Author: Times of bayaluseeme
ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನಾದ್ಯಂತಬಂಜಾರ ಸಮುದಾಯದವರು ಬಗರ್ ಹುಕುಂ ಹಾಗೂಅರಣ್ಯ ಭೂಮಿ ಸಾಗುವಳಿ ಮಾಡಿಕೊಂಡು ಬಂದಿದ್ದು, ಹಕ್ಕುಪತ್ರಕ್ಕಾಗಿ ಆಗ್ರಹಿಸಿ ಕರ್ನಾಟಕ ಬಂಜಾರ ಜನಜಾಗೃತಿಅಭಿಯಾನ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಕಛೇರಿ ಮುಂದೆ ಪ್ರತಿಭಟನೆ ನಡೆಸಿ ಸಾಗುವಳಿ ಪತ್ರಕ್ಕಾಗಿಆಗ್ರಹಿಸಿದರು. ಚಳ್ಳಕೆರೆ ತಾಲ್ಲೂಕಿನ ಕೆಲ ಲಂಬಾಣಿ ತಾಂಡದ ಜನರು,ಬಗರ್‍ಹುಕುಂ ಹಾಗೂ ಅರಣ್ಯಭೂಮಿಯನ್ನುಸಾಗುವಳಿ ಮಾಡಿಕೊಂಡು ಬಂದಿದ್ದು, ತಾಲ್ಲೂಕು ಆಡಳಿತಸಾಗುವಳಿ ಚೀಟಿಗಳನ್ನು ನೀಡುವ ಬದಲಾಗಿ, ಅನಗತ್ಯವಾಗಿ ಲಂಬಾಣಿ ಸಮುದಾಯದವರನ್ನು ಕಿರುಕುಳ ನೀಡಿ,ಒಕ್ಕಲೆಬ್ಬಿಸುವ ಕಾರ್ಯಕ್ಕೆ ಮುಂದಾಗಿದೆ ಎಂದು ಕರ್ನಾಟಕ ಬಂಜಾರ ಜನಜಾಗೃತಿ ಅಭಿಯಾನ ಸಮಿತಿ ಆರೋಪಿಸಿದೆ.ಪ್ರತಿಭಟನಾ ನಿರತ ಬಂಜಾರ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಶಾಂತಿ ಮತ್ತು ಸೌಹಾರ್ದವೇದಿಕೆಯ ಅಧ್ಯಕ್ಷ ನರೇನಹಳ್ಳಿ ಅರುಣ್‍ಕುಮಾರ್ ಅವರು ಚಳ್ಳಕೆರೆ ತಾಲ್ಲೂಕಿನಾದ್ಯಂತ ನೂರಾರುವರ್ಷಗಳಿಂದ ಬಗರ್‍ಹುಕುಂ ಮತ್ತುಅರಣ್ಯಭೂಮಿಗಳನ್ನು ಸಾಗುವಳಿಮಾಡಿಕೊಂಡುಬರಲಾಗಿದ್ದು, ಬಹಳಷ್ಟು ತಾಂಡಾದ ಜನರಿಗೆ ಇದೂವರೆಗೆಸಾಗುವಳಿ ಪತ್ರಗಳನ್ನು ನೀಡದೇ ಅನಗತ್ಯವಾಗಿ ವಿಳಂಭನೀತಿ ಅನುಸರಿಸಲಾಗುತ್ತಿದೆ ಎಂದರು. ಚಳ್ಳಕೆರೆ ತಾಲ್ಲೂಕಿನ ವೀರದಿಮ್ಮನಹಳ್ಳಿ ಗ್ರಾಮದ ಬಳಿ,ಗ್ರಾಮ ಠಾಣಾ ವ್ಯಾಪ್ತಿಗೆ ಸೇರಿದ ಜಮೀನು ಇದ್ದು, ಆ ಜಮೀನನ್ನು ಖಾಸಗಿಯವರು ತಮ್ಮ ಹೆಸರಿಗೆ ಮಾಡಿಕೊಂಡಿದ್ದು,ತಾಲ್ಲೂಕು ಆಡಳಿತ ಮೌನವಾಗಿರುವುದು…
ಬೆಂಗಳೂರು: ರಾಜ್ಯದಲ್ಲಿ ಕ್ಷೀಣಿಸಿರುವ ಮುಂಗಾರು ಮಳೆ, ಜು.15ರ ಬಳಿಕ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡೂರು ದಿನದಿಂದ ಮುಂಗಾರು ಮಳೆ ದುರ್ಬಲವಾಗಿದ್ದು, ಜು.15ರ ಬಳಿಕ ಚುರುಕುಗೊಳ್ಳಲಿದೆ. ಜು.3 ರಿಂದ ಜು.9ರ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.23ರಷ್ಟು ಹೆಚ್ಚಿನ ಮಳೆಯಾಗಿದೆ. ಒಟ್ಟಾರೆ ಮುಂಗಾರು ಅವಧಿಯಲ್ಲಿ ಶೇ.9 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಹವಾಮಾನ ವರದಿ A ಪ್ರಕಾರ ಕಳೆದ 24 ಗಂಟೆಯಲ್ಲಿ ಕದ್ರಾ, ಕ್ಯಾಸಲ್ ರಾಕ್, ಶೃಂಗೇರಿ ಹಾಗೂ ಆಗುಂಬೆಯಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ. ಉಳಿದಂತೆ ಮೂಡುಬಿದಿರೆ, ಕಾರ್ಕಳ, ಉಡುಪಿಯಲ್ಲಿ ತಲಾ 6, ಮಾಣಿ, ಧರ್ಮಸ್ಥಳ, ಕಮ್ಮರಡಿಯಲ್ಲಿ ತಲಾ 5, ಭಾಗಮಂಡಲ, ಕುಂದಾಪುರ, ಶಕ್ತಿನಗರ, ಬೆಳ್ತಂಗಡಿ, ಕೋಟ, ಸುಳ್ಯದಲ್ಲಿ ತಲಾ 4, ಸೆಂ.ಮೀ. ಮಳೆಯಾಗಿದೆ
