Author: ಮೃತ್ಯುಂಜಯಾಚಾರ್ ಬಿ
ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.
ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ; ಹೆಚ್ಚುತ್ತಿವೆ ಪ್ರಕರಣ ಟಿಒಬಿ ನ್ಯೂಸ್ ಚಿತ್ರದುರ್ಗ ಜಿಲ್ಲೆಯಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಅಕ್ರಮವಾಗಿ ಬಳಸುವುದು ಹಾಗೂ ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಮಹಿಳಾ ಮತ್ತು ಮಕ್ಕಳ ರಕ್ಷಣಾ ಸೇನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನಗರದ ಪತ್ರಿಕಾ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇನೆ ಅಧ್ಯಕ್ಷೆ ಪಾರ್ವತಿ ಮಾತನಾಡಿ, ಇರಾನ್–ಇಸ್ರೇಲ್ ಹಾಗೂ ಅಮೆರಿಕಾ ನಡುವಿನ ಯುದ್ಧದ ಪರಿಣಾಮವಾಗಿ ದೇಶಾದ್ಯಂತ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾಗಿದ್ದು, ಕರ್ನಾಟಕದಲ್ಲೂ ಇದರ ಪರಿಣಾಮ ತೀವ್ರವಾಗಿದೆ. ಇಂತಹ ಸಂಕಷ್ಟದ ವೇಳೆಯಲ್ಲಿ ಗೃಹಬಳಕೆಯ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ರೂ.2000ಕ್ಕೂ ಹೆಚ್ಚು ದರಕ್ಕೆ, ವಾಣಿಜ್ಯ ಸಿಲಿಂಡರ್‌ಗಳನ್ನು ರೂ.5000ರಷ್ಟು ದರಕ್ಕೆ ಮಾರಾಟ ಮಾಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ ಎಂದರು. ಇತ್ತೀಚೆಗೆ ಚಿತ್ರದುರ್ಗ ನಗರದ ಜೆ.ಸಿ.ಆರ್ ಬಡಾವಣೆಯ ಬೀದಿ ಬದಿ ಅಂಗಡಿಗಳಲ್ಲಿ ಗೃಹಬಳಕೆಯ ಸಿಲಿಂಡರ್‌ಗಳನ್ನು ಅಕ್ರಮವಾಗಿ ಬಳಸುತ್ತಿದ್ದ ಪ್ರಕರಣವನ್ನು ಮಹಿಳಾ ಮತ್ತು ಮಕ್ಕಳ ರಕ್ಷಣಾ ಸೇನೆ, ಆಹಾರ ಮತ್ತು ನಾಗರೀಕ…
ಹೈ-ಪ್ರೊಫೈಲ್ ಗೋಲ್ಡ್ ಸ್ಕ್ಯಾಮ್; ಸ್ಯಾಂಡಲ್ ವುಡ್ ನಟನಿಗೆ ಬಂಧನ ಭೀತಿ ರಾಜ್ಯದ ಗಮನ ಸೆಳೆದಿರುವ ಹೈ-ಪ್ರೊಫೈಲ್ ‘ಗೋಲ್ಡ್ ವಂಚನೆ’ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಐಶ್ವರ್ಯಾ ಗೌಡಗೆ ಸಂಕಷ್ಟ ಮತ್ತಷ್ಟು ಗಂಭೀರವಾಗಿದೆ. ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಬಂಧನ ಭೀತಿ ಹೆಚ್ಚಾಗಿದೆ. ಸಿಐಡಿ ತನಿಖೆಯಲ್ಲಿ ಐಶ್ವರ್ಯಾ ಗೌಡ ಹಾಗೂ ಪತಿ ಕೆ.