Author: ಮೃತ್ಯುಂಜಯಾಚಾರ್ ಬಿ

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

🌟 ನಿತ್ಯ ಭವಿಷ್ಯ – 01/04/2026 🌟 ಮೇಷ (Aries): ಇಂದು ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹೊಸ ಕೆಲಸಗಳಿಗೆ ಕೈಹಾಕಲು ಅನುಕೂಲಕರ ದಿನ. ಕುಟುಂಬದಲ್ಲಿ ಸಂತೋಷಕರ ವಾತಾವರಣ. ವೃಷಭ (Taurus): ಆರ್ಥಿಕ ವಿಷಯಗಳಲ್ಲಿ ಜಾಗ್ರತೆ ಅಗತ್ಯ. ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡುವುದು ಒಳಿತು. ಆರೋಗ್ಯದ ಕಡೆ ಗಮನಕೊಡಿ. ಮಿಥುನ (Gemini): ಸ್ನೇಹಿತರ ಸಹಾಯದಿಂದ ಮಹತ್ವದ ಕೆಲಸಗಳು ನೆರವೇರುತ್ತವೆ. ಉದ್ಯೋಗದಲ್ಲಿ ಪ್ರಗತಿ ಸಾಧ್ಯತೆ. ಸಂವಹನದಲ್ಲಿ ಎಚ್ಚರಿಕೆ ಇರಲಿ. ಕಟಕ (Cancer): ಕುಟುಂಬದವರೊಂದಿಗೆ ಹೆಚ್ಚು ಸಮಯ ಕಳೆಯುವ ಅವಕಾಶ ಸಿಗುತ್ತದೆ. ಮನಸ್ಸಿಗೆ ಶಾಂತಿ ದೊರೆಯುತ್ತದೆ. ಹೊಸ ಯೋಜನೆಗಳು ಶುರುವಾಗಬಹುದು. ಸಿಂಹ (Leo): ಇಂದು ನಿಮ್ಮ ನಾಯಕತ್ವ ಗುಣಗಳು ಹೊರಹೊಮ್ಮುತ್ತವೆ. ಕೆಲಸದ ಸ್ಥಳದಲ್ಲಿ ಮೆಚ್ಚುಗೆ ಸಿಗಬಹುದು. ಆರೋಗ್ಯ ಉತ್ತಮ. ಕನ್ಯಾ (Virgo): ಸಣ್ಣ ಸಣ್ಣ ಅಡಚಣೆಗಳು ಎದುರಾಗಬಹುದು. ಧೈರ್ಯ ಕಳೆದುಕೊಳ್ಳದೆ ಮುಂದುವರಿದರೆ ಯಶಸ್ಸು ಸಿಗುತ್ತದೆ. ಹಣಕಾಸು ಸ್ಥಿತಿ ಸಾಧಾರಣ. ತುಲಾ (Libra): ಹೊಸ ಸಂಪರ್ಕಗಳು ಬೆಳೆಸಿಕೊಳ್ಳಲು ಉತ್ತಮ ದಿನ. ವ್ಯವಹಾರದಲ್ಲಿ ಲಾಭದ ಸೂಚನೆ. ಕುಟುಂಬದ ಬೆಂಬಲ…

Read More

ಕುತೂಹಲಕ್ಕೆ ಬಿತ್ತು ತೆರೆ ; ಪ್ರಕಟವಾಯ್ತು ವಾರ್ಷಿಕ ಪ್ರಶಸ್ತಿಗಳ ಪ್ರಕಟ ಟಿಒಬಿ ನ್ಯೂಸ್ ಬೆಂಗಳೂರು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಬೀದರ್ ನಲ್ಲಿ ಏ.11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ ಇಂತಿದೆ. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿ): ಯೋಗೇಶ್ ಮಲ್ಲೂರು, ವಾರ್ತಾಭಾರತಿ, ಬೆಂಗಳೂರು, ಕೆ.ಎ.ಇಸ್ಮಾಯಿಲ್, ಶಕ್ತಿ, ಕೊಡಗು ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿ): ಮಲ್ಲಯ್ಯ ಪೋಲಂಪಲ್ಲಿ, ಕನ್ನಡಪ್ರಭ, ಶಹಪೂರ, ಯಾದಗಿರಿ, ರವಿಕುಮಾರ ಕಗ್ಗಣ್ಣನವರ, ಕನ್ನಡಮ್ಮ, ಧಾರವಾಡ ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿ): ಬಸವರಾಜ ಕಟ್ಟಿಮನಿ, ಕನ್ನಡಪ್ರಭ, ಹುಣಸಗಿ, ಯಾದಗಿರಿ. ಪಿ.ಕೆ.ರವಿಕುಮಾರ್, ವಿಜಯವಾಣಿ, ಮೈಸೂರು ಬಿ.ಎಸ್. ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿ): ಓದೇಶ…

