Author: Times of bayaluseeme
ತಲೆಸುತ್ತು ಹಲವಾರು ಕಾರಣಗಳಿಂದ ಉಂಟಾಗಬಹುದು, ಅವುಗಳಲ್ಲಿ ಕೆಲವು ಸಾಮಾನ್ಯ ಕಾರಣಗಳೆಂದರೆ: ಕಡಿಮೆ ರಕ್ತದೊತ್ತಡ,ನಿರ್ಜಲೀಕರಣ, ಮೈಗ್ರೇನ್, ಕಿವಿ ಸೋಂಕುಗಳು, ಅಥವಾ ಮೆದುಳಿನ ಸಮಸ್ಯೆಗಳು. ಕೆಲವು ಪ್ರಮುಖ ಕಾರಣಗಳು ರಕ್ತದೊತ್ತಡದಲ್ಲಿ ಏರುಪೇರು: ಕಡಿಮೆ ರಕ್ತದೊತ್ತಡ (ಲೋ ಬಿಪಿ) ಅಥವಾ ರಕ್ತದೊತ್ತಡದಲ್ಲಿ ಹಠಾತ್ ಏರಿಳಿತಗಳು ತಲೆಸುತ್ತುವಿಕೆಗೆ ಕಾರಣವಾಗಬಹುದ. ನಿರ್ಜಲೀಕರ: ದೇಹದಲ್ಲಿ ನೀರಿನ ಕೊರತೆಯಿಂದಾಗಿ ತಲೆಸುತ್ತು ಉಂಟಾಗಬಹುದು. ಮೈಗ್ರೇನ್: ಮೈಗ್ರೇನ್‌ನಿಂದ ಬಳಲುತ್ತಿರುವವರಿಗೆ ತಲೆಸುತ್ತು ಅನುಭವವಾಗಬಹುದು ಕಿವಿಯ ಸಮಸ್ಯೆಗಳು: ಕಿವಿ ಸೋಂಕುಗಳು ಅಥವಾ ಇತರ ಕಿವಿ ಸಮಸ್ಯೆಗಳು ತಲೆಸುತ್ತುವಿಕೆಗೆ ಕಾರಣವಾಗಬಹುದು. ಮೆದುಳಿನ ಸಮಸ್ಯೆಗಳು: ಮೆದುಳಿನ ಸೋಂಕುಗಳು, ಗೆಡ್ಡೆಗಳು, ಗಾಯಗಳು ಅಥವಾ ಸ್ಟ್ರೋಕ್‌ನಿಂದಾಗಿ ತಲೆಸುತ್ತು ಉಂಟಾಗಬಹುದು. ರಕ್ತದಲ್ಲಿ ಸಕ್ಕರೆ ಮಟ್ಟದಲ್ಲಿ ಬದಲಾವಣೆ: ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿನ ಏರುಪೇರು, ಅಂದರೆ ಸಕ್ಕರೆ ಕಾಯಿಲೆಯಿರುವವರಲ್ಲಿ ತಲೆಸುತ್ತು ಬರಬಹುದು. ಮಾನಸಿಕ ಒತ್ತಡ: ಹೆಚ್ಚು ಒತ್ತಡ ಅಥವಾ ಆತಂಕದಿಂದಲೂ ತಲೆಸುತ್ತು ಬರಬಹುದು. ಹೆಚ್ಚು ಬಿಸಿಲು: ಬಿಸಿಲಿನಲ್ಲಿ ಹೆಚ್ಚು ಹೊತ್ತು ಇದ್ದರೆ ಅಥವಾ ಹೆಚ್ಚು ಬಿಸಿಯಿರುವ ಪ್ರದೇಶಗಳಲ್ಲಿ ತಲೆಸುತ್ತು ಬರಬಹುದು. ಖಾಲಿ ಹೊಟ್ಟೆ: ಉಪವಾಸವಿದ್ದರೆ ಅಥವಾ…
ಚಿತ್ರದುರ್ಗ : ಹತ್ತನೆ ತರಗತಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದಿರುವ ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರ ಮೇಲೆ ಕ್ರಮಕೈಗೊಳ್ಳುವ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ತಾಲ್ಲೂಕು ಶಾಖೆವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ಅನುದಾನಕ್ಕೆ ಒಳಪಟ್ಟಿರುವ ಪ್ರೌಢಶಾಲೆಗಳ ಸಹ ಶಿಕ್ಷಕರ ವಿಷಯವಾರು ಫಲಿತಾಂಶವನ್ನು ಪರಿಗಣಿಸಿ ಶೇ. 