Author: ಮೃತ್ಯುಂಜಯಾಚಾರ್ ಬಿ
ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.
ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ ಐಪಿಎಲ್ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಈ ಹೊತ್ತಲ್ಲೇ ಬಿಸಿಸಿಐ ಪ್ರಮುಖ ನಿಯಮಗಳನ್ನು ಬದಲಾಯಿಸಿದೆ. ಇದು ಪಂದ್ಯದ ದಿನಗಳಲ್ಲಿ ತಂಡಗಳಿಗೆ ಅಭ್ಯಾಸ ಸೆಷನ್, ಫಿಟ್‌ನೆಸ್ ಪರೀಕ್ಷೆ ನಿಷಿದ್ಧ. ಪಿಚ್ ರಕ್ಷಣೆ ಇದರ ಮುಖ್ಯ ಉದ್ದೇಶವಾಗಿದೆ. ಮಾರ್ಚ್ 28ರಿಂದ ಐಪಿಎಲ್ ಆರಂಭ ಆಗುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಆರ್ಸಿಬಿ ತಂಡ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಈ ಪಂದ್ಯ ನಡೆಯಲಿದೆ. ಹೊಸ ನಿಯಮ ಈ ಬಾರಿಯ ಸೀಸನ್ ಮೇಲೆ ಸಾಕಷ್ಟು ಪ್ರಭಾವ ಬೀರುವ ಸಾಧ್ಯತೆ ಇದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ, ಬಿಸಿಸಿಐ ಅಭ್ಯಾಸ ಪ್ರದೇಶದಲ್ಲಿ ಎರಡು ನೆಟ್‌ಗಳನ್ನು ನಿರ್ಮಾಣ ಮಾಡಲಿದೆ. ಎರಡು ತಂಡಗಳು ಒಂದೇ ಸ್ಥಳದಲ್ಲಿ ಏಕಕಾಲದಲ್ಲಿ ಅಭ್ಯಾಸ ಮಾಡುತ್ತಿದ್ದರೆ, ಎರಡೂ ತಂಡಕ್ಕೆ ತಲಾ ಎರಡು ಪಿಚ್ಗಳನ್ನು ನೀಡಲಾಗುತ್ತದೆ. ತಂಡಗಳು ತಮ್ಮ ಎದುರಾಳಿ ತಂಡಗಳಿಗೆ ಮೀಸಲಿಟ್ಟ ಜಾಗವನ್ನು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅವು ಖಾಲಿ ಇದ್ದರೂ ಸಹ ಅದನ್ನು ಬಳಸುವಂತಿಲ್ಲ. ನ್ಯಾಯ ಕಾಪಾಡಿಕೊಳ್ಳುವುದು ಇದರ…
ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ ಚಿತ್ರದುರ್ಗ: ನಗರದ ಮದಕರಿನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷ ಸಂದೀಪ್ ಅವರ ತಾಯಿ ಪುಟ್ಟಮ್ಮ (67) ಮಂಗಳವಾರ ನಿಧನರಾದರು. ಚಳ್ಳಕೆರೆ ನಗರದ ಎಸ್.ಆರ್. ರೋಡ್ ನಿವಾಸಿಯಾಗಿದ್ದ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಚಿತ್ರದುರ್ಗಕ್ಕೆ ಕರೆತರುತ್ತಿರುವ ವೇಳೆ ದಾರಿ ಮಧ್ಯೆ ಅಸುನೀಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಮೃತರು ಪತಿ ಬ್ಯಾಂಕ್ ಸೂರನಾಯಕ, ಪುತ್ರರಾದ ಸಂದೀಪ್, ಸಾಗರ್, ಸುಹಾಸ್ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಜರ್ಮನಿಯಲ್ಲಿ ಇರುವ ಪುತ್ರ ಸುಹಾಸ್ ಆಗಮನದ ಬಳಿಕ, ಬುಧವಾರ ನೇರಲಗುಂಟೆ ಗ್ರಾಮದ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ: ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅನರ್ಹಗೊಳಿಸಲು ಕೇರಳ ಕಾಂಗ್ರೆಸ್ ಆಗ್ರಹ ತಿರುವನಂತಪುರಂ: ಬಿಜೆಪಿ ಅಭ್ಯರ್ಥಿ Rajeev Chandrasekhar ಅವರು ತಮ್ಮ 200 ಕೋಟಿ ರೂ. ಮೌಲ್ಯದ ಬಂಗಲೆ ವಿವರವನ್ನು ಚುನಾವಣಾ ಅಫಿಡವಿಟ್‌ನಲ್ಲಿ ನೀಡಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸುವಂತೆ ಕೇರಳ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಪಕ್ಷದ ವಕ್ತಾರರು, ಅಭ್ಯರ್ಥಿಗಳು ತಮ್ಮ ಆಸ್ತಿ ವಿವರಗಳನ್ನು ಸಂಪೂರ್ಣವಾಗಿ ಮತ್ತು ನಿಖರವಾಗಿ ಬಹಿರಂಗಪಡಿಸುವುದು ಕಡ್ಡಾಯ ಎಂದು ಹೇಳಿ, ಈ ಪ್ರಕರಣದಲ್ಲಿ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಿದ್ದಾರೆ. ಇದು ಮತದಾರರನ್ನು ತಪ್ಪು ದಾರಿಗೆಳೆಯುವ ಕ್ರಮವಾಗಿದ್ದು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕರು, ಈ ಆರೋಪಗಳು ರಾಜಕೀಯ ಪ್ರೇರಿತವಾಗಿದ್ದು, ಎಲ್ಲಾ ಆಸ್ತಿ ವಿವರಗಳನ್ನು ನಿಯಮಾನುಸಾರ ಸಲ್ಲಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ವಿಷಯ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ…
ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ ಬೆಂಗಳೂರು: ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ನೀಡಿದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ)ಯ ಜನನ ಮತ್ತು ಮರಣ ನೋಂದಣಾಧಿಕಾರಿಗೆ ಹೈಕೋರ್ಟ್ ಛಾಟಿ ಬೀಸಿದೆ. ಬೆಂಗಳೂರಿನ ಚಿಕ್ಕಪೇಟೆಯ ವಲಯ ಕಚೇರಿಯ ಜನನ ಮತ್ತು ಮರಣ ನೋಂದಣಾಧಿಕಾರಿ ನೀಡಿರುವ ತಾತ್ಕಾಲಿಕ ಮರಣ ಪ್ರಮಾಣಪತ್ರವನ್ನು ರದ್ದುಪಡಿಸಲು ನಿರ್ದೇಶಿಸಬೇಕೆಂದು ಕೋರಿ ಡಿ.