Author: ಮೃತ್ಯುಂಜಯಾಚಾರ್ ಬಿ
ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.
ನಿತ್ಯ ಭವಿಷ್ಯ – 30/03/2026 (ಸೋಮವಾರ) 🔯 ಮೇಷ (Aries) ಇಂದು ಕೆಲಸಗಳಲ್ಲಿ ಚುರುಕು ಕಾಣುತ್ತದೆ. ಹೊಸ ಅವಕಾಶಗಳು ಎದುರಾಗಬಹುದು. ಆರ್ಥಿಕವಾಗಿ ಲಾಭದ ಸೂಚನೆ ಇದೆ. ಕುಟುಂಬದ ಬೆಂಬಲ ಸಿಗುತ್ತದೆ. 🔯 ವೃಷಭ (Taurus) ಧೈರ್ಯದಿಂದ ನಿರ್ಧಾರ ತೆಗೆದುಕೊಂಡರೆ ಯಶಸ್ಸು ಖಚಿತ. ಉದ್ಯೋಗದಲ್ಲಿ ಸ್ವಲ್ಪ ಒತ್ತಡ ಇರಬಹುದು. ಆರೋಗ್ಯದ ಕಡೆ ಗಮನ ಹರಿಸಿ. 🔯 ಮಿಥುನ (Gemini) ಸಂವಹನದಿಂದ ಲಾಭವಾಗುತ್ತದೆ. ಸ್ನೇಹಿತರ ಸಹಕಾರ ದೊರೆಯುತ್ತದೆ. ಹೊಸ ಯೋಜನೆಗಳು ಯಶಸ್ವಿಯಾಗಬಹುದು. 🔯 ಕರ್ಕಾಟಕ (Cancer) ಮನಸ್ಸಿಗೆ ಶಾಂತಿ ಸಿಗುತ್ತದೆ. ಕುಟುಂಬದೊಂದಿಗೆ ಸಂತೋಷದ ಕ್ಷಣಗಳು. ಹಣಕಾಸಿನಲ್ಲಿ ಸಾಮಾನ್ಯ ಸ್ಥಿತಿ. 🔯 ಸಿಂಹ (Leo) ನಾಯಕತ್ವ ಗುಣದಿಂದ ಮೆಚ್ಚುಗೆ ಸಿಗುತ್ತದೆ. ಉದ್ಯೋಗದಲ್ಲಿ ಪ್ರಗತಿ ಸಾಧ್ಯ. ಹೂಡಿಕೆಗಳಿಗೆ ಉತ್ತಮ ಸಮಯ. 🔯 ಕನ್ಯಾ (Virgo) ಸೂಕ್ಷ್ಮ ವಿಚಾರಗಳಿಂದ ಯಶಸ್ಸು ದೊರೆಯುತ್ತದೆ. ಆರೋಗ್ಯದಲ್ಲಿ ಸ್ವಲ್ಪ ಕಾಳಜಿ ಅಗತ್ಯ. ಕೆಲಸದಲ್ಲಿ ಶ್ರದ್ಧೆ ಮುಖ್ಯ. 🔯 ತುಲಾ (Libra) ಸಂಬಂಧಗಳಲ್ಲಿ ಉತ್ತಮ ಬೆಳವಣಿಗೆ. ವ್ಯವಹಾರದಲ್ಲಿ ಲಾಭ. ಪ್ರಯಾಣದ ಸಾಧ್ಯತೆ ಇದೆ. 🔯…
ರಾಷ್ಟ್ರಮಟ್ಟಕ್ಕೆ ಆರ್.ವೈಷ್ಣವಿ ಆಯ್ಕೆ ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರದಿಂದ ಬೆಂಗಳೂರಿನ ಗಾಂಧಿ ಭವನದಲ್ಲಿ ಈಚೆಗೆ ನಡೆದ ವಿಕಸಿತ ಭಾರತ ಯುವ ಸಂಸತ್ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಡಾನ್ ಬೋಸ್ಕೋ ಪದವಿ ಕಾಲೇಜಿನ ವಿದ್ಯಾರ್ಥಿನಿ ಆರ್.ವೈಷ್ಣವಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ‘ಕೇಂದ್ರ ಬಜೆಟ್ 2026; ವಿಕಸಿತ ಭಾರತ 2046 ರ ಕಡೆ ಭಾರತೀಯ ಯುವಕರಿಗೆ ಬಲವಾದ ದಾರಿ’ ವಿಷಯ ಕುರಿತು ಆಯೋಜಿಸಿದ್ದ ಭಾಷಣ ಸ್ಪರ್ಧೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ 155 ಸ್ಪರ್ಧಿಗಳು ಭಾಗವಹಿಸಿದ್ದರು. ಆರ್.