Author: Times of bayaluseeme
ಚಿತ್ರದುರ್ಗ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ಎಸ್.ಜೆ. ಸೋಮಶೇಖರ್ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಆಕಾಶ್ ಎಸ್ ಅವರನ್ನು ಸರ್ಕಾರ ನಿಯೋಜಿಸಿದೆ. 2019ರ ಬ್ಯಾಚ್‌ನ ಡಾ.ಆಕಾಶ್ ಎಸ್ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ನೂತನ ಸಿಇಒ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸರ್ಕಾರದ ಅದೀನ ಕಾರ್ಯದರ್ಶಿ ಟಿ.ಮಂತೇಶ್ ಆದೇಶ ಹೊರಡಿಸಿದ್ದಾರೆ. ಇನ್ನು ಪ್ರಸ್ತುತ ಡಾ. ಆಕಾಶ್ ಎಸ್ ಕರ್ನಾಟಕದ ಕಲಬುರಗಿ ವಿಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು.
ಚಿತ್ರದುರ್ಗ : ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಗೋವಿಂದಪ್ಪ ಮಾಜಿ ಕಾರು ಚಾಲಕ ಯಶವಂತ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿ.ಜಿ ಗೋವಿಂದಪ್ಪ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಕಾಂಗ್ರೆಸ್ ಶಾಸಕರಾಗಿದ್ದು, ಕೊಲೆ ಪ್ರಕರಣದಲ್ಲಿ ಶಾಸಕರ ಮಾಜಿ ಕಾರು ಚಾಲಕ ಯಶವಂತನನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾರ್ಚ್ 17 ರಂದು ಜಾನಕಲ್ ಗ್ರಾಮದ ಪ್ರಸನ್ನ (45) ಎನ್ನುವ ವ್ಯಕ್ತಿ ನಾಪತ್ತೆಯಾಗಿದ್ದರು. ಮಾರ್ಚ್ 21ರಂದು ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲೆಯ ಲಿಂಗದಳ್ಳಿ ಬಳಿ ಪ್ರಸನ್ನ ಅವರ ಶವ ಪತ್ತೆಯಾಗಿತ್ತು. ಕೊಲೆ ಮಾಡಿ ಲಿಂಗದಳ್ಳಿ ಬಳಿಯ ಅರಣ್ಯದಲ್ಲಿ ಪ್ರಸನ್ನ ಶವ ಎಸದಿದ್ದರು. ಪ್ರಸನ್ನ ಪತ್ನಿ ಗಾಯತ್ರಿ ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಸನ್ನ ಪತ್ನಿ ಗಾಯತ್ರಿ, ಶಾಸಕ ಗೋವಿಂದಪ್ಪ ಅವರ ಮಾಜಿ ಕಾರು ಚಾಲಕ ಯಶವಂತ್, ಲೋಹಿತ್ ಹಾಗೂ ವೀರೇಶನ್ನು ಹೊಸದುರ್ಗ ಪೊಲೀಸರು…
