Author: ಮೃತ್ಯುಂಜಯಾಚಾರ್ ಬಿ

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

ಒಳ ಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ನೇಮಕಾತಿಯಲ್ಲೇ ಅನುಷ್ಠಾನ – ಮುನಿಯಪ್ಪ ಚಿತ್ರದುರ್ಗ, ಮಾ.31: ರಾಜ್ಯ ಸರ್ಕಾರ ನೇಮಕಾತಿಗೆ ಮುಂದಾಗಿರುವ ಹುದ್ದೆಗಳಲ್ಲಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡೇ ಪ್ರಕ್ರಿಯೆ ನಡೆಸಲಾಗುವುದು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದರು. ನಗರದ ಶಿವ ಶರಣ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆ ಅಂತಿಮಗೊಳ್ಳುವೊಳಗೆ ಒಳ ಮೀಸಲಾತಿ ಜಾರಿಯಾಗಲಿದ್ದು, ಅದರಂತೆಯೇ ಎಲ್ಲ ಸಮುದಾಯಗಳ ನಿರುದ್ಯೋಗಿ ಅಭ್ಯರ್ಥಿಗಳಿಗೆ ನ್ಯಾಯ ದೊರೆಯಲಿದೆ. ಈ ಕುರಿತು ಯಾವುದೇ ಆತಂಕ ಬೇಡ ಎಂದು ಭರವಸೆ ನೀಡಿದರು. ಹಿಂದಿನ ಬಿಜೆಪಿ ಸರ್ಕಾರ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಏರಿಸಿದ್ದರೂ, ನ್ಯಾಯಾಲಯದ ನಿರ್ದೇಶನದಂತೆ ಅದನ್ನು ಶೇ.50ರೊಳಗೆ ತರಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸಮುದಾಯಗಳ ಮುಖಂಡರೊಂದಿಗೆ ಚರ್ಚಿಸಿ, ಸ್ವಲ್ಪ ಪ್ರಮಾಣದಲ್ಲಿ ಕಡಿತಗೊಳಿಸಿ ಜಾರಿಗೆ ತರಲು ಒಪ್ಪಿಗೆ ವ್ಯಕ್ತವಾಗಿದೆ. ಅಂತಿಮ ತೀರ್ಮಾನವನ್ನು ಸಚಿವ ಸಂಪುಟದಲ್ಲಿ ಕೈಗೊಂಡು, ಉಪಚುನಾವಣೆಯ ಬಳಿಕ ಜಾರಿ ಮಾಡಲಾಗುವುದು ಎಂದರು. ಪರಿಶಿಷ್ಟ ಜಾತಿಗಳ ಒಳ…

Read More

ಚನ್ನಗಾನಹಳ್ಳಿ: ಕೃಷಿಹೊಂಡದಲ್ಲಿ ಮುಳುಗಿ 6ನೇ ತರಗತಿ ವಿದ್ಯಾರ್ಥಿ ಸಾವು ಚಳ್ಳಕೆರೆ, ಮಾ.30: ತಾಲ್ಲೂಕಿನ ತಳಕು ಠಾಣಾ ವ್ಯಾಪ್ತಿಯ ಚನ್ನಗಾನಹಳ್ಳಿ ಗ್ರಾಮದಲ್ಲಿ ಸ್ನೇಹಿತರೊಂದಿಗೆ ಈಜಾಡಲು ತೆರಳಿದ್ದ 6ನೇ ತರಗತಿ ವಿದ್ಯಾರ್ಥಿಯೊಬ್ಬ ಕೃಷಿಹೊಂಡದಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಟಿ. ಕೀರ್ತನ (12) ಎಂದು ಗುರುತಿಸಲಾಗಿದೆ. ಇವರು ಗ್ರಾಮದ ಅಂಗನವಾಡಿ ಕೇಂದ್ರದ ಸಹಾಯಕಿ ಅಂಬಿಕಾ ಅವರ ಪುತ್ರನಾಗಿದ್ದಾರೆ. ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಬೆಳಗ್ಗೆ ಸುಮಾರು 11.30ರ ವೇಳೆಗೆ ಸ್ನೇಹಿತರೊಂದಿಗೆ ಕೃಷಿಹೊಂಡಕ್ಕೆ ಈಜಾಡಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಮಗನ ಸಾವಿನಲ್ಲಿ ಯಾವುದೇ ಅನುಮಾನವಿಲ್ಲವೆಂದು ಪೋಷಕರು ದೂರು ನೀಡಿದ್ದು, ಪ್ರಕರಣವನ್ನು ಎಎಸ್‌ಐ ಟಿ.ಎನ್. ಮಂಜಣ್ಣ ದಾಖಲಿಸಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿತ್ರ ವಿವರಣೆ: ಚಳ್ಳಕೆರೆ ತಾಲ್ಲೂಕಿನ ಚನ್ನಗಾನಹಳ್ಳಿ ಗ್ರಾಮದಲ್ಲಿ ಕೃಷಿಹೊಂಡದಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿಯ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ದೃಶ್ಯ.

