Author: Times of bayaluseeme

ಬೆಂಗಳೂರು, ಮೇ 27: ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು. ಯಾವುದೇ ಸಂಭಾವನೆ ಇಲ್ಲ: ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.

Read More

ನವದೆಹಲಿ, ಮೇ 25, 2025: ಪಿಎಂ ಇ-ಡ್ರೈವ್ ಯೋಜನೆಯಡಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆಗೆ 2000 ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡಿರುವ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಇಂದು ಸಂಜೆ ದೆಹಲಿಯಲ್ಲಿ ಭೇಟಿಯಾಗಿ ಧನ್ಯವಾದ ಸಲ್ಲಿಸಿದರು. ದೆಹಲಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ಅಧಿಕೃತ ನಿವಾಸದಲ್ಲಿ ನಡೆದ ಭೇಟಿಯಲ್ಲಿ ತೆಲಂಗಾಣ ಸಿಎಂ, ಉನ್ನತ ಅಧಿಕಾರಿಗಳು ಮತ್ತು ಸಂಸದರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ, ಹೈದರಾಬಾದ್‌ಗೆ ಇನ್ನಷ್ಟು ಎಲೆಕ್ಟ್ರಿಕ್ ಬಸ್‌ಗಳ ಹಂಚಿಕೆಗಾಗಿ ರೇವಂತ್ ರೆಡ್ಡಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕುಮಾರಸ್ವಾಮಿ, ಮುಂದಿನ ಹಂತದಲ್ಲಿ ಹೆಚ್ಚಿನ ಬಸ್‌ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಿದರು. ಅಲ್ಲದೆ, ತೆಲಂಗಾಣಕ್ಕೆ ಭೇಟಿ ನೀಡುವಂತೆ ಸಿಎಂ ರೇವಂತ್ ರೆಡ್ಡಿ, ಸಚಿವ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದರು. ಇದಕ್ಕೆ ಒಪ್ಪಿಗೆ ನೀಡಿದ ಸಚಿವರು, ಆದಷ್ಟು ಬೇಗ ತೆಲಂಗಾಣಕ್ಕೆ ಭೇಟಿ ನೀಡುವುದಾಗಿ ತಿಳಿಸಿದರು. ಈ ಭೇಟಿಯು ತೆಲಂಗಾಣದ ಸಾರಿಗೆ ವ್ಯವಸ್ಥೆಯನ್ನು…

Read More

ಬೆಂಗಳೂರಿನ ಫುಟ್ ಪಾತ್ ಅಂಗಡಿಗಳನ್ನು ತೆರವು, ವ್ಯಾಪಾರಿಗಳಿಗೆ ವಾಹನ ಸೌಲಭ್ಯ ಕಾನೂನು ಬಾಹಿರವಾಗಿ ಹಾಕಿರುವ ಆಪ್ಟಿಕಲ್ ಕೇಬಲ್ ಕತ್ತರಿಸಲು ಸೂಚನೆ ರಸ್ತೆ ಅಗಲೀಕರಣಕ್ಕೆ ಶಾಸಕರು ಶಿಫಾರಸ್ಸು ಮಾಡಿದರೆ ಟಿಡಿಆರ್ ನೀಡಲು ಸಿದ್ಧ ಮಳೆಯಿಂದ ಮನೆಯೊಳಗೆ ನೀರು ನುಗ್ಗಿರುವವರಿಗೆ 10 ಸಾವಿರ ಪರಿಹಾರ ಕೆಂಪೇಗೌಡ ಬಡಾವಣೆಯ ಬಿಡಿಎ ಜಾಗದಲ್ಲಿ ಸ್ಕೈ ಡೆಕ್ ನಿರ್ಮಾಣ ಬೆಂಗಳೂರು, ಮೇ 24: “ಸೆಪ್ಟೆಂಬರ್ 15ರ ಒಳಗಾಗಿ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. “ವಿರೋಧ ಪಕ್ಷದ ನಾಯಕರು ಸೇರಿದಂತೆ ಇನ್ನೂ ಮೂರ್ನಾಲ್ಕು ಶಾಸಕರ ಜತೆ ಚರ್ಚೆ ಮಾಡುತ್ತೇನೆ. ಎಲ್ಲರ ಸಲಹೆ ಪಡೆದ ಬಳಿಕ ಸಚಿವ ಸಂಪುಟದಲ್ಲಿ ಪ್ರಸ್ತಾಪ ಮಾಡಿ ಅಂತಿಮ ತೀರ್ಮಾನ ಮಾಡಲಾಗುವುದು” ಎಂದರು. ಗ್ರೇಟರ್ ಬೆಂಗಳೂರು ಸಭೆ ನಂತರ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. “ಮೇ 15ರಿಂದ ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಜಿಎ) ಆಗಿ ಪರಿವರ್ತನೆಗೊಳ್ಳಲು…

