Author: ಮೃತ್ಯುಂಜಯಾಚಾರ್ ಬಿ
ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.
ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ ಚಿತ್ರದುರ್ಗ: ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 2026-27ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು 5ನೇ ತರಗತಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಪರಿಶಿಷ್ಟ ಜಾತಿಗೆ ಸೇರಿದ್ದು, ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. 5ನೇ ತರಗತಿಯಲ್ಲಿ ಶೇ.60 ರಷ್ಟು ಅಂಕ ಪಡೆದಿರಬೇಕು. ಬಾಲಕಿಯರಿಗೆ ಶೇ50ರಷ್ಟು ಸ್ಥಾನಗಳು ಮೀಸಲು ಇರುತ್ತವೆ. ಪ್ರತಿಷ್ಠಿತ ಶಾಲೆಗಳ ಆಯ್ಕೆ ಒಂದು ಕುಟುಂಬದಲ್ಲಿ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗುವುದು. ವಿದ್ಯಾರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಕಚೇರಿಯಲ್ಲಿ ಆನ್‌ಲೈನ್ ನೊಂದಣಿ ಪ್ರಕ್ರಿಯೆ ನಡೆಯಲಿದೆ. ಪೋಷಕರು ನಿಗದಿತ ಅರ್ಜಿಯೊಂದಿಗೆ 4 ಪಾಸ್ ಪೋರ್ಟ್ ಸೈಜ್ ಭಾವಚಿತ್ರ, 5ನೇ ತರಗತಿಯ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಇತ್ಯಾದಿ ಅಗತ್ಯ ನಕಲು…
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ವೇಗ ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಸರ್ಕಾರ ಅಗತ್ಯ ಸಹಕಾರ ನೀಡಿದ್ದು, ಕಾಮಗಾರಿಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆಯಿದೆ ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಿ.ಕಿರಣ್ ಕುಮಾರ್ ಹೇಳಿದರು. ಭದ್ರಾ ಮೇಲ್ದಂಡೆ ಯೋಜನೆಯ ಬುರುಜನರೊಪ್ಪ ಉಪವಿಭಾಗ ಕಚೇರಿಗೆ ಸಹಾಯಕ ಕಾರ್ಯಪಾಲಕ ಎಂಜಿಯರ್ ಆಗಿ ಬಡ್ತಿ ಹೊಂದಿರುವ ಜಿ.ಕಿರಣ್ ಕುಮಾರ್ ಪದಗ್ರಹಣ ಸ್ವೀಕರಿಸಿ ಮಾತನಾಡಿದರು. ಮೈಸೂರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್‌ನಲ್ಲಿ ಎರಡು ಬಂಗಾರ ಪದಕಗಳೊಂದಿಗೆ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಕಿರಣ್ ಕುಮಾರ್.ಜಿ ಆಲಮಟ್ಟಿ ನೀರಾವರಿ ಯೋಜನೆಯಲ್ಲಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಭದ್ರಾ ಮೇಲ್ಡಂಡೆ ಯೋಜನೆಯಲ್ಲಿ ಏಳು ವರ್ಷಗಳ ಕೆಲಸದ ಅನುಭವ ಹೊಂದಿರುತ್ತಾರೆ. ದಕ್ಷತೆ ಮತ್ತು ಪ್ರಾಮಾಣಿಕತೆಗೆ ಹೆಸರು ವಾಸಿಯಾಗಿದ್ದಾರೆ. ಜಿಲ್ಲೆಯ ರೈತರಿಗೆ ಅತ್ಯಂತ ಪ್ರಮುಖವಾದ ಭದ್ರ ಮೇಲ್ದಂಡೆ ಯೋಜನೆಯ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಇವರ ಅನುಭವ ಸಹಕಾರಿಯಾಗಲಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಭಾರತ ಸರ್ಕಾರದ ಕೇಂದ್ರ ಜಲಶಕ್ತಿ ಸಚಿವಾಲಯದ…