ಬೆಂಗಳೂರು: ರಾಜ್ಯ ಆಡಳಿತದಲ್ಲಿ ಯಾವುದೇ ತೊಂದರೆ ಇಲ್ಲ, ಮುಖ್ಯಮಂತ್ರಿಯವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಸುಮ್ಮನೆ ಡ್ರಾಮಾ ಕಂಪನಿ ಓಪನ್ ಮಾಡೋಕೆ ನಂಗೆ ಇಷ್ಟವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಗುರುವಾರ ನಾಯಕತ್ವ ಬದಲಾವಣೆ ಚರ್ಚೆ ಕುರಿತುಬದಲಾವಣೆಯಂತಹ ಸಂದರ್ಭ ಬಂದಾಗ ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ. ಮಾಧ್ಯಮಗಳು ವಿಶ್ಲೇಷಣೆ ಮಾಡಿದಂತೆ ಇದೊಂದು ಡ್ರಾಮಾ. ಪದೇ ಪದೆ ಇದರ ಬಗ್ಗೆ ಚರ್ಚೆ ಆಗುವುದು, ಅವರೊಂದು ಹೇಳಿಕೆ ಕೊಡುವುದು ನಾನೊಂದು ಹೇಳೋದು, ಮತ್ತೊಬ್ಬರು ಇನ್ನೊಂದು ಹೇಳುವುದು ಆಗಬಾರದು. ನಮ್ಮ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿರುತ್ತದೆ ಎಂದರು
ಬೆಂಗಳೂರು: ಮುಡಾದಿಂದ ಅಕ್ರಮವಾಗಿ 14 ಬದಲಿ ಸೈಟ್ ಪಡೆದ ಆರೋಪಸಂಬಂಧ ಸಲ್ಲಿಕೆಯಾಗಿರುವ ಮೇಲ್ಮನವಿಗಳ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ, ಅವರ ಸಹೋದರ ಬಿ.ಎಂ.ಮಲ್ಲಿಕಾರ್ಜುನಸ್ವಾಮಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಮೈಸೂರಿನ ವಿಜಯನಗರ ಠಾಣೆ ಇನ್ ಪೆಕ್ಟರ್‌ಗೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿಗೊಳಿಸಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಕೋರಿ ಮೂಲ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಪ್ರಕರಣವನ್ನು ಪೊಲೀಸ್ ತನಿಖೆಗೆ ಅನುಮತಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿದ್ದರಾಮಯ್ಯ ಮತ್ತು ವಿವಾದಿತ ಜಮೀನಿನ ಮೂಲ ಮಾಲೀಕ ಜೆ.ದೇವರಾಜು ವಿಭಾಗೀಯ ಪೀಠಕ್ಕೆ ಪ್ರತ್ಯೇಕ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿಗಳು ಗುರುವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು
ಮೈಸೂರು: ನನ್ನ ಪ್ರಕಾರ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ. ನವೆಂಬರ್ ತಿಂಗಳಿಗೆ ನಮ್ಮ ತಂದೆ ಎರಡೂವರೆ ವರ್ಷ ಪೂರೈಸುತ್ತಾರೆ. ಮುಖ್ಯಮಂತ್ರಿ ಆಗುವ ಆಸೆ ಇಟ್ಟು ಕೊಂಡಿರೋರು ಕೇಳ್ತಾರೆ. ಕೇಳೋದ್ರಲ್ಲಿ ತಪ್ಪಿಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ತೀರ್ಮಾನ ಮಾಡೋದು ಹೈಕಮಾಂಡ್ ಹಾಗೂ ಶಾಸಕರು. ಸಿಎಂ ಬದಲಾವಣೆ ಹೈಕಮಾಂಡ್ ಮುಂದೆ ಇಲ್ಲ. ಎಐಸಿಸಿ ಕಾರ್ಯದರ್ಶಿ ಈಗಾಗಲೇ ಇದನ್ನುಸ್ಪಷ್ಟಪಡಿಸಿದ್ದಾರೆ. ಸರ್ಕಾರ ಬಂದಾಗಿನಿಂದ ಈ ಪ್ರಶ್ನೆಗೆ ಉತ್ತರ ಕೊಡುತ್ತಿದ್ದೇನೆ. ದಯವಿಟ್ಟು ಆ ಪ್ರಶ್ನೆ ಕೇಳಬೇಡಿ ಎಂದು ಹೇಳಿದರು.ಕೇಂದ್ರ ಓಬಿಸಿ ಕಮಿಟಿಗೆ ಸಿದ್ದರಾಮಯ್ಯ ನೇಮಕ ಪ್ರಶ್ನೆಗೆ ಕೆಂಡಮಂಡಲರಾದ ಅವರು, ಯಾರ್ರಿ ಹೇಳಿದ್ದು? ಮುಖ್ಯಮಂತ್ರಿ ಆದವರನ್ನು ಓಬಿಸಿ ಕಮಿಟಿಗೆ ಕಳುಹಿಸಿದರೆ ಪ್ರಮೋ ಷನ್ನಾ? ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗದ ನಾಯಕ. ದೇಶದಲ್ಲಿರುವ ಹಿಂದುಳಿದ ವರ್ಗಗಳ ನಾಯಕರು ಕಮಿಟಿಯಲ್ಲಿದ್ದಾರೆ. ಹೀಗಾಗಿ, ಅಲ್ಲಿ ಸದಸ್ಯರಾಗಿರುತ್ತಾರೆ. ಅದು ಪ್ರಮೋಷನಾ..? ನೀವೇ ಕಾಮನ್ ಸೆನ್ಸ್ ಉಪಯೋಗಿಸಿ ಎಂದರು.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಹಾಗೂ ಇತರೆ ಆರೋಪಿಗಳು ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ಗೆ ಹಾಜರಾಗಿದ್ದರು.ಆದರೆ, ಪ್ರಕರಣದ ಮೊದಲನೇ ಆರೋಪಿ ಪವಿತ್ರಾ ಗೌಡ, ಪವನ್, ವಿನಯ್, ಕಾರ್ತಿಕ್ ಮತ್ತು ಧನರಾಜ್ ಗೈರಾಗಿದ್ದರು. ಪವಿತ್ರಾ ಗೌಡ, ವಿನಯ್ ಮತ್ತು ಗೈರಾಗಿದ್ದ ಇತರೆ ಆರೋಪಿಗಳ ಪರ ವಕೀಲರು ವಿಚಾರಣೆಗೆ ಹಾಜರಾತಿಯಿಂದ ವಿನಾಯ್ತಿ ಕೋರಿ ಅರ್ಜಿ ಸಲ್ಲಿಸಿದರು. ಜು.10ರಿಂದ 30ರವರೆಗೆ ಮತ್ತು ಆ.5ರಿಂದ 17ರ ಅವಧಿಯಲ್ಲಿ ತಿರುಪತಿ ಮತ್ತು ಧರ್ಮಸ್ಥಳ ದೇವಾಲಯಗಳಿಗೆ ಭೇಟಿ ನೀಡಲು ಮತ್ತು ರೆಡ್ ಕಾರ್ಪೆಟ್ ಕಂಪನಿಗೆ ವಸ್ತುಗಳ ಖರೀದಿ ಹಿನ್ನೆಲೆಯಲ್ಲಿ ಹೈದರಾಬಾದ್, ಮಂಗಳೂರು, ದೆಹಲಿಗೆ ಹೋಗಲು ಅನುಮತಿ ನೀಡುವಂತೆ ಕೋರಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿರುವ ವಿಚಾರವನ್ನು ಆಕೆಯ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು.ಅಂತಿಮವಾಗಿ ಎಲ್ಲ ಆರೋಪಿಗಳ ಹಾಜರಾತಿ ದಾಖಲಿಸಿಕೊಂಡ ನ್ಯಾಯಪೀಠ, ಪವಿತ್ರಾ ಗೌಡ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ತನಿಖಾಧಿಕಾರಿಗಳಿಗೆ ಸೂಚಿಸಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು
ಬೆಂಗಳೂರು: ಮೈಸೂರು ಮತ್ತು ಬನ್ನೇರುಘಟ್ಟ ಮೃಗಾಲಯಗಳ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳಕ್ಕೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆ ನಿರ್ಧರಿಸಿದೆ.ವಿಧಾನಸೌಧದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆಯಲ್ಲಿ 252352 ಈ ನಿರ್ಣಯ ತೆಗೆದುಕೊಳ್ಳಲಾಯಿತು.ಮೈಸೂರಿನ ಚಾಮರಾಜೇಂದ್ರ ಮೃಗಾಲಯ ಮತ್ತು ಬನ್ನೇರುಘಟ್ಟದ ಮೃಗಾಲಯಗಳಲ್ಲಿನ ಪಶು, ಪಕ್ಷಿಗಳನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವೇಶ ದರವನ್ನು ಶೇ.50ರಷ್ಟು ಹೆಚ್ಚಿಸುವಂತೆ ಪ್ರಾಧಿಕಾರ ಸಭೆಯಲ್ಲಿ ಪ್ರಸ್ತಾಪಿಸಲಾಯಿತು.ಅದಕ್ಕೆ ಸಚಿವ ಈಶ್ವರ್ ಖಂಡ್ರೆ, ಪ್ರವೇಶ ಶುಲ್ಕವನ್ನು ಏಕಾಏಕಿ ಶೇ.50ರಷ್ಟು ಹೆಚ್ಚಳ ಮಾಡುವುದು ಸರಿಯಲ್ಲ. ಅದರಿಂದ ಪ್ರವಾಸಿಗರಿಗೆ ಹೊರೆಯಾಗುತ್ತದೆ. ಹೀಗಾಗಿ ಪ್ರವೇಶ ಶುಲ್ಕವನ್ನು ಶೇ.20ರಷ್ಟು ಹೆಚ್ಚಿಸುವಂತೆ ಸೂಚಿಸಿದರು. ಅದರ ಆಧಾರದಲ್ಲಿ ಶೇ.20ರಷ್ಟು ಪ್ರವೇಶ ಶುಲ್ಕ ಹೆಚ್ಚಳಕ್ಕೆ ಅನುಮೋದಿಸಲಾಯಿತು. ಅಲ್ಲದೆ, ಸಫಾರಿ ದರ ಹೆಚ್ಚಿಸದಂತೆಯೂ ನಿರ್ಣಯಿಸಲಾಯಿತು.
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಇಲ್ಲ ಎದು ಹೈಕಮಾಂಡ್ ಸ್ಪಷ್ಟಪಡಿಸಿದೆ. ರಾಜ್ಯ ಉಸ್ತುವಾರಿ ಸಹ ಮಾಧ್ಯಮಗಳ ಎದುರೇ ಹೇಳಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟ ಸಂದೇಶ ನೀಡಿದ್ದು. ಇನ್ನು ಯಾವುದೇ ಚರ್ಚೆ ಅಗತ್ಯವಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಿರುವುದರಿಂದ ಇನ್ನು ಮುಂದೆ ಯಾವುದೇ ಚರ್ಚೆ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ವಿಚಾರ ಪಕ್ಷದಲ್ಲಿ ಚರ್ಚೆಯಲ್ಲಿರಲಿಲ್ಲ. ಮಾಧ್ಯಮಗಳು ಸೃಷ್ಟಿಸಿರುವ ವದಂತಿಗೆ ಹೈಕಮಾಂಡ್ ಹಾಗೂ ರಾಜ್ಯ ಉಸ್ತುವಾರಿಗಳು ಸ್ಪಷ್ಟನೆ ನೀಡಿದ್ದರು. ಇದೀಗಜನರು ಐದು ವರ್ಷ ಆಡಳಿತ ನಡೆಸಲು ನಮಗೆ ಅಧಿಕಾರ ನೀಡಿದ್ದಾರೆ. ಇದಕ್ಕೆ ವಿರುದ್ಧವಾಗಿ ಬಿಜೆಪಿಯ ವರೇ ಹೈಕಮಾಂಡ್ ನಂತೆ ಮುಖ್ಯಮಂತ್ರಿ ಬದಲಾ ವಣೆ ಎಂದು ಮಾತನಾಡುತ್ತಾರೆ. ಆಪರೇ ಷನ್ ಕಮಲದ ರುಚಿ ನೋಡಿರುವ ಪರಿಣಾಮವದು. ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದು ಈಗ ಮತ್ತೊಮ್ಮೆ ಸಂದೇಶ ನೀಡಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯಿಲ್ಲ ಎಂದು ಅವರು ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನಡುವಿನಕುರ್ಚಿ ಗುದ್ದಾಟದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಎಳ್ಳುನೀರು ಬಿಡಲಾಗಿದೆ ಎಂದು ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಯಾವುದೇ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಪರಿಶಿಷ್ಟ ಜಾತಿ, ವರ್ಗಗಳಿಗೆ ಇಟ್ಟ ಹಣ ಸಂಪೂರ್ಣ ಪೋಲಾಗಿದೆ. ಈ ವರ್ಷದಲ್ಲಿ ಅವರಿಗೆಇಟ್ಟ ಹಣದ ಒಂದು ರುಪಾಯಿಯೂ ಬಿಡುಗಡೆ ಆಗಿಲ್ಲ, ಪರಿ ಸ್ಥಿತಿ ಇಷ್ಟೊಂದು ಹದಗೆಟ್ಟಿದೆ ಎಂದು ಹರಿಹಾಯ್ದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಭಲವಾದಿ, ಈಗಶಿವಕುಮಾರ್ ಅವರು ಸಿಎಂ ಆಗುವುದು ಕಷ್ಟ. ಪಾಪ ಡಿ.ಕೆ.ಶಿವಕುಮಾರ್ ಟವೆಲ್ ಹಾಕಿದ್ದೇ ಹಾಕಿದ್ದು. ಆ ಟವೆಲ್ಲೇ ನಾಪತ್ತೆಯಾಗಿ ಬಿಡುತ್ತಿದೆ ಎಂದರು.
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆಯಿಲ್ಲ. 2028 ರವರೆಗೆ ನಾನೇ ಮುಖ್ಯಮಂತ್ರಿ ಎಂದು ದೆಹಲಿಯಲ್ಲಿ ಸಿದ್ದರಾಮಯ್ಯ ಶಾಕ್ ನೀಡಿದ ಬೆನ್ನಲ್ಲೇ, ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಎಂದು ಪುನರುಚ್ಚರಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ಆಗಬೇಕು. ಈ ಬಗ್ಗೆ ಸಾಕಷ್ಟು ಬಾರಿ ಹೇಳಿದ್ದೇವೆ. ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು. ಪದೇ ಪದೆ ಹೇಳುವ ಅವಶ್ಯಕತೆ ಇಲ್ಲ. ಎಲ್ಲವನ್ನೂ ಹೈಕಮಾಂಡ್ ಗಮನಿಸುತ್ತಿದೆ. ಸೂಕ್ತ ನಿರ್ಧಾರವನ್ನು ಹೈಕಮಾಂಡ್ ನಾಯಕರು ಮಾಡುತ್ತಾರೆ ಎಂದು ಹೇಳಿದ್ದಾರೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಎಲ್ಭೇಟಿ ಕುರಿತು ಗುರುವಾರವೇ ಮಾತನಾಡಿದ್ದೇನೆ. ಊಟಕ್ಕಾಗಿ ಸೇರಿದ್ದೇವೆಯೇ ವಿಶೇಷ ಇಲ್ಲ ಎಂದರು. ಹೊರತುಭೇಟಿ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚಿಸಿದಿರಾ? ಎಂಬ ಪ್ರಶ್ನೆಗೆ, ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಆಗಿಲ್ಲ, ಸಮಯ ಬಂದಾಗ ಹೈಕಮಾಂಡ್ ಮಾಡಲಿದೆ.ನಾವು ಈಗಾಗಲೇ ಹೇಳಬೇಕಾದ್ದನ್ನು ಹೇಳಿದ್ದೇವೆ’ ಎಂದಷ್ಟೇ ಹೇಳಿದರು.
Subscribe to Updates
Get the latest creative news from FooBar about art, design and business.