Author: ಮೃತ್ಯುಂಜಯಾಚಾರ್ ಬಿ
ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.
ಕುಸಿತವಾಗುತ್ತಿದೆ ಹೆಣ್ಣು ಮಕ್ಕಳ ಸಂಖ್ಯೆ; ಗಡಿ ಭಾಗದ ಮೇಲೆ ನಿಗಾ ಟಿಒಬಿ ನ್ಯೂಸ್ ಚಿತ್ರದುರ್ಗ ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಮತ್ತು ಲಿಂಗಾನುಪಾತವನ್ನು ಸುಧಾರಿಸಲು ಪಿಸಿಪಿಎನ್‍ಡಿಟಿ ಕಾಯ್ದೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಪಿಸಿಪಿಎನ್‍ಡಿಟಿ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ಪರಿಶೀಲನಾ ಮತ್ತು ತಪಾಸಣಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಜಿಲ್ಲೆಯ ಲಿಂಗ ಅನುಪಾತದ ಏರಿಳಿತದ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಪಿಸಿಪಿಎನ್‍ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷೆ ಡಾ.ಎಸ್.ಸೌಮ್ಯ ಮಾತನಾಡಿ, ಜಿಲ್ಲೆಯ ಪರಶುರಾಂಪುರ ಮತ್ತು ಮೊಳಕಾಲ್ಮೂರು ಭಾಗದ ಕೆಲವು ಗರ್ಭಿಣಿಯರು ಲಿಂಗ ಪತ್ತೆ ಪರೀಕ್ಷೆಗಾಗಿ ಪಕ್ಕದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಗಡಿ ಪ್ರದೇಶಗಳಿಗೆ ಹೋಗಿ, ಅಲ್ಲಿನ ಕೆಲವು ಅನಧಿಕೃತ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಂಡು ಬರುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅಂತಹ ಪ್ರಕರಣಗಳನ್ನು ಪತ್ತೆಹಚ್ಚಲು ವಿಶೇಷ ನಿಗಾ ಇಡಬೇಕು…
ನಿಮಗೆ ನಿವೇಶನ ಬೇಕೆ? ಕೂಡಲೇ ಅರ್ಜಿ ಸಲ್ಲಿಸಿ ಚಿತ್ರದುರ್ಗ: ಹೊಸದುರ್ಗ ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ, ವಸತಿ ರಹಿತರಾಗಿರುವ ಸಾರ್ವಜನಿಕರಿಗೆ ನಿವೇಶನ ಹಂಚಿಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಏಪ್ರಿಲ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ . ಗೊರವಿನಕಲ್ಲು ರಿ.ಸ.ನಂ. 