ವೈಷ್ಣವಿ ಕನ್ನಡದಲ್ಲಿ ವಿಷಯ ಮಂಡಿಸುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ’ ಎಂದು ಉಪ ಪ್ರಾಂಶುಪಾಲ ಫಾ.ಕ್ರಿಸ್ಟಿ ಜೋಸೆಫ್ ತಿಳಿಸಿದ್ದಾರೆ. ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಆರ್.ವೈಷ್ಣವಿ ಹಾಗೂ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎ.ನಿಧಿಶ್ರೀಯನ್ನು ಡಾನ್ ಬೋಸ್ಕೋ ಪದವಿ ಕಾಲೇಜು ಪ್ರಾಂಶುಪಾಲ ಫಾ.ಬೆನ್ನಿ ಕ್ರಿಸ್ತುದಾಸ್ ಅಭಿನಂದಿಸಿದರು. ಎನ್‌ಎಸ್‌ಎಸ್ ಜಿಲ್ಲಾ ನೋಡಲ್ ಅಧಿಕಾರಿ ಎನ್.ಧನಕೋಟಿ, ಸಹಾಯಕ ಪ್ರಾಧ್ಯಾಪಕರಾದ ಅಭಿಶಯ್, ಪೂಬಾಲನ್ ಇದ್ದರು. ಚಿತ್ರದುರ್ಗದ ಡಾನ್ ಬೋಸ್ಕೋ ಪದವಿ ಕಾಲೇಜಿನಲ್ಲಿ ರಾಷ್ಟ್ರಮಟ್ಟಕ್ಕೆ…
ಕರಿಯಪ್ಪ ಮಾಳಿಗೆ ನೆಲದ ಮಗ ; ಸಂಶೋಧನೆಯ ಹಾದಿಯಲ್ಲಿ ಮಣ್ಣಿನ ಗುಣ ಹುಡುಕಿದ ಚಿಂತಕ ಟಿಒಬಿ ನ್ಯೂಸ್ ಚಿತ್ರದುರ್ಗ ಈ ನೆಲದ ತತ್ವಪದಕಾರರ ಅಂತರಂಗದ ಒಡನಾಟದೊಂದಿಗೆ, ಮಣ್ಣಿನ ಸತ್ವ ಮತ್ತು ಜೀವತಂತುವನ್ನು ಮೀಟಿದ ಅಪರೂಪದ ಸಂಶೋಧಕ ಡಾ. ಜೆ. ಕರಿಯಪ್ಪ ಮಾಳಿಗೆ ಎಂದು ಸಂಸ್ಕೃತಿ ಚಿಂತಕ ಡಾ.ಎಸ್.ನಟರಾಜ ಬೂದಾಳು ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಮೀಪದ ಕ್ರೀಡಾ ಭವನದಲ್ಲಿ ಭಾನುವಾರ ಪತ್ರಕರ್ತರ ಬಳಗ, ಆಶಯ ವತಿಯಿಂದ ಹಮ್ಮಿಕೊಂಡಿದ್ದ ಡಾ.ಜೆ.ಕರಿಯಪ್ಪ ಮಾಳಿಗೆ ನಡೆ-ನುಡಿ, ಗೌರವಾರ್ಪಣೆ ಮತ್ತು ವಿಶಿಷ್ಟ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ, ತತ್ವಪದ ಮತ್ತು ಅವಧೂತ ಪರಂಪರೆ ಕುರಿತು ಮಾತನಾಡಿದರು. ತತ್ವಪದಕಾರರ ಪರಂಪರೆಯೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ಕರಿಯಪ್ಪ ಮಾಳಿಗೆ ಈ ನೆಲದ ನಿಜವಾದ ಪ್ರತಿನಿಧಿ. ಚಿತ್ರದುರ್ಗದ ನೈಜ ಸತ್ವವನ್ನು ಅರ್ಥಮಾಡಿಕೊಂಡಿರುವ ಅವರು, ಈ ಮಣ್ಣಿನ ಸಾಂಸ್ಕೃತಿಕ ಬೇರುಗಳನ್ನು ಮೀಟಿದವರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರದುರ್ಗದ ಬಹುತ್ವವೇ ಈ ನೆಲದ ನಿಜವಾದ ಶಕ್ತಿ. ಕರ್ನಾಟಕದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಚಿತ್ರದುರ್ಗದಲ್ಲಿ ಯಾವುದೇ…
ರೈತ ಸಮೃದ್ಧಿಯಾಗಿದ್ದರೆ ದೇಶವು ಕೂಡ ಸಮೃದ್ಧಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಚಿತ್ರದುರ್ಗ: ರೈತ ಸಮೃದ್ಧಿಯಾಗಿದ್ದರೆ ದೇಶವು ಕೂಡ ಸಮೃದ್ಧಿಯಾಗಿರುತ್ತದೆ. ಹಸಿವು ನೀಗಿಸುವ ಕೆಲಸವನ್ನು ರೈತ ಬಿಟ್ಟು ಇನ್ಯಾರು ಕೂಡ ಮಾಡಲಾಗದು ಹಾಗಾಗಿ ನಾನು ರೈತರ ಪರವಾಗಿ ಯಾವಾಗಲೂ ಇರುತ್ತೇನೆ ಎಂದು ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವರು ತಿಳಿಸಿದರು. ತಾಲೂಕಿನ ಭೀಮಸಮುದ್ರ ಗ್ರಾಮದಲ್ಲಿ ಭಾನುವಾರ ಕರ್ನಾಟಕ ರಾಜ್ಯ ರೈತ ಸಂಘದ ಶಾಖೆ ಉದ್ಘಾಟಿಸಿ ಮಾತನಾಡಿದರು. ರೈತರು ಕಷ್ಟ ಬಿದ್ದು ಭೂಮಿಯನ್ನು ಹದ ಮಾಡಿ ಫಸಲನ್ನು ತೆಗೆಯಲು ಸಾಕಷ್ಟು ಸಮಸ್ಯೆಗಳನ್ನ ಹೆದರಿಸಿ ನಿಲ್ಲುತ್ತಾನೆ ಆದರೆ ಸರಿಯಾದ ಬೆಲೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲ್ಕುತಿದ್ದಾರೆ ಈ ವಿಚಾರವನ್ನು ನಾನು ಗಂಭೀರವಾಗಿ ಅರಿತಿದ್ದೇನೆ, ಆದ್ದರಿಂದ ರೈತರಿಗೆ ಅನುಕೂಲವಾಗುವಂತಹ ಕೃಷಿ ಯೋಜನೆಗಳು ರೈತರಿಗೆ ತಲುಪಿಸುವಂತಹ ಕೆಲಸವನ್ನ ನಾನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದರು. ರೈತ ಬಾಂಧವರು ಒಂದಾದರೆ ಇಡೀ ದೇಶದ ಚಿತ್ರಣವೇ ಬದಲಾಗುತ್ತದೆ ಎಂಬುವುದನ್ನು ನಾನು ಅರಿತಿದ್ದೇನೆ ಆದ್ದರಿಂದ ಭೀಮಸಮುದ್ರ ಗ್ರಾಮದ ಸುತ್ತಮುತ್ತಲಿನ ರೈತಪಿ…