ಎನ್. ಹರೀಶ್ ವಿರುದ್ಧ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ. ‘ಐಶ್ವರ್ಯಾ ಗೌಡ’ ಹಾಗೂ ‘ನವ್ಯಾಶ್ರೀ’ ಎಂಬ ಎರಡು ಹೆಸರಿನಲ್ಲಿ ಪ್ರತ್ಯೇಕ ಆಧಾರ್, ಪ್ಯಾನ್ ಕಾರ್ಡ್ ಬಳಸಿದ ಆರೋಪವೂ ಬೆಳಕಿಗೆ ಬಂದಿದೆ. 2017ರಿಂದಲೇ ಚಿನ್ನ ಹೂಡಿಕೆ ಮತ್ತು ಲಾಭದಾಯಕ ಯೋಜನೆಗಳ ಹೆಸರಿನಲ್ಲಿ ಹಲವರನ್ನು ಮೋಸ ಮಾಡಿ, ₹100 ಕೋಟಿಗೂ ಅಧಿಕ ಹಣ ವಂಚಿಸಿರುವ ಆರೋಪ ಎದುರಾಗಿದೆ. ತಮ್ಮನ್ನು ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸೋದರಿ ಎಂದು ಹೇಳಿಕೊಂಡು ಜನರಲ್ಲಿ ನಂಬಿಕೆ ಮೂಡಿಸಿದ್ದಳು ಎನ್ನಲಾಗಿದೆ. ವಂಚನೆಯ ಹಣದಿಂದ ಮರ್ಸಿಡಿಸ್, ಜಾಗ್ವಾರ್, ಆಡಿ ಕಾರುಗಳಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದಳು. ಖಾಸಗಿ ಗನ್‌ಮ್ಯಾನ್, ಬಾಡಿಗಾರ್ಡ್‌ಗಳೊಂದಿಗೆ…
ಕುಟುಂಬ ಯೋಜನೆಗೆ ಗರ್ಭ ನಿರೋಧಕ ಬಳಸಿ; ಡಿಹೆಚ್‍ಒ ಡಾ.ಜಿ.ಪಿ.ರೇಣುಪ್ರಸಾದ್ ನೂತನ ಗರ್ಭ ನಿರೋಧಕಗಳ ಬಳಸಿರಿ. ಒಂದು ಮಗುವಿನಿಂದ ಮತ್ತೊಂದು ಮಗುವಿಗೆ ಅಂತರ ಕಾಪಾಡಿರಿ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಜಿ.ಪಿ.ರೇಣುಪ್ರಸಾದ್ ಹೇಳಿದರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ತಾಲ್ಲೂಕು ಆರೋಗ್ಯ ಶಿಕ್ಷಣ ಶಿಕ್ಷಣಾಧಿಕಾರಿಗಳು, ಶುಶ್ರೂಷಾಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಿಗೆ ಆಯೋಜಿಸಿದ ಕುಟುಂಬ ಕಲ್ಯಾಣ ಕಾರ್ಯಕ್ರಮದ ನೂತನ ಗರ್ಭ ನಿರೋಧಕಗಳು ಮತ್ತು ಡಿಂಪಾ ಚುಚ್ಚುಮದ್ದು ಬಗ್ಗೆ ತರಬೇತಿ ಕಾರ್ಯಗಾರದಲ್ಲಿ ಕುಟುಂಬ ಕಲ್ಯಾಣ ತಾತ್ಕಾಲಿಕ ವಿಧಾನಗಳ ಪ್ರದರ್ಶನ ಮಾಡುವುದರ ಮುಖಾಂತರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಒಂದು ಮಗುವಿನಿಂದ ಮತ್ತೊಂದು ಮಗುವಿಗೆ ಅಂತರ ಕಾಯ್ದುಕೊಳ್ಳುವುದು, ಜನಸಂಖ್ಯೆ ನಿಯಂತ್ರಣ ಮಾಡುವುದು ಹಾಗೂ ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡಲು ಕುಟುಂಬ ಯೋಜನೆ ಬಹು ಮುಖ್ಯ ಎಂದರು. ಫಲಾನುಭವಿಗಳಿಗೆ ಮಾಹಿತಿ ಕೊರತೆಯಾಗದಂತೆ ಸಮುದಾಯದಲ್ಲಿ ಜಾಗೃತಿ ಮೂಡಿಸುವುದರ ಮುಖಾಂತರ ಕಟ್ಟ ಕಡೆಯ ವ್ಯಕ್ತಿಗೂ ಕೂಡ ಆರೋಗ್ಯ ಸೇವೆ ತಲುಪಲು ಶ್ರಮಿಸಬೇಕು ಎಂದು ಹೇಳಿದರು. ಜಿಲ್ಲಾ…
