Author: ಮೃತ್ಯುಂಜಯಾಚಾರ್ ಬಿ

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ; ಆಳವಾದ ಕಂದಕದಲ್ಲಿ ಮೃತದೇಹ ಚಿಕ್ಕಮಗಳೂರು: ದತ್ತಪೀಠದ ಮಾಣಿಕ್ಯಧಾರಾ ಜಲಪಾತದ ಬಳಿ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ 15 ವರ್ಷದ ಬಾಲಕಿ ಶ್ರೀನಂದಾ ಇಂದು ಶವವಾಗಿ ಪತ್ತೆಯಾಗಿರುವುದು ಹೃದಯವಿದ್ರಾವಕ ಘಟನೆಗೆ ಕಾರಣವಾಗಿದೆ. ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಚಂದ್ರದ್ರೋಣ ಪರ್ವತ ಶ್ರೇಣಿಯ ಆಳವಾದ ಕಂದಕದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಶ್ರೀನಂದಾ ಏಪ್ರಿಲ್ 7ರಂದು ಕುಟುಂಬ ಸದಸ್ಯರೊಂದಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಸಂಜೆ 5.15ರ ಸುಮಾರಿಗೆ ಕಾಣೆಯಾಗಿದ್ದಳು. ಮಾಣಿಕ್ಯಧಾರಾ ಜಲಪಾತದ ಸೌಂದರ್ಯ ವೀಕ್ಷಿಸುತ್ತಿದ್ದ ಕುಟುಂಬದವರೊಂದಿಗೆ ಕೆಲವೇ ಕ್ಷಣಗಳ ಹಿಂದೆ ಇದ್ದ ಬಾಲಕಿ ಏಕಾಏಕಿ ನಾಪತ್ತೆಯಾಗಿದ್ದಳು. ಕುಟುಂಬದವರು ಜಲಪಾತದ ಕೆಳಭಾಗಕ್ಕೆ ಇಳಿದಾಗ ಶ್ರೀನಂದಾ ಬೆಟ್ಟದ ಮೇಲ್ಭಾಗದಲ್ಲೇ ಉಳಿದಿದ್ದಳು ಎನ್ನಲಾಗಿದೆ. ಸುಮಾರು ಹತ್ತು ನಿಮಿಷಗಳ ಬಳಿಕ ಹಿಂದಿರುಗಿ ನೋಡಿದಾಗ ಆಕೆ ಕಾಣಿಸದೆ ಕುಟುಂಬಸ್ಥರು ಆತಂಕಗೊಂಡಿದ್ದರು. ಸುತ್ತಮುತ್ತ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗದೆ ತಕ್ಷಣ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ, ಪೊಲೀಸ್…

Read More

ಗುಣಮಟ್ಟದ ಶಿಕ್ಷಣ ದೊಡ್ಡ ಕಟ್ಟಡಗಳಿಂದ ನಿರ್ಧಾರವಾಗಲ್ಲ; ಕೆ.ಜಿ.ಜಗದೀಶ್ ಚಿತ್ರದುರ್ಗ : ಶಿಕ್ಷಣವೆಂದರೆ ದೊಡ್ಡ ದೊಡ್ಡ ಕಟ್ಟಡಗಳನ್ನು ನೋಡಿ ನಿರ್ಧರಿಸುವುದು ಸರಿಯಲ್ಲ. ಸರ್ಕಾರಿ ಶಾಲೆಗಳಲ್ಲಿ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಹೆಚ್ಚಿನ ಅಂಕಗಳನ್ನು ಗಳಿಸುವಂತೆ ಸಿದ್ದಪಡಿಸುವುದು ಶಿಕ್ಷಕರುಗಳ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕಿದೆ ಎಂದು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಕೆ.ಜಿ.ಜಗದೀಶ್ ತಿಳಿಸಿದರು. ಹೊಸಪೇಟೆಯಿಂದ ಬೆಂಗಳೂರಿಗೆ ಹೊರಟಿದ್ದ ಅವರು ಚಿತ್ರದುರ್ಗ ಹೊರವಲಯ ದಾವಣಗೆರೆ ರಸ್ತೆಯಲ್ಲಿರುವ ಮೇದಾರ ಕೇತೇಶ್ವರ ಮಹಾ ಮಠಕ್ಕೆ ಭೇಟಿ ನೀಡಿ ಸ್ವಾಮಿಗಳಿಂದ ಆಶೀರ್ವಾದ ಪಡೆದು ನಂತರ ಮಾತನಾಡಿದರು. ಮಠದ ಆವರಣದಲ್ಲಿ ಸುತ್ತಾಡಿ ಶಾಲೆ ಹಾಗೂ ಕಟ್ಟಡಗಳನ್ನು ವೀಕ್ಷಿಸಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಬಡವರ ಮಕ್ಕಳೇ ಹೆಚ್ಚಾಗಿ ದಾಖಲಾಗುತ್ತಾರೆ. ಖಾಸಗಿ ಶಾಲೆಗಳವರು ಬೃಹಧಾಕಾರವಾದ ಕಟ್ಟಡಗಳನ್ನು ಕಟ್ಟಿ ಪೋಷಕರು ಮತ್ತು ಮಕ್ಕಳನ್ನು ಆಕರ್ಷಿಸುವುದು ಸಹಜ. ಆದರೆ ಬಡ ಮಕ್ಕಳು ಖಾಸಗಿ ಶಾಲೆಗಳಿಗೆ ಸೇರುವಂತ ಸ್ಥಿತಿಯಲ್ಲಿರುವುದಿಲ್ಲ. ನಿರ್ವಂಚನೆಯಿಂದ ಮಕ್ಕಳಿಗೆ ಪಾಠ ಹೇಳಿಕೊಟ್ಟು ಸರ್ಕಾರಿ…

