Author: Times of bayaluseeme

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಅರ್ಧದಷ್ಟು ಶಾಸಕರು ಚಳ್ಳಕೆರೆ ಭಾಗದವರೇ ಇದ್ದಾರೆ. ಅದರಲ್ಲೂ ಅಷ್ಟು ಮಂದಿ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ ಅವರನ್ನು ಎದುರಿಸಿ ನಾವು ಇಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಿಬೇಕು ಎಂದು ಸಂಸದ ಗೋವಿಂದ ಕಾರಜೋಳ ಕರೆ ನೀಡಿದರು. ಚಳ್ಳಕೆರೆ ಪಟ್ಟಣ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಕೆ.ಟಿ ಕುಮಾರಸ್ವಾಮಿ ಅಭಿನಂದನಾ ಸಮಾರಂಭದಲ್ಲಿ ಮಾತಮಾಡಿದ ಅವರು, ಚಿತ್ರದುರ್ಗ ಶಾಸಕರ ವೀರೇಂದ್ರ ಪಪ್ಪಿ, ರಘುಮೂರ್ತಿ ಚಳ್ಳಕೆರೆಯವರು, ಇವರಲ್ಲಿ ಒಬ್ಬರಲ್ಲ ಒಬ್ಬರ ಕಾಟ ನಿಮಗೆ ಇದ್ದೆ ಇರುತ್ತದೆ. ಇವರಿನ್ನು ಎದುರಿಸಿ ಬಿಜೆಪಿ ಇಲ್ಲಿ ಅಧಿಕಾರಕ್ಕೆ ಬಂದುವಂತೆ ನೋಡಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಇನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಆದರೂ ರಾಜ್ಯದಲ್ಲಿ ಏನು ಅಭಿವೃದ್ಧಿ ಆಗಿಲ್ಲ. ಯಾವೊಬ್ಬ ಶಾಸಕರಿಗೆ ಅನುದಾನ ಸಿಕ್ಕಿಲ್ಲ, ಸಿಗುವುದು ಇಲ್ಲ ಅನ್ಸುತ್ತೆ. ನಮ್ಮ ಸರ್ಕಾರದಲ್ಲಿ ಆಗಿರುವ ಯೋಜನೆಗಳನ್ನು ಪೂರ್ಣ ಮಾಡೋಕೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದೆ ವೇಳೆ ಬಿಜೆಪಿ ಶಾಸಕರು ಮುಖಂಡರು, ಸದಸ್ಯರು,…

Read More

ಚಿತ್ರದುರ್ಗ : ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸ್ಪರ್ಧಿಸಿ ನೀವುಗಳು ನಾಯಕರಾಗಿ. ಸೋಲು-ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ಮಾಡಿ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳಿಗೆ ಕರ್ನಾಟಕ ಪ್ರದೇಶ ಯುವಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ಗೌಡ ಕರೆ ನೀಡಿದರು.ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಉಮಾಪತಿ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಕಾರ್ಯಕಾರಿಣಿಸಭೆ ಉದ್ಘಾಟಿಸಿ ಮಾತನಾಡಿ,ರಾಹುಲ್‍ಗಾಂಧಿ ಯುವ ಜನಾಂಗಕ್ಕೆ ಪಕ್ಷದಲ್ಲಿ ಆದ್ಯತೆ ನೀಡಿದ್ದಾರೆ. ಬ್ಲಾಕ್, ಬೂತ್ ಮಟ್ಟದಲ್ಲಿ ಯುತ್ ಕಾಂಗ್ರೆಸ್‍ನ್ನುಸಂಘಟಿಸಿ.2028ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ತಿಳಿಸಿದರು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನುಡಿದಂತೆ ನಡೆದಿದ್ದಾರೆ. ಉಚಿತ ಗ್ಯಾರೆಂಟಿಗಳಿಂದ 44 ಸಾವಿರ ಕೋಟಿ ರೂ.ಬಡವರ ಮನೆಗಳಿಗೆ ತಲುಪಿದೆ. ಜಿಲ್ಲೆಯಲ್ಲಿ ನಾಲ್ಕು ಕೋಟಿ 36 ಲಕ್ಷ ರೂ.ಗಳನ್ನು ಶಕ್ತಿ ಯೋಜನೆಗೆ ನೀಡಿದೆ. ಬಿಜೆಪಿ ಮತ್ತುRSS ಅಂಬೇಡ್ಕರ್, ಸಂವಿಧಾನ, ಗಾಂಧಿಯನ್ನು ದೂರವಿಡುವ ಕೆಲಸ ಮಾಡುತ್ತಿರುವುದನ್ನು ಯೂತ್ ಕಾಂಗ್ರೆಸ್ ಸಹಿಸುವುದಿಲ್ಲ. ಕಾಂಗ್ರೆಸ್ ದೇಶ ಕಟ್ಟುವ ಕೆಲಸ ಮಾಡುತ್ತಿದೆ. ನಾಯಕರುಗಳಿಗೆ ಯುವ ಕಾಂಗ್ರೆಸ್ ಬುನಾದಿ ಎಂದು…