ಅನುದಾನ ನಿರೀಕ್ಷೆಯಲ್ಲೂ ತಪ್ಪು ಮಾಹಿತಿ: ತೀವ್ರ ತರಾಟೆ ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ. ಮೀಸಲು ಇಟ್ಟಿರುವ ಮಹಾನಗರ ಪಾಲಿಕೆ, ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡಿಲ್ಲ. ಹೀಗಾಗಿ ಮಹಾನಗರ ಪಾಲಿಕೆಗೆ ಮಂಡಿಸಲಾದ 2026-27ನೇ ಸಾಲಿನ ಆಯವ್ಯಯವು ಸತ್ವ ಇಲ್ಲದ ಬಜೆಟ್ ಆಗಿದೆ ಮಾಜಿ ಮೇಯರ್ ಶಿವಕುಮಾರ್ ಟೀಕಿಸಿದ್ದಾರೆ. ಮಹಾನಗರ ಪಾಲಿಕೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನಾನು ಮೇಯರ್ ಆಗಿದ್ದಾಗ ಪಾರಂಪರಿಕ ಕಮಾನುಗಳ ರಕ್ಷಣೆಗಾಗಿ 3 ಕೋಟಿ ರೂ. ಅನುದಾನ ಮೀಸಲು ಇಟ್ಟಿದ್ದೆ. ಪಾರಂಪರಿಕ ಇಲಾಖೆಗೆ ಪ್ರಸ್ತಾವನೆಯನ್ನೂ ಸಲ್ಲಿಸಿದರೂ ಅನುದಾನ ಬಳಕೆ ಆಗಲಿಲ್ಲ. ಮೈಸೂರು ಪಾರಂಪರಿಕ ನಗರ ಎಂದು ಪ್ರಸಿದ್ಧಿಯಾಗಿದೆ. ಇಲ್ಲಿನ ಪಾರಂಪರಿಕ ಕಟ್ಟಡಗಳನ್ನು ಉಳಿಸುವುದು ಪಾಲಿಕೆಯ ಆದ್ಯತೆ ಕರ್ತವ್ಯ ಆಗಬೇಕಿತ್ತು. ವರ್ಷಕ್ಕೊಂದು ಪಾರಂಪರಿಕ ಕಟ್ಟಡ ಸಂರಕ್ಷಿಸಲು ಮುಂದಾಗಿದ್ದರೂ ಎಷ್ಟೋ ಅನುಕೂಲ ಆಗುತ್ತಿತ್ತು. ಆದರೆ ಇಡೀ ಬಜೆಟ್‌ನಲ್ಲಿ ಪಾರಂಪರಿಕ ಕಟ್ಟಡಗಳ ಬಗ್ಗೆ ಪ್ರಸ್ತಾಪವೇ ಇಲ್ಲದೆ ಇರುವುದು ನಿರಾಸೆ ಮೂಡಿಸಿದೆ. ಕೃಷ್ಣರಾಜ, ನರಸಿಂಹರಾಜ, ಚಾಮರಾಜ ಕ್ಷೇತ್ರಗಳಲ್ಲಿ ಮೂರು…
ಹವಾಮಾನದಲ್ಲಿ ತೀವ್ರ ಬದಲಾವಣೆ: ರಾಜ್ಯದಲ್ಲಿ ಮಳೆ–ಗಾಳಿ ದೇಶದ ವಿವಿಧ ಭಾಗಗಳಲ್ಲಿ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬಂದಿದ್ದು, ಪಶ್ಚಿಮ ಅಲೆಗಳು ಮತ್ತು ದಕ್ಷಿಣ ಮಾರುತಗಳ ಸಂಯೋಜಿತ ಪರಿಣಾಮದಿಂದ ಅನಿಶ್ಚಿತ ವಾತಾವರಣ ನಿರ್ಮಾಣವಾಗಿದೆ. ಉತ್ತರ ಭಾರತದಿಂದ ದಕ್ಷಿಣ ಹಾಗೂ ಈಶಾನ್ಯ ರಾಜ್ಯಗಳವರೆಗೆ ವಿಭಿನ್ನ ಹವಾಮಾನ ಮಾದರಿಗಳು ಒಂದೇ ಸಮಯದಲ್ಲಿ ಕಾಣಿಸುತ್ತಿವೆ. ಭಾರತೀಯ ಹವಾಮ ಇಲಾಖೆ ಮಾಹಿತಿ ಪ್ರಕಾರ, ಮಾರ್ಚ್ 26ರಿಂದ 30ರವರೆಗೆ ಈ ಹವಾಮಾನ ಚಟುವಟಿಕೆಗಳು ಸಕ್ರಿಯವಾಗಿರಲಿವೆ. ಈ ಅವಧಿಯಲ್ಲಿ ಗಾಳಿಯ ವೇಗ ಗಂಟೆಗೆ 30ರಿಂದ 50 ಕಿ.