Read More

ಮೇ 1ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಹೋರಾಟ: ಭೂಹೀನರಿಗೆ ಭೂಮಿ, ಮನೆರಹಿತರಿಗೆ ವಸತಿ ಒತ್ತಾಯ ಚಿತ್ರದುರ್ಗ: ಭೂಹೀನರಿಗೆ ಭೂಮಿ ಹಾಗೂ ವಸತಿ ರಹಿತರಿಗೆ ಮನೆಗಳನ್ನು ಒದಗಿಸಬೇಕೆಂಬ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ, ಮೇ 1ರಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಗುವುದು ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಖಜಾಂಚಿ ಶ್ರೀರಂಗಾಚಾರಿ ಎಚ್ಚರಿಕೆ ನೀಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ಆಶಯದಂತೆ ಸಮಿತಿ ಹಲವು ವರ್ಷಗಳಿಂದ ಭೂಹೀನರು ಮತ್ತು ವಸತಿ ರಹಿತರ ಪರ ನಿರಂತರ ಹೋರಾಟ ನಡೆಸುತ್ತಿದೆ ಎಂದು ತಿಳಿಸಿದರು. ಅರಣ್ಯ, ಇನಾಂ, ಹುಲ್ಲುಬನ್ನಿ, ಗೋಮಾಳ ಹಾಗೂ ಸೇಂದಿವನ ಎಂಬ ವಿವಿಧ ವರ್ಗೀಕರಣಗಳಲ್ಲಿ ಲಕ್ಷಾಂತರ ಎಕರೆ ಭೂಮಿ ರಾಜ್ಯದಲ್ಲಿ ಲಭ್ಯವಿದ್ದರೂ, ಕಾನೂನು ಅಡ್ಡಿಗಳನ್ನು ಮುಂದಿಟ್ಟು ಬಡವರಿಗೆ ಜಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳುವುದು ಸರಿಯಲ್ಲ ಎಂದು ಅವರು ಆಕ್ಷೇಪಿಸಿದರು. ಒನ್…

Read More

ನಿತ್ಯ ಭವಿಷ್ಯ – 10/04/2026 (ಶುಕ್ರವಾರ) ಮೇಷ (Aries): ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕೆಲಸಗಳಲ್ಲಿ ಪ್ರಗತಿ ಕಂಡುಬರುತ್ತದೆ. ಹೊಸ ಅವಕಾಶಗಳು ಲಭ್ಯವಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷಕರ ವಾತಾವರಣ. ವೃಷಭ (Taurus): ಆರ್ಥಿಕವಾಗಿ ಲಾಭದ ದಿನ. ಹಳೆಯ ಬಾಕಿ ಹಣ ವಾಪಸ್ ಸಿಗಬಹುದು. ಆರೋಗ್ಯದ ಕಡೆ ಗಮನ ಕೊಡಿ. ಆತುರದಲ್ಲಿ ನಿರ್ಧಾರ ಕೈಗೊಳ್ಳಬೇಡಿ. ಮಿಥುನ (Gemini): ಸ್ನೇಹಿತರಿಂದ ಸಹಾಯ ದೊರೆಯುತ್ತದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಮಾತಿನಲ್ಲಿ ಎಚ್ಚರಿಕೆ ಅಗತ್ಯ. ಕಟಕ (Cancer): ಮನಸ್ಸಿನಲ್ಲಿ ಅಶಾಂತಿ ಕಾಣಬಹುದು. ಆದರೆ ಕುಟುಂಬದ ಬೆಂಬಲದಿಂದ ಸಮಸ್ಯೆ ಪರಿಹಾರವಾಗುತ್ತದೆ. ದೇವರ ಪ್ರಾರ್ಥನೆ ಮಾಡಿ. ಸಿಂಹ (Leo): ಇಂದು ನಿಮ್ಮ ನಾಯಕತ್ವ ಗುಣಗಳು ಮೆರೆದಿಡುತ್ತವೆ. ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ ಇದೆ. ಕನ್ಯಾ (Virgo): ಕಷ್ಟಪಟ್ಟು ಮಾಡಿದ ಕೆಲಸಕ್ಕೆ ಫಲ ಸಿಗುತ್ತದೆ. ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳಿಗೆ ಉತ್ತಮ ದಿನ. ತುಲಾ (Libra): ಸಂಬಂಧಗಳಲ್ಲಿ ಒತ್ತಡ ಉಂಟಾಗಬಹುದು. ಶಾಂತವಾಗಿ ಮಾತನಾಡಿ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ. ವೃಶ್ಚಿಕ (Scorpio):…

