Author: Times of bayaluseeme

ಕರ್ನಾಟಕಕ್ಕೆ ಮುಂದಿನ ಏಳು ದಿನಗಳ ಹವಾಮಾನ ಮುನ್ಸೂಚನೆ ಮತ್ತು ಎಚ್ಚರಿಕೆ ದಿನ 2: 04-ಜೂನ್-2025 ಕರಾವಳಿ ಕರ್ನಾಟಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ: ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ. ಉತ್ತರ ಒಳನಾಡಿನ ಕರ್ನಾಟಕ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಹಾವೇರಿ, ಬೆಳಗಾವಿ, ಧಾರವಾಡ: ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (40-50 ಕಿ.ಮೀ/ಗಂಟೆ) ಹಗುರ ಮಳೆ/ಗುಡುಗು ಸಹಿತ ಮಳೆ. ದಕ್ಷಿಣ ಒಳನಾಡಿನ ಕರ್ನಾಟಕ ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಕೊಡಗು, ತುಮಕೂರು: ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (30-40 ಕಿ.ಮೀ/ಗಂಟೆ) ಹಗುರ ಮಳೆ/ಗುಡುಗು ಸಹಿತ ಮಳೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ: ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ (30-40 ಕಿ.ಮೀ/ಗಂಟೆ) ಹಗುರ ಮಳೆ/ಗುಡುಗು ಸಹಿತ ಮಳೆ. ದಿನ 3: 05-ಜೂನ್-2025 ಕರಾವಳಿ ಕರ್ನಾಟಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ: ಹಲವೆಡೆ ಹಗುರದಿಂದ ಸಾಧಾರಣ ಮಳೆ. ಉತ್ತರ ಒಳನಾಡಿನ ಕರ್ನಾಟಕ…

Read More

ಬೆಂಗಳೂರು, ಜೂ.3: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ್ದ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಅವರೊಂದಿಗೆ ಸಮಾಲೋಚಿಸಿದ ಅವರು, ವನ್ಯಜೀವಿ, ಅರಣ್ಯ, ಪರಿಸರದ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿ ಹೊಂದಿರುವ ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಇಲ್ಲದೆ ಅರಣ್ಯ, ವನ್ಯಜೀವಿ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಇದು ಅವರ ಪರಿಸರ ಕಾಳಜಿ, ಬದ್ಧತೆಗೆ ಸಾಕ್ಷಿಯಾಗಿದೆ ಎಂದರು. ತಮ್ಮ ಲೆಗ್ ಸ್ಪಿನ್ ಮೋಡಿಯಿಂದ ಭಾರತ ತಂಡದ ಹಲವು ಗಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಕುಂಬ್ಳೆ ಅವರು ಕರ್ನಾಟಕದ ಅಷ್ಟೇ ಅಲ್ಲ ಭಾರತದ ಹೆಮ್ಮೆಯ ಪುತ್ರರಾಗಿದ್ದಾರೆ. ಜಿಂ ಲೇಕರ್ ಬಳಿಕ ಒಂದು ಟೆಸ್ಟ್ ಪಂದ್ಯದ ಒಂದು ಇನ್ನಿಂಗ್ಸ್ ನಲ್ಲಿ ಎಲ್ಲ 10 ವಿಕೆಟ್ ಪಡೆದ ಸಾಧನೆ ಮಾಡೆದ ಮಾಂತ್ರಿಕ…