ಕರುನಾಡಿನ ಜಲಋಷಿ – ರಾಜಸ್ಥಾನದ ಜಲರಕ್ಷಕ: ದೆಹಲಿಯಲ್ಲಿ ಜಲ ಸಂರಕ್ಷಣೆಯ ಮಹಾ ಸಂವಾದ ನವದೆಹಲಿ: ರಾಜಸ್ಥಾನದ ಪ್ರಸಿದ್ಧ ಜಲತಜ್ಞ ಹಾಗೂ ಮ್ಯಾಗ್ಸೆಸೆ ಪುರಸ್ಕೃತ ಡಾ. ರಾಜೇಂದ್ರ ಸಿಂಗ್ ಅವರು ಕರ್ನಾಟಕದ ತರಳಬಾಳು ಜಗದ್ಗುರು ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳನ್ನು ದೆಹಲಿಯಲ್ಲಿ ಭೇಟಿಯಾಗಿ ಜಲ ಸಂರಕ್ಷಣೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಕುರಿತು ಮಹತ್ವದ ಚರ್ಚೆ ನಡೆಸಿದರು. ಮಧ್ಯ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ನೀರು ಒದಗಿಸುವ ₹21 ಸಾವಿರ ಕೋಟಿ ವೆಚ್ಚದ ಭದ್ರಾ ಮೇಲ್ದಂಡೆ ಯೋಜನೆ ಅನುದಾನದ ಕೊರತೆಯಿಂದ ಸ್ಥಗಿತಗೊಂಡಿರುವ ಹಿನ್ನೆಲೆ, ಯೋಜನೆ ಪೂರ್ಣಗೊಳಿಸಲು ಸಂಕಲ್ಪಗೊಂಡು ಜಗದ್ಗುರುಗಳು ದೆಹಲಿಯಲ್ಲಿ ಪ್ರಮುಖ ರಾಜಕೀಯ ನಾಯಕರೊಂದಿಗೆ ಚರ್ಚೆ ನಡೆಸುತ್ತಿರುವ ವೇಳೆ ಈ ಭೇಟಿ ನಡೆದಿದೆ. ಈ ವೇಳೆ ಮಾತನಾಡಿದ ಡಾ. ರಾಜೇಂದ್ರ ಸಿಂಗ್, ಜಲ ಸಮಸ್ಯೆ ಜಾಗತಿಕ ಮಟ್ಟದಲ್ಲಿ ಗಂಭೀರವಾಗುತ್ತಿದ್ದು, ಸ್ಥಳೀಯ ಮಟ್ಟದಲ್ಲಿ ಜಲ ಸಾಕ್ಷರತೆ ಹಾಗೂ ನೀರಿನ ಸಂಗ್ರಹಣೆಯ ಕ್ರಮಗಳು ಅವಶ್ಯಕ ಎಂದು ತಿಳಿಸಿದರು. ಮಳೆನೀರು ಸಂಗ್ರಹ, ಚೆಕ್‌ಡ್ಯಾಂ ನಿರ್ಮಾಣ ಹಾಗೂ ಅಂತರ್ಜಲ ಹೆಚ್ಚಿಸುವ…
ನ್ಯಾಯದಲ್ಲಿ ರಾಜಿ ಬೇಡ: ಪೊಲೀಸರಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ಟಿಒಬಿ ನ್ಯೂಸ್ ಮೈಸೂರು ನ್ಯಾಯವಿತರಣೆಯಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮೈಸೂರು ಘಟಕದ 46ನೇ ಬ್ಯಾಚ್ ಸಿವಿಲ್ ಪೊಲೀಸ್ ಉಪನಿರೀಕ್ಷಕರ ಪಾಸಿಂಗ್ ಔಟ್ ಪಥಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ ಮತ್ತು ಮಾನವೀಯತೆ ಅತ್ಯಂತ ಮುಖ್ಯವೆಂದು ಹೇಳಿದರು. ಸಮಾಜದಲ್ಲಿನ ದೀನ ದಲಿತರು, ಮಹಿಳೆಯರು ಹಾಗೂ ದುರ್ಬಲ ವರ್ಗಗಳ ರಕ್ಷಣೆ ಪೊಲೀಸರ ಮುಖ್ಯ ಜವಾಬ್ದಾರಿಯಾಗಿದೆ. ಗಾಂಧೀಜಿ ಅವರ ಮಾತುಗಳನ್ನು ಉಲ್ಲೇಖಿಸಿ, ಮಧ್ಯರಾತ್ರಿ ಮಹಿಳೆಯರು ಭಯವಿಲ್ಲದೆ ಓಡಾಡುವಂತಾದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ದೊರೆಯುತ್ತದೆ ಎಂದು ಹೇಳಿದರು. ಈ ವೇಳೆ 377 ಮಂದಿ ಸಬ್ ಇನ್ಸ್ಪೆಕ್ಟರ್‌ಗಳು ಸೇವೆಗೆ ಸೇರ್ಪಡೆಯಾಗಿದ್ದು, ಕಳೆದ ಮೂರು ವರ್ಷಗಳಲ್ಲಿ 4911 ಹುದ್ದೆಗಳು ಭರ್ತಿಯಾಗಿವೆ. ಇನ್ನೂ 8000 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಿರುವುದಾಗಿ ತಿಳಿಸಿದರು. ಸರ್ಕಾರ ಸದಾ ಪೊಲೀಸರ ಬೆಂಬಲದಲ್ಲಿರುತ್ತದೆ ಎಂದು ಭರವಸೆ ನೀಡಿದರು. ಮಾದಕವಸ್ತು…
ಜಾತಿಗಿಂತ ಪ್ರೀತಿ ದೊಡ್ಡದು; ಕುಂಚಿಟಿಗ ಮಠದಲ್ಲಿ ಜಾತ್ಯತೀತ ವಿವಾಹ ಕ್ರಾಂತಿ ಹೊಸದುರ್ಗ: ಬಸವಾದಿ ಶರಣರ ವಚನಗಳು ಹಾಗೂ ಸಂವಿಧಾನದ ಆಶಯದಂತೆ ಕಳೆದ 28 ವರ್ಷಗಳಿಂದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠವು ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುತ್ತಿದ್ದು, ಇದುವರೆಗೆ 132 ಜೋಡಿಗಳ ವಿವಾಹಗಳಿಗೆ ಸಾಕ್ಷಿಯಾಗಿದೆ ಎಂದು ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ ಹೇಳಿದರು. ಪಟ್ಟಣದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಹೊಸದುರ್ಗ ತಾಲ್ಲೂಕಿನ ಹುಲೇನಹಳ್ಳಿ ಗ್ರಾಮದ ಕುಂಚಿಟಿಗ ಸಮಾಜದ ವರ ರಂಗನಾಥ ಹಾಗೂ ಪಟ್ಟಣದ ಭೋವಿ ಸಮಾಜದ ವಧು ನಂದಿನಿ ಅವರಿಗೆ ಲಿಂಗ ಸಂಸ್ಕಾರ ಹಾಗೂ ದೀಕ್ಷೆ ನೀಡಿದ ನಂತರ ಅವರು ಮಾತನಾಡಿದರು. ಹೆಣ್ಣು-ಗಂಡು ಒಂದಾದಾಗ ಜಾತಿ-ಧರ್ಮ ಅಡ್ಡಬರಬಾರದು ಎಂಬುದೇ ವಚನ ಧರ್ಮ ಮತ್ತು ಸಂವಿಧಾನ ಧರ್ಮದ ಸಾರವಾಗಿದೆ. ತಮ್ಮ ಪೀಠಾರೋಹಣದಿಂದಲೂ ಅಂತರ್ಜಾತಿ ಹಾಗೂ ಅಂತರ್ ಧರ್ಮ ವಿವಾಹಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು. ಅಂತರ್ಜಾತಿ ವಿವಾಹಗಳು ಸಮಾಜದಲ್ಲಿನ ಜಾತಿ ದ್ವೇಷವನ್ನು…