Read More

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ರಾಜ್ಯದ ಗಮನ ಸೆಳೆದಿದೆ. ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ ಅಪೂರ್ವ ಸಾಧನೆ ಮಾಡಿದ್ದಾರೆ. ಈ ಅದ್ಭುತ ಸಾಧನೆಯೊಂದಿಗೆ ದಿಶಾ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ರಾಜ್ಯ ಮಟ್ಟದಲ್ಲಿ ಮತ್ತೊಮ್ಮೆ ಉಜ್ವಲಗೊಳಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ನಿರಂತರ ಮೇಲುಗೈ ಮತ್ತೊಮ್ಮೆ ಸಾಬೀತಾಗಿದೆ. ಇನ್ನೊಂದೆಡೆ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ವಿದ್ಯಾರ್ಥಿನಿಯರಾದ ಸಂಗೀತಾ ಮತ್ತು ಅರ್ಚನಾ ಕಲಾ ವಿಭಾಗದಲ್ಲಿ ತಲಾ 598 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಇವರ ಸಾಧನೆಯೂ ರಾಜ್ಯದ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ರಾಜ್ಯ ಮಟ್ಟದ ಈ ಫಲಿತಾಂಶದಲ್ಲಿ ಕರಾವಳಿ ಕರ್ನಾಟಕದ ಪ್ರತಿಭೆ ಮತ್ತೊಮ್ಮೆ ಮೆರೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆ…

Read More

ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ; ಶೇ. 86 ವಿದ್ಯಾರ್ಥಿಗಳು ಪಾಸ್ ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಅಧಿಕೃತವಾಗಿ ಪ್ರಕಟವಾಗಿದ್ದು, ರಾಜ್ಯದಾದ್ಯಂತ ಶೇ. 86 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 6.10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಪರಿಶೀಲಿಸಬಹುದು. ಜೊತೆಗೆ, ಮೊಬೈಲ್‌ಗೆ ಎಸ್‌ಎಂಎಸ್ ಮೂಲಕವೂ ಫಲಿತಾಂಶ ರವಾನೆಯಾಗುತ್ತಿದೆ. ಈ ಬಾರಿ ಸರ್ಕಾರ ಜಾರಿಗೆ ತಂದಿರುವ ಪಾಸಿಂಗ್ ನಿಯಮ ಸಡಿಲಿಕೆ ವಿದ್ಯಾರ್ಥಿಗಳಿಗೆ ದೊಡ್ಡ ನೆರವಾಗಿದ್ದು, ಪ್ರತಿ ವಿಷಯದಲ್ಲಿ 30 ಅಂಕಗಳ ಥಿಯರಿ + 20 ಅಂಕಗಳ ಆಂತರಿಕ ಅಂಕಗಳನ್ನು ಸೇರಿಸಿ ಪಾಸ್ ಪರಿಗಣನೆ ಮಾಡಲಾಗಿದೆ. ಹೀಗಾಗಿ ಒಟ್ಟು 600 ಅಂಕಗಳಲ್ಲಿ 198 ಅಂಕಗಳು (33%) ಗಳಿಸಿದರೆ ಉತ್ತೀರ್ಣರಾಗಬಹುದು. ಶಿಕ್ಷಣ ಇಲಾಖೆಯ ಈ ಕ್ರಮವು…