ಚಿತ್ರದುರ್ಗ: ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ನಾ ಚಿತ್ರದುರ್ಗ ಜಿಲ್ಲಾ ಸಮಿತಿಗೆ ಶೀಘ್ರದಲ್ಲಿ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯಲಿದ್ದು, ನನ್ನ ಮೇಲೆ ನಂಬಿಕೆ ವಿಶ್ವಾಸವಿಟ್ಟು ಹುದ್ದೆಗೆ ನೇಮಕ ಮಾಡುವಂತೆ ಜಿಲ್ಲಾ ಬಡಗಿ ನೌಕರರ ಸಂಘದ ಅಧ್ಯಕ್ಷ ಎ.ಜಾಕೀರ್ ಹುಸೇನ್ ಮನವಿ ಮಾಡಿದರು. ಚಿತ್ರದುರ್ಗ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜಿಲ್ಲಾ ಅಧ್ಯಕ್ಷರ ಹುದ್ದೆಗೆ ಹಲವು ಮಂದಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ನಾನು ಮಾಡಿದಂಥ ಅಭಿವೃದ್ಧಿ ಕೆಲಸಗಳು ಯಾರು ಮಾಡಿಲ್ಲ. 3 ದಶಕಗಳಿಂದ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ವಿಶೇಷವಾಗಿ ಕೂಲಿಕಾರ್ಮಿಕರು, ವಿವಿಧ ವರ್ಗಗಳ ಕಾರ್ಮಿಕರ ಸಂಘಟನೆಗಳು, ಜನಪರ ಸಂಘಟನೆಗಳಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಜೊತೆಗೆ ಅಜಾದ್ ನಗರದ ಅಂಜುಮಾನ್ ಮಸೀದಿ ಆಡಳಿತ ಮಂಡಳಿಗೆ ನಿರ್ದೇಶನಕಾಗಿ ನೇಮಕ ಆಗಿದ್ದು, ಜಿಲ್ಲೆಯಲ್ಲಿ ಮುಸ್ಲಿಂ ಸಮಾಜದ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಈ ಒಂದು ಬಾರಿ ಅವಕಾಶ ಕೊಟ್ಟರೆ ಸಂಸ್ಥೆಯ ಘನತೆಯನ್ನು ತರುವಂತಹ ಕೆಲಸ ಮಾಡುತ್ತೇನೆ ಜೊತೆಗೆ ವಕ್ಫ್…
ಬೆಳಗಾವಿ: ಹುಕ್ಕೇರಿ ಕ್ಷೇತ್ರಕ್ಕೆ ಹೊರಗಿನವರು ಬರುವ ತಾಕತ್ತಿಲ್ಲ ಎಂಬ ಮಾಜಿ ಸಂಸದ ರಮೇಶ್ ಕತ್ತಿಯವರ ಹೇಳಿಕೆಗೆ ಸರಿಯಾದ ಸಮಯದಲ್ಲಿ ಸೂಕ್ತ ಉತ್ತರ ನೀಡುವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ನಿಡಸೋಸಿಯ ದುರದುಂಡೇಶ್ವರ ಮಠದಲ್ಲಿ ಪೀಠಾಧಿಪತಿ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿಯವರೊಂದಿಗೆ ನಡೆದ ಸಭೆಯ ನಂತರ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ರಮೇಶ್ ಕತ್ತಿಯವರ ಹೇಳಿಕೆಗೆ ಸರಿಯಾದ ಸಮಯದಲ್ಲಿ ಪ್ರತಿಕ್ರಿಯಿಸುತ್ತೇನೆಂದು ಹೇಳಿದರು. ಹುಕ್ಕೇರಿ ವಿದ್ಯುತ್ ಸಹಕಾರ ಸಂಘಕ್ಕೆ ಚುನಾವಣೆ ನಡೆಸುವ ಬಗ್ಗೆ ತಕ್ಷಣದ ಯೋಜನೆ ಇಲ್ಲ. ನಾವು ನಾಯಕರೊಂದಿಗೆ ಚರ್ಚೆ ನಡೆಸಿ ಜನರಿಗೆ ಏನು