ಮೀ.ವರೆಗೆ ಹೆಚ್ಚಾಗುವ ಸಾಧ್ಯತೆ ಇದ್ದು, ಕೆಲವೆಡೆ 70 ಕಿ.ಮೀ.ವರೆಗೆ ಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ. ದೆಹಲಿಯಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ವೇಳೆಗೆ ತುಂತುರು ಮಳೆಯ ಸಾಧ್ಯತೆ ಇದೆ. ಗಾಳಿಯ ವೇಗ 20–30 ಕಿ.ಮೀ. ಇರಬಹುದು. ಉತ್ತರ ಪ್ರದೇಶದಲ್ಲಿ ಗುಡುಗು ಸಹಿತ ಮಿಂಚು ಮತ್ತು ಆಲಿಕಲ್ಲು ಮಳೆಯ ಎಚ್ಚರಿಕೆ ನೀಡಲಾಗಿದೆ. ಸುಮಾರು 15 ಜಿಲ್ಲೆಗಳಲ್ಲಿ ಗಾಳಿಯ ವೇಗ 50–60 ಕಿ.ಮೀ. ತಲುಪಬಹುದು. ಇದರಿಂದ ಗೋಧಿ…
ಖಾಕಿ ಬಲೆಗೆ ದೇವಸ್ಥಾನಗಳ ಹುಂಡಿ ಕಳ್ಳರು; ಅಂತರ ಜಿಲ್ಲಾ ಜಾಲ ಪತ್ತೆ ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ದೇವಪುರ ಗ್ರಾಮದ ಶ್ರೀ ಹಾಲುರಾಮೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದಿದ್ದ ಹುಂಡಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹೊಸದುರ್ಗ ಪೊಲೀಸರು ಯಶಸ್ವಿಯಾಗಿದ್ದಾರೆ. ಅಂತರ ಜಿಲ್ಲಾ ಮಟ್ಟದಲ್ಲಿ ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡಿದ್ದ ಮೂವರು ಆರೋಪಿತರನ್ನು ಬಂಧಿಸಿ, ಅವರಿಂದ ನಗದು ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ. ಕಳೆದ ಅಕ್ಟೋಬರ್ 27, 2025 ರಂದು ಹೊಸದುರ್ಗ ತಾಲೂಕಿನ ದೇವಪುರ ಗ್ರಾಮದ ಬಳಿಯ ಗಂಗಮ್ಮ ದೇವಸ್ಥಾನದ ಹುಂಡಿಯನ್ನು ಒಡೆದಿದ್ದ ಕಳ್ಳರು, ಅದರಲ್ಲಿದ್ದ ಸುಮಾರು 50,000/- ರೂ. ಹಣವನ್ನು ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಮೊ.ನಂ. 499/2025 ರಡಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾರ್ಚ್ 25, 2026 ರಂದು ತರೀಕೆರೆ ತಾಲ್ಲೂಕಿನ ಸಿದ್ದರಹಳ್ಳಿಯ ಪ್ರಭಾಕರ (40), ಅಜ್ಜಂಪುರದ ಚಿಕ್ಕನಾವಂಗಲ ಗ್ರಾಮದವ ಸದಾನಂದ (24) ಹಾಗೂ ಸ್ವಾಗತ್…
ಬೈ ಎಲೆಕ್ಷನ್ ಅಖಾಡಕ್ಕೆ ಜಮೀರ್ ಎಂಟ್ರಿ ; ಕ್ಷೇತ್ರದಲ್ಲೇ ಮೊಕ್ಕಂ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯನ್ನು ಕಾಂಗ್ರೆಸ್ ತೀವ್ರ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಯಾವುದೇ ಕಾರಣಕ್ಕೂ ಎರಡು ಕ್ಷೇತ್ರಗಳನ್ನು ಬಿಟ್ಟು ಕೊಡಬಾರದು ಎಂಬ ಹಠಕ್ಕೆ ಬಿದ್ದಿದೆ. ಈ ಕಾರಣಕ್ಕೆ ಗೆಲುವಿಗಾಗಿ ವಿಶೇಷ ರಣತಂತ್ರ ರೂಪಿಸಿದೆ. ಬೆಂಗಳೂರಿನ ರಾಜಭವನ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್ ಪಿ) ಸಭೆಯಲ್ಲಿ ಸಚಿವರು ಮತ್ತು ಶಾಸಕರಿಗೆ ಕ್ಷೇತ್ರದಲ್ಲೇ ಮೊಕ್ಕಾಂ ಹೂಡಲು ಖುದ್ದು ಉಸ್ತುವಾರಿ ಸುರ್ಜೇವಾಲ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯವಾಗಿ ಅಲ್ಪಸಂಖ್ಯಾತ ಮತಗಳ ಭೇಟೆಗೆ ಜಮೀರ್ ಅಹ್ಮದ್ ಖಾನ್ ಮತ್ತು ತನ್ವೀರ್ ಸೇಠ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳಬಾರದು, ಗೆಲ್ಲಲೇಬೇಕು. ಎಲ್ಲಾ ಸಚಿವರು, ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ಕಡ್ಡಾಯವಾಗಿ ಕನಿಷ್ಠ 10 ದಿನ ಕ್ಷೇತ್ರದಲ್ಲೇ ತಂಗಿ ಕೆಲಸ ಮಾಡಬೇಕು ಎಂದು ಸಂದೇಶ ರವಾನಿಸಿದ್ದಾರೆ. ಸಮುದಾಯವಾರು ಮತಗಳನ್ನು ಸೆಳೆಯುವ…
ನಿತ್ಯ ಭವಿಷ್ಯ – 26/03/2026 (ಗುರುವಾರ) 🔮 ಮೇಷ (Aries) ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಿರುತ್ತದೆ. ಕೆಲಸದಲ್ಲಿ ಹೊಸ ಅವಕಾಶಗಳು ದೊರೆಯಬಹುದು. ಹಣಕಾಸು ವಿಚಾರದಲ್ಲಿ ಜಾಗ್ರತೆ ಅಗತ್ಯ. ಕುಟುಂಬದ ಬೆಂಬಲ ಸಿಗುತ್ತದೆ. 🔮 ವೃಷಭ (Taurus) ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಹಳೆಯ ಬಾಕಿ ಹಣ ವಾಪಸ್ ಸಿಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಸ್ವಲ್ಪ ಗಮನ ಕೊಡಿ. ಸ್ನೇಹಿತರ ಜೊತೆ ಸಮಯ ಕಳೆಯಬಹುದು. 🔮 ಮಿಥುನ (Gemini) ಹೊಸ ಆಲೋಚನೆಗಳು ನಿಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತವೆ. ಉದ್ಯೋಗದಲ್ಲಿ ಪ್ರಗತಿ ಸಾಧ್ಯ. ಮಾತಿನಲ್ಲಿ ಎಚ್ಚರಿಕೆ ಇರಲಿ. 