60 ಕ್ಕಿಂತ ಕಡಿಮೆಫಲಿತಾಂಶ ಬಂದಿರುವ ಸಹ ಶಿಕ್ಷಕರನ್ನು ಗುರುತಿಸಿ ವಾರ್ಷಿಕ ವೇತನ ಬಡ್ತಿ ತಡೆಹಿಡಿಯುವುದು. ಅನುದಾನ ಪಡೆಯುತ್ತಿರುವ ವಿಷಯಶಿಕ್ಷಕರು ನಿರಂತರ ಮೂರು ವರ್ಷಗಳಲ್ಲಿ ಶೇ.60 ಕ್ಕಿಂತ ಕಡಿಮೆ ಫಲಿತಾಂಶ ನೀಡಿದಲ್ಲಿ ಅಂತಹ ವಿಷಯ ಶಿಕ್ಷಕರುಗಳವೇತಾನುದಾನವನ್ನು ತಡೆಹಿಡಿಯುವುದು ಹೀಗೆ ಹಲವಾರು ವಿಷಯಗಳ ಮೇಲೆ ಕ್ರಮ ಕೈಗೊಳ್ಳಲು ದಿನಾಂಕ : 30-5-2025 ರಂದುನಿರ್ದೇಶಕರ ಸುತ್ತೋಲೆಯಂತೆ ಧಾರವಾಡ ಮತ್ತು ಕಲಬುರಗಿ ಆಯುಕ್ತಾಲಯ ವ್ಯಾಪ್ತಿಗೊಳಪಡುವ ಉಪ ನಿರ್ದೇಶಕರುಗಳಿಗೆ ಕ್ರಮವಹಿಸಲು ಸೂಚಿಸಲಾಗಿದೆ. ಕಳಪೆ ಫಲಿತಾಂಶ ಬರುವುದಕ್ಕೆ ಕೇವಲ ಶಿಕ್ಷಕರುಗಳಷ್ಟೆ ಕಾರಣರಲ್ಲ. ವಿದ್ಯಾರ್ಥಿಗಳು ಬೆಳದು ಬಂದಿರುವ ಪರಿಸರ, ಪ್ರಾಥಮಿಕಹಂತದಲ್ಲಿ ಕಲಿತಿರುವ ಶಿಕ್ಷಣ, ಏಳನೆ ತರಗತಿಯವರೆಗೆ ಯಾವುದೇ ರೀತಿಯ ಗುಣಾತ್ಮಕ,…
ಹೊಳಲ್ಕೆರೆ : ಜಾತಿ ರಾಜಕಾರಣ ಮಾಡಲು ಬಂದಿಲ್ಲ. ನಿಯತ್ತಾಗಿ ಕ್ಷೇತ್ರದ ಅಭಿವೃದ್ದಿಗೆ ಹಗಲು-ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ನನಗಿಂತ ಹಿಂದೆ 29 ಶಾಸಕರು ಬಂದು ಹೋಗಿದ್ದಾರೆ. ಅವರೆಲ್ಲಾ ಏನು ಮಾಡಿದರು. ಐದು ವರ್ಷ ಸಚಿವರಾಗಿದ್ದವರಿಂದ ಯಾವಅಭಿವೃದ್ದಿಯಾಗಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಜನತೆಯನ್ನು ಪ್ರಶ್ನಿಸಿದರು…? ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ 1.75 ಕೋಟಿ ರೂ.ವೆಚ್ಚದಲ್ಲಿ ಕೆರೆ ಅಭಿವೃದ್ದಿ ಕಾಮಗಾರಿ ಮತ್ತು ನೂತನ ಸಿ.ಸಿ.ರಸ್ತೆ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.ನೂರು ವರ್ಷಗಳ ಕಾಲ ಬೋರ್‍ವೆಲ್‍ಗಳಲ್ಲಿ ನೀರು ಬತ್ತುವುದಿಲ್ಲ. ಕೆರೆ ಕಟ್ಟೆಗಳು ತುಂಬಿರುತ್ತವೆ. 493 ಹಳ್ಳಿಗಳಲ್ಲಿಯೂ ಸಿ.ಸಿ.ರಸ್ತೆಮಾಡಿಸಿದ್ದೇನೆ. ಸಾಸಲು ಸರ್ಕಲ್‍ನಿಂದ ಹಿರೇಬೆನ್ನೂರು ಸರ್ಕಲ್‍ವರೆಗೆ ರಸ್ತೆಗೆ ನೂರು ಕೋಟಿ ರೂ.ಗಳನ್ನು ನೀಡಿದ್ದೇನೆ. ರಾಜ್ಯದಲ್ಲಿನಮ್ಮ ಸರ್ಕಾರವಿಲ್ಲ. ನಾನು ಮಂತ್ರಿಯಲ್ಲ. ಆರ್ಡಿನರ್ ಎಂ.ಎಲ್.