Author: Times of bayaluseeme

ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿ ಅನೇಕರು ಗಾಯಗೊಂಡ ಘಟನೆಯ ಕುರಿತು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ನೇತೃತ್ವದ ವರದಿಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮತ್ತು DNA ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್‌ ಕಂಪನಿಗಳಿಗೆ ಸಂಕಷ್ಟ ಎದುರಾಗಿದೆ.ಆರ್‌ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ಖಾಸಗಿ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಸಂಪುಟ ನಿರ್ಧರಿಸಿದೆ. ಜೊತೆಗೆ ಪೊಲೀಸರ ವಿರುದ್ಧ ಇಲಾಖಾ ತನಿಖೆ ನಡೆಸಲಾಗುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ. ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಅವರ ವರದಿಯನ್ನು ಅಂಗೀಕರಿಸಲಾಗಿದ್ದು ಅದರ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ ಎಂದು ಪಾಟೀಲ್ ಹೇಳಿದರು. ಕಾಲ್ತುಳಿತ ಮತ್ತು ನಿರ್ಲಕ್ಷ್ಯಕ್ಕೆ ಯಾರು ಕಾರಣರೆಂದು ನ್ಯಾಯಮೂರ್ತಿ ಡಿ’ಕುನ್ಹಾ ವರದಿಯಲ್ಲಿ ಸೂಚಿಸಲಾಗಿದೆ ಎಂದರು. ಇನ್ನು ದುರಂತ ನಡೆದ ಒಂದು ದಿನದ ನಂತರ, ಜೂನ್…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕಿ ಥೈಲ್ಯಾಂಡ್ ನಲ್ಲಿ ಜಾಲಿ ಮೂಡ್ ನಲ್ಲಿರುವ ನಟ ದರ್ಶನ್ ಗೆ ಈಗ ನಡುಕ ಶುರುವಾಗಿದೆ. ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಜಾಮೀನು ನೀಡಿದ್ದ ಹೈಕೋರ್ಟ್ ಅನ್ನು ತೀವ್ರವಾಗಿ ಟೀಕಿಸಿದ್ದು ಜಾಮೀನು ನೀಡುವಲ್ಲಿ ಹೈಕೋರ್ಟ್ ನ್ಯಾಯಾಧೀಶರು ಈ ರೀತಿಯಾದ ತಪ್ಪು ಮಾಡಬಹುದಾ ಎಂದು ಸುಪ್ರೀಂಕೋರ್ಟ್ ಕಟುವಾಗಿ ಪ್ರಶ್ನಿಸಿದೆ. ಹೀಗಾಗಿ ದರ್ಶನ್ ಜಾಮೀನು ರದ್ದಾಗುವ ಸಾಧ್ಯತೆ ಇದೆ. ಇದರ ಮಧ್ಯೆ ಸುಪ್ರೀಂ ಕೋರ್ಟ್ ವಿಚಾರಣೆ ಸಯದಲ್ಲಿ ಎತ್ತಿದ ಪ್ರಶ್ನೆಗಳನ್ನು ಉಲ್ಲೇಖಿಸಿ ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಭಾರತದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಬೆಳಕಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ ಎಂದು ರಮ್ಯಾ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಜಾಮೀನು ನೀಡುವಾಗ ಹೈಕೋರ್ಟ್ ತೆಗೆದುಕೊಂಡ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

Read More

ಮಂಗಳೂರು: ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂಬ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿದೆ.ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮತ್ತು ಅನಿವಾರ್ಯವಲ್ಲದ ಪ್ರಯಾಣವನ್ನು ತಡೆಯುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಜುಲೈ 25 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಬಿರು ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ

Read More

ನವದೆಹಲಿ: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಅಂತಿಮಗೊಳಿಸಲು ಒತ್ತಾಯ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು, ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಒಪ್ಪಿಗೆ ಸೇರಿದಂತೆ ಹಲವು ಬೇಡಿಕೆಗಳೊಂದಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ದೆಹಲಿಗೆ ತೆರಳಿದ್ದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್‌ ನಾಯ್ಡು ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ತ್ವರಿತವಾಗಿ ಅಂತಿಮಗೊಳಿಸಲು ಮತ್ತು ವಿಜಯಪುರ ವಿಮಾನ ನಿಲ್ದಾಣವನ್ನು ಕಾರ್ಯರೂಪಕ್ಕೆ ತರಲು ಶೀಘ್ರ ಅನುಮತಿ ನೀಡಲು ಒತ್ತಾಯಿಸಲಾಯಿತು. ಎರಡೂ ರಾಜ್ಯದ ದೀರ್ಘಕಾಲೀನ ಸಂಪರ್ಕ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಲು ನಿರ್ಣಾಯಕವಾಗಿದೆ ಎಂದು ಎಂಬಿ ಪಾಟೀಲ್ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದರು. ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತರರಾಷ್ಟ್ರೀಯ ಸ್ಥಾನಮಾನ ದರ್ಜೆಗೇರಿಸಬೇಕು. ಇದು ಉತ್ತರ ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ ಮತ್ತು ಗೋವಾ ಈ ಭಾಗಗಳಿಗೆ ವಿಮಾನ ಸಂಪರ್ಕ ಸುಧಾರಣೆಯ ಅಗತ್ಯಗಳನ್ನು ಪರಿಗಣಿಸುವಂತೆ ತಿಳಿಸಲಾಗಿದೆ. ಎರಡೂ ವಿಮಾನ ನಿಲ್ದಾಣಗಳಲ್ಲಿ…

Read More

ಬೆಂಗಳೂರು: ಧರ್ಮಸ್ಥಳಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಿಂದ ಇಬ್ಬರು ಅಧಿಕಾರಿಗಳು ಹಿಂದೆ ಸರಿದಿರುವುದಾಗಿ ತಿಳಿದುಬಂದಿದೆ.ಧರ್ಮಸ್ಥಳ ಗ್ರಾಮದ ಸುತ್ತಮುತ್ತ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ಸಂಬಂಧಿಸಿದಂತೆ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂ. ಎನ್. ಅನುಚೇತ್, ಸಿಎಆರ್ ಕೇಂದ್ರದ ಡಿಸಿಪಿ ಸೌಮ್ಯಲತಾ, ಆಂತರಿಕ ಭದ್ರತಾ ವಿಭಾಗದ ಎಸ್ ಪಿ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿದ್ದರು. ಸದ್ಯ ಸಿಎಆರ್‌ ಕೇಂದ್ರ ಸ್ಥಾನದ ಉಪ ಪೊಲೀಸ್‌ ಆಯುಕ್ತರಾದ ಸೌಮ್ಯಲತಾ ಅವರು ವಯಕ್ತಿಕ ಕಾರಣಗಳಿಂದ ಹಿಂದೆ ಸರಿಯಲು ನಿರ್ಧರಿಸಿ ಪತ್ರ ಬರೆದಿದ್ದಾರೆ ಎನ್ನಲಾಗುತ್ತಿದೆ. ತನಿಖೆಯ ರೂಪುರೇಷೆ ಕುರಿತು ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ನಡೆದಿದ್ದ ಸಭೆಗೂ ಅವರು ಗೈರಾಗಿದ್ದರು. ಅವರ ಮನವಿಯನ್ನು ಪುರಸ್ಕರಿಸುವಂತೆ ಪ್ರಣವ್ ಮೊಹಾಂತಿ, ತಂಡದಿಂದ ಸೌಮ್ಯಲತಾ ಅವರ ಹೆಸರನ್ನು ಕೈ ಬಿಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿರುವುದಾಗಿ ತಿಳಿದುಬಂದಿದೆ.ಧರ್ಮಸ್ಥಳ…