ಮೆಹಬೂಬ್ ಬಾಷಾ ಎಂಬವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ಪೀಠ, ಮುಂದಿನ ವಿಚಾರಣೆಯ ವೇಳೆಗೆ ಮರಣ ಪ್ರಮಾಣಪತ್ರವನ್ನು ರದ್ದುಪಡಿಸಿರುವ ಹಿಂಬರಹ ಸಲ್ಲಿಸಬೇಕು ತಾಕೀತು ಮಾಡಿತು. ಬದುಕಿರುವ ವ್ಯಕ್ತಿಯ ಹೆಸರಿನಲ್ಲಿ ನೀಡಿರುವ ಮರಣ ಪ್ರಮಾಣಪತ್ರವನ್ನು ಹಿಂಪಡೆಯದೇ ಇರುವುದರಿಂದ ಅವರು ಅನಿವಾರ್ಯವಾಗಿ ನ್ಯಾಯಾಲಯದ ಕದ ತಟ್ಟುವಂತಾಗಿದೆ. ಜನನ ಮತ್ತು ಮರಣಗಳ ರಿಜಿಸ್ಟ್ರಾರ್ ಅವರು ಬುಧವಾರದೊಳಗೆ ಮರಣ ಪ್ರಮಾಣಪತ್ರ ರದ್ದುಪಡಿಸಿರುವ ಹಿಂಬರಹವನ್ನು ಸಲ್ಲಿಸಬೇಕು. ಇಲ್ಲವಾದಲ್ಲಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ವಿದ್ಯಾರ್ಥಿಗಳ ಕೈಗೆ ಮೊಬೈಲ್; ನಿಷೇಧವೋ..ನಿರ್ಬಂಧವೋ ? ಬೆಂಗಳೂರು: 16 ವರ್ಷದೊಳಗಿನ ಎಲ್ಲಾ ಶಾಲಾ-ಕಾಲೇಜುಗಳ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸಬೇಕೋ ಅಥವಾ ನಿರ್ಬಂಧಿಸಬೇಕೋ ಎಂಬುದರ ಕುರಿತು ಪೋಷಕರು ಸೇರಿದಂತೆ ಎಲ್ಲರೊಂದಿಗೆ ಚರ್ಚಿಸಿ ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಮಂಡಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಕ್ಕಳಿಗೆ ಮೊಬೈಲ್ ಕೊಡದಿದ್ದರೆ ಆತ್ಮಹತ್ಯೆ ಹಾದಿ ತುಳಿಯುತ್ತಿದ್ದಾರೆ. ಮೊಬೈಲ್ ಚಟವು ರೋಗವಾಗಿ ಪರಿವರ್ತನೆಯಾಗುತ್ತಿದೆ. ಸರ್ಕಾರವು ಇದಕ್ಕೆ ನಿಯಂತ್ರಣ ಹೇರಬೇಕು ಎಂದರು. ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕವು 16 ವರ್ಷದ ಎಲ್ಲಾ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿ ಮೊಬೈಲ್ ಬಳಕೆ ನಿಯಂತ್ರಣ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಮಾಹಿತಿ ತಂತ್ರಜ್ಞಾನ ಇಲಾಖೆಯು ಸಮಿತಿ ರಚಿಸಲಾಗಿದ್ದು, ಅವರಿಂದ ನೆರವು ಪಡೆಯಲಾಗುತ್ತಿದೆ. ಸಂಪೂರ್ಣವಾಗಿ ಮೊಬೈಲ್ ಬಳಕೆ ನಿಷೇಧಿಸಬೇಕೋ ಅಥವಾ ನಿರ್ಬಂಧಿಸಬೇಕೋ ಎಂಬುದರ ಬಗ್ಗೆ ಎಲ್ಲರೊಂದಿಗೆ ಕೂಲಂಕಷವಾಗಿ ಚರ್ಚಿಸಿ ಮುಂದಿನ ಅಧಿವೇಶನದ…
