Author: Times of bayaluseeme
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ನ್ಯಾಯಾಂಗ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿ ಏನಿದೆ ಎಂದು ನನಗೆ ತಿಳಿದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರ ಕೊಟ್ರು. ಪ್ರಕರಣದ ತನಿಖಾ ವರದಿ ಮುಖ್ಯಮಂತ್ರಿಗಳಿಗೆ ಸಲ್ಲಿಕೆಯಾಗಿದೆ ಎಂದು ಕೇಳಿದಾಗ, ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕುನ್ಹಾ ಅವರ ವರದಿ ಸಲ್ಲಿಕೆಯಾಗುತ್ತಿದೆ ಎಂದಷ್ಟೇ ಗೊತ್ತು. 10ನೇ ತಾರೀಕಿನ ಒಳಗೆ ವರದಿ ನೀಡುವುದಾಗಿ ಹೇಳಿದ್ದರು. ನನಗೂ ಸಮನ್ಸ್ ನೀಡಿದ್ದರು. ನಾನು ವಿಡಿಯೋ ಕಾನ್ಫರೆನ್ಸ್ ಮೂಲಕ ನನ್ನ ಹೇಳಿಕೆ ನೀಡಿದ್ದೆ. ಅವರು ವರದಿ ನೀಡಿರುವುದು ಸಂತೋಷ. ಈ ವರದಿ ನೋಡದೇ ನಾನು ಏನನ್ನೂ ಹೇಳಲು ಸಾಧ್ಯವಿಲ್ಲ. ನಾವು ಪ್ರಕರಣದಲ್ಲಿ ನ್ಯಾಯಾಂಗ ತನಿಖೆ ನಡೆಸಿದ್ದು, ವರದಿಯಲ್ಲಿ ಏನಿದೆ ಎಂದು ನೋಡೋಣ, ಚರ್ಚೆ ಮಾಡೋಣ ಎಂದು ತಿಳಿಸಿದರು.
ಬೆಂಗಳೂರು: ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಕ್ಕು ಹನ್ನೊಂದು ಜನ ಮೃತ ಪಟ್ಟಿದ್ದ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ರಚಿಸಿದ್ದ ಏಕ ವ್ಯಕ್ತಿ ಆಯೋಗವು ಇಂದು ಎರಡು ಸಂಪುಟಗಳಲ್ಲಿ ವರದಿಯಲ್ಲಿ ಸಲ್ಲಿಸಿದೆ ಎಂದರು. ವರದಿಯಲ್ಲಿ ಮಾಡಿರುವ ಶಿಫಾರಸುಗಳ ಬಗ್ಗೆ ಚರ್ಚಿಸಿದ ನಂತರ ಸಂಪುಟ ನಿರ್ಧಾರ ಮಾಡಲಿದೆ ಎಂದರು. ನಾನು ವರದಿಯನ್ನು ಪೂರ್ಣವಾಗಿ ಓದಿಲ್ಲ. ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ಪೊಲೀಸರ ಅಮಾನತ್ತನ್ನು ಸಿಎಟಿಯವರು ವಿರೋಧಿಸಿ ಆದೇಶಿಸಿರುವ ಬಗ್ಗೆ ಆಯೋಗದ ವರದಿಯಲ್ಲಿ ಪ್ರಸ್ತಾಪಿಸಲಾಗಿದೆಯೇ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಿ, ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಚಿತ್ರದುರ್ಗ: ಬೀದಿ ನಾಯಿ ದಾಳಿ ಹಾಗೂ ಕಡಿತ ಪ್ರಕರಣಗಳ ನಿಯಂತ್ರಣ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರುವ ಸಂಬಂಧಪಟ್ಟ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಬಂಧಿಸಿದ ಜಿಲ್ಲಾ ಕಣ್ಗಾವಲು ಸಮಿತಿ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಗೆ ಸಂಬಂಧಿಸಿದಂತೆ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಕಾರ್ಯಕ್ರಮ ಅನುಷ್ಠಾನಗೊಳಿಸುವ ಹೊಣೆ ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಜವಾಬ್ದಾರಿಯಾಗಿದೆ. ನಗರಗಳು ಹಾಗೂ ಗ್ರಾಮಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದೆ. ಚಿತ್ರದುರ್ಗ ನಗರದಲ್ಲಿಯೇ ಸುಮಾರು 5000ಕ್ಕೂ ಅಧಿಕ ಬೀದಿ ನಾಯಿಗಳಿವೆ. ಈ ನಾಯಿಗಳು ರಾತ್ರಿಯ ವೇಳೆ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತವೆ. ರಸ್ತೆಗಳು,…
ಚಿತ್ರದುರ್ಗ: ರಾಷ್ಟ್ರೀಯ ಯೋಗ ಶಿಕ್ಷಣ, ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇದೆ ತಿಂಗಳ 12ರಂದು ಬೆಳಿಗ್ಗೆ 6 ಗಂಟೆಗೆ ನಗರದ ಮುರುಘಾಮಠದ ಅನುಭವ ಮಂಟಪದಲ್ಲಿ ಗುರುಪೂರ್ಣಿಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆ ಉಪಾಧ್ಯಕ್ಷ ಮಂಜುನಾಥ್ ಮತ್ತು ಕಾರ್ಯದರ್ಶಿ ಎಲ್.ಎಸ್ ಬಸವರಾಜ್ ಮಾಹಿತಿ ನೀಡಿದ್ದಾರೆ.ಮುರುಘಾಮಠದ ಶ್ರೀ ಬಸವಕುಮಾರ ಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಲಿದ್ದು, ಆಯುಷ್ ಇಲಾಖೆ ಹಿರಿಯ ವೈದ್ಯಾಧಿಕಾರಿ ಡಾ. ಶಿವಕುಮಾರ್ ಉದ್ಘಾಟನೆ ಮಾಡಲಿದ್ದಾರೆ. ಇನ್ನು ರಾಷ್ಟ್ರೀಯ ಯೋಗ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಆರ್. ಪ್ರಸನ್ನ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯೋಗ ಗುರುಗಳಾದಎಲ್.ಎಸ್. ಚಿನ್ಮಯನಂದ, ಹಿರಿಯ ವೈದ್ಯಾಧಿಕಾರಿ ಡಾ. ಚಂದ್ರಕಾಂತ ನಾಗಸಮುದ್ರ ಆಯುಷ್ ಇಲಾಖೆ ಡಾ.ದೇವರಾಜ್ ಭಾಗವಹಿಸಲಿದ್ದಾರೆ.
ಚಿತ್ರದುರ್ಗ: ಕಾರ್ಮಿಕ ಕಲ್ಯಾಣ ಮಂಡಳಿಯು ಕಾರ್ಮಿಕರಿಗೆ ಉಪಯೋಗವಲ್ಲದಂತಹ ಯೋಜನೆಗಳನ್ನು ಜಾರಿ ಮಾಡಿ ಕಾರ್ಮಿಕರಿಗಾಗಿಮಂಡಳಿಯಲ್ಲಿ ಇದ್ದ ಹಣವನ್ನು ಲೂಟಿ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ಆರೋಪಿಸಿದ್ದಾರೆ. ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆಬಂದಾಗಿನಿಂದಲೂ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಇದ್ದ ಹಣವನ್ನು ನೋಡಿ ಏನಾದರೂ ಮಾಡಿ ಲಪಟಾಯಿಸಬೇಕೆಂದುಕಾರ್ಮಿಕರಿಗೆ ಬೇಕಿಲ್ಲದ ವಿನಹ ಕಾರಣ ಯೋಜನೆಗಳನ್ನು ಜಾರಿ ಮಾಡಿ ಹಣವನ್ನು ಲಪಟಾಯಿಸುತ್ತಿದೆ. ಎಂದ ಅವರು ಸರ್ಕಾರಕ್ಕೆನಾವು ಆರೋಗ್ಯ ತಪಾಸಣೆ ಮಾಡಿ ಎಂದು ಕೇಳಿರಲಿಲ್ಲ.