Read More

ಹೊಳಲ್ಕೆರೆ : ಯಾವ ಊರಿಗೆ ಏನು ಕೆಲಸ ಮಾಡಿದರೆ ಜನರಿಗೆ ಒಳ್ಳೆಯದಾಗುತ್ತದೆನ್ನುವ ಅರಿವಿಟ್ಟುಕೊಂಡು ಕ್ಷೇತ್ರದ ಅಭಿವೃದ್ದಿಗೆಹಗಲು-ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು. ಮಳೆ ಬಾರದ ಹಿನ್ನಲೆ ತಾಳಿಕಟ್ಟೆ ಗ್ರಾಮದಲ್ಲಿ ಶನಿವಾರ ಗಂಗೆ ಪೂಜೆ ನೆರವೇರಿಸಿ ಮಾತನಾಡಿ,ನ್ಯಾಯ, ನೀತಿ, ಧರ್ಮ ರಾಜಕಾರಣಿಗಳಿಗಿರಬೇಕು. ಸಾರ್ವಜನಿಕರ ಬದುಕನ್ನು ಸ್ವಂತ ಬದುಕೆಂದು ತಿಳಿದು ಕೆಲಸ ಮಾಡಬೇಕು ಎಂದರು. ಎಂಟತ್ತು ಲಕ್ಷ ರೂ.ವೆಚ್ಚದಲ್ಲಿ ಬೀರಪ್ಪನಗುಡಿ ಕಟ್ಟಿಸಿದ್ದೇನೆ. ಹತ್ತು ಕೋಟಿ ರೂ.ವೆಚ್ಚದಲ್ಲಿ ರಸ್ತೆ ಮಾಡಿಸಿದ್ದೇನೆ. ಎರಡುವರೆ ಮೂರುಕೋಟಿ ರೂ.ಗಳಲ್ಲಿ ಆಸ್ಪತ್ರೆ ಕಟ್ಟಿಸಿದ್ದೇನೆ. ಗಂಗಸಮುದ್ರದಲ್ಲಿ ಸಮಸ್ಯೆಯಿದೆ ಅದನ್ನು ಕೂಡ ಬಗೆಹರಿಸುವ ಭರವಸೆ ನೀಡಿದರು. ಡಿಸೆಂಬರ್ ಒಳಗೆ ತಾಲ್ಲೂಕಿನಾದ್ಯಂತ ಇರುವ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಆಸೆಯಿಟ್ಟುಕೊಂಡಿದ್ದೇನೆ. ರಾಮಗಿರಿ, ಎನ್.ಜಿ.ಹಳ್ಳಿ, ಮಲ್ಲಾಡಿಹಳ್ಳಿ, ತಾಳ್ಯ, ತೇಕಲವಟ್ಟಿ, ಅರಿಶಿನಘಟ್ಟ ಗ್ರಾಮಗಳಲ್ಲಿ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸಿದ್ದೇನೆ. ಇಷ್ಟಕ್ಕೆಸುಮ್ಮನಾಗಿಲ್ಲ. ಚಿಕ್ಕಜಾಜೂರಿನ ಕೋಟೆಹಾಳ್ ಬಳಿ ಐದುನೂರು ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸುತ್ತಿದ್ದು,ಜೋಗ್‍ಫಾಲ್ಸ್‍ನಿಂದ ನೇರವಾಗಿ ಇಲ್ಲಿಗೆ ವಿದ್ಯುತ್ ಪೂರೈಕೆಯಾಗಲಿದೆ ಎಂದರು. ಸಮುದಾಯ ಭವನ ಕಾಮಗಾರಿ ಮುಗಿದ…