ಭದ್ರಾದಲ್ಲಿ ಬ್ಲ್ಯಾಕ್ ಪ್ಯಾಂಥರ್; ಜತೆಯಾದ ಚುಕ್ಕಿ ಚಿರತೆ ಚಿಕ್ಕಮಗಳೂರು: ಇಲ್ಲಿನ ಭದ್ರಾ ಅಭಯಾರಣ್ಯದಲ್ಲಿ ಎರಡು ದಶಕಗಳ ಬಳಿಕ ಬ್ಲ್ಯಾಕ್ ಪ್ಯಾಂಥರ್ ಕಾಣಿಸಿಕೊಳ್ಳುತ್ತಿದ್ದು, ಈ ಅಪರೂಪದ ಪ್ರಾಣಿಯನ್ನು ನೋಡಲು ಪ್ರವಾಸಿಗರು ಇಲ್ಲಿಗೆ ದಾಂಗುಡಿ ಇಡುತ್ತಿದ್ದಾರೆ. ಕಪ್ಪು ಚಿರತೆಗೆ ಜೊತೆಯಾಗಿರುವ ಚುಕ್ಕಿ ಚಿರತೆ ಕೂಡ ಪ್ರಾಣಿ ಪ್ರಿಯರ ಗಮನ ಸೆಳೆಯುತ್ತಿದೆ. ಕರ್ನಾಟಕದ ಪಶ್ಚಿಮ ಘಟ್ಟದ ಹೃದಯ ಭಾಗದಲ್ಲಿರುವ ಅಭಯಾರಣ್ಯವು ಈ ಹಿಂದೆ ಹುಲಿ ಸಫಾರಿಗೆ ಪ್ರಸಿದ್ದಿ ಪಡೆದಿತ್ತು. ಆದರೆ, ಈಗ ಕಪ್ಪು ಚಿರತೆ – ಚುಕ್ಕಿ ಚಿರತೆ ನಿರಂತರವಾಗಿ ಕಳೆದೊಂದು ವಾರದಿಂದ ಗೋಚರಿಸುತ್ತಿರುವುದರಿಂದ ಸಹಜವಾಗಿಯೇ ಸಫಾರಿ ಪ್ರಿಯರ ಸಂಖ್ಯೆ ದುಪ್ಪಟ್ಟಾಗುತ್ತಿದೆ. ಸಾಮಾನ್ಯವಾಗಿ ಕಪ್ಪು ಚಿರತೆಗಳು ಒಂಟಿಯಾಗಿಯೇ ಜೀವನ ನಡೆಸುವುದು ಹೆಚ್ಚು. ಆದರೆ, ಈ ಕಪ್ಪು ಚಿರತೆ ತನ್ನ ಕುಟುಂಬದೊಂದಿಗೆ ಸಿಗುತ್ತಿರುವುದು ಅಪರೂಪವಾಗಿದೆ. ತಾಯಿ ಚಿರತೆ ಮತ್ತು ಎರಡು ಮರಿಗಳು ಒಟ್ಟಿಗೇ ಕಾಣಿಸುತ್ತಿವೆ. ಈ ಭಾಗದಲ್ಲಿ ಒಟ್ಟು ನಾಲ್ಕು ಚಿರತೆಗಳಿದ್ದು, ನಾಲ್ಕೂ ಒಟ್ಟೊಟ್ಟಿಗೆ ಇರುತ್ತವೆ. ಈ ಬ್ಲ್ಯಾಕ್ ಪ್ಯಾಂಥರ್ ಹುಟ್ಟಿ ಒಂದು ವರ್ಷವಾಗಿದೆ. ಇದರ ಜೊತೆ…
ಪಾನಿಪೂರಿಗೂ ‘ಗ್ಯಾಸ್’ ಟ್ರಬಲ್; ವ್ಯಾಪಾರ ಬಂದ್ ಚಿತ್ರದುರ್ಗ: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ದೊಡ್ಡ ಉದ್ಯಮಗಳು ಸೇರಿದಂತೆ ಬೀದಿಬದಿಯ ವ್ಯಾಪಾರಿಗಳಿಗೂ ಸಮಸ್ಯೆ ಎದುರಾಗಿದೆ. ಅದರಂತೆ ಪಾನಿಪೂರಿ ವ್ಯಾಪಾರಕ್ಕೂ ಗ್ಯಾಸ್ ಸಿಲಿಂಡರ್ ಬಿಸಿ ತಟ್ಟಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಾನಿಪೂರಿ ವ್ಯಾಪಾರಕ್ಕೂ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಟ್ರಬಲ್ ಶುರುವಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳು ಸಿಗದೇ ನಾಲ್ಕೈದು ದಿನಗಳಿಂದ ಪಾನಿಪೂರಿ ವ್ಯಾಪಾರಸ್ಥರು ತಮ್ಮ ಗಾಡಿಗಳನ್ನು ಬಂದ್ ಮಾಡಿದ್ದಾರೆ. ಖಾಲಿ ಗ್ಯಾಸ್ ಸಿಲಿಂಡರ್‌ಗಳನ್ನು ಹಿಡಿದು ಎಜೆನ್ಸಿಗಳಿಗೆ ಹೋದರೂ ಗ್ಯಾಸ್ ಸಿಗುತ್ತಿಲ್ಲ. ಇನ್ನೂ ಕಾಳಸಂತೆಯಲ್ಲಿ ನಾಲ್ಕೈದು ಸಾವಿರ ರೂ. ನೀಡಿದ್ರೂ ಕೂಡ ಗ್ಯಾಸ್ ಸಿಗುತ್ತಿಲ್ಲ. ಹೀಗಾಗಿ ಪ್ರತಿದಿನ 2 ಸಾವಿರದಿಂದ 3 ಸಾವಿರ ರೂ. ದುಡಿದು ಜೀವನ ಮಾಡುತ್ತಿದ್ದ ಪಾನಿಪೂರಿ ವ್ಯಾಪಾರಸ್ಥರು ಎಲ್‌ಪಿಸಿ ಸಿಲಿಂಡರ್ ಸಿಗದೇ ವ್ಯಾಪಾರ ಬಂದ್ ಮಾಡಿದ್ದಾರೆ. ಪಾನಿಪೂರಿ ವ್ಯಾಪಾರಕ್ಕೆ ಗ್ಯಾಸ್ ಬಿಸಿ ತಟ್ಟಿ ವ್ಯಾಪಾರ ಬಂದ್ ಮಾಡಲಾಗಿದೆ. ಗ್ಯಾಸ್‌ಗಾಗಿ ಅಲೆದು ಅಲೆದು ಸುಸ್ತಾಗಿದ್ದು, ಕಾಳಸಂತೆಯಲ್ಲಿ ನಾಲ್ಕೈದು ಸಾವಿರ ರೂ.ಗೆ ಗ್ಯಾಸ್ ಪಡೆದು ಲಾಭ ಗಳಿಸೋಕೆ ಸಾಧ್ಯವಿಲ್ಲ.…
ಪ್ಲೆಕ್ಸ್ ಬೇಡ, ಸೇವೆ ಮಾಡಿ; ಯದುವೀರ್ ಮಾದರಿ ನಡೆ ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಬಾರದು ಎಂದು ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಮಾರ್ಚ್ 24ರಂದು ನಡೆಯುವ ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಅವರು, ಯಾವುದೇ ರೀತಿಯ ಆಡಂಬರ, ದುಬಾರಿ ವೆಚ್ಚ ಹಾಗೂ ಭರ್ಜರಿ ಸಂಭ್ರಮಗಳಿಂದ ದೂರವಿರಲು ಕರೆ ನೀಡಿದ್ದಾರೆ. ಬದಲಾಗಿ, ಸಮಾಜಮುಖಿ ಕಾರ್ಯಗಳ ಮೂಲಕ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ತಿಳಿಸಿದ್ದಾರೆ. ರಕ್ತದಾನ ಶಿಬಿರ, ಅನ್ನದಾನ, ಸಸಿ ನೆಡುವುದು ಹಾಗೂ ಜನೋಪಕಾರಿ ಸೇವೆಗಳಲ್ಲಿ ತೊಡಗಿಕೊಳ್ಳುವುದೇ ನಿಜವಾದ ಸಂಭ್ರಮ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ, ಮೈಸೂರು ನಗರದ ಸೌಂದರ್ಯ ಕಾಪಾಡುವ ನಿಟ್ಟಿನಲ್ಲಿ ಜನ್ಮದಿನದ ನೆಪದಲ್ಲಿ ಎಲ್ಲೆಡೆ ಪ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಅಳವಡಿಸಬಾರದು ಎಂದು ಸ್ಪಷ್ಟವಾಗಿ ಸೂಚಿಸಿದ್ದಾರೆ. ಪ್ಲೆಕ್ಸ್‌ಗಳಿಂದ ಪರಿಸರ ಹಾನಿಯಾಗುವುದಲ್ಲದೆ ನಗರದ ಅಂದವೂ ಹಾಳಾಗುತ್ತದೆ ಎಂದು ಹೇಳಿದ್ದಾರೆ. ಪ್ಲೆಕ್ಸ್ ಮುಕ್ತ ಮೈಸೂರು ಎಂಬುದು ತನ್ನ ಕನಸು…
ನಗರ ದೇವತೆ ಬರಗೇರಮ್ಮ ಜಾತ್ರೆಗೆ ದಿನಗಣನೆ ಶುರು ; ಭಕ್ತರಲ್ಲಿ ಮನೆ ಮಾಡಿದ ಸಂಭ್ರಮ ಚಿತ್ರದುರ್ಗ: ನಗರದೇವತೆ ಬರಗೇರಮ್ಮ ಜಾತ್ರಾ ಮಹೋತ್ಸವ ಮಾ. 27ರಂದು ರಾತ್ರಿ 8ಕ್ಕೆ ಕಂಕಣಧಾರಣೆ, ಮಧುವಣಗಿತ್ತಿ ಪೂಜಾ ಕೈಂಕರ್ಯದೊಂದಿಗೆ ಆರಂಭವಾಗಲಿದೆ. ದೇವಿಯ ಜಾತ್ರೆಯೂ 15 ದಿನ ಜರುಗಲಿದೆ. 