Author: Times of bayaluseeme
ಕೂದಲು ಉದ್ದವಾಗಿ ಬೆಳೆಯಲು, ನಿಯಮಿತವಾಗಿ ಎಣ್ಣೆ ಹಚ್ಚುವುದು, ಪೌಷ್ಟಿಕ ಆಹಾರ ಸೇವಿಸುವುದು, ಒತ್ತಡ ಕಡಿಮೆ ಮಾಡುವುದು, ಮತ್ತು ಕೂದಲಿನ ಆರೈಕೆ ಕ್ರಮಗಳನ್ನು ಅನುಸರಿಸುವುದು ಮುಖ್ಯ.ಕೂದಲು ಉದ್ದವಾಗಿ ಬೆಳೆಯಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಿ: ಆಹಾರ ಮತ್ತು ಪೋಷಣೆ: ಪೋಷಕಾಂಶ ಭರಿತ ಆಹಾರಪ್ರೋಟೀನ್, ವಿಟಮಿನ್ ಗಳು (ಬಿ-ಕಾಂಪ್ಲೆಕ್ಸ್, ವಿಟಮಿನ್ ಡಿ, ವಿಟಮಿನ್ ಇ), ಖನಿಜಾಂಶಗಳು ಮತ್ತು ಅಮೈನೋ ಆಮ್ಲಗಳನ್ನು ಒಳಗೊಂಡಿರುವ ಆಹಾರವನ್ನು ಸೇವಿಸಿ. ಮೊಟ್ಟೆಗಳು: ಮೊಟ್ಟೆಗಳಲ್ಲಿ ಪ್ರೋಟೀನ್ ಮತ್ತು ಬಯೋಟಿನ್ ಹೇರಳವಾಗಿದ್ದು, ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಹಣ್ಣುಗಳು ಮತ್ತು ತರಕಾರಿಗಳು: ಹಸಿರು ಎಲೆಗಳ ತರಕಾರಿಗಳು, ಹಣ್ಣುಗಳು ಮತ್ತು ಬೀಜಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ. ನೀರು ಕುಡಿಯುವುದು: ದೇಹವನ್ನು ಹೈಡ್ರೀಕರಿಸುವುದು ಕೂದಲಿನ ಆರೋಗ್ಯಕ್ಕೆ ಮುಖ್ಯ, ಪ್ರತಿದಿನ ಸಾಕಷ್ಟು ನೀರು ಕುಡಿಯಿರಿ. ಕೂದಲಿನ ಆರೈಕೆ,ಎಣ್ಣೆಯ ಮಸಾಜ್: ನಿಯಮಿತವಾಗಿ ಎಣ್ಣೆಯಿಂದ ನೆತ್ತಿಗೆ ಮಸಾಜ್ ಮಾಡಿ. ತೆಂಗಿನೆಣ್ಣೆ, ಬಾದಾಮಿ ಎಣ್ಣೆ, ಅಥವಾ ಆಲಿವ್ ಎಣ್ಣೆಯನ್ನು ಬಳಸಬಹುದು. ಕೂದಲನ್ನು ಟ್ರಿಮ್ ಮಾಡುವುದು: ಒಡೆದ ತುದಿಯನ್ನು ಕತ್ತರಿಸುವುದರಿಂದ ಕೂದಲು ದಪ್ಪವಾಗಿ…
ಬೆಂಗಳೂರು (ಕರ್ನಾಟಕ ವಾರ್ತೆ) ಜುಲೈ 22: ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ ,ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತುಗಳ ನಿಯಂತ್ರಣಕ್ಕೆ ಗುರಿ ನಿಗದಿಪಡಿಸಿ,ರಾಜ್ಯವನ್ನು ಮಾದಕ ಮುಕ್ತ ರಾಜ್ಯವನ್ನಾಗಿಸಲು ಗುರಿ ಹೊಂದಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚಿಸಿದರು.ಇತ್ತೀಚಿಗೆ ವಿಧಾನಸೌಧದ ಸಭಾಂಗಣದಲ್ಲಿ ನಡೆದ 6 ನೇ ರಾಜ್ಯ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆ ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು,ಡ್ರಗ್ಸ್ ತಡೆಗೆ ಸಂಬಂಧಿಸಿದ ಮಾಹಿತಿ ಕನ್ನಡದಲ್ಲಿಯೂ ಲಭ್ಯವಾಗುವಂತೆ ವೆಬ್‌ಸೈಟ್ ನವೀಕರಿಸಬೇಕು.