Author: Times of bayaluseeme

ಬೆಂಗಳೂರು: ಮೈಸೂರು ಮತ್ತು ಬನ್ನೇರುಘಟ್ಟ ಮೃಗಾಲಯಗಳ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳಕ್ಕೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆ ನಿರ್ಧರಿಸಿದೆ.ವಿಧಾನಸೌಧದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆಯಲ್ಲಿ 252352 ಈ ನಿರ್ಣಯ ತೆಗೆದುಕೊಳ್ಳಲಾಯಿತು.ಮೈಸೂರಿನ ಚಾಮರಾಜೇಂದ್ರ ಮೃಗಾಲಯ ಮತ್ತು ಬನ್ನೇರುಘಟ್ಟದ ಮೃಗಾಲಯಗಳಲ್ಲಿನ ಪಶು, ಪಕ್ಷಿಗಳನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವೇಶ ದರವನ್ನು ಶೇ.50ರಷ್ಟು ಹೆಚ್ಚಿಸುವಂತೆ ಪ್ರಾಧಿಕಾರ ಸಭೆಯಲ್ಲಿ ಪ್ರಸ್ತಾಪಿಸಲಾಯಿತು.ಅದಕ್ಕೆ ಸಚಿವ ಈಶ್ವರ್ ಖಂಡ್ರೆ, ಪ್ರವೇಶ ಶುಲ್ಕವನ್ನು ಏಕಾಏಕಿ ಶೇ.50ರಷ್ಟು ಹೆಚ್ಚಳ ಮಾಡುವುದು ಸರಿಯಲ್ಲ. ಅದರಿಂದ ಪ್ರವಾಸಿಗರಿಗೆ ಹೊರೆಯಾಗುತ್ತದೆ. ಹೀಗಾಗಿ ಪ್ರವೇಶ ಶುಲ್ಕವನ್ನು ಶೇ.20ರಷ್ಟು ಹೆಚ್ಚಿಸುವಂತೆ ಸೂಚಿಸಿದರು. ಅದರ ಆಧಾರದಲ್ಲಿ ಶೇ.20ರಷ್ಟು ಪ್ರವೇಶ ಶುಲ್ಕ ಹೆಚ್ಚಳಕ್ಕೆ ಅನುಮೋದಿಸಲಾಯಿತು. ಅಲ್ಲದೆ, ಸಫಾರಿ ದರ ಹೆಚ್ಚಿಸದಂತೆಯೂ ನಿರ್ಣಯಿಸಲಾಯಿತು.

Read More

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಇಲ್ಲ ಎದು ಹೈಕಮಾಂಡ್ ಸ್ಪಷ್ಟಪಡಿಸಿದೆ. ರಾಜ್ಯ ಉಸ್ತುವಾರಿ ಸಹ ಮಾಧ್ಯಮಗಳ ಎದುರೇ ಹೇಳಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟ ಸಂದೇಶ ನೀಡಿದ್ದು. ಇನ್ನು ಯಾವುದೇ ಚರ್ಚೆ ಅಗತ್ಯವಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಿರುವುದರಿಂದ ಇನ್ನು ಮುಂದೆ ಯಾವುದೇ ಚರ್ಚೆ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ವಿಚಾರ ಪಕ್ಷದಲ್ಲಿ ಚರ್ಚೆಯಲ್ಲಿರಲಿಲ್ಲ. ಮಾಧ್ಯಮಗಳು ಸೃಷ್ಟಿಸಿರುವ ವದಂತಿಗೆ ಹೈಕಮಾಂಡ್ ಹಾಗೂ ರಾಜ್ಯ ಉಸ್ತುವಾರಿಗಳು ಸ್ಪಷ್ಟನೆ ನೀಡಿದ್ದರು. ಇದೀಗಜನರು ಐದು ವರ್ಷ ಆಡಳಿತ ನಡೆಸಲು ನಮಗೆ ಅಧಿಕಾರ ನೀಡಿದ್ದಾರೆ. ಇದಕ್ಕೆ ವಿರುದ್ಧವಾಗಿ ಬಿಜೆಪಿಯ ವರೇ ಹೈಕಮಾಂಡ್ ನಂತೆ ಮುಖ್ಯಮಂತ್ರಿ ಬದಲಾ ವಣೆ ಎಂದು ಮಾತನಾಡುತ್ತಾರೆ. ಆಪರೇ ಷನ್ ಕಮಲದ ರುಚಿ ನೋಡಿರುವ ಪರಿಣಾಮವದು. ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದು ಈಗ ಮತ್ತೊಮ್ಮೆ ಸಂದೇಶ ನೀಡಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯಿಲ್ಲ ಎಂದು ಅವರು ಹೇಳಿದರು.