ಆದರೂ ಸಹ ಸರ್ಕಾರ ಅದರಲ್ಲೂ ಸಚಿವರಾದ ಸಂತೋಷ ಲಾಡ್ ರವರುತಮಗೆ ಬೇಕಾದವರಿಗೆ ಉಪಯೋಗ ಮಾಡಿಕೊಡುವ ಹಿನ್ನೆಲೆಯಲ್ಲಿ ಕಾರ್ಮಿಕರ ಹೆಸರಿನಲ್ಲಿ ಅವಶ್ಯಕತೆ ಇಲ್ಲದ ಯೋಜನೆಗಳನ್ನುಜಾರಿ ಮಾಡಿದ್ದಾರೆ.. ಅದರ ಅನುಷ್ಠಾನವೂ ಸಹ ಸರಿಯಾಗಿ ಮಾಡದೇ ಹಣವನ್ನು ಲಪಟಾಯಿಸಿದ್ದಾರೆ ಎಂದು ದೂರಿದರು. ಕಾರ್ಮಿಕರಿಗೆ ಮಂಡಳಿ ವತಿಯಿಂದ ನೀಡಿದಂತಹ ಕಿಟ್‍ಗಳಲ್ಲಿ ಯಾವುದೇ ಉಪಯೋಗಕ್ಕೆ ಬಾರದ ವಸ್ತುಗಳನ್ನು ಹಾಕಿ ದುಪ್ಪಟ್ಟುಬೆಲೆಯಲ್ಲಿ…
ಚಿತ್ರದುರ್ಗ: ಹಳ್ಳಿಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಸಲು ಸರ್ಕಾರ ತೀರ್ಮಾನಿಸಿದ್ದು ಈ ಸಂಬಂಧ ಎಇಇ ರವರನ್ನು ವಿಚಾರಿಸಿದರೆ ಏನು ಸಮಸ್ಯೆ ಇಲ್ಲ ಅಳವಡಿಸಿಕೊಳ್ಳಿ ಎಂದು ಹೇಳುತ್ತಿದ್ದಾರೆ. 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದ ಸರ್ಕಾರಗ್ರಾಹಕರನ್ನು ಲೂಟಿ ಮಾಡುತ್ತಿದೆ. ಖಾಸಗೀಕರಣ ಉದ್ದೇಶವನ್ನು ಇಟ್ಟುಕೊಂಡು ಸ್ಮಾರ್ಟ್ ಮೀಟರ್ ಅಳವಡಿಕೆಗೆಮುಂದಾಗಿದೆ. ಕೂಡಲೇ ಸ್ಮಾರ್ಟ್ ಮೀಟರ್ ಅಳವಡಿಕೆಯ ತೀರ್ಮಾನವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆಯದೇ ಇದ್ದರೆಜಿಲ್ಲಾಧಿಕಾರಿಗಳ ಮೂಲಕ ಸ್ಮಾರ್ಟ್ ಮೀಟರ್‍ಗಳನ್ನು ಸರ್ಕಾರಕ್ಕೆ ವಾಪಸ್ ಕೊಡುತ್ತೇವೆ ಎಂದು ಸರ್ಕಾರಕ್ಕೆ ರೈತ ಸಂಘ ಎಚ್ಚರಿಸಿದೆ.ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಚಘಟ್ಟದ ಸಿದ್ದವೀರಪ್ಪ, ಕೇರಳ ಮತ್ತು ತೆಲಂಗಾಣರಾಜ್ಯಗಳಲ್ಲಿ 900 ರೂ ಗೆ ಮೀಟರ್ ಸಿಗುತ್ತೆ.. ಆದರೆ ರಾಜ್ಯದಲ್ಲಿ 10 ಸಾವಿರ ರೂಗಳಿಗೆ ಮೀಟರ್ ಅಳವಡಿಸುವುದು ಏಕೆ…?ಸರ್ಕಾರವನ್ನು ಪ್ರಶ್ನಿಸಿದ ಅವರು, ಜಿಲ್ಲೆಗೆ ಭದ್ರಾ ನೀರು ಹರಿಸಲು 1997 ರಿಂದ ಹೋರಾಟ ಆರಂಭಿಸಿದ್ದೇವೆ ಆದರೆ ತುಂಗಭದ್ರಾದಿಂದ ಭದ್ರಾಯವರೆಗೆ ಕೆಲಸ ಮುಗಿದಿಲ್ಲ.ನಾಮಕಾವಸ್ಥೆಗೆ ಸರ್ಕಾರ ದಿನ ಕಳೆಯುತ್ತಿದೆ.. ಶೀಘ್ರವಾಗಿ ಯೋಜನೆಯನ್ನುಪೂರ್ಣಗೊಳಿಸಿ ರೈತರ ಜಮೀನಿಗೆ ನೀರು…