Read More

ಶೋಷಣೆಯ ಬದುಕು ಬಹುಸಂಖ್ಯಾತರದ್ದಾಗಿತ್ತು ಅವರ ನೋವು ಅರಿಯಲು ಬುದ್ಧ ಸಾಮ್ರಾಜ್ಯವನ್ನು ತ್ಯಜಿಸಿದರು ಎಂದು ಭೋವಿಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.ನಗರದ ಹೊರ ವಲಯದಲ್ಲಿರುವ ಭೋವಿ ಗುರುಪೀಠದಲ್ಲಿ ಪ್ರಜಾಪ್ರಭುತ್ವ ಮತ್ತು ತುರ್ತು ಪರಿಸ್ಥಿತಿ ಕುರಿತ ಸಂವಾದದಲ್ಲಿ ಮಾತನಾಡಿದ ಅವರು ವೈಭವದ ಜೀವನವನ್ನು ಬುದ್ಧ ತ್ಯಜಿಸಿ ಬಹುಸಂಖ್ಯಾತರ ನೋವಿಗೆ ವಿಮೋಚನೆಯನ್ನು ನೀಡಿದರು. ಅವರಚಿಂತನೆಗಳು ಸಮಾಜದ ಪರಿವರ್ತನೆಗೆ ಬುನಾದಿಯಾಯಿತು ಎಂದು ಹೇಳಿದರು. ದೇವ ಭಾಷೆಯನ್ನು ಯಾರಾದರೂ ಫಟಿಸಿದರೆ ನಾಲಿಗೆಯನ್ನು ಕತ್ತರಿಸುವ ಕೇಳಿದರೆ ಕಿವಿಗೆ ಸೀಸ ಹೊಯ್ಯುವ ಸಂದರ್ಭವಿತ್ತು ಅದರಿಂದ ಹೊರ ಬರಲು ಪ್ರಶ್ನಿಸಬೇಕು ಎಂದು ಬುದ್ಧ, ಬಸವ ಹೇಳಿದ್ದಾರೆ. ಪ್ರಶ್ನಿಸಿಕೊಳ್ಳದೆ ಯಾವುದನ್ನು ಒಪ್ಪಬಾರದು ಎಂದಿದ್ದಾರೆ.ಅಲ್ಲಮಪ್ರಭು ದೇವರನ್ನು ಪ್ರಶ್ನಿಸುವ ಪರಿಯನ್ನ ವಚನಗಳಲ್ಲಿ ನೋಡುತ್ತೇವೆ. ಪ್ರಶ್ನೆ ಇಲ್ಲದಿದ್ದರೆ ಅಭಿವೃದ್ಧಿ ಅಭಿವ್ಯಕ್ತಿ ಆಗಲಾರದುಎಂದು ತಿಳಿಸಿದರು. ಸಂವಿಧಾನದ ಸಮಾನತೆಯ ಆಶಯಗಳು ಈಡೇರಬೇಕಾದರೆ ಪ್ರಶ್ನಿಸುವ ಮನೋಭಾವ ರೂಡಿಮಾಡಿಕೊಳ್ಳಬೇಕು. ಶಿಕ್ಷಣವಂತರಾಗಿ ಜ್ಞಾನವನ್ನು ಪಡೆದು ಸರಿಯಾದ ಮಾದರಿಯಲ್ಲಿಯೇ ತರ್ಕಿಸುವ ಮನೋಭಾವ ಬೆಳೆಸಿಕೊಳ್ಳಬೇಕು, ಜ್ಞಾನ ಸರಿದಾರಿಯಲ್ಲಿ ನಡೆಸಿದರೆ ವಿಧ್ಯೆ ಪ್ರಜ್ಞಾವಂತಿಕೆಯನ್ನ ಬಿಡಿಸಿ ಹೇಳುತ್ತದೆ, ಎರಡನ್ನೂ ಪ್ರತಿಪಾದಿಸುವ…