Read More

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನಡುವಿನಕುರ್ಚಿ ಗುದ್ದಾಟದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಎಳ್ಳುನೀರು ಬಿಡಲಾಗಿದೆ ಎಂದು ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಯಾವುದೇ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಪರಿಶಿಷ್ಟ ಜಾತಿ, ವರ್ಗಗಳಿಗೆ ಇಟ್ಟ ಹಣ ಸಂಪೂರ್ಣ ಪೋಲಾಗಿದೆ. ಈ ವರ್ಷದಲ್ಲಿ ಅವರಿಗೆಇಟ್ಟ ಹಣದ ಒಂದು ರುಪಾಯಿಯೂ ಬಿಡುಗಡೆ ಆಗಿಲ್ಲ, ಪರಿ ಸ್ಥಿತಿ ಇಷ್ಟೊಂದು ಹದಗೆಟ್ಟಿದೆ ಎಂದು ಹರಿಹಾಯ್ದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಭಲವಾದಿ, ಈಗಶಿವಕುಮಾ‌ರ್ ಅವರು ಸಿಎಂ ಆಗುವುದು ಕಷ್ಟ. ಪಾಪ ಡಿ.ಕೆ.ಶಿವಕುಮಾರ್ ಟವೆಲ್ ಹಾಕಿದ್ದೇ ಹಾಕಿದ್ದು. ಆ ಟವೆಲ್ಲೇ ನಾಪತ್ತೆಯಾಗಿ ಬಿಡುತ್ತಿದೆ ಎಂದರು.

Read More

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆಯಿಲ್ಲ. 2028 ರವರೆಗೆ ನಾನೇ ಮುಖ್ಯಮಂತ್ರಿ ಎಂದು ದೆಹಲಿಯಲ್ಲಿ ಸಿದ್ದರಾಮಯ್ಯ ಶಾಕ್ ನೀಡಿದ ಬೆನ್ನಲ್ಲೇ, ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಎಂದು ಪುನರುಚ್ಚರಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ಆಗಬೇಕು. ಈ ಬಗ್ಗೆ ಸಾಕಷ್ಟು ಬಾರಿ ಹೇಳಿದ್ದೇವೆ. ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು. ಪದೇ ಪದೆ ಹೇಳುವ ಅವಶ್ಯಕತೆ ಇಲ್ಲ. ಎಲ್ಲವನ್ನೂ ಹೈಕಮಾಂಡ್ ಗಮನಿಸುತ್ತಿದೆ. ಸೂಕ್ತ ನಿರ್ಧಾರವನ್ನು ಹೈಕಮಾಂಡ್ ನಾಯಕರು ಮಾಡುತ್ತಾರೆ ಎಂದು ಹೇಳಿದ್ದಾರೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಎಲ್ಭೇಟಿ ಕುರಿತು ಗುರುವಾರವೇ ಮಾತನಾಡಿದ್ದೇನೆ. ಊಟಕ್ಕಾಗಿ ಸೇರಿದ್ದೇವೆಯೇ ವಿಶೇಷ ಇಲ್ಲ ಎಂದರು. ಹೊರತುಭೇಟಿ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚಿಸಿದಿರಾ? ಎಂಬ ಪ್ರಶ್ನೆಗೆ, ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಆಗಿಲ್ಲ, ಸಮಯ ಬಂದಾಗ ಹೈಕಮಾಂಡ್‌ ಮಾಡಲಿದೆ.ನಾವು ಈಗಾಗಲೇ ಹೇಳಬೇಕಾದ್ದನ್ನು ಹೇಳಿದ್ದೇವೆ’ ಎಂದಷ್ಟೇ ಹೇಳಿದರು.