ಚಿತ್ರದುರ್ಗ: ವಾಣಿಜ್ಯ ಉದ್ದಿಮೆ ಪರವಾನಿಗೆ ಪಡೆದು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಎಲ್ಲಾ ಅಂಗಡಿಗಳು ಪ್ರತ್ಯೇಕವಾಗಿ ತಂಬಾಕು ಮಾರಾಟ ಪರವಾನಿಗೆಯನ್ನು ಪಡೆದುಕೊಳ್ಳಬೇಕು. ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡುವ ಶೇ.90 ರಷ್ಟು ಅಂಗಡಿಗಳಿಗೆ ತಿಂಗಳ ಒಳಗಾಗಿ ಪ್ರತ್ಯೇಕ ಪರವಾನಿಗೆ ನೀಡುವ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು ಮಾಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಶುಕ್ರವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕಳೆದ ಬಾರಿ ನಡೆದ ತ್ರೈಮಾಸಿಕ ಸಭೆಯಲ್ಲಿಯೇ, ಪ್ರತ್ಯೇಕವಾಗಿ ತಂಬಾಕು ಮಾರಾಟ ಪರವಾನಿಗೆ ನೀಡುವಂತೆ ಸೂಚಿಸಲಾಗಿತ್ತು. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪರವಾನಿಗೆ ನೀಡುವ ಕೆಲಸವಾಗಿಲ್ಲ. ಕೋಟ್ಪಾ ಕಾಯ್ದೆಯ ಅನುಸಾರ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳು ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಪ್ರತಿ ನಗರಸಭೆ ವ್ಯಾಪ್ತಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್, ಟೀ ಹಾಗೂ ಪಾನ್ ಶಾಪ್‍ಗಳಿಗೆ ವ್ಯಾಪಾರ ಪರವಾನಿಗೆ ನೀಡುವಾಗಲೇ, ಪ್ರತ್ಯೇಕವಾಗಿ ತಂಬಾಕು ಮಾರಾಟದ…
ಬೆಂಗಳೂರು: ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಹೇಳುವ ಮುನ್ನ ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟಿರುವುದು ಎಷ್ಟು ಸರಿ ಎಂದು ಕೇಳಿದಾಗ, “ನೀವು ನನಗೆ ಹೇಗೆ ತಿರುಗಿಸಿ ಕೇಳಿದರೂ ನಾನಂತೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಿಮಗೆ ಬಲಿಯಾಗುವುದಿಲ್ಲ. ನಿಮ್ಮ ಪ್ರಶ್ನೆಗಳಲ್ಲೇ ಉತ್ತರವಿದೆ. ಪಕ್ಷ ಕೊಟ್ಟಿರುವ ಜವಾಬ್ದಾರಿ ಮುಂದುವರಿಸಿಕೊಂಡು ಹೋಗುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಧೀಕ್ಷೆ ನೀಡಿದ್ದು, ನಾವೆಲ್ಲರೂ ಅದನ್ನು ಸಂತೋಷವಾಗಿ ಸ್ವೀಕರಿಸಿದ್ದೇವೆ. ಇದರ ಹೊರತಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು. ಹೈಕಮಾಂಡ್ ಭೇಟಿಯಾಗಿ ಯಾವೆಲ್ಲಾ ರಾಜಕೀಯ ಚರ್ಚೆ ನಡೆಯಿತು ಎಂದು ಕೇಳಿದಾಗ, “ನಾವು ಸುರ್ಜೆವಾಲ ಅವರ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಇಡುವರೆಗೂ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣದ ಭಾಗ್ಯ ನೀಡಿತ್ತು. ಈಗ ಸರ್ಕಾರಿ ಶಾಲೆಯ ಮಕ್ಕಳಿಗೂ ಫ್ರೀ ಬಸ್ ಭಾಗ್ಯ ಸಿಕ್ಕಿದೆ. ಕೆಪಿಎಸ್ ಸರ್ಕಾರಿ ಶಾಲೆಯಲ್ಲಿ ಎಲ್ಕೆಜಿ (LKG) ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಸಾರಿಗೆ ಸೌಲಭ್ಯವನ್ನು ಘೋಷಿಸಿದೆ. ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸೋಶಿಯಲ್ ಮೀಡಿಯಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಉಚಿತ ಬಸ್ ವ್ಯವಸ್ಥೆ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಈ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಇನ್ನು ಸರ್ಕಾರದ ಈ ನಿರ್ಧಾರದಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ಬಂದಂತಾಗುತ್ತದೆ. ಜೊತೆಗೆ ಈ ಹಿಂದೆ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು…
ಉಪನ್ಯಾಸಕರು ತಮ್ಮ ಕಾಲೇಜಿನ ವಿದ್ಯಾರ್ಥಿಗಳನ್ನು ಸ್ವಂತ ಮಕ್ಕಳಂತೆ ಪರಿಭಾವಿಸಿ ಬೋಧನೆ ಮಾಡಿದಾಗ ಮಾತ್ರ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ತಿಮ್ಮಯ್ಯ ತಿಳಿಸಿದರು.ಹೊಳಲ್ಕೆರೆ ನಗರದ ವಾಗ್ದೇವಿ ಕಾಲೇಜಿನಲ್ಲಿ ಆಯೋಜಿಸಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣಾ ಚಿಂತನ ಮಂಥನ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತಾನಾಡಿ,ಉಪನ್ಯಾಸಕರು ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರ್ತಿಸಿ ಅವರಿಗೆ ವಿಶೇಷ ಪರಿಹಾರ ಬೋಧನೆ ಮಾಡುವ ಮೂಲಕ ಕಲಿಕಾಸಕ್ತಿ ಮೂಡಿಸಬೇಕು. ತರಗತಿಯಲ್ಲಿರುವ ಒಟ್ಟು ವಿದ್ಯಾರ್ಥಿಗಳನ್ನು ಆರು ಗುಂಪುಗಳನ್ನಾಗಿ ವಿಂಗಡಿಸಿ ಪ್ರತಿ ಗುಂಪಿನ ಮೇಲುಸ್ತುವಾರಿಯನ್ನು ಒಬ್ಬ ಉಪನ್ಯಾಸಕನಿಗೆ ನೀಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಗಮನ ಹರಿಸುವಂತೆ ಸೂಚನೆ ನೀಡಿದರು. ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಬಿ.ಆರ್.ಮಲ್ಲೇಶ್ ಮಾತನಾಡಿಫಲಿತಾಂಶ ಸುಧಾರಣೆಗಾಗಿ ಇಲಾಖಾ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವಲ್ಲಿ ಈ ರೀತಿಯ ತಾಲ್ಲೂಕುವಾರು ಸಭೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಕಾರ್ಯಭಾರ ಕಡಿಮೆ ಇರುವ ಉಪನ್ಯಾಸಕರನ್ನು ಖಾಲಿ ಹುದ್ದೆ ಇರುವ ಕಾಲೇಜಿಗಳಿಗೆ…
Subscribe to Updates
Get the latest creative news from FooBar about art, design and business.