86ರಲ್ಲಿ ನಿವೇಶನ, ವಸತಿ ರಹಿತರಿಗೆ ನಿವೇಶನಗಳನ್ನು ಹಂಚಿಕೆ ಮಾಡಲು 2026ರ ಮಾರ್ಚ್ 13 ರಂದು ನಡೆದ ಆಶ್ರಯ ಸಮಿತಿ ಸಭೆಯ ತೀರ್ಮಾನದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ಅರ್ಹ ಫಲಾನುಭವಿಗಳು ಹೊಸದುರ್ಗ ಪುರಸಭೆ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಏಪ್ರಿಲ್ 30 ರೊಳಗಾಗಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಗಂಡ, ಹೆಂಡತಿ ಮತ್ತು ಮಕ್ಕಳ ಆಧಾರ್ ಕಾರ್ಡ್, ಇತ್ತೀಚಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿಗಳನ್ನು ಲಗತ್ತಿಸುವುದು ಕಡ್ಡಾಯವಾಗಿದೆ. ಇದರೊಂದಿಗೆ ದೇಶದ ಯಾವುದೇ ಭಾಗದಲ್ಲಿ ಸ್ವಂತ ನಿವೇಶನ, ಮನೆ ಹೊಂದಿಲ್ಲವೆಂದು 20 ರೂಪಾಯಿ ಛಾಪಾ ಕಾಗದಲ್ಲಿ…
ಶುರುವಾಯ್ತು ಜನಗಣತಿ; ಮನೆಯಲ್ಲೇ ನಿಮ್ಮ ದಾಖಲೆ ನಮೂದಿಸಿ ಚಿತ್ರದುರ್ಗ: ಭಾರತ ಜನಗಣತಿ-2027ರ ಅಂಗವಾಗಿ ಸಾರ್ವಜನಿಕರು ತಾವಾಗಿಯೇ ಮಾಹಿತಿ ನೀಡುವ ಸ್ವಯಂ ಗಣತಿ ಪ್ರಕ್ರಿಯೆಯು 2026ರ ಏಪ್ರಿಲ್ 1 ರಿಂದ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಸಾರ್ವಜನಿಕರು 2026ರ ಏಪ್ರಿಲ್ 01 ರಿಂದ 15 ರವರೆಗೆ ಇಲಾಖೆಯ ವೆಬ್‍ಸೈಟ್ www.se.census.gov.in ಗೆ ಭೇಟಿ ನೀಡಿ ತಮ್ಮ ಕುಟುಂಬದ ವಿವರಗಳನ್ನು ಆನ್‍ಲೈನ್ ಪೋರ್ಟಲ್ ಮೂಲಕ ಭರ್ತಿ ಮಾಡಬಹುದು. ಮಾಹಿತಿ ಸಲ್ಲಿಸಿದ ನಂತರ ಲಭ್ಯವಾಗುವ ರೆಫರೆನ್ಸ್ ಐಡಿ (Reference ID) ಅನ್ನು ಸಾರ್ವಜನಿಕರು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಬಳಿಕ 2026ರ ಏಪ್ರಿಲ್ 16 ರಿಂದ ಮೇ 15 ರವರೆಗೆ ನಿಗದಿಪಡಿಸಲಾದ ಕ್ಷೇತ್ರ ಮಾಹಿತಿಗಳ ಸಂಗ್ರಹಣೆಯ ಸಮಯದಲ್ಲಿ, ಮೌಲ್ಯೀಕರಣಕ್ಕಾಗಿ ಗಣತಿದಾರರು ಮನೆಗಳಿಗೆ ಭೇಟಿ ನೀಡಿದಾಗ ಈ ರೆಫರೆನ್ಸ್ ಐಡಿ ಅನ್ನು ನೀಡಿ ಗಣತಿ ಕಾರ್ಯದಲ್ಲಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದ್ದಾರೆ.
ಲಿವ್-ಇನ್ ಅಪರಾಧವಲ್ಲ: ವಿವಾಹಿತ ಪುರುಷ-ವಯಸ್ಕ ಮಹಿಳೆಯ ಸಹಜೀವನಕ್ಕೆ ಕಾನೂನು ಮಾನ್ಯತೆ ಟಿಒಬಿ ನ್ಯೂಸ್ ಬೆಂಗಳೂರು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪಿನಲ್ಲಿ, ವಿವಾಹಿತ ಪುರುಷ ಹಾಗೂ ವಯಸ್ಕ ಮಹಿಳೆಯ ನಡುವೆ ಒಪ್ಪಿತ ಸಹಜೀವನ (ಲಿವ್-ಇನ್) ಅಪರಾಧವಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಜಸ್ಟಿಸ್ ಮುನಿರ್ ಮತ್ತು ಜಸ್ಟಿಸ್ ತರುಣ್ ಸಕ್ಷೇನಾ ಇದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದ್ದು, ನೈತಿಕತೆ ಮತ್ತು ಕಾನೂನು ಅಂಶಗಳನ್ನು ಪ್ರತ್ಯೇಕವಾಗಿ ಪರಿಗಣಿಸಬೇಕು. ನ್ಯಾಯಾಲಯದ ತೀರ್ಪುಗಳಲ್ಲಿ ನೈತಿಕ ಅಭಿಪ್ರಾಯಗಳು ಪ್ರಭಾವ ಬೀರುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಈ ಪ್ರಕರಣದಲ್ಲಿ, ಮಹಿಳೆಯ ತಾಯಿ ಶಹಜಾಪುರ ಜಿಲ್ಲೆಯ ಜೈತಿಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅದರ ಆಧಾರದಲ್ಲಿ ಬಿಎನ್ ಎಸ್ ಸೆಕ್ಷನ್ 870 ಅಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಆದರೆ, ತಮ್ಮ ವಿರುದ್ಧದ ಪ್ರಕರಣವನ್ನು ಪ್ರಶ್ನಿಸಿದ ಜೋಡಿ, ತಮಗೆ ಜೀವಭೀತಿ ಇದೆ ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ವಿಚಾರಣೆ ವೇಳೆ, ಹೈಕೋರ್ಟ್ ವಿವಾಹಿತನಾಗಿದ್ದರೂ ವಯಸ್ಕ ಮಹಿಳೆಯೊಂದಿಗಿನ ಸಹಜೀವನ ಒಪ್ಪಿತ ಸಂಬಂಧವೇ ಆಗಿದ್ದು, ಮೇಲ್ನೋಟಕ್ಕೆ ಯಾವುದೇ ಅಪರಾಧವಾಗುವುದಿಲ್ಲ…
ರಜೆ ದಿನಗಳಲ್ಲೂ ಸಬ್ ರಿಜಿಸ್ಟ್ರಾರ್ ಕಚೇರಿಗಳು ಓಪನ್ ಟಿಒಬಿ ನ್ಯೂಸ್ ಬೆಂಗಳೂರು ಯುಗಾದಿ ಹಾಗೂ ರಂಜಾನ್ ಹಬ್ಬಗಳ ಹಿನ್ನೆಲೆ ಸಾಲುಸಾಲು ಸರ್ಕಾರಿ ರಜೆ ಇರುವುದರಿಂದ, ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಯವಾಗದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮಾ. 28 (ನಾಲ್ಕನೇ ಶನಿವಾರ) ಮತ್ತು ಮಾ. 29 (ಭಾನುವಾರ) ರಜೆ ದಿನಗಳಾಗಿದ್ದರೂ, ಈ ಎರಡೂ ದಿನಗಳನ್ನು ‘ಕರ್ತವ್ಯ ನಿರ್ವಹಿಸುವ ದಿನ’ ಎಂದು ಪರಿಗಣಿಸಿ ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳು ಕಾರ್ಯನಿರ್ವಹಿಸುವಂತೆ ಕಂದಾಯ ಇಲಾಖೆ ಆದೇಶಿಸಿದೆ. ವರ್ಷಾಂತ್ಯದ ಪರಿಣಾಮವಾಗಿ ದಾಖಲೆ ನೋಂದಣಿ ಕಾರ್ಯಗಳಲ್ಲಿ ಹೆಚ್ಚಿದ ಒತ್ತಡವನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ (ನೋಂದಣಿ ಮತ್ತು ಮುುದ್ರಾಂಕ) ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಸಾರ್ವಜನಿಕರು ರಜೆ ಬಳಸಿಕೊಂಡು ತಮ್ಮ ಆಸ್ತಿ ನೋಂದಣಿ ಹಾಗೂ ಇತರ ಸಂಬಂಧಿತ ಕೆಲಸಗಳನ್ನು ಸುಗಮವಾಗಿ ಪೂರ್ಣಗೊಳಿಸಬಹುದು ಎಂದು ಇಲಾಖೆ ತಿಳಿಸಿದೆ.