Read More

ಬೆಂಗಳೂರು: ಬೇರೆ ಜಿಲ್ಲೆಗೆ ನೀರು ಕೊಡುವ ಉದ್ದೇಶದಿಂದ ಭದ್ರಾ ಜಲಾಶಯದಬಲದಂಡೆ ನಾಲೆ ಸೀಳಿ ನಡೆಸುತ್ತಿರುವ ಅವೈಜ್ಞಾನಿಕ ಕಾಮಗಾರಿ ಕೈಬಿಟ್ಟು ತಡೆ ಗೋಡೆ ನಿರ್ಮಿಸುವಂತೆ ಆಗ್ರಹಿಸಿ ಜು.14ರಂದು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ನಿವಾಸಕ್ಕೆ ಸಾವಿರಾರು ರೈತರೊಂದಿಗಿ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ. ಈಗಾಗರ್ಲೆ ಕಾಮಗಾರಿ ನಿಲ್ಲಿಸಿ ತಡೆಗೋಡೆ ನಿರ್ಮಿಸುವಂತೆ ಆಗ್ಲ ಹಿಸಿ ದಾವಣಗೆರೆ ಬಂದ್‌, ರಾಷ್ಟ್ರೀಯ ಹೆದ್ದಾರಿ ತಡೆ, ಬೈಕ್ ರ್ಯಾಲಿ ನಡೆಸಲಾಗಿದೆ. ಸಾವಿರಾರು ರೈತರು ಪಾಲ್ಗೊಂಡಿದ್ದರು. ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ.14ರಂದು ರೈತರು ಬೆಂಗಳೂರಿಗೆ ಬರುತ್ತಿದ್ದು, ಸಿಎಂ, ಡಿಸಿಎಂ ನಿವಾಸಗಳಿಗೆ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

Read More

ಬಳ್ಳಾರಿ: ರಾಜಕೀಯ ಮುತ್ಸದ್ದಿ, ಪರಿಷತ್ತಿನ ಮಾಜಿ ಸಭಾಪತಿ, ಅಖಿಲ ಭಾರತ -ವೀರಶೈವ ಮಹಾಸಭಾದ ಮಾಜಿ ರಾಜ್ಯಾಧ್ಯಕ್ಷ, ಹಿರಿಯ ವಕೀಲರಾಗಿದ್ದ ಎನ್ .ತಿಪ್ಪಣ್ಣ (97) ವಯೋಸಹಜ ಕಾಯಿಲೆಯಿಂದ ಬಳ್ಳಾರಿಯಲ್ಲಿಶುಕ್ರವಾರ ನಿಧನರಾದರು. ಮೃತರಿಗೆ ಓರ್ವ ಪುತ್ರ ಇದ್ದಾರೆ. ಹುಟ್ಟೂರು ಚಿತ್ರದುರ್ಗದ ತುರವ ನೂರು ಗ್ರಾಮದಲ್ಲಿ ಶನಿವಾರ ಅಂತ್ಯಸಂಸ್ಕಾರ ನೆರವೇರಲಿದೆ. ವಕೀಲ ವೃತ್ತಿಗೆ ಮುಡುಪಾಗಿಟ್ಟಿದ್ದರು. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗೆ ಗುರುತಿಸಿಕೊಂಡಿ ದ್ದರು. ಜನತಾದಳದ ರಾಜ್ಯಾಧ್ಯಕ್ಷರಾಗಿ, 4 ಬಾರಿ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಒಂದು ಬಾರಿ ವಿಧಾನಪರಿಷತ್‌ ಸಭಾಪತಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಸಂಯುಕ್ತ ಜನತಾದಳ, ಜೆಡಿಎಸ್, ಅನಂತರದಲ್ಲಿ ಬಿಜೆಪಿಗೆ ಸೇರಿಕೊಂಡಿದ್ದರು.

Read More

ಮೈಸೂರು: ಆಷಾಢ ಮಾಸದ 3ನೇ ಶುಕ್ರವಾರದ ಹಿನ್ನೆಲೆಯಲ್ಲಿ ಹಲವಾರು ಗಣ್ಯರ ಜತೆಗೆ 2 ಲಕ್ಷಕ್ಕೂ ಅಧಿಕ ಜನರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರಿಂದ ದೇವಿಯ ದರ್ಶನಕ್ಕೆ ಅನಾನುಕೂಲ ಉಂಟಾಗಿತ್ತು. ಇದರಿಂದ ಭಕ್ತರು ಆಕ್ರೋಶ ವ್ಯಕ್ತಪಡಿಸಿ ದ್ದು, ಡೀಸಿ, ಪೋಲಿಸ್ ಆಯುಕ್ತ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.ರಾಜ್ಯದ ವಿವಿಧ ಭಾಗಗಳಿಂದಧಾವಿಸಿದ್ದ ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.ನಾವು ಸಚಿವರು, ಶಾಸಕರಿಂದ ಶಿಫಾರಸು ಪತ್ರ ತಂದಿದ್ದೇವೆ ಎನ್ನುವ ವಿಐಪಿಗಳ ಹಾವಳಿ ಹೆಚ್ಚಾಗಿತ್ತು. ಇದರಿಂದಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಸಮಸ್ಯೆಯಾಯಿತು. ಅವ್ಯವಸ್ಥೆ ವಿಚಾರ ತಿಳಿದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪೋಲಿಸ್ಆಯುಕ್ತ ಸೀಮಾ ಲಾಟ್ಕರ್ ಭೇಟಿ ನೀಡಿ ಪರಿಶೀಲಿಸಿದ್ದರು. ಚಾಮುಂಡೇಶ್ವರಿ ಪ್ರಾಧಿಕಾರದ ಕಾ ರ್ಯದರ್ಶಿ ಎಂ.ಜೆ. ರೂಪಾ ಸೀಮಾ ಲಾಟ್ಕರ್. ಏನಿದು ಅವ್ಯ ವಸ್ಥೆ? ದರ್ಶನಕ್ಕೆ ಹೋಗುವ ಬಾಗಿಲ ಕೀ ಯಾಕೆ ಹಾಕ್ಸಿದ್ದೀರಾ? ಎಂದು ತರಾ ಟೆಗೆ ತೆಗೆದುಕೊಂಡರು. ಗಣ್ಯರಿಂದ ದರ್ಶನ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಚಿವೆ ಲಕ್ಷ್ಮೀ ಹೆಬ್ಬಾಳರ್,…