Read More

ನೌಕರರೇ ಎಚ್ಚರ…ಸರ್ಕಾರದ ಹೆಸರಲ್ಲಿ ನಕಲಿ ಆದೇಶ ! ಬೆಂಗಳೂರು: ಸರ್ಕಾರದಲ್ಲಿ ಹೊರಗುತ್ತಿಗೆ ಆಧಾರಿತ ಸಿಬ್ಬಂದಿಯ ಸೇವೆಯನ್ನು ಮುಂದುವರೆಸುವ ಬಗ್ಗೆ ಆರ್ಥಿಕ ಇಲಾಖೆಯ ಅಧಿಕೃತ ಜ್ಞಾಪನದ ಮಾದರಿಯಲ್ಲಿ, ನಕಲಿಯಾಗಿ ಸಂ.ಆಇ/ಸೇನಿ/08/2026 ದಿನಾಂಕ:24-03-2026 ಸಂಖ್ಯೆಯಲ್ಲಿ ಅನಧಿಕೃತವಾಗಿ ಸ್ರಷ್ಟಿಸಿ ಸಾಮಾಜಿಕ ಜಾಲತಾಣಗಲ್ಲಿ ಹರಿಬಿಟ್ಟಿದ್ದಾರೆ. ಕೆಲವು ಮಾಧ್ಯಮಗಳು,ಆನ್‌ಲೈನ್ ಆವೃತ್ತಿಗಳು ಹಾಗೂ ಸಾಮಾಜಿಕ ಮಾಧ್ಯಮಗಳು ನೈಜತೆ ಪರಿಶೀಲಿಸದೆ.ಈ ಸುದ್ದಿಯನ್ನು ಪ್ರಕಟಿಸಿವೆ.ಸರ್ಕಾರದ ಇಂತಹ ಯಾವುದೇ ಆದೇಶ ಅಥವಾ ಅಧಿಕೃತ ಜ್ಞಾಪನ ಪತ್ರ ಹೊರಡಿಸಿಲ್ಲ , ಈ ನಕಲಿ ಜ್ಞಾಪನ ಪತ್ರ ಅಧಿಕೃತವಲ್ಲ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ‌ ಕಾರ್ಯದರ್ಶಿ ಎಂ.ರಾಜಮ್ಮ ಪ್ರಕಟಣೆ ಮೂಲಕ‌ ಸ್ಪಷ್ಟಪಡಿಸಿದ್ದಾರೆ.