Read More

ರಾಷ್ಟ್ರೀಯ ಮಟ್ಟದ ಪೊಲೀಸ್ ಕ್ರೀಡಾ ಕೂಟದಲ್ಲಿ ಕರ್ನಾಟಕ‌ ಪೊಲೀಸ್ ಚಾಂಪಿಯನ್ ಆಗಿ ಹೊರ ಹೊಮ್ಮಬೇಕು. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಉತ್ತೇಜನವನ್ನು ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.ಅವರು ಇಂದು ಕೋಮಂಗಲದ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ನಡೆದ ‘ಕರ್ನಾಟಕ ರಾಜ್ಯ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2024 ಸಮಾರೋಪ ಸಮಾರಂಭ’ದಲ್ಲಿ ಭಾಗವಹಿಸಿ, ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಕ್ರೀಡೆಯಲ್ಲಿ ಭಾಗವಹಿಸುವವರಿಗೆ ತಯಾರಿ ಬಹಳ‌ ಮುಖ್ಯವಾಗುತ್ತದೆ ಅದಕ್ಕಾಗಿ ವಿಶೇಷ ತರಬೇತಿಯನ್ನು ನೀಡುವಂತೆ ಇಲಾಖೆಯ ಮುಖ್ಯಸ್ಥರಿಗೆ ಸೂಚಿಸುತ್ತೇನೆ. ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ ಗಳಾಗಬೇಕು. ತನಿಖೆಯಲ್ಲಿ ಕರ್ನಾಟಕ ಪೊಲೀಸ್ ಬೆಸ್ಟ್‌ ಪೊಲೀಸ್ ಎಂದು ಹೇಳುತ್ತಾರೆ. ಕ್ರೀಡೆಯಲ್ಲಿಯೂ ಕೂಡ ಕರ್ನಾಟಕ ಪೊಲೀಸ್ ಬೆಸ್ಟ್ ಎಂದು ಹೇಳುವಂತಾಗಬೇಕು ಎಂದರು.ಮುಖ್ಯಮಂತ್ರಿಯವರು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಶೇ. 3 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಬೇರೆ ಯಾವ ರಾಜ್ಯಗಳು ಸಹ ಇಷ್ಟೊಂದು ಮೀಸಲಾತಿಯನ್ನು ನೀಡಿಲ್ಲ‌‌. ಕೆಎಸ್‌ಆರ್‌ಪಿ ಕ್ರೀಡಾಂಗಣ ನವೀಕರಣಗೊಳಿಸಲು 3 ಕೋಟಿ ರೂ‌. ಅನುದಾನ ನೀಡಲಾಗಿದೆ.…

Read More

ತುಮಕೂರು: ಅಕ್ಟೋಬರ್ ನಲ್ಲಿ ಕ್ರಾಂತಿ ಆಗುತ್ತೆ ಎಂದು ಹೇಳಿಕೆ ನೀಡುವ ಮೂಲಕ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಸಚಿವ ಕೆ.ಎನ್ ರಾಜಣ್ಣ ಈಗ ಮತ್ತೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಹೌದು ನಿನ್ನೆ ತುಮಕೂರಿನಲ್ಲಿ ಮಾತನಾಡಿದ ರಾಜಣ್ಣ ಮುಂದೆ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆ ಆಗ್ತಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಸತೀಶ್ ಜಾರಕಿಹೊಳಿ ಪಕ್ಷದಲ್ಲಿ ಹಿರಿಯ ಹಾಗೂ ಅನುಭವಿ ರಾಜಕಾರಣಿ ಪಕ್ಷದ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಇನ್ನಷ್ಟು ಬಲ ತರುವ ಶಕ್ತಿ ಅವರಿಗಿದೆ ಎಂದು ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಇನ್ನು ನಾನು ಕ್ರಾಂತಿ ಆಗುತ್ತದೆ ಎಂದು ಹೇಳಿದ್ದೇನೆ. ಅದನ್ನು ಎಲ್ಲರೂ ಬೇರೆಯದೇ ಅರ್ಥ ಮಾಡಿಕೊಂಡಿದ್ದಾರೆ. ಕ್ರಾಂತಿ ಎಂದರೆ ಏನು, ದೇಶದಲ್ಲಿ ಎಷ್ಟೆಲ್ಲ ಕ್ರಾಂತಿಗಳು ಆಗಿವೆ. ಹಸಿರು ಕ್ರಾಂತಿ ಆಗಿಲ್ವ, ಅದೇ ರೀತಿ ರಾಜಕೀಯ ಕ್ರಾಂತಿ ಸಹ ಆಗುತ್ತದೆ. ಅದು ಬಿಜೆಪಿ ಪಕ್ಷದಲ್ಲಿ ಕ್ರಾಂತಿ ಆಗಬಹುದು. ಬಿಜೆಪಿ ಪಕ್ಷದಲ್ಲಿ 75 ವರ್ಷ ದಾಟಿದವರು ಪಕ್ಷದ…