ಭದ್ರಾ ಮೇಲ್ದಂಡೆ ಯೋಜನೆಗೆ ಇನ್ನೂ ₹28,485 ಕೋಟಿ ಅಗತ್ಯ; ಕೇಂದ್ರ ಅನುದಾನಕ್ಕಾಗಿ ರಾಜ್ಯದ ಮನವಿ ನವದೆಹಲಿ: ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಲು 2024-25ರ ಬೆಲೆ ಆಧಾರದಂತೆ ಇನ್ನೂ ₹28,485 ಕೋಟಿ ಅಗತ್ಯವಿದೆ ಎಂದು ರಾಜ್ಯ ಜಲಸಂಪನ್ಮೂಲ ಇಲಾಖೆ ಅಂದಾಜಿಸಿದೆ. ಕೇಂದ್ರ ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿಗೆ ಪತ್ರ ಬರೆದಿರುವ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪರಿಷ್ಕೃತ ಯೋಜನಾ ವೆಚ್ಚದ ವಿವರಗಳನ್ನು ಸಲ್ಲಿಸಿದ್ದಾರೆ. ಭೂಸ್ವಾಧೀನ, ಅರಣ್ಯ ಅನುಮೋದನೆ ಹಾಗೂ ಇತರೆ ಸಂಬಂಧಿತ ವೆಚ್ಚಗಳನ್ನು ಈ ಅಂದಾಜಿನಲ್ಲಿ ಒಳಗೊಂಡಿರುವುದಾಗಿ ತಿಳಿಸಿದ್ದಾರೆ. ಯೋಜನೆಯನ್ನು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ಅಡಿಯಲ್ಲಿ ಸೇರಿಸಿ ಕೇಂದ್ರ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಈಗಾಗಲೇ ಪ್ರಸ್ತಾವ ಸಲ್ಲಿಸಿದೆ. ಕೇಂದ್ರ ಜಲ ಆಯೋಗದ ನಿರ್ದೇಶನದಂತೆ, ಈಗಿನ ಬೆಲೆ ಆಧಾರದಲ್ಲಿ ಪರಿಷ್ಕೃತ ವೆಚ್ಚ ಅಂದಾಜು ಸಲ್ಲಿಸಲಾಗಿದೆ. ರಾಜ್ಯದ ಪ್ರಕಾರ: ಕಾಮಗಾರಿಗಳಿಗೆ ₹23,923 ಕೋಟಿ ಡ್ರಿಪ್ ಲ್ಯಾಟರಲ್‌ಗಳಿಗೆ ₹4,561 ಕೋಟಿ. ಒಟ್ಟು ₹28,485 ಕೋಟಿ ವೆಚ್ಚವಾಗಲಿದೆ ಎಂದು…
ನಿತ್ಯ ಭವಿಷ್ಯ – 29/03/2026 (ಭಾನುವಾರ) 🔯 ಮೇಷ (Aries) ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕೆಲಸದಲ್ಲಿ ಹೊಸ ಅವಕಾಶಗಳು ದೊರೆಯುವ ಸಾಧ್ಯತೆ ಇದೆ. ಕುಟುಂಬದೊಂದಿಗೆ ಸಂತೋಷದ ಸಮಯ ಕಳೆಯಬಹುದು. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. 🔯 ವೃಷಭ (Taurus) ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಬಹುದು. ಆರೋಗ್ಯದ ಕಡೆ ಗಮನ ಹರಿಸಿ. ಹೊಸ ಹೂಡಿಕೆ ಮಾಡುವ ಮುನ್ನ ಯೋಚನೆ ಮಾಡಿ. 🔯 ಮಿಥುನ (Gemini) ಸಂಪರ್ಕಗಳು ನಿಮಗೆ ಲಾಭ ತರುತ್ತವೆ. ಸ್ನೇಹಿತರಿಂದ ಸಹಾಯ ಸಿಗಬಹುದು. ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿರ್ವಹಿಸಬಹುದು. 🔯 ಕರ್ಕಾಟಕ (Cancer) ಮನಸ್ಸಿನಲ್ಲಿ ಸ್ವಲ್ಪ ಅಶಾಂತಿ ಇರಬಹುದು. ಕುಟುಂಬದ ಬೆಂಬಲದಿಂದ ಸಮಸ್ಯೆಗಳು ನಿವಾರಣೆಯಾಗುತ್ತವೆ. ಆರ್ಥಿಕವಾಗಿ ಸಾಮಾನ್ಯ ದಿನ. 🔯 ಸಿಂಹ (Leo) ಇಂದು ನಿಮ್ಮ ನಾಯಕತ್ವ ಗುಣ ಮೆರೆದೀತು. ಉದ್ಯೋಗದಲ್ಲಿ ಗೌರವ ಹೆಚ್ಚಾಗಬಹುದು. ಹೊಸ ಯೋಜನೆಗಳನ್ನು ಆರಂಭಿಸಲು ಶುಭ ದಿನ. 🔯 ಕನ್ಯಾ (Virgo) ಸೂಕ್ಷ್ಮವಾಗಿ ಕೆಲಸ ಮಾಡಿದರೆ ಯಶಸ್ಸು ನಿಮ್ಮದೇ. ಆರೋಗ್ಯದಲ್ಲಿ ಸಣ್ಣ…
ಅಗ್ನಿಬನ್ನಿರಾಯ ಜಯಂತಿ; ಲಾಲ್‍ಬಾಗ್ ನಿರ್ಮಾಣದಲ್ಲಿ ತಿಗಳ ಸಮುದಾಯದ ಪಾತ್ರ ಅನನ್ಯ ಟಿಒಬಿ ನ್ಯೂಸ್ ಚಿತ್ರದುರ್ಗ ವಿಶ್ವವಿಖ್ಯಾತ ಬೆಂಗಳೂರಿನ ಲಾಲ್‍ಬಾಗ್ ಉದ್ಯಾನವನವನ್ನು ಸಸ್ಯಕಾಶಿಯಾಗಿ ರೂಪಿಸುವಲ್ಲಿ ಹಾಗೂ ಐತಿಹಾಸಿಕ ಕರಗ ಉತ್ಸವವನ್ನು ಉಳಿಸಿ ಬೆಳೆಸುವಲ್ಲಿ ತಿಗಳ ಸಮುದಾಯದ ಕೊಡುಗೆ ಅನನ್ಯವಾಗಿದೆ ಎಂದು ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಕನ್ನಡ ಉಪನ್ಯಾಸಕ ಡಾ.ಜಿ.ಎನ್.ಯಶೋಧರ ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಅಗ್ನಿಬನ್ನಿರಾಯ ಜಯಂತಿಯಲ್ಲಿ ಉಪನ್ಯಾಸ ನೀಡಿದರು. ಅಗ್ನಿ ಪುರಾಣದ ಪ್ರಕಾರ, ಶಂಭು ಮಹರ್ಷಿಗಳು ನಡೆಸಿದ ಯಜ್ಞ ಕುಂಡದಿಂದ ಶಿವನ ಮೂರನೇ ಕಣ್ಣಿನ ಹನಿಯ ಮೂಲಕ ಜನ್ಮತಾಳಿದ ಅಗ್ನಿಬನ್ನಿರಾಯ ಈ ಸಮುದಾಯದ ಮೂಲ ಪುರುಷ. ತಮಿಳುನಾಡಿನ ಚೋಳರ ಕಾಲದಲ್ಲಿ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದ ಈ ಜನಾಂಗಕ್ಕೆ ತಿಗಳ ಎಂಬ ಹೆಸರು ಬರಲು ಅಗ್ನಿ (ತಿ) ಮತ್ತು ಸಮೂಹ (ಗಳ) ಎಂಬ ಅರ್ಥವಿದೆ. ಚಂದ್ರನನ್ನು ತಿಂಗಳು ಎನ್ನುವಂತೆ ಇವರನ್ನು ತಿಂಗಳರು…
Subscribe to Updates
Get the latest creative news from FooBar about art, design and business.