ಎ. ನಿಮ್ಮ ಮನೆ ಮಗನಾಗಿ ಕಷ್ಟ ಪಟ್ಟು ಕೆಲಸ ಮಾಡುತ್ತಿದ್ದೇನೆ.ಎಲ್ಲಿಯೂ ಗದ್ದಲ ಗಲಾಟೆಗೆ ಅವಕಾಶ ಕೊಟ್ಟಿಲ್ಲ. ಅಟ್ರಾಸಿಟಿ ಕೇಸು ದಾಖಲಾಗಲು ಬಿಟ್ಟಿಲ್ಲ. ಜಾತಿಗಿಂತ ನೀತಿ ಮುಖ್ಯ. ಎಲ್ಲರೂನನ್ನವರೆಂದು ತಿಳಿದು ಕೆಲಸ ಮಾಡುತ್ತಿದ್ದೇನೆ. ರೈತರ ತೋಟಗಳು ಒಣಗಬಾರದೆಂದು ತಾಲ್ಲೂಕಿನಲ್ಲಿ…
ಎತ್ತಿನಹೊಳೆ ಯೋಜನೆ ವಿಚಾರವಾಗಿ ಎದುರಾಗಿರುವ ತಾಂತ್ರಿಕ ಆಕ್ಷೇಪಣೆಗಳ ಬಗ್ಗೆ ಕೇಂದ್ರ ಪರಿಸರ ಸಚಿವರಿಗೆ ಸ್ಪಷ್ಟನೆ ನೀಡಿದ್ದು, ಆಕ್ಷೇಪಗಳನ್ನು ನಿವಾರಣೆ ಮಾಡುವುದಾಗಿ ಅವರು ಆಶ್ವಾಸನೆ ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸಚಿವರ ಭೇಟಿ ವಿಚಾರವಾಗಿ ಕೇಳಿದಾಗ, “ಇಂದು ಕೇಂದ್ರ ಸರ್ಕಾರದ ಇಬ್ಬರು ಸಚಿವರನ್ನು ಭೇಟಿ ಮಾಡಿದ್ದೇವೆ. ಕೇಂದ್ರ ಪರಿಸರ ಇಲಾಖೆ ಸಚಿವರಾದ ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿ ಎತ್ತಿನಹೊಳೆ ಯೋಜನೆ ವಿಚಾರವಾಗಿ ಚರ್ಚೆ ಮಾಡಲಾಗಿದ್ದು, ಅರಣ್ಯ ಇಲಾಖೆಗೆ ಪರ್ಯಾಯ ಭೂಮಿ ಕೊಟ್ಟಿರುವ ವಿಚಾರವನ್ನು ಅವರಿಗೆ ವಿವರಿಸಿದ್ದೇವೆ. ಈ ಯೋಜನೆಯ ಸುಮಾರು 60-70% ಕಾಮಗಾರಿ ಮುಕ್ತಾಯಗೊಂಡಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ಯೋಜನೆ ಕಾಮಗಾರಿಗೆ ಅಡ್ಡಿ ಎದುರಾಗಿದೆ. ಈ ವಿಚಾರವಾಗಿ ಕೇಂದ್ರ ಪರಿಸರ ಇಲಾಖೆ ಮಾಡಿರುವ ಆಕ್ಷೇಪಣೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದೇವೆ. ಇದು ಅತ್ಯುತ್ತಮ ಕುಡಿಯುವ ನೀರಿನ ಯೋಜನೆಯಾಗಿದ್ದು,…
ಚಿತ್ರದುರ್ಗ: ನಗರದ ಕಬೀರಾನಂದ ಬಡಾವಣೆಯ ಶ್ರೀ ಸದ್ಗುರು ಕಬೀರಾನಂದಾಶ್ರಮದಲ್ಲಿ ಜು. 10ರಂದು ಗುರು ಪೂರ್ಣಿಮಾ ಕಾರ್ಯಕ್ರಮವನ್ನು ಆಚರಿಸಲು ನಿರ್ಧರಿಸಲಾಗಿದೆ.ಅಂದು ಸಂಜೆ 7 ಗಂಟೆಗೆ ಗುರು ಪೂರ್ಣಿಮಾ ಕಾರ್ಯಕ್ರಮವನ್ನು ಸದ್ಗುರು ಶ್ರೀ ಶಿವಲಿಂಗಾನಂದ ಮಹಾಸ್ವಾಮಿಗಳವರಪಾದಪೂಜೆಯೊಂದಿಗೆ ಗುರು ಪೂರ್ಣಿಮಾ ಕಾರ್ಯಕ್ರಮವನ್ನು ಆಚರಿಸಲಾಗುವುದು.ಈ ಕಾರ್ಯಕ್ರಮಕ್ಕೆ ನಗರದ ಸಮಸ್ತ ಸದ್ಭಕ್ತರು ಉಪಸ್ಥಿತರಿದ್ದು ಶ್ರೀಗುರು ಕೃಪಾಶೀರ್ವಾದಕ್ಕೆ ಪಾತ್ರರಾಗಲು ವಿನಂತಿಸಲಾಗಿದೆ.