Read More

ಚಿತ್ರದುರ್ಗ ಜೂ.02: ಸಮಾಜದಲ್ಲಿ ಪ್ರತಿ ಮಹಿಳೆಯು ತಮ್ಮದೇಯಾದ ಹಣಕಾಸಿನ ಸ್ವಾತಂತ್ರ್ಯ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು ಎಂದು ಹಿರಿಯ ವಕೀಲೆ ಡಿ.ಕೆ.ಶೀಲಾ ಹೇಳಿದರು. ನಗರದ ಸ್ಟೇಡಿಯಂ ರಸ್ತೆಯ ಜಿ.ಜಿ.ಸಮುದಾಯ ಭವನದಲ್ಲಿ ಸೋಮವಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಐಕ್ಯೂಎಸಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಪ್ರತಿಭೋತ್ಸವ ಸಮಾರಂಭ”ದಲ್ಲಿ ಅವರು ಮಾತನಾಡಿದರು. ನಮ್ಮಿಂದ ಹಾಗೂ ನಮ್ಮ ಕುಟುಂಬದಿಂದಲೇ ಸಮಾನತೆ ಶುರುವಾಗಬೇಕು. ಪೋಷಕರು ಗಂಡು, ಹೆಣ್ಣು ಇಬ್ಬರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು. ನಮ್ಮನ್ನು ನಾವು ಬದಲಾಯಿಸಿಕೊಳ್ಳುವ ಮೂಲಕ ಬದಲಾವಣೆ ಪ್ರಾರಂಭವಾಗಬೇಕು ಎಂದು ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ ಮಾತನಾಡಿ, ವಿದ್ಯಾರ್ಥಿಗಳು ತಂದೆ-ತಾಯಿ ಹಾಗೂ ಕುಟುಂಬಕ್ಕೆ ಉತ್ತಮ ಹೆಸರು ತರುವ ಮೂಲಕ ಸ್ವಾವಲಂಬಿಗಳಾಗಿ, ಆರ್ಥಿಕ ಸ್ವಾತಂತ್ರ್ಯದಲ್ಲಿ ಯಶಸ್ವಿಗಳಾಗಬೇಕು. ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಕಂಡ ಮಹಿಳೆಯರು ನೀವಾಗಬೇಕು ಎಂದು ತಿಳಿಸಿದ ಅವರು, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು. ಮಹಿಳಾ ಕಾಲೇಜಿನ…

Read More

ಬೆಂಗಳೂರು, ಜೂನ್‌ 2: ಹೇಮಾವತಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಎಲ್ಲ ರೈತರನ್ನು ಹಾಗೂ ಸರ್ವಪಕ್ಷಗಳ ಪ್ರಮುಖರನ್ನು ಕರೆದು ಸಭೆ ಮಾಡಿ ಚರ್ಚಿಸಬೇಕು. ರೈತರ ವಿರುದ್ಧ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿಗೆ ಹೇಮಾವತಿ ನೀರು ನೀಡಲು ತುಮಕೂರಿನ ರೈತರು ಪ್ರತಿಭಟಿಸುತ್ತಿರುವಾಗ, ಎರಡೂ ಜಿಲ್ಲೆಗಳ ಪ್ರತಿನಿಧಿಗಳು ಹಾಗೂ ರೈತರ ಜೊತೆ ಸರ್ಕಾರ ಚರ್ಚಿಸಬೇಕಿತ್ತು. ಈ ಕೆಲಸವನ್ನು ಸರ್ಕಾರ ಮಾಡದೆಯೇ ರೈತರ ನಡುವೆಯೇ ಎತ್ತಿ ಕಟ್ಟುವ ಕೆಲಸ ಮಾಡಿದೆ. ರೈತರಿಗೆ ಮನವರಿಕೆ ಮಾಡುವ ಬದಲು ಬೆದರಿಕೆ ಹಾಕುವುದು ಒಳ್ಳೆಯದಲ್ಲ. ಎಲ್ಲ ರೈತರನ್ನು ಸಮಭಾವದಿಂದ ನೋಡಬೇಕೆ ಹೊರತು, ಮಠಾಧೀಶರ ಮೇಲೆ, ಜನಪ್ರತಿನಿಧಿಗಳ ಮೇಲೆ ಕೇಸು ಹಾಕಬಾರದು. ಕಾಂಗ್ರೆಸ್‌ನ ಶಾಸಕರೇ ಆದ ಗುಬ್ಬಿ ಶ್ರೀನಿವಾಸ್‌ ಕೂಡ ಇದರ ವಿರುದ್ಧ ನಿಂತಿದ್ದಾರೆ ಎಂದರು. ರೈತರ ವಿರುದ್ಧ ಪ್ರಕರಣ ದಾಖಲಿಸುವುದು ಅಕ್ಷಮ್ಯ ಅಪರಾಧ. ರೈತರ ಜೊತೆಗೆ ಚರ್ಚಿಸಿ ಸಮನ್ವಯ ಸಾಧಿಸಬೇಕು. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಕುರ್ಚಿ ಹೋದರೆ ಅಧಿಕಾರವೇ ಇರುವುದಿಲ್ಲ.…