Read More

ಡಿಕೆಶಿ, ಸಿದ್ದರಾಮಯ್ಯ ಜೋಡೆತ್ತುಗಳಲ್ಲ, ಕುಂಟೆತ್ತುಗಳು; ಆರ್. ಅಶೋಕ್ ವಾಗ್ದಾಳಿ ಚಿತ್ರದುರ್ಗ: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದು, ಸರ್ಕಾರದ ಆಡಳಿತವನ್ನು ದುರಾಡಳಿತ ಮತ್ತು ಭ್ರಷ್ಟಾಚಾರದ ಕೇಂದ್ರ ಎಂದು ಆರೋಪಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರ 60 ಶೇಕಡಾ ಕಮೀಷನ್‌ನಲ್ಲಿ ಮುಳುಗಿದೆ. ಅಭಿವೃದ್ಧಿ ಎಂಬುದು ಸಂಪೂರ್ಣ ಮರೀಚಿಕೆಯಾಗಿದೆ ಎಂದು ಟೀಕಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉಲ್ಲೇಖಿಸಿ, ಸಾಲದರಾಮಯ್ಯ ಆಗಿದ್ದಾರೆ ಎಂದು ವ್ಯಂಗ್ಯವಾಡಿದರು. ರಾಜ್ಯದ ಆರ್ಥಿಕ ಸ್ಥಿತಿ ಕುರಿತು ಮಾತನಾಡಿದ ಅಶೋಕ್, ಸರ್ಕಾರ ₹1.32 ಲಕ್ಷ ಕೋಟಿ ಸಾಲದಲ್ಲಿ ಮುಳುಗಿದೆ. ಸಿದ್ದರಾಮಯ್ಯ ಆಡಳಿತದಲ್ಲಿ ಒಟ್ಟು ₹4 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಸಾಲ ಮಾಡಲಾಗಿದೆ. ಇದರಿಂದ ಪ್ರತಿಯೊಬ್ಬರ ತಲೆಯ ಮೇಲೆ ಸುಮಾರು ₹80 ಸಾವಿರ ಸಾಲದ ಹೊರೆ ಬಂದಿದೆ ಎಂದು ಆರೋಪಿಸಿದರು. ಅನ್ನಭಾಗ್ಯ ಯೋಜನೆಗೆ ₹750 ಕೋಟಿ ರೂ. ನೀಡಿಲ್ಲ ಎಂದು ಹೇಳಿದ ಅವರು, ಈ ಸರ್ಕಾರವನ್ನು ನಂಬಿ ಕುಳಿತರೆ ರಾಜ್ಯದ ಸ್ಥಿತಿ…

Read More

ಮುಂದಿನ 48 ಗಂಟೆ ಎಚ್ಚರಿಕೆ: ಗುಡುಗು, ಮಿಂಚು, ಭಾರೀ ಮಳೆ ಮುನ್ಸೂಚನ ಟಿಒಬಿ ನ್ಯೂಸ್ ಬೆಂಗಳೂರು ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು, ಮಿಂಚು ಮತ್ತು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದ 22ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಮಧ್ಯಾಹ್ನ ಮತ್ತು ಸಂಜೆ ವೇಳೆಯಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಹೆಚ್ಚಿದ್ದು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗಗಳಾದ…