ಚಿತ್ರದುರ್ಗ: ಇಲ್ಲಿನ ನಗರಸಭೆ ಉಪಾಧ್ಯಕ್ಷರಾಗಿದ್ದ ಜಿ.ಎಸ್.ಶ್ರೀದೇವಿ ಜಿಲ್ಲಾಧಿಕಾರಿಗಳಿಗೆರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಉಪಾಧ್ಯಕ್ಷೆ ಸ್ಥಾನವನ್ನು ತ್ಯಜಿಸಿದ್ದಾರೆ.ಚಿತ್ರದುರ್ಗ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.33 ಸದಸ್ಯರಾಗಿ ಆಯ್ಕೆಯಾಗಿದ್ದ ಜಿ.ಎಸ್.ಶ್ರೀದೇವಿ ಕಳೆದ 2024 ರ ಆಗಸ್ಟ್ತಿಂಗಳಲ್ಲಿ ನಗರಸಭೆಯ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ 11 ತಿಂಗಳುಗಳ ಕಾಲ ಕಾರ್ಯನಿರ್ವಹಿಸಿದ್ದರು. ಅವರು ತಮ್ಮವೈಯಕ್ತಿಕ ಕಾರಣಗಳಿಂದಾಗಿ ಉಪಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ಸಾಧ್ಯವಾಗದೇ ಇರುವುದರಿಂದ ಉಪಾಧ್ಯಕ್ಷ ಸ್ಥಾನಕ್ಕೆ ಸ್ವ-ಇಚ್ಚೆಯಿಂದ ರಾಜೀನಾಮೆ ನೀಡಿರುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಚಿತ್ರದುರ್ಗ: ತಾಲೂಕು ಅಖಿಲ ಭಾರತ ಗಾಣಿಗರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಜು. 13ರ ಭಾನುವಾರ ನಗರದ ಸ್ಟೇಡಿಯಂ ರಸ್ತೆಯ ಜಿ.ಜಿ. ಸಮುದಾಯ ಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಜಗದ್ಗುರು ಮುರುಘಾರಾಜೇಂದ್ರ ಬೃಹನ್ಮಠ ಮತ್ತು ವಿದ್ಯಾಪೀಠದ ಆಡಳಿತ ಮಂಡಳಿಸದಸ್ಯರು, ಚಿತ್ರದುರ್ಗ ಹಾಗೂ ವಿಜಯಪುರದ ವನಶ್ರೀ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ಜಯಬಸವಕುಮಾರ ಸ್ವಾಮೀಜಿ ವಹಿಸಲಿದ್ದಾರೆ. ಉದ್ಘಾಟನೆಯನ್ನು ಯೋಜನಾ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ನೇರವೇರಿಸಲಿದ್ದಾರೆ.ಅಧ್ಯಕ್ಷತೆಯನ್ನು ಶಾಸಕರಾದ ಕೆ.ಸಿ. ವೀರೇಂದ್ರ (ಪಪ್ಪಿ) ವಹಿಸಲಿದ್ದಾರೆ. ತಾಲೂಕು ಗಣಿಗಾರರ ಸಂಘದ ಅಧ್ಯಕ್ಷರಾದಎ.ಆರ್.ತಿಪ್ಪೇಸ್ವಾಮಿಪ್ರಾಸ್ತಾವಿಕ ನುಡಿಗಳನ್ನಾಡುವರುಅತಿಥಿಗಳಾಗಿ ಸಂಸದರಾದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ಕೆ.ಡಿ.ಪಿ.ಸದಸ್ಯರು,ವೀರಶೈವ ಸಮಾಜದ ಉಪಾಧ್ಯಕ್ಷರು, ಹಾಗೂ ಜಿಲ್ಲಾ ಗಾಣಿಗ ಸಮಾಜದ ಕಾರ್ಯದರ್ಶಿ ಗಳಾದ ಕೆ.ಸಿ. ನಾಗರಾಜ್, ಯುನಿಟಿ ಹೆಲ್ತ್ಸೆಂಟರ್‍ನ ವೈದ್ಯರಾದ ಶ್ರೀಮತಿ ಡಾ. ಜ್ಯೋತಿ…