Read More

ಇತ್ತೀಚಿನ ದಿನಗಳಲ್ಲಿ ಹದಿಹರೆಯದ ವಯಸ್ಸಲ್ಲಿ ಏಕಾಏಕಿ ದೇಹ ತೂಕ ಹೆಚ್ಚಾಗುವ ಮೂಲಕ ಕೆಲವರ ರೇಗಿಸುವಿಕೆಗೆ ಹಾಗೂ ಅವಮಾನಕ್ಕೆ ಗುರಿಯಾಗಿ ಮಾನಸಿಕ ಖಿನ್ನತೆಗೆ ಒಳಗುತ್ತಾರೆ. ಹಾಗಾದ್ರೆ ದೇಹ ತೂಕ ಏಕೆ ಹೆಚ್ಚಾಗುತ್ತದೆ…? ಯಾವ ಕಾರಣಕ್ಕೆ ಹೆಚ್ಚಾಗುತ್ತದೆ ಗೊತ್ತೇ..? ಆಹಾರ ಮತ್ತು ಪಾನೀಯಗಳಿಂದ ನಿಮಗೆ ಅಗತ್ಯಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುವುದು, ನಿದ್ರೆ ಕೊರತೆ ಮತ್ತು ಕಡಿಮೆ ದೈಹಿಕ ಚಟುವಟಿಕೆ ಸೇರಿದಂತೆ ಹಲವು ಅಂಶಗಳು ಅಧಿಕ ತೂಕ ಹೆಚ್ಚಾಗುವಲ್ಲಿ ಪಾತ್ರವಹಿಸುತ್ತವೆ. ತೂಕ ಮತ್ತು ಒಟ್ಟಾರೆ ಆರೋಗ್ಯದ ಮೇಲೆ ಪ್ರಭಾವ ಬೀರುವ ಕೆಲವು ಅಂಶಗಳು ಇಲ್ಲಿವೆ. ನಿಮ್ಮ ಸುತ್ತಲಿನ ಪ್ರಪಂಚ. ನಿಮ್ಮ ಮನೆ, ಸಮುದಾಯ ಮತ್ತು ಕೆಲಸದ ಸ್ಥಳ ಎಲ್ಲವೂ ನೀವು ದೈನಂದಿನ ಜೀವನಶೈಲಿಯ ಆಯ್ಕೆಗಳನ್ನು ಹೇಗೆ ಮಾಡುತ್ತೀರಿ ಎಂಬುದರ ಮೇಲೆ ಪರಿಣಾಮ ಬೀರಬಹುದು. ಕೊಬ್ಬು , ಸಕ್ಕರೆ ಮತ್ತು ಕ್ಯಾಲೋರಿಗಳಲ್ಲಿ ಅಧಿಕವಾಗಿರುವ ಆಹಾರ ಮತ್ತು ಪಾನೀಯಗಳನ್ನು ಕಂಡುಹಿಡಿಯುವುದು ಸುಲಭ ಮತ್ತು ಕೆಲವೊಮ್ಮೆ ತಪ್ಪಿಸುವುದು ಕಷ್ಟ. ಮತ್ತು ಅವು ಹಣ್ಣುಗಳು ಮತ್ತು ತರಕಾರಿಗಳಂತಹ ಆರೋಗ್ಯಕರ ಆಯ್ಕೆಗಳಿಗಿಂತ ಕಡಿಮೆ…