ಪ್ರೀ-ವೆಡ್ಡಿಂಗ್ ಶೂಟ್‌ಗೆ ವೇಳೆ ದಾಳಿ: ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ ಟಿಒಬಿ ನ್ಯೂಸ್ ಸಕಲೇಶಪುರ ಪ್ರಸಿದ್ಧ ಪ್ರವಾಸಿ ತಾಣವಾದ ಬೆಟ್ಟದ ಭೈರವೇಶ್ವರ ದೇವಸ್ಥಾನದ ಬಳಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಕ್ಯಾಮೆರಾ ಉಪಕರಣಗಳನ್ನು ಧ್ವಂಸಗೊಳಿಸಲಾಗಿದ್ದು, ಚಿನ್ನದ ಸರ ಕಳವು ಆರೋಪವೂ ಕೇಳಿಬಂದಿದೆ. ಹಾಸನದ ಫೋಟೋಗ್ರಾಫರ್ ನವೀನಂದನ್ ಕೆ.ಎಸ್. (21) ಅವರು ನೀಡಿದ ದೂರಿನ ಪ್ರಕಾರ, ಅವರು ತಮ್ಮ ಸಹೋದ್ಯೋಗಿ ಚೇತನ್ ಹಾಗೂ ಮದುವೆಯಾಗಲಿರುವ ಜೋಡಿಯೊಂದಿಗೆ ಬೆಳಿಗ್ಗೆ 7:30ಕ್ಕೆ ಸ್ಥಳಕ್ಕೆ ತೆರಳಿದ್ದರು. ಸುಮಾರು 8 ಗಂಟೆ ವೇಳೆಗೆ ಬೆಂಗಳೂರಿನ ಮತ್ತೊಂದು ಫೋಟೋಗ್ರಫಿ ತಂಡ ಅಲ್ಲಿಗೆ ಆಗಮಿಸಿದ್ದು, ಈ ವೇಳೆ ಸ್ಥಳೀಯ ವ್ಯಕ್ತಿ ಅಭಿ ಜಗಳಕ್ಕೆ ಮುಂದಾಗಿದ್ದಾನೆ. ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಗುಂಪು ದಾಳಿ, ಲೂಟಿ ಆರೋಪ ಬೆಳಿಗ್ಗೆ 9 ಗಂಟೆ ಸುಮಾರಿಗೆ ಅಭಿ ತನ್ನ 7-8 ಮಂದಿ ಸಹಚರರೊಂದಿಗೆ ಎರಡು ಕಾರುಗಳಲ್ಲಿ ಸ್ಥಳಕ್ಕೆ ಬಂದು ಫೋಟೋಗ್ರಾಫರ್‌ಗಳ…
ನಿತ್ಯ ಭವಿಷ್ಯ 28/03/2026 (ಶನಿವಾರ) ಮೇಷ (Aries): ಇಂದು ಕೆಲಸಗಳಲ್ಲಿ ಚುರುಕು ಹೆಚ್ಚಾಗುತ್ತದೆ. ಹೊಸ ಅವಕಾಶಗಳು ಎದುರಾಗಬಹುದು. ಆರ್ಥಿಕವಾಗಿ ಲಾಭದ ಸೂಚನೆ ಇದೆ. ಕುಟುಂಬದಲ್ಲಿ ಸಂತೋಷದ ವಾತಾವರಣ. ವೃಷಭ (Taurus): ಸ್ವಲ್ಪ ಮಾನಸಿಕ ಒತ್ತಡ ಕಾಣಬಹುದು. ಹಣಕಾಸಿನಲ್ಲಿ ಜಾಗ್ರತೆ ಅಗತ್ಯ. ಅನಗತ್ಯ ಖರ್ಚುಗಳನ್ನು ನಿಯಂತ್ರಿಸಿ. ಆರೋಗ್ಯದ ಕಡೆ ಗಮನ ಕೊಡಿ. ಮಿಥುನ (Gemini): ಸ್ನೇಹಿತರಿಂದ ಸಹಾಯ ದೊರೆಯಲಿದೆ. ಉದ್ಯೋಗದಲ್ಲಿ ಪ್ರಗತಿ ಸಾಧ್ಯತೆ. ಮಾತಿನಲ್ಲಿ ಜಾಗ್ರತೆ ಇರಲಿ, ತಪ್ಪು ಅರ್ಥವಾಗುವ ಸಾಧ್ಯತೆ ಇದೆ. ಕಟಕ (Cancer): ಕುಟುಂಬದ ವಿಷಯಗಳಲ್ಲಿ ಹೆಚ್ಚು ಗಮನ ಹರಿಸಬೇಕಾಗುತ್ತದೆ. ಆರ್ಥಿಕವಾಗಿ ಸ್ಥಿರತೆ ಇರುವುದು. ಹಿರಿಯರ ಸಲಹೆ ಉಪಯೋಗಕರ. ಸಿಂಹ (Leo): ನಾಯಕತ್ವ ಗುಣಗಳು ಬೆಳಗುವ ದಿನ. ಕೆಲಸದಲ್ಲಿ ಮೆಚ್ಚುಗೆ ಸಿಗುತ್ತದೆ. ಪ್ರಯಾಣದ ಯೋಗ ಇದೆ. ಆರೋಗ್ಯ ಉತ್ತಮವಾಗಿರುತ್ತದೆ. ಕನ್ಯಾ (Virgo): ಹೊಸ ಯೋಜನೆಗಳನ್ನು ಆರಂಭಿಸಲು ಅನುಕೂಲಕರ ದಿನ. ಹಣಕಾಸಿನಲ್ಲಿ ಲಾಭ. ಆದರೆ ಆತುರದ ನಿರ್ಧಾರ ತಪ್ಪಿಸಿ. ತುಲಾ (Libra): ಸಂಬಂಧಗಳಲ್ಲಿ ಸ್ವಲ್ಪ ಗೊಂದಲ ಉಂಟಾಗಬಹುದು. ಸಮಾಧಾನದಿಂದ ನಡೆದುಕೊಳ್ಳಿ. ಉದ್ಯೋಗದಲ್ಲಿ…