ಪ್ರಯೋಜನವಾಗುತ್ತದೆಯೋ ಆ ನಿರ್ಧಾರವನ್ನು ಕೈಗೊಳ್ಳುತ್ತೇವೆಂದು ತಿಳಿಸಿದರು. ಸತೀಶ್ ಜಾರಕಿಹೊಳಿಯವರು ಸೊಸೈಟಿಯಲ್ಲಿನ ನೌಕರರನ್ನು ಖಾಯಂಗೊಳಿಸಲು ನೇಮಕಾತಿ ಆದೇಶಗಳನ್ನು ನೀಡಿದ್ದಾರೆ ಎಂದು ಸೊಸೈಟಿಯ ಮಾಜಿ ಅಧ್ಯಕ್ಷ ಕಲಗೌಡ ಪಾಟೀಲ್ ಮಾಡಿರುವ ಆರೋಪ ಕುರಿತು ಪ್ರತಿಕ್ರಿಯಿಸಿ, ನಾವು ನೇಮಕಾತಿ ಪತ್ರಗಳನ್ನು ವಿತರಿಸುವ ಅಗತ್ಯವಿಲ್ಲ. ಹಾಗೆ ಮಾಡುವ ಅಭ್ಯಾಸವೂ ನಮಗಿಲ್ಲ ಎಂದರು. ಇದೇ ವೇಳೆ ಹುಕ್ಕೇರಿ ಕ್ಷೇತ್ರದಲ್ಲಿ ರ್ಯಾಲಿಗಳನ್ನು ನಡೆಸುವ…
ಚಿತ್ರದುರ್ಗ: ನಗರದ ಬಸವೇಶ್ವರ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಯುವಕನೋರ್ವ ಸಾವನ್ನಪ್ಪಿರುವುದಾಗಿ ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಚಿತ್ರದುರ್ಗ ನಗರದ ಬಾಪೂಜಿ ನಗರದ ನಿವಾಸಿ ವಿನಯ್ ಕುಮಾರ್ ಮನೆಯಲ್ಲಿ ಮಂಚದ ಮೇಲಿಂದ ಬಿದ್ದಿದ್ದ, ಆತನನ್ನು ಕೂಡಲೇ ಸ್ಥಳೀಯರು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಗ ಆಸ್ಪತ್ರೆಯ ವೈದ್ಯರು ಸರಿಯಾದ ಚಿಕಿತ್ಸೆ ನೀಡದೇ ಬೇಜವಾಬ್ದಾರಿ ತೋರಿದ್ದರಿಂದ ವಿನಯ್ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದು, ಆತನ ಸಾವಿಗೆ ವೈದ್ಯರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿನಯ್ ಸಾವಿಗೆ ನ್ಯಾಯ ಒದಗಿಸಿ ಕೊಡಬೇಕು, ಆಸ್ಪತ್ರೆಯ ವೈದ್ಯರ ಮೇಲೆ ಕ್ರಮ ಜರುಗಿಸುವಂತೆ ಆಸ್ಪತ್ರೆ ಮುಂಭಾಗ ಸ್ಥಳೀಯರು ಕುಟುಂಬಸ್ಥರು ಕೆಲಕಾಲ ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರ ಮಧ್ಯೆ ಪ್ರವೇಶಿಸಿ ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಿ ಘಟನೆಯನ್ನು ತಿಳಿಗೊಳಿಸಿದರು.
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ CNG ಗುಂಡಿಗಳು ತೆರದುಕೊಂಡು ರಸ್ತೆಗಳು ಯಮ ಸ್ವರೂಪಿ ರಸ್ತೆಗಳಾಗಿ ಮಾರ್ಪಟ್ಟಿವೆ. ಇನ್ನೂ ಇದಕ್ಕೆ ಸಾಕ್ಷಿ ಎಂಬಂತೆ ನಗರದ ಹಲವು ಕಡೆ ಮನೆ ಮನೆಗೆ CNG ಗ್ಯಾಸ್ ಒದಗಿಸುವ ಕಾಮಗಾರಿ ನಿಧಾನ ಗತಿಯಲ್ಲಿ ಸಾಗಿದ್ದು