Read More

ನಾನು ಪದವಿಯನ್ನು ಪೂರ್ಣಗೊಳಿಸಿಲ್ಲ;603 ಕೋಟಿ ರೂ. ಆಸ್ತಿ ಘೋಷಿಸಿದ ಅಭ್ಯರ್ಥಿ ಮಾತು ಟಿಒಬಿ ನ್ಯೂಸ್ ಚೆನ್ನೈ ಟಿವಿಕೆ ಮುಖ್ಯಸ್ಥ ವಿಜಯ್ ಸೋಮವಾರ ಪೆರಂಬೂರು ಮತ್ತು ತಿರುಚಿ ಪೂರ್ವ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದು, ತಮ್ಮ ಆಸ್ತಿಯನ್ನೂ ಘೋಷಣೆ ಮಾಡಿದ್ದಾರೆ. ಜತೆಗೆ ಶೈಕ್ಷಣಿಕ ಅರ್ಹತೆಯನ್ನು ಬಹಿರಂಗಗೊಳಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಕೆ ಮಾಡಿರುವ ಅಫಿಡವಿಟ್ನಲ್ಲಿ ಒಟ್ಟು 603.20 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ವಿಜಯ್ 1992 ರಲ್ಲಿ ಚೆನ್ನೈನ ಲೊಯೊಲಾ ಕಾಲೇಜಿನಿಂದ ಬಿಎಸ್ಸಿ ಪದವಿಯನ್ನು ಅರ್ಧಕ್ಕೆ ನಿಲ್ಲಿಸಿದ್ದಾಗಿ ಬಹಿರಂಗಪಡಿಸಿದ್ದಾರೆ. 1989 ಮತ್ತು 1991 ರಲ್ಲಿ ಕ್ರಮವಾಗಿ ಖಾಸಗಿ ಅಧ್ಯಯನದ ಮೂಲಕ 10 ಮತ್ತು 12 ನೇ ತರಗತಿಯನ್ನು ಪೂರ್ಣಗೊಳಿಸಿದ್ದಾರೆ. 52 ವರ್ಷದ ನಟ-ರಾಜಕಾರಣಿ ಸುಮಾರು 404.58 ಕೋಟಿ ರೂ.ಗಳ ಮೌಲ್ಯದ ಚರಾಸ್ತಿ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಕೊಡೈಕೆನಾಲ್‌ನಲ್ಲಿರುವ ಕೃಷಿ ಭೂಮಿ ಮತ್ತು ಚೆನ್ನೈನಾದ್ಯಂತ ವಾಣಿಜ್ಯ ಮತ್ತು ವಸತಿ ಪ್ರಾಪರ್ಟಿಗಳನ್ನು ಒಳಗೊಂಡಂತೆ ಅವರ ಸ್ಥಿರಾಸ್ತಿಗಳ ಮೌಲ್ಯ ಸುಮಾರು 198.62 ಕೋಟಿ ರೂ.ಗಳಷ್ಟಿದೆ. ವಿವಾದದಲ್ಲಿರುವ ನಿರ್ದಿಷ್ಟ…

Read More

🌟 ನಿತ್ಯ ಭವಿಷ್ಯ – 31/03/2026 🌟 ಮೇಷ (Aries): ಇಂದು ನಿಮ್ಮ ಕೆಲಸಗಳಲ್ಲಿ ಚುರುಕುತನ ಕಾಣಿಸಿಕೊಳ್ಳುತ್ತದೆ. ಹೊಸ ಯೋಜನೆಗಳಿಗೆ ಚಾಲನೆ ನೀಡಲು ಅನುಕೂಲಕರ ದಿನ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಅಗತ್ಯ. ವೃಷಭ (Taurus): ಕುಟುಂಬದೊಂದಿಗೆ ಸಂತೋಷದ ಸಮಯ ಕಳೆಯುವಿರಿ. ಉದ್ಯೋಗದಲ್ಲಿ ಸಣ್ಣ ಮಟ್ಟದ ಒತ್ತಡ ಎದುರಾಗಬಹುದು. ಆರೋಗ್ಯದ ಕಡೆ ಗಮನ ಕೊಡಿ. ಮಿಥುನ (Gemini): ಮಾತಿನ ಮೂಲಕ ನಿಮ್ಮ ಕೆಲಸ ಸಾಧಿಸುವ ದಿನ. ಸ್ನೇಹಿತರ ಸಹಕಾರ ದೊರೆಯಲಿದೆ. ಪ್ರಯಾಣ ಸಾಧ್ಯತೆ ಇದೆ. ಕಟಕ (Cancer): ಆರ್ಥಿಕ ಲಾಭದ ಸೂಚನೆಗಳಿವೆ. ಮನೆ ಸಂಬಂಧಿತ ವಿಷಯಗಳಲ್ಲಿ ಉತ್ತಮ ಪ್ರಗತಿ ಕಾಣಬಹುದು. ಶಾಂತ ಮನಸ್ಥಿತಿ ಕಾಪಾಡಿಕೊಳ್ಳಿ. ಸಿಂಹ (Leo): ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಮೆಚ್ಚುಗೆ ಸಿಗಬಹುದು. ಆದರೆ ಅಹಂಕಾರ ತಪ್ಪಿಸಿ. ಕನ್ಯಾ (Virgo): ಇಂದು ನಿಮಗೆ ಮಿಶ್ರ ಫಲ. ಅನಗತ್ಯ ಚಿಂತೆಗಳಿಂದ ದೂರವಿರಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚುತ್ತದೆ. ತುಲಾ (Libra): ಸಂಬಂಧಗಳಲ್ಲಿ ಉತ್ತಮ ಬೆಳವಣಿಗೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಉಪಯುಕ್ತವಾಗಬಹುದು. ಹಣಕಾಸು…