Read More

ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ತೆರವು ಸುಗಮ: ಪೂಜೆ ಬಳಿಕ ಕಾರ್ಯಾಚರಣೆ ಆರಂಭ ಚಳ್ಳಕೆರೆ | ಮಾ.31 ನಗರದ ನೆಹರೂ ವೃತ್ತದಲ್ಲಿದ್ದ ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ತೆರವು ಕಾರ್ಯಾಚರಣೆ ಮಂಗಳವಾರ ಬೆಳಗ್ಗೆಯಿಂದ ಸುಗಮವಾಗಿ ಆರಂಭವಾಯಿತು. ಪೌರಾಯುಕ್ತೆ ಡಾ. ನಾಗವೇಣಿ ಹಾಗೂ ಡಿವೈಎಸ್‌ಪಿ ಎಂ.ಜಿ. ಸತ್ಯನಾರಾಯಣರಾವ್ ನೇತೃತ್ವದಲ್ಲಿ ಮಳಿಗೆಗಳ ತೆರವು ಕಾರ್ಯಾಚರಣೆ ನಡೆಯಿತು. ಕಾರ್ಯಾಚರಣೆ ಆರಂಭಕ್ಕೂ ಮುನ್ನ ಪೌರಾಯುಕ್ತೆ ಡಾ. ನಾಗವೇಣಿ ಹಾಗೂ ಅಧಿಕಾರಿಗಳು ಗ್ರಾಮ ದೇವತೆ ಚಳ್ಳಕೆರೆಯಮ್ಮ ಮತ್ತು ಶ್ರೀ ವೀರಭದ್ರಸ್ವಾಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಕಾರ್ಯ ಸುಸೂತ್ರವಾಗಿ ನಡೆಯಲು ಪ್ರಾರ್ಥಿಸಿದರು. ಬೆಳಗ್ಗೆ ಸುಮಾರು 8 ಗಂಟೆಗೆ ಕಾಂಪ್ಲೆಕ್ಸ್‌ನ ಮೊದಲ ಮಳಿಗೆಯಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದ್ದು, ಜೆಸಿಬಿ ಯಂತ್ರಗಳು ಕಾರ್ಯನಿರ್ವಹಿಸುತ್ತಿದ್ದಂತೆ ಗಟ್ಟಿಯಾದ ಗೋಡೆಗಳು ನೆಲಸಮವಾದವು. ಜೆಸಿಬಿಯ ಜೊತೆಗೆ ಇಟಾಚಿ ಯಂತ್ರವನ್ನು ಸಹ ಬಳಸಲಾಗಿದ್ದು ಕಾರ್ಯ ವೇಗವಾಗಿ ಮುಂದುವರಿಯಿತು. ಬೆಳಗ್ಗಿನಿಂದ ಸಂಜೆವರೆಗೂ ಕಾರ್ಯಾಚರಣೆ ನಡೆದಿದ್ದು, ಬೆಂಗಳೂರು ರಸ್ತೆಯ ವ್ಯಾಪಾರಿಗಳು ಮತ್ತು ಪಾದಚಾರಿಗಳು ಧೂಳಿನಿಂದ ತೊಂದರೆ ಅನುಭವಿಸಿದರು. ಕೆಲ ವ್ಯಾಪಾರಿಗಳು ತಮ್ಮ ವಹಿವಾಟನ್ನು ತಾತ್ಕಾಲಿಕವಾಗಿ…

Read More

ಮಹಿಳಾ ಸಮುದಾಯ ಸದಾ ಕ್ರಿಯಾಶೀಲತೆಗೆ ಮುನ್ನಡೆಯಲಿ: ಗದ್ದಿಗೆತಿಪ್ಪೇಸ್ವಾಮಿ ಚಳ್ಳಕೆರೆ, ಮಾ.31: ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂದಿನ ದಿನಗಳಲ್ಲಿ ರಾಜಕೀಯದಿಂದ ಹಿಡಿದು ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ ಎಂದು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ ಹೇಳಿದ್ದಾರೆ. ನಗರದ ವಾಲ್ಮೀಕಿ ಕಲ್ಯಾಣಮಂದಿರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರ ಮಹಿಳೆಯರಿಗೆ ವಿಶೇಷ ಆದ್ಯತೆ ನೀಡುತ್ತಿದ್ದು, ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ ₹2000 ನೆರವು ಸೇರಿದಂತೆ ಹಲವು ಸೌಲಭ್ಯಗಳನ್ನು ಜಾರಿಗೆ ತಂದಿದೆ. ಸ್ವಯಂ ಉದ್ಯೋಗ ಆರಂಭಿಸಲು ಮಹಿಳೆಯರಿಗೆ ಆರ್ಥಿಕ ಬೆಂಬಲ ನೀಡುವತ್ತ ಸರ್ಕಾರ ಮುಂದಾಗಿದೆ ಎಂದರು. ಕ್ರೀಡೆ, ವಿಜ್ಞಾನ, ಸಾಹಿತ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಪ್ರತಿಭೆ ಮೆರೆದಿದ್ದು, ಸಮಾಜದಲ್ಲಿ ಗೌರವ ಹೆಚ್ಚಿಸಿಕೊಂಡಿದ್ದಾರೆ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇನ್ನಷ್ಟು ಕ್ರಮ ಅಗತ್ಯವಿದೆ ಎಂದು ಅವರು…