ಅಪಘಾತಗಳಿಗೆ ಇದು ಆಹ್ವಾನ ಕೊಡುತ್ತಿದೆ. ನಿನ್ನೆ ಸಂಜೆ ವೇಳೆ ಸ್ಟೇಡಿಯಂ ರಸ್ತೆಯ ಸ್ಟೇಡಿಯಂ ಮುಂಬಾಗದ ಪೈಪ್ ಲೈನ್ ಕಾಮಗಾರಿ ಹಂತದ ಗುಂಡಿಯಲ್ಲಿ ಬಿದ್ದ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಸ್ಟೇಡಿಯಂ ಮುಂಬಾಗ ದೊಡ್ಡದಾದ ಗುಂಡಿಯನ್ನ ಅಗೆದು ಮನೆ ಮನೆಗೆ ಗ್ಯಾಸ್ ಒದಗಿಸುವ ಕಾಮಗಾರಿ ನಡೆಸುತ್ತಿದ್ದು ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಇದರಿಂದಾಗಿ ಇಲ್ಲಿ ಓಡಾಡುವ ಸಾರ್ವಜನಿಕರಿಗೆ ಶಾಲಾ ಮಕ್ಕಳಿಗೆ ವೃದ್ದರಿಗೆ ಸಂಚಕಾರ ತಂದೊಡ್ಡಿದೆ. ಇನ್ನೂ ವೇಗವಾಗಿ ಬಂದ ಬೈಕ್ ಸವಾರರು ನಾಯಿಯೊಂದನ್ನ ತಪ್ಪಿಸಲು ಹೋಗಿ ಮಳೆ ನೀರಿನಿಂದ ತುಂಬಿರುವ ಈ ಕಾಮಗಾರಿ ಹಂತದ ಗ್ಯಾಸ್ ಗುಂಡಿಯಲ್ಲಿ ಬಿದ್ದಿದ್ದು ಅದೃಷ್ಟವಶಾತ್ ಸಣ್ಣ ಪ್ರಮಾಣದ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದು ಸ್ಥಳೀಯರು ಬೈಕ್ ಸವಾರರನ್ನ ರಕ್ಷಣೆ ಮಾಡಿದ್ದಾರೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೇ ಚಿತ್ರದುರ್ಗ ಆಸ್ಪತ್ರೆಯಲ್ಲಿ ಅಜ್ಜಯ್ಯ (45) ಎಂಬವರು ಇದೀಗ ಸಾವನ್ನಪ್ಪಿದ್ದಾರೆ. ಮಗಳ ಕುರಿತು ತನ್ನ ದೂರಿಗೆ ಸ್ಪಂದಿಸದ ಹೊಳಲ್ಕೆರೆ ಪೊಲೀಸರ ನಿರ್ಲಕ್ಷ್ಯಕ್ಕೆ ಬೇಸತ್ತು ಅಜ್ಜಯ್ಯ ಆತ್ಮಹತ್ಯೆಗೆ ಯತ್ನಿಸಿದ್ದರು. ಪುತ್ರಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ಅಜ್ಜಯ್ಯ ಠಾಣೆಗೆ ದೂರು ನೀಡಲು ತೆರಳಿದ್ದಾರೆ. ಒಂದು ಬಾರಿ ಪುತ್ರಿಯನ್ನು ಭೇಟಿ ಮಾಡಲು ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ ಪೊಲೀಸರು ದೂರು ತೆಗೆದುಕೊಳ್ಳದೆ ಅವರನ್ನು ಅಲೆದಾಡಿಸಿದ್ದಾರೆ. ಮನನೊಂದು ಅಜ್ಜಯ್ಯ ಪೊಲೀಸ್ ಠಾಣೆಯ ಬಳಿಯೇ ವಿಷ ಸೇವಿಸಿದ್ದರು. ಅವರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಜಿಲ್ಲಾ ಆಸ್ಪತ್ರೆಯಲ್ಲಿ ಅಜ್ಜಯ್ಯ ಸಾವನ್ನಪ್ಪಿದ್ದಾರೆ. ಹೊಳಲ್ಕೆರೆ ಪೊಲೀಸರ ವಿರುದ್ಧ ಅಜ್ಜಯ್ಯ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.