Read More

ಬೆಂಗಳೂರು: ಸಭೆಯ ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನೀಡಿದ ಸೂಚನೆಗಳು ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ, ಸಿಇಒ, ಎಸ್ಪಿಗಳ ಜವಾಬ್ದಾರಿ ತಾನೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು. ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳು, ತೆಗೆದುಕೊಂಡ ನಿರ್ಣಯಗಳಲ್ಲಿ ಕೆಲವು ಇಲಾಖೆಗಳು ಶೇ100 ರಷ್ಟು ಪ್ರಗತಿ ತೋರಿಸಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ರಾಜಿ ಇಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರವಾಗಿ ಕ್ರಮ ಕೈಗೊಳ್ಳುವುದು ನಮಗೆ ಅನಿವಾರ್ಯ ಆಗುತ್ತದೆ. ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒ ಗಳು ತಮ್ಮ ಅಹಂ ಬದಿಗೊಟ್ಟಿ ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ.…

Read More

ಚಿತ್ರದುರ್ಗ ಮೇ 29: ಲ್ಯಾಂಡ್ ಬೀಟ್ ನಡೆಸುವ ಮೂಲಕ ಕಂದಾಯ ಇಲಾಖೆಯ ಭೂಮಿ ಸರ್ವೇ ನಡೆಸಿ, ಅನಧಿಕೃತ ಭೂಮಿ ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಪ್ರಯತ್ನಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಸೂಚನೆ ನೀಡಿದರು. ಬೆಂಗಳೂರು ವಿಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಗುರುವಾರ ಕಂದಾಯ ಇಲಾಖೆ ವಿಷಯಗಳ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಅವರು ಮಾತನಾಡಿದರು. ವಿವಿಧ ಇಲಾಖೆಗಳ ಕಚೇರಿ ನಿರ್ಮಾಣಕ್ಕೆ ಕಂದಾಯ ಭೂಮಿ ಮಂಜೂರು ಮಾಡುವಂತೆ ಕೋರಿ ಸಲ್ಲಿಸಲಾದ ಸಾಕಷ್ಟು ಅರ್ಜಿಗಳು ಜಿಲ್ಲಾಧಿಕಾರಿಗಳ ಮುಂದಿವೆ. ಪೊಲೀಸ್, ಶಿಕ್ಷಣ, ಆರೋಗ್ಯ ಇಲಾಖೆಗಳಿಗೆ ನಗರಕ್ಕೆ ಹತ್ತಿರದಲ್ಲಿಯೇ ಸ್ಥಳಗಳನ್ನು ಮಂಜೂರು ಮಾಡಬೇಕು. ಜಿಲ್ಲಾಧಿಕಾರಿಗಳು ಭೂ ಒತ್ತುವರಿ ತೆರವು ಮಾಡಿ, ಅಗತ್ಯ ಇರುವ ಕಡೆ ಸಂಬಂಧಿಸಿದ ಇಲಾಖೆಗಳಿಗೆ ಭೂಮಿ ನೀಡಲು ಮುಂದಾಗಬೇಕು ಎಂದು ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಹೇಳಿದರು. ಫಾರಂ 53 ಹಾಗೂ 57 ಅಡಿ ಉಳುಮೆ ಮಾಡುತ್ತಿರುವ ಹಾಗೂ ಜಮೀನು ಮಂಜೂರು ಮಾಡಲು…