Read More

ವಯಸ್ಸಾದವರಲ್ಲಿ ಶ್ರವಣದೋಷವು ಸಾಮಾನ್ಯ ಸಮಸ್ಯೆಯಾಗಿರುತ್ತದೆ. ಆರಂಭದಲ್ಲಿ ಸೌಮ್ಯ ಗಾತ್ರದಿಂದ ಹಿಡಿದು ತೀವ್ರ – ಆಳವಾದ ಮಟ್ಟಗಳವರೆಗೆ ಶ್ರವಣದೋಷ ಸಮಸ್ಯೆ ಇರುತ್ತದೆ. ವಯಸ್ಸಾದವರು ಕಿವಿ ಕೇಳಿಸದಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ, ಅವರ ಕುಟುಂಬದವರು ಸಹ ಅಸಡ್ಡೆ ಮಾಡುತ್ತಾರೆ. ಮನುಷ್ಯನಿಗೆ ದೃಷ್ಟಿಹೀನತೆ ಸಮಸ್ಯೆ ಬಂದರೆ ಅದನ್ನು ಹೊಂದಿರುವ ವ್ಯಕ್ತಿ ಕಡೆಗೆ ತಕ್ಷಣದ ಗಮನ ನೀಡುತ್ತಾರೆ. ಆದರೆ ವಯಸ್ಸಾದವರಲ್ಲಿ ಶ್ರವಣ ನಷ್ಟವನ್ನು ತಡವಾಗಿ ಅಥವಾ ಎಂದಿಗೂ ಪರಿಹರಿಸುವುದಿಲ್ಲ. ವ್ಯಕ್ತಿಗೆ ಶ್ರವಣ ದೋಷ ಉಂಟಾದಾಗ ಸಾಮಾಜಿಕ ಕೌಶಲ್ಯ ಕೂಡ ಕಡಿಮೆಯಾಗುತ್ತದೆ. ಬೇರೆಯವರು ಅವರನ್ನು ಅಷ್ಟಾಗಿ ಮಾತನಾಡಿಸುವುದಿಲ್ಲ, ಹೀಗಾದಾಗ ಅವರು ಪ್ರತ್ಯೇಕವಾಗುತ್ತಾರೆ. ಶ್ರವಣದೋಷವುಳ್ಳ ಹಿರಿಯರೊಂದಿಗೆ ಸಂಭಾಷಣೆ ನಡೆಸುವಾಗ, ಸಂಭಾಷಣೆಯಲ್ಲಿ ಸ್ಪಷ್ಟತೆಯನ್ನು ಹೊಂದಲು ಸಾಧ್ಯವಾಗದಿದ್ದಾಗ ಅಥವಾ ವಿಭಿನ್ನವಾಗಿ ಉತ್ತರಿಸಲು ಸಾಧ್ಯವಾಗದಿದ್ದಾಗ ಅವರು ನಗುವುದನ್ನು ನಾವು ಅನೇಕ ಬಾರಿ ಗಮನಿಸುತ್ತೇವೆ. ದಿನನಿತ್ಯದ ಚಟುವಟಿಕೆಗಳಿಗೆ ಮಾತನಾಡುವ ಭಾಷೆ ಮತ್ತು ಸಕ್ರಿಯ ಸಂಭಾಷಣೆಗಳನ್ನು ಆಲಿಸುವ ಅಗತ್ಯವಿದೆ, ಇದು ಅವರನ್ನು ಮಾನಸಿಕವಾಗಿ ತೊಡಗಿಸಿಕೊಳ್ಳುತ್ತದೆ ಮತ್ತು ಉತ್ತಮ ಸ್ಮರಣೆಯನ್ನು ಹೊಂದಲು ಸಹಾಯ ಮಾಡುತ್ತದೆ.ಶ್ರವಣ ನಷ್ಟದ ಸ್ವರೂಪ ಮತ್ತು…

Read More

ಚಳ್ಳಕೆರೆ: ಬೆಂಗಳೂರಿನ ಕೋರುಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42ನೇ ಕರ್ನಾಟಕ ರಾಜ್ಯ ಟೆಕ್ವಾಂಡೋ ಚಾಂಪಿಯನ್ ಶಿಪ್‌ನಲ್ಲಿ ಚಳ್ಳಕೆರೆ ಟೆಕ್ವಾಂಡೋ ಸೆಂಟರ್ ನಿಂದ ಭಾಗವಹಿಸಿ ಪದಕ ಪಡೆದುಕೊಂಡಿದ್ದಾರೆ. ಚಳ್ಳಕೆರೆ ಟೆಕ್ವಾಂಡೋ ಸೆಂಟರ್ ವಿದ್ಯಾರ್ಥಿಗಳು ಸೀನಿಯರ್, ಕೆಡಟ್, ಜೂನಿಯರ್, ಸಬ್ ಜೂನಿಯ‌ರ್ ಮತ್ತು ಜಿ4 ವಿಭಾಗದಲ್ಲಿ ಭಾಗವಹಿಸಿ ವಿವಿಧ ಪದಕಗಳನ್ನು ತಮ್ಮದಾಗಿಸಿ ಕೊಂಡು ಚಳ್ಳಕೆರೆ ನಗರಕ್ಕೆ ಉತ್ತಮ ಕೀರ್ತಿ ತಂದಿದ್ದಾರೆ. ಅಧಿಕೃತ ಆಟಗಳಲ್ಲಿ ಪ್ರತಿಭ – ಕಂಚಿನ ಪದಕ,ವಿಷ್ಣು -ಕಂಚಿನ ಪದಕಜಿ4 ವಿಭಾಗದಲ್ಲಿ ಪಾರ್ಥ ಎಸ್ ನಾಯ್ಕ-ಚಿನ್ನದ ಪದಕಭಗತ್ ಚಂದು.ಟಿ- ಚಿನ್ನದ ಪದಕಹರೀಶ್ ಶೇಖರ್ – ಬೆಳ್ಳಿಯ ಪದಕ ಮಂಜುಳ-ಕಂಚಿನ ಪದಕ, ಸಾಕೇತ್ ರೆಡ್ಡಿ-ಕಂಚಿನ ಪದಕ, ಪ್ರಜ್ವಲ್-ಬೆಳ್ಳಿ ಮತ್ತು ಕಂಚಿನ ಪದಕ, ಗುರುಚೇತನ್-ಕಂಚಿನ ಪದಕ, ನಿಶಾಂತ್- ಕಂಚಿನ ಪದಕ, ಚಾರ್ವಿಕ-ಬೆಳ್ಳಿ ಪದಕ, ಚರಣ್ಯ- ಬೆಳ್ಳಿ ಮತ್ತು ಕಂಚಿನ ಪದಕ, ಅವೀಶ್-ಕಂಚಿನ ಪದಕ, ಪಡೆದುಕೊಂಡಿದ್ದಾರೆ.ವಿದ್ಯಾರ್ಥಿಗಳನ್ನು ತರಬೇತಿದಾರರಾದ ಎಸ್.ಸ್ವಾಮಿ, ಮಂಜುನಾಥ, ಬೋಸಯ್ಯ, ಸಮಂತ್ ಗೆ ಎಸ್.ಆರ್.ಎಸ್ ಪ್ರಾಂಶುಪಾಲರಾದ ವಿಜಯ್‌ರವರು ಅಭಿನಂದಿಸಿದರು.