ಬೆಳಗಾವಿ ಜಿಲ್ಲೆಯಲ್ಲಿ ಅನುಸರಿಸುತ್ತಿರುವ ಕ್ರಮವನ್ನು ಮಾದರಿಯಾಗಿಸಿಕೊಂಡು ಇತರೆ ಜಿಲ್ಲೆಗಳು ಅನುಸರಿಸಲು ಸೂಚನೆ ನೀಡಿದರು. ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ತಡೆಯಲು ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು, ಕಸ್ಟಮ್ಸ್ ಅಧಿಕಾರಿಗಳನ್ನು ಸಮಿತಿಗೆ ಆಹ್ವಾನಿಸಲು ನಿರ್ದೇಶನ ನೀಡಿದರು. ನೋಂದಾಯಿತವಲ್ಲದ ಔಷಧ ಕಂಪನಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು.ಎಲ್ಲ ಔಷಧ ಅಂಗಡಿಗಳ ಮುಂದೆ “ವೈದ್ಯರ ಅನುಮತಿಯಿಲ್ಲದೆ ಮಾರಾಟ ನಿಷೇಧ ” ಎಂಬ ಫಲಕ…
ಚಿತ್ರದುರ್ಗ: ಕ್ಷೇತ್ರದಲ್ಲಿ ಯಾವುದೇ ಅನಾಹುತ ಆದರೆ ಮೊದಲು ನಾನು ಇರುತ್ತೇನೆ ಹಾಗೂ ನನ್ನ ಟೀಮನ ಸದಸ್ಯರು ಜೊತೆಗಿರುತ್ತಾರೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದರು.ತಾಲೂಕಿನ ಕಕ್ಕೇರು ಹೊಸಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಚಿರತೆ ದಾಳಿಗೆ ಒಳಗಾದ ಯುವಕ ಸಂದೀಪ ಅವರ ಮನೆಗೆ ಭೇಟಿ ಮಾಡಿ ಆರೋಗ್ಯವನ್ನು ವಿಚಾರಿಸಿ ಕುಟುಂಬಸ್ಥರಿಗೆ ಆರ್ಥಿಕ ಸಹಾಯ ಮಾಡಿದ್ದಾರೆ.ಅನೇಹಾಳ್ ಗ್ರಾಮಗಳ ಸುತ್ತಮುತ್ತ ಸಾಕಷ್ಟು ಕಾಡು ಇರುವುದರಿಂದ ರೈತರ ಎಚ್ಚರಿಕೆಯಿಂದ ಇರಬೇಕಿದೆ, ಈಗಾಗಲೇ ಸಾಕಷ್ಟು ಚಿರತೆಗಳು ಓಡಾಡುತ್ತಿವೆ ಎಂಬುವುದರ ಬಗ್ಗೆ ವರದಿಗಳಾಗಿವೆ ಜಮೀನು, ತೋಟಗಳಿಗೆ ಹೋಗುವಂತಹ ರೈತಾಪಿ ಬಾಂಧವರು ಜಾಗೃತಯಿಂದ ಓಡಾಡಬೇಕಿದೆ ರಾತ್ರಿ ವೇಳೆ ಯಾವುದೇ ಕಾರಣಕ್ಕೂ ಹೊಲ ಮತ್ತು ತೋಟಗಳಿಗೆ ಹೋಗಬಾರದೆಂದು ತಿಳಿಸಿದರು. ಕಕ್ಕೇರು, ಅನ್ನೇಹಾಳ್, ಮಹದೇವನಕಟ್ಟೆ, ಗ್ರಾಮಗಳಲ್ಲಿ ಈಗಾಗಲೇ ಚಿರತೆಗಳ ಓಡಾಟ ಹೆಚ್ಚಾಗಿದೆ ಇದಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದೇನೆ, ಚಿರತೆಗಳು ಓಡಾಟ ಕಂಡಲ್ಲಿ ಬೋನ್ ಗಳನ್ನು ಇಡಬೇಕೆಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದೇನೆ ಎಂದು ತಿಳಿಸಿದರು.ಕಕ್ಕೇರು ಹೊಸಹಟ್ಟಿ ಗ್ರಾಮದ ಹೊರವಲಯದಲ್ಲಿ…
ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ21: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೈಸ್ ವ್ಯಾಪ್ತಿಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ ಮತ್ತು ಕಿತ್ತೂರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಐದನೇ ಸುತ್ತಿನ ಸೀಟುಗಳನ್ನು ಸೋಮವಾರ ಹಂಚಿಕೆ ಮಾಡಲಾಯಿತು.ಕ್ರೈಸ್ ವಸತಿ ಶಾಲೆಗಳ ಆಡಳಿತಾಧಿಕಾರಿ ಹಾಗೂ ಚಿತ್ರದುರ್ಗ ಉಪವಿಭಾಗದ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಅವರು, ವಿದ್ಯಾರ್ಥಿಗಳಿಗೆ ದಾಖಲಾತಿ ಆದೇಶದೊಂದಿಗೆ ಗುಲಾಬಿ ಹೂವು ನೀಡಿ ಶುಭ ಹಾರೈಸಿದರು. ಸರ್ಕಾರವು ಎಲ್ಲ ಸೌಲಭ್ಯಗಳನ್ನು ಉಚಿತವಾಗಿ ನೀಡುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿರುವ ಎಲ್ಲಾ ವಸತಿ ಶಾಲೆಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು 6ನೇ ತರಗತಿಯಿಂದ 10ನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದು, ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಸಮನ್ವಯಾಧಿಕಾರಿ ಆರ್.ರಮೇಶ್, ತಾಲ್ಲೂಕು ಸಹಾಯಕ ನಿರ್ದೇಶಕರಾದ ಚನ್ನಬಸಪ್ಪ, ಮಂಜಣ್ಣ, ದೇವಲ ನಾಯಕ್, ಪ್ರಾಂಶುಪಾಲರಾದ ನಾಗರಾಜ್, ಮಹೇಶ್, ಅಂಗಡಿ ಪ್ರಕಾಶ್, ಮಂಜುನಾಥ್ ರೆಡ್ಡಿ ಸೇರಿದಂತೆ ಇತರರು ಇದ್ದರು.
ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ಸುಪ್ರೀಂನಲ್ಲಿ ನಡೆಯಲಿದ್ದು, ಬರಲಿದೆ. ಹೀಗಾಗಿ, ದರ್ಶನ್‌ಗೆ ಟೆನ್ಸನ್ ಶುರುವಾಗಿದೆ.2024ರ ಜೂ.8ರಂದು ನಡೆದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಬಂಧನವಾಗಿ 6 ತಿಂಗಳ ಬಳಿಕ, 2024ರ ಡಿ.13 ರಂದು ಹೈಕೋರ್ಟ್ ಜಾಮೀನು ನೀಡಿತ್ತು. ದರ್ಶನ್, ಪವಿತ್ರಾ ಸೇರಿ 7 ಮಂದಿಗೆ, ವಿಚಾರಣಾಧೀನ ನ್ಯಾಯಾಲಯ ಇತರರಿಗೆ ಜಾಮೀನು ಮಂಜೂರು ಮಾಡಿತ್ತು. 7 ಮಂದಿಗೆ ಜಾಮೀನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂಕೋರ್ಟ್‌ಗೆಮೇಲ್ಮನವಿ ಸಲ್ಲಿಸಿದ್ದರು.ಕಳೆದ ಗುರುವಾರ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ನ್ಯಾ. ಜೆ.ಬಿ.ಪಾರ್ದಿವಾಲಾ ನೇತೃತ್ವದ ವಿಭಾಗೀಯ ಪೀಠ, ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತ್ತು. ಪ್ರಕರಣದಲ್ಲಿ ಹೈಕೋರ್ಟ್ ತನ್ನ ವಿವೇಚ ನೆಯನ್ನು ಸರಿಯಾಗಿ ಬಳಸಿಲ್ಲ ಎಂದು ಅಭಿಪ್ರಾಯಪಟ್ಟು,…