ಚಿತ್ರದುರ್ಗ: ನನ್ನ ಮೇಲೆ ಸುಳ್ಳು ಕಮಿಷನ್ ಆರೋಪವನ್ನು ಹೊರಸಿರುವ ಗಾಣಿಗ ಸಮುದಾಯ ಸ್ವಾಮಿಯ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನುಹಾಕಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರಾದ ಶಿವರಾಜ್ ತಗಂಡಗಿ ತಿಳಿಸಿದರು.ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಣಿಗ ಪೀಠಕ್ಕೆ ಹಿಂದಿನ ಬಿಜೆಪಿ ಸರ್ಕಾರದಬೊಮ್ಮಾಯಿಯವರು ತಮ್ಮ ಅಧಿಕಾರದಲ್ಲಿ 3.5 ಕೋಟಿ ಅನುದಾನ ಮಂಜೂರಾಗಿತ್ತು ಅದರಲ್ಲಿ ಅವರ ಸರ್ಕಾರದ ಅವಧಿಯಲ್ಲಿಯೇ2 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿತ್ತು ಉಳಿದ 1.50 ಕೋಟಿ ರೂ.ಗಳನ್ನು ಅಂದಿನ ಮುಖ್ಯಮಂತ್ರಿ ಬೊಮ್ಮಾಯಿಯವರೇಬಡುಗಡೆ ಮಾಡಬೇಡಿ ಎಂದು ಅರ್ಥಿಕ ಇಲಾಖೆಗೆ ಸೂಚಿಸಿದ್ದರು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಸ್ವಾಮಿಗಳುಹಿಂದಿನ ಆದೇಶವನ್ನು ಮರೆ ಮಾಚಿ ನಮಗೆ ಇನ್ನೂ 1.50 ಕೋಟಿ ಬಿಡುಗಡೆ ಮಾಡಿ ಎಂದು ಮನವಿ ಮಾಡಿದ್ದರು. ನಾನು ಇದರ ಬಗ್ಗೆಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದಾಗ ಅವರು ಈ ವಿಷಯವನ್ನು ತಿಳಿಸಿದರು. ಈ ಬಗ್ಗೆ ಸ್ವಾಮಿಗಳು ನ್ಯಾಯಾಲಯಕ್ಕೆ ಹಿಂದಿನ ಸರ್ಕಾರ ನೀಡಿದ ಆದೇಶವನ್ನು ಮರೆ ಮಾಚಿ ನಮಗೆ 3.5 ಕೋಟಿಯಲ್ಲಿ 2 ಕೋಟಿಯನ್ನು ಮಾತ್ರ…
ಹುಬ್ಬಳ್ಳಿ : ನಗರದ ಕುಮಾರ್ ಪಾರ್ಕ್ ಬಳಿ ಇಂದು ಸಂಜೆ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲೇ ಬಿದ್ದು ಗಾಯಗೊಂಡು ನರಳಾಡುತ್ತಿದ್ದ ದೃಶ್ಯವನ್ನು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಗಮನಿಸಿ ತಕ್ಷಣ ತಮ್ಮ ವಾಹನದಿಂದ ಕೆಳಗಿಳಿದು ಗಾಯಾಳುವನ್ನುತಮ್ಮ ಬೆಂಗಾವಲು ವಾಹನದಲ್ಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿ ಮಾನವೀಯತೆ ಮೆರೆದರು.