ಚಿತ್ರದುರ್ಗ: ರೈತರಿಗೆ ಯೂರಿಯ ಗೊಬ್ಬರ ಸಿಗುತ್ತಿಲ್ಲ, ಇದರಿಂದ ನಾವು ಹೇಗೆ ಬಿತ್ತನೆ ಮಾಡಬೇಕು ಎಂದು ರೈತರು ಆಕ್ರೋಶಗೊಂಡು ಚಿತ್ರದುರ್ಗದ ಕೃಷಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಮಳೆ ಬಂದು ರೈತರು ಭೂಮಿಯನ್ನ ಹಸನು ಮಾಡಿಕೊಂಡು ಗೊಬ್ಬರಕ್ಕಾಗಿ ಹೆಣಗಾಡಿದ್ದು ಗೊಬ್ಬರ ಸಿಗದೆ ರೈತರು ಹೈರಾಣಾಗಿದ್ದಾರೆ. ಇದರಿಂದಾಗಿ ರೈತರು ಇಂದು ಬೆಳಗ್ಗೆ ಚಿತ್ರದುರ್ಗದ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಗೊಬ್ಬರ ಅಭಾವದ ವಿರುದ್ಧ ರೈತರು ತಮ್ಮ ಆಕ್ರೋಷವನ್ನ ಹೊರ ಹಾಕಿದ್ದು ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಖಾಸಗಿಯಾಗಿ ಹೆಚ್ಚುವರಿ ದರಕ್ಕೆ ಗೊಬ್ಬರ ಮಾರಾಟ ಮಾಡುತ್ತಿದ್ದು ಗೋಡೋನ್ ನಲ್ಲಿ ಗೊಬ್ಬರ ದಾಸ್ತಾನು ಇದ್ದರು ಇಲ್ಲ ಎಂದು ಹೇಳುತ್ತಿದ್ದಾಗಿ ರೈತರು ಕೃಷಿ ಇಲಾಖೆ ಅಧಿಕಾರಿಗಳ ಬಳಿ ಹೇಳಿಕೊಂಡಿದ್ದಾರೆ. ಇನ್ನೂ ಈ ವೇಳೆ ಪ್ರತಿಕ್ರಿಯೆ ನೀಡಿದ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಅವರು ಮಾತನಾಡಿದ್ದು ಜಿಲ್ಲೆಯಲ್ಲಿ ಮಳೆ ಪ್ರಾರಂಭವಾಗಿದ್ದು ಪೂರ್ವ ಮುಂಗಾರು ನಲ್ಲಿ ಉತ್ತಮ ಮಳೆಯಾಗಿದೆ. 15…
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರಕ್ಕೆ ಮುಂದೂಡಿದೆ. ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಇಂದು ವಾದ ಮಂಡಿಸಬೇಕಿತ್ತು. ಆದರೆ ಅವರು ಗೈರಾದ ಕಾರಣ ನಟನ ಪರ ವಕೀಲ ಸಿದ್ಧಾರ್ಥ್ ದಾವೆ ಹಾಜರಾಗಿ ಕೇಸಿನ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲು ಸಮಯ ಬೇಕೆಂದು ಕೇಳಿದ್ದಕ್ಕೆ ಗುರುವಾರಕ್ಕೆ ವಿಚಾರಣೆ ಮುಂದೂಡಲಾಯಿತು. ಕಳೆದ ಗುರುವಾರ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್ ತೀರ್ಪಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಹೀಗಾಗಿ ದರ್ಶನ್ ಗೆ ಜೈಲಾ, ಬೇಲಾ ಎಂಬುದು ಗುರುವಾರ ಸ್ಪಷ್ಟವಾಗಲಿದೆ.
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿರುವ ಸಚಿವರು, ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳನ್ನು ಸಾಕು ಪ್ರಾಣಿಗಳು ತಿಂದು ಹಾಕುತ್ತಿದ್ದು, ಹೊಸ ಗಿಡಗಳು ಬೆಳೆಯದೇ ಅರಣ್ಯ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ.ಅಪಾರ ಸಂಖ್ಯೆಯಲ್ಲಿ ಸಾಕುಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಅಲ್ಲದೇ ನಾಡಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ. ಇದು ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳವಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲೂ…
Subscribe to Updates
Get the latest creative news from FooBar about art, design and business.