Read More

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ; ಕಿಡ್ಡೀ ಫೀಟ್ ಪದವಿ ಪ್ರದಾನ ಚಿತ್ರದುರ್ಗ: ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಆವರಣದಲ್ಲಿ ಸೋಮವಾರ 2025-26ನೇ ಸಾಲಿನ ‘ಕಿಡ್ಡೀ ಫೀಟ್’ ಪದವಿ ಪ್ರದಾನ ಸಮಾರಂಭ ಅತ್ಯಂತ ಸಂಭ್ರಮದಿಂದ ಜರುಗಿತು. ಶೈಕ್ಷಣಿಕ ಹಂತದ ಮೊದಲ ಮೈಲಿಗಲ್ಲನ್ನು ತಲುಪಿದ ಪುಟಾಣಿ ಮಕ್ಕಳ ಸಾಧನೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಸಂಭ್ರಮದ ವಾತಾವರಣದ ಈ ಸಮಾರಂಭದಲ್ಲಿ ಪದವಿ ಗೌರವ ಸ್ವೀಕರಿಸಿದ ಯುಕೆಜಿ ಪುಟಾಣಿಗಳು ಶೈಕ್ಷಣಿಕ ಉಡುಪಿನಲ್ಲಿ ಮಿಂಚಿದರು. ಪೋಷಕರು ತಮ್ಮ ಮಕ್ಕಳ ಸಾಧನೆ ಕಂಡು ಹರ್ಷ ವ್ಯಕ್ತಪಡಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಚಿತ್ರದುರ್ಗದ ಖ್ಯಾತ ಮಕ್ಕಳ ತಜ್ಞರಾದ ಡಾ. ಪೃಥ್ವೀಶ್ ಅವರು ಆಗಮಿಸಿ, ಯುಕೆಜಿ ಮಕ್ಕಳಿಗೆ ಪದವಿ ಪ್ರದಾನ ಮಾಡಿದರು. ನಂತರ ಮಾತನಾಡಿದ ಡಾ. ಪೃಥ್ವೀಶ್, ಇಂದಿನ ಆಧುನಿಕ ಜೀವನಶೈಲಿಯಲ್ಲಿ ಮಕ್ಕಳ ಆರೋಗ್ಯ ಮತ್ತು ಬೆಳವಣಿಗೆಯ ಮೇಲೆ ಮೊಬೈಲ್ ಹಾಗೂ ಪೌಷ್ಟಿಕಾಂಶದ ಕೊರತೆ ಗಂಭೀರ ಪರಿಣಾಮ ಬೀರುತ್ತಿದ್ದು, ಪೋಷಕರು ಈ ಬಗ್ಗೆ ಹೆಚ್ಚಿನ…

Read More

ಸಚಿವ ಡಿ. ಸುಧಾಕರ್‌ಗೆ ಶಸ್ತ್ರ ಚಿಕಿತ್ಸೆ; ಆರೋಗ್ಯ ವಿಚಾರಿಸಲು ಸದ್ಯಕ್ಕಿಲ್ಲ ಅವಕಾಶ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಹಿನ್ನೆಲೆಯಲ್ಲಿ ವೈದ್ಯರು ಕಟ್ಟುನಿಟ್ಟಿನ ವಿಶ್ರಾಂತಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಯಾರಿಗೂ ಭೇಟಿ ಮಾಡಲು ಅವಕಾಶ ಇರುವುದಿಲ್ಲ. ವೈದ್ಯರ ಸಲಹೆಯ ಮೇರೆಗೆ ಮುಂದಿನ ಒಂದು ವಾರದವರೆಗೆ ಯಾವುದೇ ಭೇಟಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಈ ಹಿನ್ನೆಲೆ ಸಚಿವರ ಅಭಿಮಾನಿಗಳು, ಬೆಂಬಲಿಗರು ಹಾಗೂ ಸಾರ್ವಜನಿಕರು ದಯವಿಟ್ಟು ಸಹಕರಿಸಿ ಆಸ್ಪತ್ರೆಗೆ ಭೇಟಿ ನೀಡುವುದನ್ನು ತಪ್ಪಿಸಬೇಕೆಂದು ಮನವಿ ಮಾಡಲಾಗಿದೆ. ಸಚಿವರ ಆರೋಗ್ಯ ಶೀಘ್ರ ಸುಧಾರಿಸಲಿ ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಹಾರೈಸಿದ್ದಾರೆ.