Read More

ಚಿತ್ರದುರ್ಗ: ಬಲವಂತವಾಗಿ ರೈತರ ಭೂಮಿಯನ್ನು ಸ್ವಾಧಿನಪಡಿಸಿಕೊಳ್ಳುವ ರಾಜ್ಯ ಸರ್ಕಾರದ ದೌರ್ಜನ್ಯ ವಿರೋಧಿಸಿ ದೇವನಹಳ್ಳಿಯಲ್ಲಿ ಕಳೆದ 25ರಂದು ಹೋರಾಟ ನಡೆಸಿದ ರೈತರ ಬಂಧನ ಖಂಡಿಸಿ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಬಂಧನಕ್ಕೊಳಗಾದ ರೈತರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ಇದೆ ವೇಳೆ ಪ್ರತಿಭಟನೆಯನ್ನುದ್ದೇಶಿಸಿ ಜಿಲ್ಲಾ ಸದಸ್ಯ ಡಿ.ಎಂ.ಮಲಿಯಪ್ಪ ಮಾತನಾಡಿ ಕಾರ್ಪೊರೇಟ್ ಕಂಪನಿ, ಭೂ ಮಾಲೀಕರ ಪರವಾಗಿರುವ ಸಿಎಂ ಸಿದ್ದರಾಮಯ್ಯ ದೇವನಹಳ್ಳಿ ಸಮೀಪವಿರುವ ಚನ್ನರಾಯಪಟ್ಟಣದ ಸುತ್ತಮುತ್ತ ಹದಿಮೂರುಹಳ್ಳಿಗಳಲ್ಲಿ ರೈತರ ಜಮೀನ ವಶಪಡಿಸಿಕೊಳ್ಳುವುದಕ್ಕೆ ಅಂಕಿತ ಹಾಕಲು ಮುಂದಾಗಿರುವುದನ್ನು ನೋಡಿದರೆ 50 ವರ್ಷಗಳಹಿಂದೆ ಪ್ರಧಾನಿ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದು ನೆನಪಾಗುತ್ತದೆ. ರೈತರು, ಕಾರ್ಮಿಕರು, ಮಹಿಳೆಯರು,ವಿದ್ಯಾರ್ಥಿಗಳಪರವಾಗಿರಬೇಕಾಗಿದ್ದ ರಾಜ್ಯ ಸರ್ಕಾರ ಉದ್ಯಮಿಗಳ ಪರವಾಗಿದೆ. ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು 1180 ದಿನಗಳಿಂದಮುಷ್ಕರ ನಡೆಸುತ್ತಿರುವ ರೈತರು, ಮಹಿಳೆಯರನ್ನು ಕಡೆಗಣಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾದಿತೆಂದುಖಡಕ್ ಎಚ್ಚರಿಕೆ ನೀಡಿದರು. ಜೊತೆಗೆಪೊಲೀಸರ…

Read More

ಬೆಂಗಳೂರು, ಜೂನ್ ೨೮, (ಕರ್ನಾಟಕ ವಾರ್ತೆ) ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ‌‌ ೩ ನೇ ಮಹಡಿಯಲ್ಲಿರುವ ಸುಲೋಚನಾ‌ ಸಭಾಂಗಣದಲ್ಲಿ ೨೦೨೫ ನೇ ಜುಲೈ ೧ ರಂದು ಪತ್ರಿಕಾ ದಿನಾಚರಣೆ – ೨೦೨೫ ಕಾರ್ಯಕ್ರಮ ‌ ಹಮ್ಮಿಕೊಳ್ಳಲಾಗಿದೆ ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿರುವರು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಘನ ಉಪಸ್ಥಿತರಿದ್ದು, ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ವರದಿ ಬಿಡುಗಡೆ ಮಾಡಲಿರುವರು. ಪೀಪಲ್ಸ್ ಅರ್ಥೈವ್ ಆಫ್ ರೂರಲ್ ಇಂಡಿಯಾದ ಸಂಸ್ಥಾಪಕ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರಾದ ಪಿ. ಸಾಯಿನಾಥ್ ಅವರು The Battle for Factual Reporting ಮತ್ತು ಇನ್ನೋರ್ವ ಹಿರಿಯ ಸಾಹಿತಿ ಹಾಗೂ ಸಂಸ್ಕೃತಿ ಚಿಂತಕರಾದ ರಹಮತ್ ತರೀಕೆರೆ ಅವರು ನಿಜ ಸುದ್ದಿಗಾಗಿ ಸಮರ ವಿಷಯಗಳ…

Read More

ಬೆಂಗಳೂರು ಜೂ 29: ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು. ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು.ಈ ಬಾರಿ ರಾಜ್ಯದಾದ್ಯಂತ ಮಳೆ ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು. • ಸೆಪ್ಟಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ. • ದಸರಾಕ್ಕೆ ತನ್ನದೇ ಆದ…

Read More