Read More

ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ತರಲು ಗಣತಿ ಮಾಡಿಸಿದ್ದಾರೆ. ಈಗ ಹೊಸ ಗಣತಿ ಮಾಡಿಸುತ್ತಾರೆಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.ಸುದ್ದಿಗಾರರೊರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಸರ್ಕಾರ ಕಾಟಾಚಾರಕ್ಕೆ ಜಾತಿ ಒಳಮೀಸಲು ಸಮೀಕ್ಷೆ ಮಾಡಿದೆ. ಈ ಹಿಂದಿನ ಜಾತಿ ಗಣತಿ ಬಿಡುಗಡೆಗೆ ಹತ್ತು ವರ್ಷವಾಗಿದೆ. ಆದರೆ ಈಗ ಮಾಡಿದ ಒಳಮೀಸಲು ಸಮೀಕ್ಷೆ ಕೇವಲ 15 ದಿನಗಳಲ್ಲಿ ಮುಗಿದಿದೆ. ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಗೆ ಎಲ್ಲ ಕಡೆ ಮಾನ್ಯತೆ ಇದೆ. ಆದರೆ ರಾಜ್ಯ ಸರ್ಕಾರ ಮಾಡುವ ಸಮೀಕ್ಷೆಗೆ ಬೆಲೆ ಇಲ್ಲ. ಜಾತಿಗಳ ನಡುವೆ ಕಂದಕ ತಂದು ಬೇಳೆ ಬೇಯಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಈ ಹುನ್ನಾರ ಮಾಡಿದ್ದಾರೆ ಎಂದರು‌.ಕಾಂಗ್ರೆಸ್ ಸರ್ಕಾರ ಮರಳಿ ಜಾತಿ ಗಣತಿ ಮಾಡಲಿದೆ ಎಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ. ಇದರಿಂದಾಗಿ ಸರ್ಕಾರಕ್ಕೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ನಡೆಸುವ ಗಣತಿಗೆ ರಾಜ್ಯ ಸರ್ಕಾರ ಸಹಕಾರ ನೀಡಿದರೆ ಸಾಕು ಎಂದರು. ರಾಜ್ಯ…

Read More

ಚಿತ್ರದುರ್ಗದ ಕಾಂಗ್ರೆಸ್ ಮುಖಂಡ ಹಾಗೂ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ ಎಸ್ ಮಂಜುನಾಥ್ ಮನೆಯಲ್ಲಿ ಖದೀಮರು ತನ್ನ ಕೈಚಳಕ ತೋರಿಸಿದ್ದಾರೆ. ಮಂಜುನಾಥ್ ಕುಟುಂಬ ಸಮೇತ ತಿರುಪತಿಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ನಗರದ ಮುನ್ಸಿಪಲ್ ಕಾಲೋನಿಯಲ್ಲಿರುವ ಮನೆಯ ಸ್ಟೇರ್ ಕೇಸ್ ಹತ್ತಿ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ಇನ್ನು ಖದೀಮರು ಮನೆಯಲ್ಲಿಯೇ ಕಳ್ಳತನಕ್ಕೆ ಬಳಸಿದ್ದ ರಾಡ್, ಹೆಲ್ಮೆಟ್ ಬಿಟ್ಟು ಪರಾರಿಯಾಗಿದ್ದು, ಬೆಳಗ್ಗೆ ಮನೆಗೆಲಸದವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇನ್ನು ಘಟನಾ ಸ್ಥಳಕ್ಕೆ ಡಿವೈಎಸ್ಪಿ ದಿನಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಡಾವಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಹಾಗೂ ಎಲ್ಲಾ 17 ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಈ ಪೈಕಿ ದರ್ಶನ್ ಹಾಗೂ ಏಳು ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿತ್ತು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ಅರ್ಜಿ ಬಗ್ಗೆ ತೀರ್ಪು ನೀಡುವುದಾಗಿ ಕೋರ್ಟ್ ಹೇಳಿದೆ.ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧಿತರಾದ ದರ್ಶನ್ ಅವರು ಜೈಲಿನಲ್ಲಿ ಮಾಡಿಕೊಂಡ ಅವಾಂತರಗಳು ಒಂದೆರಡಲ್ಲ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಅವರು ಐಷಾರಾಮಿ ಜೀವನ ನಡೆಸುತ್ತಿದ್ದಾರೆ ಎಂದು ಸಾಬೀತು ಪಡಿಸುವ ಫೋಟೋಗಳು ಹೊರ ಬಂದವು. ಈ ಬೆನ್ನಲ್ಲೇ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಆ ಬಳಿಕ ದರ್ಶನ್ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತು. ಬೆನ್ನು ನೋವಿನ ಕಾರಣ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದರು. ಆ ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್ನಿಂದ ಸಂಪೂರ್ಣ ಜಾಮೀನು ದೊರೆತಿತ್ತು. ಇದನ್ನು…

Read More