Read More

ವಿತರಕರ ಸಂಘದ ಅಧ್ಯಕ್ಷ ಶಂಭುಲಿಂಗ ಅವರಿಗೆ 5ಲಕ್ಷ ರೂ ನೆರವು ನೀಡಿದ ಸಿಎಂ ರಾಜ್ಯ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಕೆ.ಶಂಭುಲಿಂಗ ಅವರ ತುರ್ತು ಚಿಕಿತ್ಸೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವಿನ ಹಸ್ತ ಚಾಚಿದ್ದಾರೆ. ಪತ್ರಿಕಾ ವಿತರಕರ ಸಂಘಟನೆಗಾಗಿ ಅವಿರತವಾಗಿ ದುಡಿದ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದಾರೆ. ಈಗಾಗಲೇ 16ಲಕ್ಷಕ್ಕೂ ಹೆಚ್ಚು ವೆಚ್ಚವಾಗಿದ್ದು, ಇನ್ನೂ 20 ಲಕ್ಷ ಅಗತ್ಯವಿದೆ. ಈ ಸಂಕಷ್ಟದ ಹೊತ್ತಿನಲ್ಲಿ ಚಿಕಿತ್ಸಾವೆಚ್ಚಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಯುಕ್ತಿಕವಾಗಿ 5ಲಕ್ಷ ರೂ ನೆರವು ನೀಡಿದ್ದು, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಆಸ್ಪತ್ರೆಗೆ ತಲುಪಿಸಿದ್ದಾರೆ. ನಮ್ಮಗಳ ಮನವಿಗೆ ಸ್ಪಂದಿಸಿ ನೆರವು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಲ್ಲ ರೀತಿಯ ಸಹಕಾರ ನೀಡಿದ ಕೆ.ವಿ.ಪ್ರಭಾಕರ್ ಅವರಿಗೆ ವಿತರಕರು ಮತ್ತು ಪತ್ರಕರ್ತರ ಪರವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Read More

ವದ್ದಿಕೆರೆ ಸಿದ್ದೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ವೈಭವ; ಲಕ್ಷಾಂತರ ಭಕ್ತರು ಸಾಕ್ಷಿ ಟಿಒಬಿ ನ್ಯೂಸ್ ಹಿರಿಯೂರು ತಾಲೂಕಿನ ಸುಕ್ಷೇತ್ರ ವದ್ದಿಕೆರೆ ಸಿದ್ದೇಶ್ವರ ಸ್ವಾಮಿ ಯಾನೆ ಕಾಲಭೈರವೇಶ್ವರ ಸ್ವಾಮಿ ಯ ಬ್ರಹ್ಮರಥೋತ್ಸವವು ಸೋಮವಾರ ಮಧ್ಯಾಹ್ನ ಲಕ್ಷಾಂತರ ಭಕ್ತ ಸಮೂಹದ ನಡುವೆ ಸಡಗರ ಸಂಭ್ರಮ ಹಾಗೂ ಭಕ್ತಿ ಭಾವದಿಂದ ನಡೆಯಿತು. ಸಿದ್ದೇಶ್ವರ ಸ್ವಾಮಿಗೆ ಅಭಿಷೇಕ ಅರ್ಚನೆ ಹೂವಿನ ಅಲಂಕಾರ ನಡೆಯಿತು ರಥೋತ್ಸವವನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು ಸ್ವಾಮಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿದ ನಂತರ ಭಕ್ತಾದಿಗಳ ಉದ್ಘೋಷ ಕೇಳಿ ಬಂದವು. ವದ್ದಿಕೆರೆ, ಐಮಂಗಲ, ಯರಬಳ್ಳಿ, ಚಿತ್ರದುರ್ಗ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಸಹಸ್ರಾರು ಜನ ಶ್ರೀ ಸಿದ್ದೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

Read More