Read More

ಬೆಂಗಳೂರು, ಮೇ 24: “ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆ ಆರ್ ಎಸ್ ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. “ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ” ಎಂದು ಮಾಹಿತಿ ನೀಡಿದರು. “ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾಕಡೆ ಆಗುತ್ತದೆ.…

Read More

ಚಿತ್ರದುರ್ಗ ಮೇ 23: ಬಯಲುಸೀಮೆ ಹಾಗೂ ಕೋಟೆಯ ನಾಡು ಎನಿಸಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ಜಾರಿ ಮಾಡಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆ ಕತ್ತಲೆಯನ್ನು ದೂರ ಮಾಡಿದ್ದು, ಮನೆ ಮನೆಗೂ ಬೆಳಕು ಚೆಲ್ಲುವಂತೆ ಮಾಡಿದೆ. ರಾಜ್ಯ ಸರ್ಕಾರದ ಇಂಧನ ಇಲಾಖೆ ಮೂಲಕ ಜಾರಿ ಮಾಡಲಾದ ಗೃಹಜ್ಯೋತಿ ಯೋಜನೆ ಚಿತ್ರದುರ್ಗ ಜಿಲ್ಲೆಯಲ್ಲಿ ಕೆಲವೇ ದಿನಗಳಲ್ಲಿ ಅತ್ಯಂತ ಜನಪ್ರಿಯವಾಗಿದ್ದು, ಕೇವಲ ಬಡವರ ಮನೆ ಬೆಳಗುವುದು ಮಾತ್ರವಲ್ಲ, ವಿದ್ಯುತ್ ಬಿಲ್ ಭಾರ ಹೋರುತ್ತಿದ್ದ ಮಧ್ಯಮ ವರ್ಗದ ಕುಟುಂಬಗಳು ಕೂಡ ಇದರ ಫಲಾನುಭವ ಪಡೆದು ಬಿಲ್ ಕಟ್ಟುವ ಶ್ರಮ, ಕತ್ತಲೆ ಛಾಯೆಯನ್ನೂ ದೂರ ಮಾಡಿಕೊಂಡಿದ್ದಾರೆ. ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯು ಯಶಸ್ವಿಯಾಗಿ ಜಾರಿಗೊಂಡು ಎರಡು ವರ್ಷ ಪೂರ್ಣಗೊಳಿಸುವತ್ತ ಹೆಜ್ಜೆ ಹಾಕುತ್ತಿದೆ. ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಗೆ ಅಭೂತ ಪೂರ್ವ ಸ್ಪಂದನೆ ಸಿಕ್ಕಿದೆ. ಜಿಲ್ಲೆಯಾದ್ಯಂತ ಗೃಹಜ್ಯೋತಿ ಅತ್ಯಂತ ಜನಪ್ರಿಯ ಯೋಜನೆಯಾಗಿದ್ದು, ಬಹುತೇಕ ಫಲಾನುಭವಿಗಳು ನೋಂದಣಿ ಮಾಡಿಕೊಂಡು ಈ ಸೌಲಭ್ಯದ ಸದುಪಯೋಗ ಪಡೆದುಕೊಂಡಿದ್ದಾರೆ. ಡಾ.ಬಾಬಾ…

Read More

ಮೈಸೂರು(ಕೆ.ಆರ್.ನಗರ), ಮೇ 23 : ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ  ಎಂದು ಮರುನಾಮಕರಣ  ಮಾಡಲು ರಾಜ್ಯ ಸರ್ಕಾರಕ್ಕೆ  ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ  ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು  ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ ಎಂದು ಮರುಪ್ರಶ್ನಿಸಿದರು. ಇ.ಡಿ ಹಾಗೂ ಐ.ಟಿ ದಾಳಿಗಳು ರಾಜಕೀಯ ಪ್ರೇರಿತವಾಗಬಾರದು ಜಾರಿನಿರ್ದೇಶನಾಲಯ ತನ್ನ ಎಲ್ಲೆಯನ್ನು ಮೀರುತ್ತಿರುವ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಗಮನಿಸಿರುವ ಕುರಿತು ಪತ್ರರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇ.ಡಿ ಯವರು, ಐ.ಟಿ.ಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು. ಪ್ರಸ್ತುತ…