ಬೆಂಗಳೂರು: ರಿಷಬ್ ಶೆಟ್ಟಿ ನಾಯಕನಾಗಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ ಅಧ್ಯಾಯ 1’ ಶೂಟಿಂಗ್ ಮುಕ್ತಾಯಗೊಂಡಿದ್ದು, ಅಕ್ಟೋಬರ್ 2ರಂದು ವಿಶ್ವಾದ್ಯಂತ ಚಿತ್ರ ಬಿಡುಗಡೆಗೊಳ್ಳಲಿದೆ. ಚಿತ್ರದ ಮೇಕಿಂಗ್ ವೀಡಿಯೋ ಬಿಡುಗಡೆಯಾಗಿದ್ದು, 2.06 ನಿಮಿಷಗಳ ವೀಡಿಯೋಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. 20 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ಈ ಮೂಲಕ ಸಿನಿಮಾ ಚಿತ್ರೀಕರಣ ಮುಗಿದಿರುವುದಾಗಿ ಚಿತ್ರತಂಡ ಅಧಿ ಕೃತವಾಗಿ ತಿಳಿಸಿದೆ.ಬಹುಭಾಷೆಗಳಲ್ಲಿ ಬಿಡುಗಡೆಯಾಗಿರುವ ಈ ವಿಡಿಯೋದಲ್ಲಿ ಕಾಂತಾರ ಜಗತ್ತಿನ ಅಗಾಧತೆ ಕಟ್ಟಿಕೊಡಲಾಗಿದೆ. ಕಾಂತಾರ ಚಿತ್ರದ ಸೆಟ್‌ಗಳ ವೈಭವವನ್ನು, ಸಾವಿರಾರು ಮಂದಿಗಳ ಶ್ರಮವನ್ನು, ಅಪರೂಪದ ಚಿತ್ರೀಕರಣ ತಾಣಗಳ ಸಣ್ಣ ಪರಿಚಯವನ್ನು ಈ ವಿಡಿಯೋದಲ್ಲಿ ನೀಡಲಾಗಿದೆ. ಹಿನ್ನೆಲೆ ಧ್ವನಿಯಲ್ಲಿ ಈ ಸಿನಿಮಾ ಮೇಕಿಂಗ್ ಬಗ್ಗೆ ವಿವರಿಸಿರುವ ರಿಷಬ್ ಶೆಟ್ಟಿ, ‘ನನ್ನ ನೆಲದ ಕಥೆಯನ್ನು ಇಡೀ ಪ್ರಪಂಚಕ್ಕೆ ಹೇಳಬೇಕು ಅಂತ ನನ್ನದೊಂದು ಕನಸು, ನಮ್ಮ ಊರು, ನಮ್ಮ ಜನ, ನಮ್ಮ ನಂಬಿಕೆಗಳು. ನಾನು ಆ ಕನಸಿನ ಬೆನ್ನು ಹತ್ತುವುದಕ್ಕೆ ಶುರು ಮಾಡಿದಾಗ ಸಾವಿರಾರು ಜನ ನನ್ನ ಬೆನ್ನ ಹಿಂದೆ ನಿಂತರು. 3…
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಕರ್ ಸೋಮವಾರ ರಾತ್ರಿ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ವೈದ್ಯಕೀಯ ಕಾರಣ ನೀಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.ಸಂವಿಧಾನದ 67(a) ವಿಧಿಯ ಪ್ರಕಾರ ʻಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆʼ ಎಂದು ಜಗದೀಪ್ ಧಂಕರ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ದೊರೆತ ಅಚಲವಾದ ಬೆಂಬಲ ಮತ್ತು ಹಿತವಾದ ಅದ್ಬುತ ಕಾರ್ಯ ಸಂಬಂಧಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿಯವರ ಸಹಕಾರ ಮತ್ತು ಬೆಂಬಲ ಅಮೂಲ್ಯವಾಗಿದ್ದು, ಅಧಿಕಾರಾವಧಿಯಲ್ಲಿ ಸಾಕಷ್ಟು ಕಲಿತಿರುವುದಾಗಿ ಅವರು ತಿಳಿಸಿದ್ದಾರೆ.