ಡಾ.ಜೆ.ಕರಿಯಪ್ಪ ಮಾಳಿಗೆ: ನಡೆ–ನುಡಿ ಚಿತ್ರದುರ್ಗ: ಸರ್ಕಾರಿ ಕಲಾ ಕಾಲೇಜಿನ (ಸ್ವಾಯತ್ತ) ಪ್ರಾಂಶುಪಾಲರಾದ ಡಾ.ಜೆ.ಕರಿಯಪ್ಪ ಮಾಳಿಗೆ ಅವರಿಗೆ ಪತ್ರಕರ್ತರ ಬಳಗ ಹಾಗೂ ಆಶಯ ತಂಡದಿಂದ ಮಾ.29 ರಂದು ‘ಡಾ.ಜೆ.ಕರಿಯಪ್ಪ ಮಾಳಿಗೆ: ನಡೆ–ನುಡಿ’ ಗೌರವಾರ್ಪಣೆ ಹಾಗೂ ವಿಶಿಷ್ಟ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರದ ಕ್ರೀಡಾಭವನದಲ್ಲಿ ಅಂದು ಬೆಳಿಗ್ಗೆ 10.30ಕ್ಕೆ ಸಂಸ್ಕೃತಿ ಚಿಂತಕ ಡಾ.ಎಸ್.ನಟರಾಜ್ ಬೂದಾಳು ಕಾರ್ಯಕ್ರಮ ಉದ್ಘಾಟಿಸಿ ತತ್ವಪದ ಮತ್ತು ಅವಧೂತ ಪರಂಪರೆ ಕುರಿತು ಮಾತನಾಡಲಿದ್ದಾರೆ. ಹಿರಿಯ ಪತ್ರಕರ್ತ ಎಂ.ಎನ್.ಯೋಗೇಶ್ ಅಧ್ಯಕ್ಷತೆವಹಿಸಲಿದ್ದು, ಸಂಪಾದನೆ ಕೃತಿಗಳು ಕುರಿತು ವಿಮರ್ಶಕರಾದ ಡಾ.ಲೋಕೇಶ್ ಅಗಸನಕಟ್ಟೆ, ಸಂಶೋಧನೆ ಕುರಿತು ಕವಯಿತ್ರಿ ತಾರಿಣಿ ಶುಭದಾಯಿನಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಹಿರಿಯ ಪತ್ರಕರ್ತ ಶ.ಮಂಜುನಾಥ್, ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವಿ.ವೀರೇಶ್, ಉದ್ಯಮಿ ಟಿ.ವಿ.ಅರುಣ್ ಉಪಸ್ಥಿತಿವಹಿಸಲಿದ್ದಾರೆ. ದಾವಣಗೆರೆ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕ ಎಚ್.ಜಿ.ವಿಜಯಕುಮಾರ್ ನಿರ್ವಹಣೆ ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಒಡನಾಟದ ಮಾತು ಗೋಷ್ಠಿ ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪವಹಿಸಲಿದ್ದು, ಕವಿ ಚಂದ್ರಶೇಖರ್ ತಾಳ್ಯ, ಕಥೆಗಾರ ಎಸ್.ಗಂಗಾಧರಯ್ಯ ಒಡನಾಟದ ಮಾತು ಆಡಲಿದ್ದಾರೆ.…
ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಎಚ್‍ಪಿವಿ ಲಸಿಕಾ ಅಭಿಯಾನ: ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಹೆಣ್ಣು ಮಕ್ಕಳಲ್ಲಿ ಕಾಣಿಸಿಕೊಳ್ಳುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಎಚ್‍ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ಅತ್ಯಂತ ಪರಿಣಾಮಕಾರಿಯಾಗಿದ್ದು, ಎಚ್‍ಪಿವಿ ಲಸಿಕಾ ಅಭಿಯಾನವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಎಚ್‍ಪಿವಿ ಲಸಿಕಾ ಕಾರ್ಯಕ್ರಮದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಸಿಕೆ ನೀಡುವ ಮುನ್ನ ಶಾಲಾ ಹಂತದಲ್ಲಿ ಪೋಷಕರು ಮತ್ತು ಶಿಕ್ಷಕರ ಸಭೆ ನಡೆಸಿ ಎಚ್‍ಪಿವಿ ಲಸಿಕೆಯ ಮಹತ್ವ ಹಾಗೂ ಅಗತ್ಯತೆ ಕುರಿತು ಅರಿವು ಮೂಡಿಸಬೇಕು. ಈ ಕುರಿತು ಪೋಷಕರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ ಜಾಗೃತಿ ಮೂಡಿಸಬೇಕು. ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿರುವ ಎಚ್‍ಪಿವಿ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು…
ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ ಚಿತ್ರದುರ್ಗ ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿಯ ಜ್ಞಾನಗಂಗೋತ್ರಿ ಕ್ಯಾಂಪಸ್‍ನಲ್ಲಿ ಚಿತ್ರದುರ್ಗ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಸಮುದಾಯ ವೈದ್ಯಕೀಯ ವಿಭಾಗದ ವತಿಯಿಂದ ಪ್ರಥಮ ಹಾಗೂ ದ್ವಿತೀಯ ಹಂತದ ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಎರಡು ದಿನಗಳ ಸಮಗ್ರ ಆರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ಜರುಗಿತು. ಚಿತ್ರದುರ್ಗ ವೈದ್ಯಕೀಯ ಕಾಲೇಜು ಡೀನ್ ಹಾಗೂ ನಿರ್ದೇಶಕ ಡಾ. ಬಿ.ವೈ.ಯುವರಾಜ್ ಶಿಬಿರಕ್ಕೆ ಚಾಲನೆ ನೀಡಿ, “ವಿದ್ಯಾರ್ಥಿಗಳ ಆರೋಗ್ಯದ ಕಾಳಜಿ ಸಂಸ್ಥೆಯ ಪ್ರಮುಖ ಜವಾಬ್ದಾರಿಯಾಗಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗದ ಮಾರ್ಗಸೂಚಿಗಳಂತೆ ಈ ಶಿಬಿರ ನಡೆಸಲಾಗುತ್ತಿದ್ದು, ಇದು ಭವಿಷ್ಯದ ವೈದ್ಯರ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಪೂರಕವಾಗಿದೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ. ರೇಣುಪ್ರಸಾದ್ ಮಾತನಾಡಿ, ಯುವಜನರಲ್ಲಿ ಜೀವನಶೈಲಿ ಸಂಬಂಧಿತ ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಇಂತಹ ಶಿಬಿರಗಳು ಸಹಕಾರಿ. ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು. ಚಿತ್ರದುರ್ಗ ಜಿಲ್ಲಾಸ್ಪತ್ರೆಯ…
Subscribe to Updates
Get the latest creative news from FooBar about art, design and business.