Read More

ವಿಜಯಪುರ (ಕೊಲ್ಹಾರ): ಮೇ 23: “ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿಡಿಕಾರಿದರು. ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಚಿನ್ನ ಕಳ್ಳಸಾಗಣೆಯ ರನ್ಯಾ ರಾವ್ ಪ್ರಕರಣದ ಮಾಹಿತಿಯನ್ನು ನೀವೇ ನೀಡಿದ್ದೀರ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಒಬ್ಬ ಮೆಂಟಲ್. ಅವರ ಮಾನಸಿಕ ಆರೋಗ್ಯ ಹದಗೆಟ್ಟಿರ ಬೇಕು. ತಲೆ ಕೆಟ್ಟು ಹೋಗಿದೆ” ಎಂದು ಜರಿದರು. ರಾಮನಗರದ ನಾಮಫಲಕಕ್ಕೆ ಚಿನ್ನದ ತಗಡು ಹೊಡೆಯಲಾಗುತ್ತದೆಯೇ ಎನ್ನುವ ಕುಮಾರಸ್ವಾಮಿ ಅವರ ಸರಣಿ ಟೀಕೆಗಳ ಕುರಿತು ಕೇಳಿದಾಗ, “ಕುಮಾರಸ್ವಾಮಿ ರಾಜಕೀಯ ಮಾಡಲು ರಾಮನಗರಕ್ಕೆ ಏಕೆ ಬಂದರು? ಹಾಸನದಲ್ಲಿಯೇ ಏಕೆ ರಾಜಕೀಯ ಮಾಡಲಿಲ್ಲ. ಮೊದಲು ಎಚ್.ಡಿ.ಕುಮಾರಸ್ವಾಮಿ ಎನ್ನುವ ಹೆಸರಿನಲ್ಲಿರುವ ಅವರ ಊರಿನ ಹೆಸರು ಹಾಗೂ ತಂದೆಯ ಹೆಸರನ್ನು ಏಕೆ ಇನ್ನು ಇಟ್ಟುಕೊಂಡಿದ್ದಾರೆ. ಮೊದಲು ಅದನ್ನು ಬದಲಾವಣೆ ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು. “ನಾವು ಬೆಂಗಳೂರು ಜಿಲ್ಲೆಯವರು. ಒಂದೊಂದು ಊರಿನ ಹೆಸರಿಗೆ ತನ್ನದೇ ಆದ ಇತಿಹಾಸವಿರುತ್ತದೆ. ಮದ್ರಾಸ್ ಅನ್ನು ಮತ್ತೆ…

Read More

ಬೆಂಗಳೂರು, ಮೇ 22: ಕಾಂಗ್ರೆಸ್‌ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್‌ ಖರ್ಗೆ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರಾಜಭವನದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ಕಾರಿನ ಮೇಲೆ ಕಾಂಗ್ರೆಸ್‌ ಗೂಂಡಾಗಳು ದಾಳಿ ಮಾಡಿದ್ದಾರೆ. ಸರ್ಕಾರ ಮಾಡಿರುವ ತಪ್ಪುಗಳ ವಿರುದ್ಧ ನಾರಾಯಣಸ್ವಾಮಿ ಮಾತಾಡಿದ್ದಾರೆ. ಆದರೆ ಅವರ ಮೇಲೆ ಹಲ್ಲೆ ಮಾಡಲು ಯತ್ನಿಸಲಾಗಿದೆ. ಇದೇ ರೀತಿ ಸಿ.ಟಿ.ರವಿ ಅವರ ಮೇಲೂ ದಾಳಿ ಮಾಡಲಾಗಿತ್ತು. ಪೊಲೀಸರು ನಾರಾಯಣಸ್ವಾಮಿ ಅವರಿಗೆ ರಕ್ಷಣೆ ನೀಡಿಲ್ಲ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಟ್ಟಿಲ್ಲ ಎಂದು ದೂರಿದರು. ನಾರಾಯಣಸ್ವಾಮಿ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಕಾರಿನ ಮೇಲೆ ಬಣ್ಣ, ಮೊಟ್ಟೆ ಹಾಕಲಾಗಿದೆ. ಕೊಲೆ ಬೆದರಿಕೆ ಹಾಕಲಾಗಿದೆ. ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದು ಪ್ರತಿಪಕ್ಷ ನಾಯಕರ ಕರ್ತವ್ಯ. ಅದನ್ನು ಅವರು ಸರಿಯಾಗಿಯೇ ಮಾಡಿದ್ದಾರೆ. ನಾಯಿ…

Read More

ಕಳೆದ ಹತ್ತು ವರ್ಷಗಳಲ್ಲಿ ದೇಶದ ಬಡವರಿಗೆ ಜನೌಷಧ ಕೇಂದ್ರಗಳ ಮೂಲಕ ಔಷಧ ಖರೀದಿಯಲ್ಲಿ ಸುಮಾರು 30 ಸಾವಿರ ಕೋಟಿ ರೂ. ಉಳಿತಾಯವಾಗಿದೆ. ಈ ಸಾಧನೆಯನ್ನು ಗಮನದಲ್ಲಿಟ್ಟು, ಕರ್ನಾಟಕದ ಕಾಂಗ್ರೆಸ್ ಸರಕಾರವು ಸರಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚುವ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಸಂಸದ ಗೋವಿಂದ ಎಂ. ಕಾರಜೋಳ ಒತ್ತಾಯಿಸಿದ್ದಾರೆ. ರಾಜ್ಯ ಸರಕಾರದ ಈ ನಿರ್ಧಾರವನ್ನು “ಬಡವರ ಬಗ್ಗೆ ಕಾಳಜಿಯಿಲ್ಲದ, ಅಸಂವೇದನಾಶೀಲ ಮತ್ತು ಮೂರ್ಖತನದ ಕ್ರಮ” ಎಂದು ಕಾರಜೋಳ ಖಂಡಿಸಿದ್ದಾರೆ. ದೇಶಾದ್ಯಂತ 16,290 ಜನೌಷಧ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕದಲ್ಲಿ 1,459 ಕೇಂದ್ರಗಳಿದ್ದು, ಇವುಗಳಲ್ಲಿ 400ಕ್ಕೂ ಹೆಚ್ಚು ಕೇಂದ್ರಗಳು ಸರಕಾರಿ ಆಸ್ಪತ್ರೆಗಳ ಆವರಣದಲ್ಲಿವೆ. ಈ ಕೇಂದ್ರಗಳ ಮೂಲಕ 2,047 ಬಗೆಯ ಔಷಧಗಳು ಮತ್ತು 300ಕ್ಕೂ ಹೆಚ್ಚು ಶಸ್ತ್ರಚಿಕಿತ್ಸಾ ಉಪಕರಣಗಳು ರಿಯಾಯಿತಿ ದರದಲ್ಲಿ ರೋಗಿಗಳಿಗೆ ಲಭ್ಯವಾಗುತ್ತಿವೆ. ರಾಜ್ಯದ ಬಡವರ ಮತ್ತು ದೀನದಲಿತರ ಬಗ್ಗೆ ಕಾಳಜಿಯಿದ್ದರೆ, ಸರಕಾರ ಈ ಆದೇಶವನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಕಾರಜೋಳ ಆಗ್ರಹಿಸಿದ್ದಾರೆ. ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧ…

Read More

ಚಿತ್ರದುರ್ಗ, ಮೇ.21: ಖಾಸಗಿ ಅನುದಾನ ರಹಿತ ಶಾಲೆಗಳು ಸರ್ಕಾರದ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಸರ್ಕಾರದ ನಿಯಮಾವಳಿ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖಾಸಗಿ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂದು ತಿಳಿಸಿದ ಅವರು, ಸರ್ಕಾರದ ನಿಯಮಗಳನ್ನು ಪಾಲನೆ ಮಾಡಬೇಕು. ಯಾವುದೇ ಕಾರಣಕ್ಕೂ ನಿಯಮಗಳ ಉಲ್ಲಂಘನೆ ಮಾಡಬಾರದು. ಒಂದು ವೇಳೆ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರದ ನಿಯಮಾವಳಿ ಉಲ್ಲಂಘನೆ ಕುರಿತು ದೂರು ಬಂದರೆ ತಕ್ಷಣವೇ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸರ್ಕಾರದ ನಿಯಮಾವಳಿ ಪಾಲನೆ ಕಡ್ಡಾಯ ಖಾಸಗಿ ಶೈಕ್ಷಣಿಕ ಸಂಸ್ಥೆಗಳು ಪ್ರವೇಶ ಶುಲ್ಕದ ಮಾಹಿತಿಯನ್ನು ಪ್ರಚುರ ಪಡಿಸದೇ ಇರುವುದು, ಒಂದೇ ಬಾರಿಗೆ ಡೋನೇಷನ್ ಶುಲ್ಕ ಕಟ್ಟುವಂತೆ ಬೇಡಿಕೆಯಿಡುವುದು, ಮೂಲಸೌಲಭ್ಯಗಳ ಕೊರತೆ, ನಾಮಕಾವಸ್ಥೆಗೆ ಶಿಕ್ಷಣ ಸಂಸ್ಥೆ ನಡೆಸುವುದು, ಉತ್ತಮ ಫಲಿತಾಂಶಕ್ಕೆ ಪಡೆಯಲು…

Read More