Read More

ಆಭರಣ ಪ್ರಿಯರಿಗೆ ಸಿಹಿಸುದ್ದಿ!! ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಇತ್ತೀಚೆಗೆ ಗಮನಾರ್ಹ ಇಳಿಕೆ ಕಂಡುಬಂದಿದ್ದು, ಆಭರಣ ಖರೀದಿಸಲು ಕಾಯುತ್ತಿದ್ದವರಿಗೆ ಇದು ಉತ್ತಮ ಅವಕಾಶವಾಗಿದೆ. ಮಾರುಕಟ್ಟೆಯ ಬದಲಾವಣೆ, ಅಂತರಾಷ್ಟ್ರೀಯ ದರಗಳ ಇಳಿಕೆ ಮತ್ತು ಡಾಲರ್ ಮೌಲ್ಯದ ವ್ಯತ್ಯಾಸದಿಂದ ಈ ಕುಸಿತ ಕಂಡುಬಂದಿದೆ. 📊 ಇಂದಿನ ಚಿನ್ನದ ದರ (09/04/2026) 🔸 22 ಕ್ಯಾರೆಟ್ ಚಿನ್ನ (10 ಗ್ರಾಂ): ₹ 66,500 (ಸುಮಾರು) 🔸 24 ಕ್ಯಾರೆಟ್ ಚಿನ್ನ (10 ಗ್ರಾಂ): ₹ 72,500 (ಸುಮಾರು) 👉 ನಿನ್ನೆಗಿಂತ ₹500 – ₹1,000ರವರೆಗೆ ಇಳಿಕೆ ದಾಖಲಾಗಿದೆ. 🪙 ಬೆಳ್ಳಿ ದರ 🔹 ಬೆಳ್ಳಿ (1 ಕೆಜಿ): ₹ 86,000 (ಸುಮಾರು) 👉 ಬೆಳ್ಳಿಯಲ್ಲಿಯೂ ಸ್ವಲ್ಪ ಇಳಿಕೆ ಕಂಡುಬಂದಿದೆ. 📉 ಏಕೆ ಇಳಿಕೆ? ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಕಡಿಮೆ ಅಮೆರಿಕ ಡಾಲರ್ ಬಲವಾಗಿರುವುದು ಹೂಡಿಕೆದಾರರು ಬೇರೆ ಕ್ಷೇತ್ರಗಳತ್ತ ಮುಖ ಮಾಡುವುದು 🛍️ ಖರೀದಿಸಲು ಸರಿಯಾದ ಸಮಯವೇ? ತಜ್ಞರ ಪ್ರಕಾರ, ದರ…

Read More

ಆಸ್ಪತ್ರೆಗೆ ಸಿಎಂ, ಡಿಸಿಎಂ; ಸಚಿವರ ಆರೋಗ್ಯ ವಿಚಾರಿಸಿ ಕುಟುಂಬಕ್ಕೆ ಧೈರ್ಯ ತುಂಬಿದ ನಾಯಕರು ಬೆಂಗಳೂರು: ಶ್ವಾಸಕೋಶದ ಸೋಂಕಿನಿಂದ ಅಸ್ವಸ್ಥರಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಹಾಗೂ ಸಚಿವ ಡಿ. ಸುಧಾಕರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚಿಸಿ ಸಚಿವರ ಆರೋಗ್ಯ ಸ್ಥಿತಿಯ ಕುರಿತು ಸಂಪೂರ್ಣ ಮಾಹಿತಿ ಪಡೆದರು. ಬಳಿಕ ಕುಟುಂಬ ಸದಸ್ಯರನ್ನು ಭೇಟಿಯಾಗಿ ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುತ್ತಾರೆ ಎಂದು ವಿಶ್ವಾಸ ಮೂಡಿಸಿದರು. ಕಳೆದ ಒಂದು ವಾರದಿಂದ ಶ್ವಾಸಕೋಶದ ತೀವ್ರ ಸೋಂಕಿನಿಂದ ಬಳಲುತ್ತಿರುವ ಸಚಿವರು ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು ಸಹ ವೈದ್ಯರು ನಿಗಾವಹಿಸಿದ್ದಾರೆ. ಈ ವೇಳೆ ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಶಾಸಕರಾದ ಟಿ.ರಘುಮೂರ್ತಿ, ರಿಜ್ವಾನ್ ಅರ್ಷದ್, ಐವಾನ್ ಡಿಸೋಜಾ…