Read More

ಬೆಳಗಾವಿಯಲ್ಲಿ ಏಕಾಏಕಿ ಎದೆನೋವಿಂದ ಸೈನಿಕ ನಿಧನರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಸಾವಿನ ಸಂಖ್ಯೆ ಏರು ತ್ತಲೇ ಇವೆ. ಶುಕ್ರವಾರ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಹಾರ್ಟ್ ಅಟ್ಯಾಕ್‌ಗೆ ಮೃತ ಪಟ್ಟಿದ್ದಾರೆ. ಬೆಳಗಾವಿಯ ಅನಗೋಳದ ಬಹಾರ್ ನಿವಾಸಿ ಯೋಧ ಇಬ್ರಾಹಿಂ ದೇವ ಲಾಪುರ (37) ಅವರು ರಜೆಗೆಂದು ಊರಿಗೆ ಬಂದಿ ದ್ದರು. ಶುಕ್ರವಾರ ಬಜಾರ್‌ಗೆ ತೆರಳಿ ದ್ದಾಗ ವಿಕಾಸಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.ಧಾರವಾಡ ತಾಲೂಕಿನ ಮರೇವಾಡ ಗ್ರಾಮಪಂಚಾಯಿತಿ ಸಿಬ್ಬಂದಿರವಿ ಮಲ್ನಾಡ (35) ಶುಕ್ರವಾರ ಗ್ರಾಪಂನಲ್ಲಿ ಕೆಲಸಮುಗಿಸಿಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಗದಗ ನಗರ ನಿವಾಸಿಯಾಗಿರುವ ತಾಲೂ ಕಿನಸೊರಟೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಪ್ರಭಾ ಕಲ್ಮಠ (49) ಅವರು ಶುಕ್ರವಾರ ಬೆಳಗ್ಗೆ ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾರೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಮನೆಯಲ್ಲಿ ಕುಸಿದು ಬಿದ್ದಿದ್ದು, ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ…