Read More

ಎಲ್ಲರ ವಿಶ್ವಾಸದಿಂದ ಬಿಜೆಪಿಯನ್ನು ಎತ್ತರಕ್ಕೆ ಕೊಂಡಯ್ಯಲಾಗುವುದು: ಎಸ್. ಲಿಂಗಮೂರ್ತಿ ಹೊಸದುರ್ಗ, ಮಾ.31: ತಾಲೂಕಿನ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಮಂಡಲ ಅಧ್ಯಕ್ಷ ಅಣ್ಣಪ್ಪಸ್ವಾಮಿ ಹೊತ್ತುಕೊಳ್ಳಬೇಕು. ಎಲ್ಲರ ಸಹಕಾರ ಮತ್ತು ವಿಶ್ವಾಸದಿಂದ ಬಿಜೆಪಿಯನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರಕ್ಕೆ ಕೊಂಡಯ್ಯಬಹುದು ಎಂದು ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್. ಲಿಂಗಮೂರ್ತಿ ಹೇಳಿದರು. ಪಟ್ಟಣದ ಹೊಳಲ್ಕೆರೆ ರಸ್ತೆಯಲ್ಲಿ ತಾಲೂಕು ಬಿಜೆಪಿ ಮಂಡಲದ ಕಾರ್ಯಾಲಯ ಉದ್ಘಾಟನೆ ಮತ್ತು ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ತತ್ವ-ಸಿದ್ಧಾಂತದಲ್ಲಿ ನಂಬಿಕೆಯಿಟ್ಟಿರುವ ಪಕ್ಷವಾಗಿದ್ದು, ದೇಶ ಮತ್ತು ಧರ್ಮದ ವಿಷಯದಲ್ಲಿ ಎಂದಿಗೂ ರಾಜಿಯಾಗದೆ ಮುನ್ನಡೆಯುತ್ತಿದೆ ಎಂದರು. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದು, ಮುಂದಿನ ಬಿಎಲ್‌ಎ-೨ ಕಾರ್ಯಗಾರ ಹಾಗೂ ಜಿ ರಾಮ್ ಜಿ ಕಾರ್ಯಕ್ರಮಗಳನ್ನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಯಶಸ್ವಿಯಾಗಿ ನಡೆಸುವಂತೆ ಸಲಹೆ ನೀಡಿದರು. ತಾಲೂಕು ಮಂಡಲ ನೂತನ ಅಧ್ಯಕ್ಷ ಅಣ್ಣಪ್ಪಸ್ವಾಮಿ ಮಾತನಾಡಿ, ನಿಕಟಪೂರ್ವ…

Read More

ಚಿತ್ರದುರ್ಗ: ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯಕ್ಕೆ ನೂತನ ಪ್ರಾಚಾರ್ಯರ ನೇಮಕ ಚಿತ್ರದುರ್ಗ, ಮಾ. 31: ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯಕ್ಕೆ ನೂತನ ಪ್ರಾಚಾರ್ಯರಾಗಿ ಡಾ. ರಾಜೇಶ್ ಎಂ.ಎಸ್. ಅಧಿಕಾರ ವಹಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಬಸವೇಶ್ವರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾಗಿ ಡಾ. ಎಲ್. ಪಾಲಾಕ್ಷಯ್ಯ ನೇಮಕಗೊಂಡಿದ್ದು, ಎಸ್.ಜೆ.ಎಂ. ಫಾರ್ಮಸಿ ಮಹಾವಿದ್ಯಾಲಯದ ವಯೋನಿವೃತ್ತಿ ಹೊಂದಿದ ಪ್ರಾಚಾರ್ಯ ಡಾ. ಟಿ.ಎಸ್. ನಾಗರಾಜ್ ಅವರ ಸ್ಥಾನಕ್ಕೆ ಡಾ. ಮಾರುತಿ ಟಿ. ಏಕಬೋಟೆ ಹೊಸ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನೂತನ ಪ್ರಾಚಾರ್ಯರು ಹಾಗೂ ವೈದ್ಯಕೀಯ ಅಧೀಕ್ಷಕರನ್ನು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿಯ ಅಧ್ಯಕ್ಷ ಶಿವಯೋಗಿ ಸಿ. ಕಳಸದ, ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಡಾ. ಪಿ.ಎಸ್. ಶಂಕರ್, ಎಸ್.ಎನ್. ಚಂದ್ರಶೇಖರ್, ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಬಿ. ಗುಡಸಿ, ಕುಲಸಚಿವ ಡಾ. ಎಂ.ಎಸ್. ಗಣಾಚಾರಿ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದರು. ಈ ನೇಮಕಾತಿಗಳ ಮೂಲಕ ಸಂಸ್ಥೆಯ ಶೈಕ್ಷಣಿಕ ಹಾಗೂ ವೈದ್ಯಕೀಯ ಸೇವೆಗಳ ಗುಣಮಟ್ಟ ಮತ್ತಷ್ಟು ಬಲಪಡ ಲಿದೆ…