Read More

ಭವಿಷ್ಯ ನಿರ್ಧಾರಕ್ಕೆ ಕೌಂಟ್ ಡೌನ್; ಶುರುವಾಯ್ತು ಢವಢವ… ಬೆಂಗಳೂರು: ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಸುದೀರ್ಘ 8 ವರ್ಷಗಳ ಕಾನೂನು ಹೋರಾಟ ಇಂದು ಅಂತ್ಯಗೊಳ್ಳಲಿದೆ. ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಆರೋಪಿಗಳ ಭವಿಷ್ಯವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಗುರುವಾರ) ಪ್ರಕಟಿಸಲಿದೆ. 2016ರಲ್ಲಿ ಧಾರವಾಡದಲ್ಲಿ ಯೋಗೇಶ್ ಗೌಡ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಆರಂಭದಲ್ಲಿ ಪ್ರಕರಣದ ತನಿಖೆ ನಡೆಸಿದ್ದ ಸ್ಥಳೀಯ ಪೊಲೀಸರು, ಇದು ಆಸ್ತಿ ವಿವಾದಕ್ಕಾಗಿ ನಡೆದ ಕೊಲೆ ಎಂದು ಹೇಳಿ ಆರು ಮಂದಿಯನ್ನು ಬಂಧಿಸಿದ್ದರು. ಆದರೆ, ಮೃತರ ಕುಟುಂಬದವರು ಇದೊಂದು ರಾಜಕೀಯ ಪ್ರೇರಿತ ಕೊಲೆ ಎಂದು ಆರೋಪಿಸಿ ಸಿಬಿಐ ತನಿಖೆಗೆ ಒತ್ತಾಯಿಸಿದ್ದರು. 2019ರಲ್ಲಿ ಪ್ರಕರಣ ಸಿಬಿಐ ಕೈಗೆ ಹೋದ ನಂತರ ತನಿಖೆಯ ದಿಕ್ಕೇ ಬದಲಾಯಿತು. ಇದರಲ್ಲಿ ರಾಜಕೀಯ ಸಂಚು ಇರುವುದನ್ನು ಪತ್ತೆಹಚ್ಚಿದ ಸಿಬಿಐ, 2020ರ ನವೆಂಬರ್‌ನಲ್ಲಿ ವಿನಯ್…

Read More

ಸಿಬ್ಬಂದಿಗೆ ಬಿಸಿಲ ಶಿಕ್ಷೆ ಪ್ರಕರಣ;  ಕಂಟ್ರೋಲ್ ರೂಂಗೆ ಪಿಎಸ್ಐ ನೇತ್ರಾವತಿ ಚಿತ್ರದುರ್ಗ: ಕರ್ತವ್ಯ ನಿರ್ಲಕ್ಷ್ಯದ ಆರೋಪದ ನೆಪವೊಡ್ಡಿ ತಮ್ಮದೇ ಠಾಣೆಯ ಸಿಬ್ಬಂದಿಯನ್ನು ಮಧ್ಯಾಹ್ನದ ರಣಬಿಸಿಲಿನಲ್ಲಿ ಗಂಟೆಗಳ ಕಾಲ ನಿಲ್ಲಿಸಿ ಶಿಕ್ಷೆ ನೀಡಿದ್ದ ಪ್ರಕರಣದಲ್ಲಿ, ಚಿಕ್ಕಜಾಜೂರು ಪೊಲೀಸ್ ಠಾಣೆಯ ಪಿಎಸ್ಐ ನೇತ್ರಾವತಿ ವಿರುದ್ಧ ಕೊನೆಗೂ ಶಿಸ್ತು ಕ್ರಮ ಜರುಗಿಸಲಾಗಿದೆ. ಅವರನ್ನು ತಕ್ಷಣದಿಂದಲೇ ಚಿತ್ರದುರ್ಗ ಪೊಲೀಸ್ ಕಂಟ್ರೋಲ್ ರೂಂಗೆ ವರ್ಗಾವಣೆ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಈ ಆದೇಶ ಹೊರಡಿಸಿದ್ದು, ಘಟನೆ ಪೊಲೀಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೆಲವು ದಿನಗಳ ಹಿಂದೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪಿಎಸ್ಐ ನೇತ್ರಾವತಿ ಅವರು ಸಿಬ್ಬಂದಿಗಳ ಮೇಲೆ ದರ್ಪ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಕಾರಣ ನೀಡಿ, ಒಬ್ಬ ಎಎಸ್ಐ ಸೇರಿ 12 ಮಂದಿ ಪೊಲೀಸ್ ಸಿಬ್ಬಂದಿಗೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸುಡುವ ಬಿಸಿಲಿನಲ್ಲಿ ಬಂದೂಕು ಹಿಡಿದು ನಿಲ್ಲುವಂತೆ ಶಿಕ್ಷೆ…

Read More