ಸಂಸತ್ತಿನ ಎಲ್ಲಾ ಸದಸ್ಯರಿಂದ ದೊರೆತ ಪ್ರೀತಿ, ವಿಶ್ವಾಸ ಮತ್ತು ಪ್ರೀತಿಯನ್ನು ಎಂದಿಗೂ ಮರೆಯಲ್ಲ. ನಮ್ಮ ಮಹಾನ್ ಪ್ರಜಾಪ್ರಭುತ್ವದಲ್ಲಿ ಉಪ ರಾಷ್ಟ್ರಪತಿಯಾಗಿ ಅಪಾರ ಅನುಭವ ಗಳಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.ಭಾರತದ ಪ್ರಗತಿ ಮತ್ತು ಭವಿಷ್ಯದ ಬಗ್ಗೆ ಅವರಿಗೆ…
ಬೆಂಗಳೂರು: ಧರ್ಮಸ್ಥಳದಲ್ಲಿ ರಹಸ್ಯ ಸಮಾಧಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ವಿರುದ್ಧ ಮಾನಹಾನಿಕರ ವಿಷಯವನ್ನು ಪ್ರಕಟಿಸದಂತೆ ಮಾಧ್ಯಮಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳ ಮೇಲೆ ಬೆಂಗಳೂರು ಕೋರ್ಟ್ ನಿರ್ಬಂಧ ಹೇರಿದೆ. ಶ್ರೀ ಮಂಜುನಾಥಸ್ವಾಮಿ ದೇವಾಲಯದ ಕಾರ್ಯದರ್ಶಿ ಸಲ್ಲಿಸಿದ ಮಾನಹಾನಿ ಮೊಕದ್ದಮೆ ಅರ್ಜಿ ಸಂಬಂಧ ಈ ಆದೇಶ ಹೊರಡಿಸಲಾಗಿದೆ. ಶ್ರೀ ಮಂಜುನಾಥಸ್ವಾಮಿ ದೇವಾಲಯದ ಮಾಜಿ ಸ್ವಚ್ಛತ ಕೆಲಸಗಾರನೊಬ್ಬ ದೇವಾಲಯದ ಮೇಲ್ವಿಚಾರಕರು ಹಲವಾರು ಶವಗಳನ್ನು ಸಮಾಧಿ ಮಾಡಲು ಒತ್ತಾಯಿಸಿದ್ದಾರೆ ಎಂಬ ಆರೋಪಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿಗಳು ಬಂದ ನಂತರ ಈ ಆದೇಶ ಹೊರಬಿದ್ದಿದೆ. ಆದಾಗ್ಯೂ, ಸ್ವಚ್ಛತ ಕೆಲಸಗಾರ ಹರ್ಷೇಂದ್ರ ಕುಮಾರ್ ಅಥವಾ ಅವರ ಕುಟುಂಬದ ಹೆಸರನ್ನು ಎಲ್ಲೂ ಹೇಳಿಲ್ಲ.ಒಂದು ಸಂಸ್ಥೆ ಮತ್ತು ದೇವಾಲಯದ ವಿರುದ್ಧ ಆರೋಪ ಬಂದರೆ ಅದು ವಿವಿಧ ಕಾಲೇಜುಗಳು ಮತ್ತು ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಜನರ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ಒಂದೇ ಒಂದು ಸುಳ್ಳು…
ಬಾಲಿವುಡ್ ನಟ ಸೋನು ಸೂದ್ ಅವರು ಹಾವೊಂದನ್ನು ಬರಿಗೈಯಲ್ಲಿಯೇ ರಕ್ಷಣೆ ಮಾಡಿದ್ದಾರೆ. ಸೋನು ಸೂದ್ ತಮ್ಮ ಮನೆಯ ಬಳಿ ಬಂದ ಹಾವನ್ನು ಎಚ್ಚರಿಕೆಯಿಂದ ಚೀಲದೊಳಗೆ ಇರಿಸಿದ್ದಾರೆ.ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದು, ಅದಕ್ಕೆ ಹರ ಹರ ಮಹಾದೇವ್ ಎಂಬ ಶೀರ್ಷಿಕೆ ನೀಡಿದ್ದಾರೆ. ಈ ವಿಡಿಯೋ ಅಂತರ್ಜಾಲದಲ್ಲಿ ಸಖತ್ ವೈರಲ್ ಆಗಿದೆ. ಇದಕ್ಕಿದ್ದಂತೆ ತಮ್ಮ ಅಪಾರ್ಟ್ ಮೆಂಟ್ ಆವರಣದೊಳಗೆ ಪ್ರವೇಶಿಸಿದ ವಿಷ ರಹಿತ ಕೇರೆ ಹಾವನ್ನು ಸೋನು ಸೂದ್ ಬರಿಗೈಯಲ್ಲಿಯೇ ರಕ್ಷಿಸಿದ್ದು, ತದನಂತರ ಅದನ್ನು ನಂತರ ತಮ್ಮ ಬಳಿ ಕೆಲಸ ಮಾಡುತ್ತಿರುವ ಯುವಕರಿಗೆ ಹಾವನ್ನು ಹತ್ತಿರದ ಅರಣ್ಯ ಪ್ರದೇಶದಲ್ಲಿ ಬಿಟ್ಟು ಬರಲು ಸೂಚಿಸಿದ್ದಾರೆ.ಹಾವುಗಳ ಬಗ್ಗೆ ಜಾಗರೂಕರಾಗಿರಲು ಅವರು ಸಲಹೆ ನೀಡಿದ್ದಾರೆ. ಮನೆಗಳು ಹಾವುಗಳು ಬಂದಾಗ ತಜ್ಞರನ್ನು ಕರೆಸಿ ಅವುಗಳನ್ನು ಹಿಡಿಯಬೇಕು ಎಂದು ಹೇಳಿದ್ದಾರೆ
ಉಸಿರಾಟದ ತೊಂದರೆಗೆ ಅನೇಕ ಕಾರಣಗಳಿರಬಹುದು, ಮತ್ತು ಪರಿಹಾರವು ಕಾರಣವನ್ನು ಅವಲಂಬಿಸಿರುತ್ತದೆ. ಕೆಲವು ಸಾಮಾನ್ಯ ಮನೆಮದ್ದುಗಳು ಮತ್ತು ಜೀವನಶೈಲಿಯ ಬದಲಾವಣೆಗಳನ್ನು ಪ್ರಯತ್ನಿಸಬಹುದು, ಆದರೆ ತೀವ್ರತರವಾದ ಸಂದರ್ಭಗಳಲ್ಲಿ ವೈದ್ಯಕೀಯ ಚಿಕಿತ್ಸೆ ಅಗತ್ಯವಾಗಬಹುದು.ಮನೆಮದ್ದುಗಳು ಮತ್ತು ಜೀವನಶೈಲಿ ಬದಲಾವಣೆಗಳು: ಆರಾಮದಾಯಕ ಸ್ಥಾನ: ಕುರ್ಚಿಯ ಮೇಲೆ ಮುಂದೆ ಬಾಗಿ ಕುಳಿತುಕೊಳ್ಳುವುದು ಅಥವಾ ಗೋಡೆಯ ವಿರುದ್ಧ ನಿಂತು ವಿಶ್ರಾಂತಿ ಪಡೆಯುವುದು ಉಸಿರಾಟವನ್ನು ಸುಲಭಗೊಳಿಸುತ್ತದೆ. ದೀರ್ಘ ಉಸಿರಾಟ: ಆಳವಾಗಿ ಉಸಿರಾಡುವುದು ಮತ್ತು ನಿಧಾನವಾಗಿ ಉಸಿರು ಬಿಡುವುದು ವಾಯುಮಾರ್ಗಗಳನ್ನು ತೆರೆಯಲು ಮತ್ತು ಉಸಿರಾಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಪ್ಯಾನಿಕ್ ಅಟ್ಯಾಕ್ ಅಥವಾ ಆತಂಕ: ಪ್ಯಾನಿಕ್ ಅಟ್ಯಾಕ್‌ನಿಂದ ಉಸಿರಾಟದ ತೊಂದರೆ ಉಂಟಾಗಿದ್ದರೆ, ನಿಧಾನವಾಗಿ ಉಸಿರಾಡುವುದು ಅಥವಾ ಕಾಗದದ ಚೀಲದ ಮೂಲಕ ಉಸಿರಾಡುವುದು ಸಹಾಯ ಮಾಡುತ್ತದೆ. ಧೂಮಪಾನ ತ್ಯಜಿಸಿ: ಧೂಮಪಾನ ಮತ್ತು ತಂಬಾಕು ಉತ್ಪನ್ನಗಳನ್ನು ತ್ಯಜಿಸುವುದು ಉಸಿರಾಟದ ಆರೋಗ್ಯವನ್ನು ಸುಧಾರಿಸಲು ಮುಖ್ಯವಾಗಿದೆ. ಜೀವನಶೈಲಿ ಬದಲಾವಣೆಗಳು: ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದು, ನಿಯಮಿತ ವ್ಯಾಯಾಮ ಮಾಡುವುದು, ಮತ್ತು ಸಾಕಷ್ಟು ನಿದ್ರೆ ಮಾಡುವುದು ಉಸಿರಾಟದ ಆರೋಗ್ಯಕ್ಕೆ ಸಹಕಾರಿ. ಆಹಾರ ಮತ್ತು…
Subscribe to Updates
Get the latest creative news from FooBar about art, design and business.