Read More

ಚಿತ್ರದುರ್ಗ: ಬಡತನದಿಂದ ಚಿನ್ನದ ಪದಕದವರೆಗೆ – ಪೊಲೀಸ್ ಇಲಾಖೆಗೆ ಕೀರ್ತಿ ತಂದ ಷರೀಫ್ ಎಂ. ಚಿತ್ರದುರ್ಗ: ಮೂಲತಃ ಚಳ್ಳಕೆರೆ ತಾಲ್ಲೂಕಿನ ಕಾಟಂದೇವರ ಕೋಟೆಯ ನಿವಾಸಿ ಷರೀಫ್ ಎಂ. ಅವರು ಮುಖ್ಯಮಂತ್ರಿಗಳ 2025ನೇ ಸಾಲಿನ ಚಿನ್ನದ ಪದಕಕ್ಕೆ ಭಾಜನರಾಗಿ ಪೊಲೀಸ್ ಇಲಾಖೆಗೆ ಕೀರ್ತಿ ತಂದಿದ್ದಾರೆ. ಚಿತ್ರದುರ್ಗದ ಮಹಾರಾಣಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 2008-10ನೇ ಸಾಲಿನಲ್ಲಿ ಪಿ.ಯು.ಸಿ. ವ್ಯಾಸಂಗ ಮಾಡಿದ್ದ ಷರೀಫ್ ಎಂ. ಕಡುಬಡತನದಲ್ಲಿ ಬೆಳೆದವರು. ನಂತರ ಕೂಡ್ಲಿಗಿ ತಾಲ್ಲೂಕಿನ ಸುಲ್ತಾನಿಪುರದಲ್ಲಿ ವಾಸವಾಗಿರುವ ತಮ್ಮ ಸಹೋದರಿಯ ನೆರವಿನಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಿ, 2014ರಲ್ಲಿ ಕೆ.ಎಸ್.ಐ.ಎಸ್.ಎಫ್.ನಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆಗೆ ಸೇರ್ಪಡೆಗೊಂಡರು. ಬುನಾದಿ ತರಬೇತಿ ಪೂರ್ಣಗೊಳಿಸಿದ ಬಳಿಕ ಆಂತರಿಕ ವಿಭಾಗದ ತಾಂತ್ರಿಕ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಅವರು, 2017ರಲ್ಲಿ ಸಿವಿಲ್ ಪೊಲೀಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಬೆಂಗಳೂರಿನಲ್ಲಿ ಕಾನ್ಸ್‌ಟೇಬಲ್ ಆಗಿ ಆಯ್ಕೆಯಾದರು. ತಾಂತ್ರಿಕ ಕ್ಷೇತ್ರದಲ್ಲಿ ನಿಪುಣತೆ ಹೊಂದಿದ್ದ ಇವರಲ್ಲಿ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ ಕಾಲ್ ಡೀಟೆಲ್ ರೆಕಾರ್ಡ್ (CDR) ವಿಶ್ಲೇಷಣೆಯಲ್ಲಿ ವಿಶಿಷ್ಟ ಪರಿಣತಿ ಕಂಡುಬಂದಿತು.…