ಸ್ವತಃ ಸಚಿವ ಜೋಶಿಯವರೇಗಾಯಾಳುಗಳನ್ನು ಅಪಘಾತದ ಸ್ಥಳದಿಂದ ಮೇಲೆತ್ತಲು ಕೈಜೋಡಿಸಿದ್ದಲ್ಲದೆ, ಗಾಯಾಳುವಿಗೆ ಧೈರ್ಯ ತುಂಬುವ ಕೆಲಸ ಸಹ ಮಾಡಿದರು. ಬಳಿಕಗಾಯಾಳುವಿಗೆ ಯಾವುದೇ ಸಮಸ್ಯೆ ಆಗದಂತೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಕೀಯ ಸಿಬ್ಬಂದಿಗೆ ಸೂಚನೆ ನೀಡಿದರು.ಸ್ಥಳದಲ್ಲಿದ್ದ ಜನರು ಸಚಿವರ ಸಮಯ ಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೆ, ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ತುಮಕೂರು: ಪತ್ನಿಯ ಕುತ್ತಿಗೆ, ಮುಖಕ್ಕೆ 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಬರ್ಬರ ವಾಗಿ ಪತಿ ಕೊಲೆ ಮಾಡಿರುವ ಘಟನೆ ತುಮಕೂರು ಹೊರವಲಯದ ಅಂತರಸನಹಳ್ಳಿಯಲ್ಲಿ ನಡೆದಿದೆ.ಗೀತಾ (20) ಮೃತ ದುರ್ದೈವಿ, ಪತಿ ನವೀನ್ ಕೊಲೆ ಮಾಡಿದ ಆರೋಪಿಯಾ ಗಿದ್ದು, ಕೃತ್ಯದ ಬಳಿಕ ಪರಾರಿಯಾಗಿದ್ದಾನೆ. ನವೀನ್ ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿ ನವೀನ್‌ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.ನವೀನ್ ಮತ್ತು ಗೀತಾ 2 ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು. ದಂಪತಿ ಅಂತರಸನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ನವೀನ್ಅಂತರಸನಹಳ್ಳಿ ಎಪಿಎಂಸಿ ಮಾರುಕಟ್ಟೆ ಯಲ್ಲಿನ ತರಕಾರಿ ಅಂಗಡಿಯಲ್ಲಿ ಮಂತ್ರ ಮಾಡುತ್ತಿದ್ದ ದಂಪತಿಗೆ ಒಂದು ವರ್ಷ ಗಂಡು ಮಗು ಇದೆ. ಮಗುವನ್ನು ನೀಡಿ ತನ್ನ ತವರು ಮನೆಗೆ ಕಳುಹಿಸಿದ್ದರು.ದಂಪತಿಮಧ್ಯೆ ಕ್ಷುಲ್ಲಕ ಕಾರಣಕ್ಕಾಗಿ ಆಗಾಗ ಗಲಾಟೆಯಾಗುತ್ತಿತ್ತು. ಶನಿವಾರ ರಾತ್ರಿ ದಂಪತಿ ನಡುವೆ ಗಲಾಟೆಯಾಗಿದೆ. ಗಲಾಟೆ ವೇಳೆ ಸತ್ತ ಗೀತಾಗೆ ಪತಿ ನವೀನ್ ಜಾಕುವಿನಲ್ಲ 20ಕ್ಕೂ ಹೆಚ್ಚು ಬಾರಿ ಚುಚ್ಚಿ ಚುಚ್ಚಿ ಕೊನೆ ಮಾಡಿ, ಪರಾರಿಯಾಗಿದ್ದಾನೆ. ಮಾಲೀಕ ಬಾಡಿಗೆ…
Subscribe to Updates
Get the latest creative news from FooBar about art, design and business.