🔮 ಕಟಕ (Cancer) ಮನಸ್ಸಿನಲ್ಲಿ ಅಶಾಂತಿ ಕಾಣಬಹುದು. ಧೈರ್ಯದಿಂದ ನಿರ್ಧಾರ ತೆಗೆದುಕೊಳ್ಳಿ. ಕುಟುಂಬದಲ್ಲಿ ಸಂತೋಷಕರ ಘಟನೆಗಳು ನಡೆಯಬಹುದು. 🔮 ಸಿಂಹ (Leo) ನಿಮ್ಮ ನಾಯಕತ್ವ ಗುಣಗಳು ಮೆರೆದಾಡುತ್ತವೆ. ವ್ಯವಹಾರದಲ್ಲಿ ಲಾಭ ಸಾಧ್ಯ. ಆದರೆ ಅಹಂಕಾರದಿಂದ ದೂರವಿರಿ. 🔮 ಕನ್ಯಾ (Virgo) ಕೆಲಸದಲ್ಲಿ ಒತ್ತಡ ಹೆಚ್ಚಾಗಬಹುದು. ಆದರೆ ನಿಮ್ಮ ಪರಿಶ್ರಮ ಫಲ ನೀಡುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ.…
ರೈಲ್ವೆ ಯೋಜನೆ ಭೂಸ್ವಾಧೀನ; ಇಲ್ಲಿದೆ ಬಿಗ್ ಅಪ್ಡೇಟ್ ಚಿತ್ರದುರ್ಗ: ರೈಲ್ವೆ ಯೋಜನೆಗಾಗಿ ಭೂಮಿ ಬಿಟ್ಟುಕೊಡುವ ರೈತರಿಗೆ ಯಾವುದೇ ಅನ್ಯಾಯವಾಗದಂತೆ, ಪ್ರಸ್ತುತ ಮಾರುಕಟ್ಟೆ ದರದಲ್ಲೇ ಪರಿಹಾರ ಒದಗಿಸಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ರೈತರಿಗೆ ಭರವಸೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಚಿಕ್ಕಜಾಜೂರು ಮತ್ತು ಬಳ್ಳಾರಿ ನಡುವಿನ ರೈಲ್ವೇ ಹಳಿ ದ್ವಿಗುಣಗೊಳಿಸುವ ಭೂಸ್ವಾಧೀನ ಪ್ರಕ್ರಿಯೆ ಕುರಿತು ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಚಿಕ್ಕಜಾಜೂರು-ಚಿತ್ರದುರ್ಗ-ಚಳ್ಳಕೆರೆ-ಬಳ್ಳಾರಿ ಮಾರ್ಗದ ರೈಲ್ವೆ ಹಳಿ ಡಬಲ್ ಲೈನ್ ಮಾಡುವ ಉದ್ದೇಶವಿದೆ. ಈ ಭೂಸ್ವಾಧೀನ ಪ್ರಕ್ರಿಯೆಯು ಯಾವುದೇ ಖಾಸಗಿ ವ್ಯಕ್ತಿ ಅಥವಾ ಕಂಪನಿಯ ಲಾಭಕ್ಕಲ್ಲ, ಬದಲಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಸುಧಾರಣೆಗಾಗಿ ನಡೆಯುತ್ತಿದೆ. ರೈಲು ಹಳಿ ಡಬ್ಲಿಂಗ್ ಆದರೆ ಈ ಭಾಗದ ಅಡಿಕೆ ಹಾಗೂ ಇತರ ಬೆಳೆಗಳ ಸಾಗಾಟಕ್ಕೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ರೈತರ ಆತಂಕ ಬೇಡ, ಸಬ್ ರಿಜಿಸ್ಟ್ರಾರ್ ಕಚೇರಿಯ ಮಾರುಕಟ್ಟೆ…
ಅಡಿಕೆ ಸಿಪ್ಪೆ ಕಾಂಪೋಸ್ಟ್ ತಯಾರಿಕೆ ತರಬೇತಿ; ಎಲ್ಲಿ..ಯಾವಾಗ ..
Subscribe to Updates
Get the latest creative news from FooBar about art, design and business.