Read More

ಚಿತ್ರದುರ್ಗ ಮೇ29: ಜಿಲ್ಲೆಯಾದ್ಯಂತ ಏಕಕಾಲಕ್ಕೆ ಗುರುವಾರ ಶಾಲೆಗಳು ಆರಂಭವಾಗಿದ್ದು, ಮೊದಲ ದಿನವೇ ಮಕ್ಕಳು ಉತ್ಸಾಹದಿಂದ ಶಾಲೆಗಳತ್ತ ಹೆಜ್ಜೆ ಹಾಕಿದರು. ಹೊಸ ಹುರುಪಿನೊಂದಿಗೆ ತರಗತಿಗೆ ಹಾಜರಾದರು. ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಲೆಗಳಲ್ಲಿ ತಳಿರು ತೋರಣ ಕಟ್ಟುವ ಮೂಲಕ ಶಿಕ್ಷಕರು ಮಕ್ಕಳನ್ನು ಸಂಭ್ರಮದಿಂದ ಬರ ಮಾಡಿಕೊಂಡರು. ಎತ್ತಿನಗಾಡಿಯಲ್ಲಿ ಮೆರವಣಿಗೆ, ಗುಲಾಬಿ ಹೂ, ಸಮವಸ್ತ್ರ ವಿತರಣೆ, ಪುಠ್ಯಪುಸ್ತಕ ವಿತರಣೆ ಸೇರಿದಂತೆ ಹೀಗೆ ವಿವಿಧ ಬಗೆಯಲ್ಲಿ ಮಕ್ಕಳನ್ನು ಸ್ವಾಗತಿಸಲಾಯಿತು. ಶಿಕ್ಷಣದ ಶಕ್ತಿಯಿಂದ ಜ್ಞಾನದ ಬೆಳಕು ಹೆಚ್ಚಾಗಲಿ: ಶಿಕ್ಷಣವೇ ಶಕ್ತಿ, ಶಿಕ್ಷಣ ಕಲಿತ ವ್ಯಕ್ತಿ ತನ್ನ ಜೀವನವನ್ನು ಉತ್ತಮವಾಗಿ ನಿರ್ವಹಿಸಿ, ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡುವರು. ಶಾಲೆಗಳು ಶಿಕ್ಷಣ ನೀಡುವ ಕೇಂದ್ರಗಳಾಗಿದ್ದು, ಅರ್ಹ ವಯಸ್ಸಿನ ಮಕ್ಕಳನ್ನು ಶಾಲೆಗೆ ಸೇರಿಸಿ, ನಿಯಮಿತವಾಗಿ ಶಾಲೆಗೆ ಕಳುಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಮೆದೇಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನ “ಶಾಲಾ ಪ್ರಾರಂಭೋತ್ಸವ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳಿಗೆ ಉಚಿತ…

Read More

ಚಿತ್ರದುರ್ಗ ಮೇ27: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ನಡೆದಿರುವ ಸಮೀಕ್ಷೆ ಕಾರ್ಯದ ಅವಧಿಯನ್ನು ಜೂನ್ 01 ರವರೆಗೆ ಮರು ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕಾರ್ಯ ಕಳೆದ ಮೇ 05 ರಿಂದ ಆರಂಭಗೊಂಡಿದ್ದು, ಕಾರ್ಯದರ್ಶಿಗಳು, ಏಕ ಸದಸ್ಯ ಆಯೋಗ, ಬೆಂಗಳೂರು ಅವರ ಆದೇಶದಂತೆ ಮನೆ ಮನೆ ಭೇಟಿ ನೀಡಿ ಸಮೀಕ್ಷೆ ನಡೆಸುವ ಕಾರ್ಯವನ್ನು ಮೇ29 ರವರೆಗೆ ಕೈಗೊಳ್ಳಲು ಮರು ವಿಸ್ತರಿಸಲಾಗಿದೆ. ಪರಿಷ್ಕøತ ವೇಳಾಪಟ್ಟಿಯಂತೆ ಮೊದಲನೆ ಹಂತದಲ್ಲಿ ಮನೆ ಮನೆ ಭೇಟಿ ನೀಡಿ ಕೈಗೊಳ್ಳುವ ಸಮೀಕ್ಷಾ ಕಾರ್ಯವು ಮೇ. 29 ರವರೆಗೆ ಜರುಗಲಿದೆ.  ಎರಡನೆ ಹಂತದಲ್ಲಿ, ಸಮೀಕ್ಷೆ ಬ್ಲಾಕ್‍ಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು, ಮನೆ-ಮನೆ ಭೇಟಿ ಅವಧಿಯಲ್ಲಿ…