Read More

ದಾವಣಗೆರೆ ಜಿಲ್ಲೆ ಮಂಟರಘಟ್ಟದಲ್ಲಿ ಅಪರೂಪದ ವಿಲಕ್ಷಣ ಘಟನೆ ನಡೆದಿದೆ.ಖಾಸಗಿ ಸಂಸ್ಥೆ ಪಡೆದಿದ್ದ ಸಾಲದ ಕಂತನ್ನು ಕಟ್ಟಲಿಲ್ಲ ಎಂಬ ಕಾರಣಕ್ಕೆ ದಂಪತಿ ಮಧ್ಯೆ ಜಗಳವಾಗಿ ತನ್ನ ಹೆಂಡತಿ ಮೂಗನ್ನು ಗಂಡ ಹಲ್ಲಿನಿಂದ ಕಚ್ಚಿ ತುಂಡರಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ.ಮಂಟರಘಟ್ಟ ಗ್ರಾಮದ ವಿಜಯ್ ಮತ್ತು ವಿದ್ಯಾ ದಂಪತಿ 2024ರಲ್ಲಿ ಖಾಸಗಿ ಸಂಸ್ಥೆಯಿಂದ 2 ಲಕ್ಷ ಹಣವನ್ನು ಸಾಲವಾಗಿ ಪಡೆದಿದ್ದರು. ಸಾಲದ ಕಂತಿನ ಹಣವನ್ನು ಪತ್ನಿ ವಿದ್ಯಾ ಕಳೆದ 2 ವಾರದಿಂದ ಕಟ್ಟಿರಲಿಲ್ಲ. ಈ ವಿಷಯವನ್ನು ಸಂಘದವರು ವಿದ್ಯಾಳ ಪತಿ ವಿಜಯ್‌ ನಿಗೆ ದೂರವಾಣಿಯ ಮೂಲಕ ತಿಳಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಜು.8ರಂದು ಮಧ್ಯಾಹ್ನದ ಸಮಯದಲ್ಲಿ ವಿದ್ಯಾಳ ಗಂಡ ವಿಜಯ್ ಮನೆಗೆ ಬಂದು, ‘ಸಾಲದ ಕಂತಿನ ಹಣವನ್ನು ನೀನು ಎಲ್ಲಿಯಾದರೂ ತಂದು ಕಟ್ಟಬೇಕಾಗಿತ್ತು’ ಎಂದು ಬಾಯಿಗೆ ಬಂದಂತೆ ಬೈಯುತ್ತ ಪತ್ನಿ ಮೇಲೆ ಹಲ್ಲೆ ಮಾಡುತ್ತ ಆಕೆಗೆ ಮನಸೋಇಚ್ಛೆಥಳಿಸಿದ್ದಾನೆ. ಬಳಿಕ ನೆಲಕ್ಕೆ ಕೆಡವಿ ಮೂಗಿಗೆ ಬಾಯಿಯಿಂದ…

Read More

ಮೆದುಳಿನ ಆರೋಗ್ಯವು ನಿಮ್ಮ ಮನಸ್ಥಿತಿ, ಸ್ಮರಣೆ, ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯ ಮತ್ತು ಸಾಮಾನ್ಯ ಯೋಗಕ್ಷೇಮದ ಮೇಲೆ ಪರಿಣಾಮ ಬೀರುತ್ತದೆ. ನಿಮ್ಮ ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು, ನೀವು ಆರೋಗ್ಯಕರ ಆಹಾರವನ್ನು ಸೇವಿಸಬೇಕು, ಸಾಕಷ್ಟು ನಿದ್ರೆ ಪಡೆಯಬೇಕು, ನಿಯಮಿತವಾಗಿ ವ್ಯಾಯಾಮ ಮಾಡಬೇಕು ಮತ್ತಮಾನಸಿಕವಾಗಿಸಕ್ರಿಯವಾಗಿರಬೇಕು.ಮೆದುಳಿನ ಆರೋಗ್ಯವನ್ನು ಸುಧಾರಿಸಲುಸಲಹೆಗಳು ಇಲ್ಲಿವೆ. ಆರೋಗ್ಯಕರ ಆಹಾರವನ್ನು ಸೇವಿಸಿ: ಹಣ್ಣುಗಳು, ತರಕಾರಿಗಳು, ಧಾನ್ಯಗಳು ಮತ್ತು ಆರೋಗ್ಯಕರ ಕೊಬ್ಬುಗಳು ಸಮೃದ್ಧವಾಗಿರುವ ಆಹಾರವು ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು. ಸಾಕಷ್ಟು ನಿದ್ರೆ ಪಡೆಯಿರಿ: ವಯಸ್ಕರು ಪ್ರತಿದಿನ 7-8 ಗಂಟೆಗಳ ನಿದ್ರೆ ಪಡೆಯಬೇಕು. ನಿದ್ರೆಯ ಕೊರತೆಯು ಗಮನ, ಸ್ಮರಣೆ ಮತ್ತು ಕಲಿಕೆಯ ಮೇಲೆ ಪರಿಣಾಮ ಬೀರಬಹುದು. ನಿಯಮಿತವಾಗಿ ವ್ಯಾಯಾಮ ಮಾಡಿ: ದೈಹಿಕ ಚಟುವಟಿಕೆಯು ಮೆದುಳಿನ ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ಹೊಸ ಮೆದುಳಿನ ಜೀವಕೋಶಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಮಾನಸಿಕವಾಗಿ ಸಕ್ರಿಯವಾಗಿರಿ: ಹೊಸ ವಿಷಯಗಳನ್ನು ಕಲಿಯುವುದು, ಒಗಟುಗಳನ್ನು ಪರಿಹರಿಸುವುದು ಮತ್ತು ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ಸಾಮಾಜಿಕವಾಗಿ ಬೆರೆಯುವುದು ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಆಲ್ಕೋಹಾಲ್ ಮತ್ತು ಧೂಮಪಾನವನ್ನು…

Read More