Read More

ಬ್ರಹ್ಮರಥೋತ್ಸವಕ್ಕೆ ಶುರುವಾಯ್ತು ದಿನಗಣನೆ; ಅಬ್ಬಿನಹೊಳೆಯಲ್ಲಿ ಸಿದ್ಧತೆ ಹಿರಿಯೂರು: ತಾಲ್ಲೂಕಿನ ಅಬ್ಬಿನಹೊಳೆ ಗ್ರಾಮದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮರಥೋತ್ಸವವು ಏಪ್ರಿಲ್ 3ರ ಶುಕ್ರವಾರದಂದು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಲಿದೆ. ಸ್ವಸ್ತಿಶ್ರೀ ಪರಾಭವನಾಮ ಸಂವತ್ಸರದ ಚೈತ್ರ ಶುದ್ಧ ತದಿಗೆಯ ಶುಭ ಸಂದರ್ಭದಲ್ಲಿ, ಮಾ. 21ರಿಂದ ಏಪ್ರಿಲ್ 7ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಈಗಾಗಲೇ ಮಾ. 21ರಂದು ಧ್ವಜಾರೋಹಣದೊಂದಿಗೆ ಉತ್ಸವಕ್ಕೆ ಚಾಲನೆ ನೀಡಲಾಗಿದೆ. ಮಾ. 31ರಂದು ಅಂಕುರಾರ್ಪಣ, ಕಳಸ ಸ್ಥಾಪನೆ ಹಾಗೂ ಹೋಮಾದಿ ಕಾರ್ಯಕ್ರಮಗಳು ನಡೆಯದಿವೆ. ಏಪ್ರಿಲ್ 1ರಂದು ರಾತ್ರಿ ಗರುಡೋತ್ಸವ ಹಾಗೂ ಕಲ್ಯಾಣೋತ್ಸವ ಸೇವೆಗಳು ಜರುಗಲಿವೆ. ಉತ್ಸವದ ಪ್ರಮುಖ ಘಟ್ಟವಾದ ಬ್ರಹ್ಮರಥೋತ್ಸವವು ಏಪ್ರಿಲ್ 3ರಂದು ಮಧ್ಯಾಹ್ನ 12 ಗಂಟೆಯ ಶುಭ ಲಗ್ನದಲ್ಲಿ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದ ವತಿಯಿಂದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ. ಏ. 7ರ ಮಂಗಳವಾರ ಸಂಜೆ ಶ್ರೀ ಕಣಿವೆಮಾರಮ್ಮ ದೇವಿಗೆ ಸುಮಂಗಲೆಯರಿಂದ ಅಕ್ಕಿ ತಂಬಿಟ್ಟಿನ ಆರತಿ ಸೇವೆ ನಡೆಯುವುದರೊಂದಿಗೆ ಜಾತ್ರಾ…

Read More

ಅಂಗನವಾಡಿ ನೇಮಕಾತಿ: ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ, ಏ.10ರವರೆಗೆ ಆಕ್ಷೇಪಣೆ ಅವಕಾಶ ಚಿತ್ರದುರ್ಗ, ಮಾ.31: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಿಸಿದೆ. ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ 22 ಅಂಗನವಾಡಿ ಕಾರ್ಯಕರ್ತೆ ಹಾಗೂ 228 ಸಹಾಯಕಿ ಹುದ್ದೆಗಳಿಗಾಗಿ 2025ರ ಆಗಸ್ಟ್ 5ರಂದು ಅಧಿಸೂಚನೆ ಹೊರಡಿಸಿ, ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಮಾ.12ರಂದು ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಪಟ್ಟಿಯನ್ನು ಸಂಬಂಧಿಸಿದ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳು, ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯಿತಿಗಳು, ಶಾಲೆಗಳು, ಸಮುದಾಯ ಭವನಗಳು ಹಾಗೂ ಗ್ರಂಥಾಲಯಗಳಲ್ಲಿ ಪ್ರಕಟಿಸಲಾಗಿದೆ. ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ ಏಪ್ರಿಲ್ 10ರ ಸಂಜೆ 5.30ರೊಳಗಾಗಿ ಸಂಬಂಧಿತ ಕಚೇರಿಗಳಿಗೆ ಸಲ್ಲಿಸಲು ಸೂಚಿಸಲಾಗಿದೆ…

Read More