Read More

ಚಿತ್ರದುರ್ಗ ಮೇ 27: ಬದುಕಿಗೆ ಕಣ್ಣುಗಳು ಬಹಳ ಅವಶ್ಯಕವಾಗಿದ್ದು, ಕಾಲಕಾಲಕ್ಕೆ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು. ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ನಗರಸಭೆ ಹಾಗೂ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಜೀವನದ ಎಲ್ಲ ಚಟುವಟಿಕೆಗಳಿಗೆ ಮೂಲ ಕಣ್ಣು. ಕಣ್ಣುಗಳು ನಮ್ಮ ಆತ್ಮದ ಕಿಟಕಿಗಳಿದ್ದಂತೆ, ಕಣ್ಣಿನ ಬಗ್ಗೆ ಕಾಳಜಿ, ರಕ್ಷಣೆ ವಹಿಸುವುದು ಅತ್ಯಂತ ಅವಶ್ಯಕವಾಗಿದ್ದು, ಉಚಿತ ಕಣ್ಣಿನ ತಪಾಸಣಾ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಕಣ್ಣಿನ ತಪಾಸಣೆ ಮಾಡಿಸಿಕೊಂಡು ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳಿ ಎಂದರು. ಹೊರ ಜಗತ್ತನ್ನು ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ ಅವರು, ವ್ಯಕ್ತಿಯ ಮರಣದ ನಂತರ ನೇತ್ರದಾನಕ್ಕೆ ಅವಕಾಶವಿದ್ದು, ಕಣ್ಣುಗಳನ್ನು ದಾನ ಮಾಡುವ…

Read More

ಬೆಂಗಳೂರು, ಮೇ 27: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್‌ ಧರಿಸಲು ಸೂಚಿಸಲಾಗಿದೆ. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಕೋವಿಡ್‌ ಮುನ್ನೆಚ್ಚರಿಕಾ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗೋಷ್ಠಿ ನಡೆಸಿದರು. ಕೋವಿಡ್ ಪ್ರಕರಣಗಳು ದಿನದಿಂದ ಹೆಚ್ಚಾಗುತ್ತಿದೆ. ಆದರೆ ಇದರ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ. ಗರ್ಭಿಣಿ ಹೆಣ್ಣು ಮಕ್ಕಳು ಮಾಸ್ಕ್ ಬಳಕೆ ಮಾಡಬೇಕು. ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದೆ. ಜನರು ಕೂಡ ನಮ್ಮೊಂದಿಗೆ ಕೈ ಜೋಡಿಸಬೇಕು ಎಂದು ಸಚಿವರು ತಿಳಿಸಿದರು. ಶಾಲೆಗಳು ಬೇಸಿಗೆ ರಜೆ ಬಳಿಕ ಪ್ರಾರಂಭವಾಗುತ್ತದೆ. ವಿದ್ಯಾರ್ಥಿಗಳಿಗೆ ಜ್ವರ, ಶೀತ, ಕೆಮ್ಮು ಇದ್ದರೆ ಶಾಲೆಗಳಿಗೆ ಕಳುಹಿಸಿಕೊಡಬಾರದು. ಒಂದು ವೇಳೆ ಶಾಲೆಯಲ್ಲಿ ಮಕ್ಕಳಿಗೆ ಶೀತ, ನೆಗಡಿ ಬಂದರೆ…

Read More