆ ಚರ್ಚೆ ಮಾಡುತ್ತಿಲ್ಲ, ಹೀಗಾಗಿ, ಸಿಎಂ ಬದಲಾವಣೆ ಚರ್ಚೆ ಅಪ್ರಸ್ತುತ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಮೊನ್ನೆ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಬದಲಾವಣೆ ಮಾಡುವವರು ಹಾಗೂ ಬದಲಾವಣೆ ಆಗುವವರು ಮಾಡುತ್ತಿಲ್ಲ. ಮಾಧ್ಯಮದಲ್ಲಿ ಮಾತ್ರ ಈ ಬಗ್ಗೆ ಚರ್ಚೆ ಆಗುತ್ತಿದೆ ಎಂದರು.ಸಿದ್ದು, ಡಿಕೆಶಿ ಭೇಟಿಗೆ ರಾಹುಲ್ ಗಾಂಧಿ ಅವಕಾಶ ನೀಡಿಲ್ಲ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿಯವರು ಬಿಹಾರ ಚುನಾವಣೆ ಚರ್ಚೆಯಲ್ಲಿ ಭಾಗಿಯಾಗಿದ್ದರು. ಹೀಗಾಗಿ, ಭೇಟಿಯಾಗಿಲ್ಲ. ಬೇರೆ ಅರ್ಥ ಕಲ್ಪಿಸಬೇಡಿ ಎಂದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತು ಅವಹೇಳನಕಾರಿಹೇಳಿಕೆ ಪ್ರಕರಣ ಸಂಬಂಧ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರನ್ನು ಧ್ವನಿ ಪರೀಕ್ಷೆಗೊಳಪಡಿಸಲು ವಿಧಾನ ಸೌಧ ಠಾಣೆ ಪೊಲೀಸರು ಯೋಜಿಸಿದ್ದಾರೆ ಎಂದು ತಿಳಿದು ಬಂದಿದೆ.ವಿಧಾನಸೌಧ ಹೊರಾವರಣದಲ್ಲಿ ಶಾಲಿನಿ ರಜನೀಶ್ ಅವರ ಕುರಿತು ಅಗೌರವಯುತವಾಗಿ ಮಾತನಾಡಿದ ಆರೋಪದ ಮೇರೆಗೆ ರವಿಕುಮಾರ್‌ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಅವರಿಗೆ ನ್ಯಾಯಾಲಯವು ನಿರೀಕ್ಷಣಾಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ರವಿಕುಮಾರ್ ಅವರಿಗೆ ವಿಚಾರಣೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ. ಅಲ್ಲದೆ ಮುಖ್ಯ ಕಾರ್ಯದರ್ಶಿ ಅವರನ್ನು ನಿಂದಿಸಿದ ವಿಡಿಯೋ ಸಂಗ್ರಹಿಸಿರುವ ಪೊಲೀಸರು, ಅ ವಿಡಿಯೋದಲ್ಲಿರುವ ದನಿ ರವಿಕುಮಾರ್ ಅವರದ್ದೇ ಎಂಬುದು ಖಚಿತ ಪಡಿಸಿಕೊಳ್ಳಲು ಧ್ವನಿ ಪರೀಕ್ಷೆಗೆ ಮುಂದಾಗಿದ್ದಾರೆ.ಈ ಧ್ವನಿ ಪರೀಕ್ಷೆ ಸಂಬಂಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯುವ ಬಗ್ಗೆ ಕಾನೂನು ತಜ್ಞರಅಭಿಪ್ರಾಯವನ್ನು ಪೊಲೀಸರು ಕೇಳಿದ್ದಾರೆ ಎಂದು ತಿಳಿದು ಬಂದಿದೆ.
ಹನಿಹನಿ ಕೂಡಿದ್ರೆ ಹಳ್ಳ ಎಂಬಂತೆ ಎಲ್ಲರೂ ಸೇರಿ ಕಾಂಗ್ರೆಸ್ ಪಕ್ಷ ಕಟ್ಟಿದ್ದಾರೆ. ಪಕ್ಷ ಕಟ್ಟು ವಲ್ಲಿ ಖರ್ಗೆ, ಪರಮೇಶ್ವರ್, ದಿನೇಶ್ ಗುಂಡೂರಾವ್, ಆರ್.ವಿ.ದೇಶಪಾಂಡೆ, ಡಿಕೆಶಿ ಅವರ ಪಾತ್ರ ಇಲ್ವಾ..? ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ .ಸಿ.ಮಹದೇವಪ್ಪ ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ.ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯಿಸಿ, ಡಿಕೆಶಿಗೆ ಶಾಸಕರಬೆಂಬಲ ಇಲ್ಲ. ನಾನೇ 5 ವರ್ಷ ಸಿಎಂ ಅಂತ ಸಿದ್ದರಾಮಯ್ಯನವರೇ ಹೇಳಿದ ಮೇಲೆ ಮುಗಿತಲ್ಲ ಬಿಡಿ ಎಂದು ಸಿಎಂ ಪರ ಬ್ಯಾಟಿಂಗ್ ಮಾಡಿದರು.
ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಜೆ.ಸಿ ಮಾಧುಸ್ವಾಮಿ ಕಾಂಗ್ರೆಸ್ ಸೇರ್ತಾರೆ ಎಂಬ ಮಾತುಗಳ ಮಧ್ಯೆಯೇ ಮಧುಸ್ವಾಮಿ ಕುತೂಹಲಕಾರಿ ಹೇಳಿಕೆ ನೀಡಿ ಸುದ್ದಿಯಲ್ಲಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ನಾನು ಸಂತೆಯಲ್ಲಿ ಕಳೆದ ಮಗು, ಯಾರು ಕೈ ಹಿಡಿದು ಬಸ್ ಹತ್ತಿಸುತ್ತಾರೋ ಅವರ ಜೊತೆ ಹೋಗುತ್ತೇನೆ ಎಂದು ಹೇಳುವ ಮೂಲಕ ಬಿಜೆಪಿ ಪಕ್ಷ ಸರಿಯಾಗಿ ನಡೆಸಿಕೊಳ್ಳದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಎಂಬ ಸಂದೇಶವನ್ನು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಇನ್ನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಿಲ್ಲ, ಮುಂದಿನ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಮಧುಸ್ವಾಮಿ ಭೇಟಿಯಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಅದೇ ವೇಳೆ ತಮ್ಮ ಭೇಟಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಅಗತ್ಯವಿಲ್ಲ ಎಂದು ಹೇಳಿದ್ದ ಅವರು, ತಮ್ಮ ಸಮಾಜದ ಹಾಸ್ಟೆಲ್ವೊಂದರ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಅವರನ್ನು ಭೇಟಿಯಾಗಿದ್ದು, ರಾಜಕೀಯದ ಚರ್ಚೆ ನಡೆದಿಲ್ಲ, ಅವರು ತನ್ನನ್ನು ಪಕ್ಷಕ್ಕೆ ಆಹ್ವಾನಿಸಿಲ್ಲ ಮತ್ತು ತಾನು ಅದರ ಬಗ್ಗೆ ಪ್ರಸ್ತಾಪವೂ ಮಾಡಿಲ್ಲ…
ಹೊಟ್ಟೆ ನೋವು ದೈನಂದಿನ ಜೀವನಕ್ಕೆ ಸಾಕಷ್ಟು ಅನಾನುಕೂಲಕರ ಮತ್ತು ಅಡ್ಡಿಪಡಿಸುತ್ತದೆ. ಅದು ಅನಿಲ, ಅಜೀರ್ಣ ಅಥವಾ ಮುಟ್ಟಿನ ಸೆಳೆತ ಅಥವಾ ಗರ್ಭಧಾರಣೆಯ ಅಸ್ವಸ್ಥತೆಯಂತಹ ನಿರ್ದಿಷ್ಟ ಕಾರಣಗಳಿಂದ ಉಂಟಾಗಿದ್ದರೂ, ಪರಿಹಾರವನ್ನು ಕಂಡುಕೊಳ್ಳುವುದು ಅತ್ಯಗತ್ಯ. ಹೊಟ್ಟೆ ನೋವು ಮಾತ್ರೆಗಳು ತಾತ್ಕಾಲಿಕ ಪರಿಹಾರವನ್ನು ನೀಡಬಹುದಾದರೂ, ಅನೇಕ ಜನರು ಮೂಲ ಕಾರಣವನ್ನು ಪರಿಹರಿಸಲು ಮತ್ತು ಸಂಭಾವ್ಯ ಅಡ್ಡಪರಿಣಾಮಗಳನ್ನು ತಪ್ಪಿಸಲು ನೈಸರ್ಗಿಕ ಮನೆಮದ್ದುಗಳನ್ನು ಬಯಸುತ್ತಾರೆಟ್ಟೆ ನೋವಿಗೆ 12 ಮನೆಮದ್ದುಗಳು ಶುಂಠಿ ಚಹಾ ಹೊಟ್ಟೆ ನೋವು ಮತ್ತು ವಾಕರಿಕೆಗೆ ಶುಂಠಿ ಒಂದು ಪ್ರಸಿದ್ಧ ಪರಿಹಾರವಾಗಿದೆ. ಇದು ಉರಿಯೂತವನ್ನು ಕಡಿಮೆ ಮಾಡಲು ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಶುಂಠಿ ಚಹಾ ತಯಾರಿಸಲು, ತಾಜಾ ಶುಂಠಿಯ ಕೆಲವು ಹೋಳುಗಳನ್ನು ನೀರಿನಲ್ಲಿ 5-10 ನಿಮಿಷಗಳ ಕಾಲ ಕುದಿಸಿ. ಚಹಾವನ್ನು ನಿಧಾನವಾಗಿ ಸೋಸಿ ಮತ್ತು ಕುಡಿಯಿರಿ. ಶುಂಠಿ ಚಹಾವು ಗ್ಯಾಸ್ಟ್ರಿಕ್ ಸಮಸ್ಯೆಗಳಿಗೆ ಸಹ ಪ್ರಯೋಜನಕಾರಿಯಾಗಿದೆ, ಇದು ಹೊಟ್ಟೆ ನೋವು ಮತ್ತು ಅನಿಲಕ್ಕೆ ಮನೆಮದ್ದುಗಳಿಗೆ ಉತ್ತಮ ಆಯ್ಕೆಯಾಗಿದೆ. ಪುದೀನಾ ಎಣ್ಣೆ ಪುದೀನಾ ಎಣ್ಣೆಯು ಹೊಟ್ಟೆ ನೋವನ್ನು…
Subscribe to Updates
Get the latest creative news from FooBar about art, design and business.