31ರಂದು ರಾತ್ರಿ 8ಕ್ಕೆ ದೇವಿಯ ಉತ್ಸವ ಮೂರ್ತಿಯನ್ನು ಬುರುಜನಹಟ್ಟಿಯ ದೇಗುಲದಿಂದ ಊರ ಹೊರಗಿನ ದೇಗುಲಕ್ಕೆ ಕರೆ ತರುವುದು. ನಂತರ ಕರಿಯಟ್ಟಿಯಲ್ಲಿನ ಭಕ್ತರಿಂದ ಪೂಜೆ ಸ್ವೀಕಾರ. ಏ.1ರಂದು ಬೆಳಗ್ಗೆ 9ಕ್ಕೆ ಚಂದ್ರವಳ್ಳಿಯಲ್ಲಿ ದೇವಿಗೆ ಗಂಗಾಪೂಜೆ, ಕುಂಭಾಭಿಷೇಕ ನಂತರ ದೇಗುಲಕ್ಕೆ ಆಗಮನ. ಅನ್ನಸಂತರ್ಪಣೆ ನಂತರ ರಾತ್ರಿ ಈರಜ್ಜನಹಟ್ಟಿ ಹಾಗೂ ನಾಯಕರ ಸೊಲ್ಲಾಪುರ, ಐಯುಡಿಪಿ ಲೇಔಟ್, ಸರಸ್ವತಿಪುರದಲ್ಲಿ ಭಕ್ತರಿಂದ ಪೂಜೆ ಸ್ವೀಕಾರ. 2ರಂದು ದೇವಿಯು ಕೆಳಗಿನ ಸೊಲ್ಲಾಪುರ, ಗೊಲ್ಲರಹಟ್ಟಿ, ಟಗರನಹಟ್ಟಿ, ದೇವರಹಟ್ಟಿ, ಜಾಲಿಕಟ್ಟೆ ಮತ್ತು ಮಾಳಪ್ಪನಹಟ್ಟಿ ಭಕ್ತರ ಮನೆಗಳಲ್ಲಿ ಪೂಜೆ ಸ್ವೀಕರಿಸಿ ದೇಗುಲಕ್ಕೆ ಮರಳುವುದು. ಅಂದು ಬೆಳಗ್ಗೆ 7ಕ್ಕೆ ಪಿಳ್ಳೇಕೆರನಹಳ್ಳಿ, ಬಸವೇಶ್ವರ, ವಿದ್ಯಾ, ಮಾರುತಿ, ನೆಹರು, ಚೌಡೇಶ್ವರಿ ನಗರ, ಮೆದೇಹಳ್ಳಿ ರಸ್ತೆ, ಬಿವಿಕೆಎಸ್…
ಹೊಸ ಪಿಂಚಣಿ ನೀತಿಗೆ ವಿರೋಧ; ಪ್ರತಿಭಟನೆಗೆ ಮುಂದಾದ ನಿವೃತ್ತ ನೌಕರರ ಚಿತ್ರದುರ್ಗ: ಕೇಂದ್ರ ಸರ್ಕಾರದ ಹೊಸ ಪಿಂಚಣಿ ನೀತಿಯನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಮಾ. 25ರಂದು ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ ತಿಳಿಸಿದೆ. ಕೇಂದ್ರ ಸರ್ಕಾರವು ನಿವೃತ್ತ ನೌಕರರ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಲು ಹಾಗೂ ವಾರ್ಷಿಕ ಎರಡು ಹಂತದ ತುಟ್ಟಿಭತ್ಯೆ (ಡಿಎ) ನೀಡುವಲ್ಲಿ ಹೊಸ ನೀತಿಯನ್ನು ಜಾರಿಗೆ ತರಲು ಮುಂದಾಗಿದೆ. ಈ ನಿರ್ಧಾರವು ನಿವೃತ್ತ ನೌಕರರ ಮತ್ತು ಅವರ ಕುಟುಂಬದ ಹಿತಾಸಕ್ತಿಗೆ ಧಕ್ಕೆ ತರಲಿದೆ ಎಂಬುದು ಸಂಘದ ಆತಂಕವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಂಘದ ಸೂಚನೆಯಂತೆ ಜಿಲ್ಲಾ ಘಟಕವು ಪ್ರತಿಭಟನೆಗೆ ಕರೆ ನೀಡಿದೆ. ಬುಧವಾರ ಬೆಳಿಗ್ಗೆ 10:30ಕ್ಕೆ ನಗರದ ಓಬವ್ವ ವೃತ್ತದಲ್ಲಿ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರು ಜಮಾಯಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಯವರಿಗೆ ಮನವಿ…
Subscribe to Updates
Get the latest creative news from FooBar about art, design and business.