ಪೋಷಕರ ತುರ್ತು ಗಮನಕ್ಕೆ; ಕೇಂದ್ರೀಯ ವಿದ್ಯಾಲಯ ದಾಖಲಾತಿ ಪ್ರಾರಂಭ ಚಿತ್ರದುರ್ಗ: ಬಹು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಚಿತ್ರದುರ್ಗದ ಕೇಂದ್ರೀಯ ವಿದ್ಯಾಲಯ ಕೊನೆಗೂ ಕಾರ್ಯಾರಂಭಗೊಂಡಿದೆ ಎಂದು ಸಂಸದ ಗೋವಿಂದ ಎಂ.ಕಾರಜೋಳ ತಿಳಿಸಿದ್ದಾರೆ. 2026-27ನೇ ಶೈಕ್ಷಣಿಕ ಸಾಲಿಗೆ 1ನೇ ತರಗತಿಯಿಂದ 5ನೇ ತರಗತಿಯವರೆಗೆ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ಇಂದಿನಿಂದಲೇ ಅರ್ಜಿಗಳನ್ನು ವಿತರಣೆ ಮಾಡಲಾಗುತ್ತಿದೆ. ಈ ಕುರಿತು ಕೇಂದ್ರೀಯ ವಿದ್ಯಾಲಯ ಸಂಘಟನೆಯ ಕೇಂದ್ರ ಕಚೇರಿಯಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಹೊಸ ವಿಭಾಗದಲ್ಲಿ ತಾತ್ಕಾಲಿಕವಾಗಿ ಶಾಲೆ ಕಾರ್ಯನಿರ್ವಹಿಸಲಿದ್ದು, ಇದು ವಸತಿ ರಹಿತ ಶಾಲೆಯಾಗಿರುತ್ತದೆ. ಹಾಸ್ಟೆಲ್ ವ್ಯವಸ್ಥೆ ಇರುವುದಿಲ್ಲ. 1ನೇ ತರಗತಿಗೆ ಮಕ್ಕಳ ಪ್ರವೇಶಕ್ಕಾಗಿ ಪೋಷಕರು ಮಾ.20 ರಿಂದ ಏ.2 ರವರೆಗೆ KVS Admission Portal (admission.kvs.gov.in) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. 2ನೇ ತರಗತಿಯಿಂದ 5ನೇ ತರಗತಿವರೆಗೆ ದಾಖಲಾತಿ ಆಫ್‌ಲೈನ್ ಮೂಲಕ ನಡೆಯಲಿದ್ದು, ಪೋಷಕರು ಏ.2 ರ ಬೆಳಿಗ್ಗೆ 10 ಗಂಟೆಯಿಂದ ಏ.8ರ ಸಂಜೆ 4 ಗಂಟೆಯವರೆಗೆ ಸರ್ಕಾರಿ ವಿಜ್ಞಾನ…
ದಾವಣಗೆರೆ ದಕ್ಷಿಣದಲ್ಲಿ ‘ಶಿವ’ ನಡೆ ; ಯಾರಿಗೆ ಪ್ಲಸ್ ಯಾರಿಗೆ ಮೈನಸ್ ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಚುನಾವಣೆ ಕಳೆದ 24 ಗಂಟೆಯಿಂದ ಅನಿರೀಕ್ಷಿತ ರೋಚಕ ತಿರುವು ಪಡೆಯುತ್ತಿದೆ. ಇದೀಗ ಶಿವಸೇನೆಯ ನಡೆ ಯಾರಿಗೆ ಪ್ಲಸ್ ಯಾರಿಗೆ ಮೈನಸ್ ಎಂಬ ಲೆಕ್ಕಚಾರ ಶುರುವಾಗಿದೆ. ಸದ್ಯಕ್ಕೆ ಕೇಸರಿ ಪಾಳಯಕ್ಕೆ ಎದುರಾಗಿದ್ದ ಬಹುದೊಡ್ಡ ‘ಹಿಂದುತ್ವ’ದ ಕಂಟಕವೊಂದು ದಿಢೀರ್ ದೂರವಾಗಿದೆ. ಉಪಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದ ಶಿವಸೇನೆ (ಶಿಂಧೆ ಬಣ) ಕೊನೆಯ ಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಆರಂಭದಲ್ಲಿ ಶಿವಸೇನೆ ಈ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿತ್ತು. ಇಂದು ನಾಮಪತ್ರ ಸಲ್ಲಿಸಲು ಕೂಡ ಸಕಲ ಸಿದ್ಧತೆ ನಡೆಸಲಾಗಿತ್ತು. ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಚುನಾವಣಾ ಪ್ರಚಾರಕ್ಕೂ ಸಿದ್ಧರಾಗಿದ್ದರು. ಶಿವಸೇನೆ ಸ್ಪರ್ಧಿಸುವ ನಿರ್ಧಾರ ಬಿಜೆಪಿ ವಲಯದಲ್ಲಿ ಜಾಸ್ತಿ ಅಲ್ಲದಿದ್ದರೂ ಸ್ವಲ್ಪರ ಮಟ್ಟಿಗೆ ಮತ ವಿಭಜನೆಯಾಗುವ ಸಾಧ್ಯತೆ ಇತ್ತು ಎನ್ನುವುದು ರಾಜಕೀಯ ವಲಯದಲ್ಲಿ ಕೇಳಿಬಂದಿದೆ. ಕಾರಣ,…
ವಾಹನ ಸವಾರರಿಗೆ ಬಿಗ್ ಶಾಕ್: ಏಪ್ರಿಲ್ 1ರಿಂದ ಟೋಲ್ ದರ ಏರಿಕೆ : ರಾಜ್ಯದ ವಾಹನ ಸವಾರರಿಗೆ ಮತ್ತೊಂದು ಆರ್ಥಿಕ ಹೊರೆ ಬೀಳಲಿದ್ದು, ಏಪ್ರಿಲ್ 1ರಿಂದ ಕರ್ನಾಟಕದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಾರ್ಷಿಕ ಪರಿಷ್ಕರಣೆ ಕ್ರಮದಂತೆ ಈ ದರ ಏರಿಕೆ ಜಾರಿಗೆ ಬರಲಿದ್ದು, ಸಾಮಾನ್ಯವಾಗಿ 5ರಿಂದ 10 ಶೇಕಡಾವರೆಗೆ ಟೋಲ್ ಶುಲ್ಕ ಹೆಚ್ಚಾಗುವ ಸಾಧ್ಯತೆ ಇದೆ. ಕಾರು, ಬಸ್, ಲಾರಿ ಸೇರಿದಂತೆ ಎಲ್ಲಾ ವಾಹನಗಳಿಗೆ ಇದು ಅನ್ವಯವಾಗಲಿದೆ. ಬೆಂಗಳೂರು–ಮೈಸೂರು, ಬೆಂಗಳೂರು–ತುಮಕೂರು, ಬೆಂಗಳೂರು–ಹೈದರಾಬಾದ್ ಸೇರಿದಂತೆ ರಾಜ್ಯದ ಪ್ರಮುಖ ಸಂಚಾರ ಹೆದ್ದಾರಿಗಳಲ್ಲಿ ಈ ದರ ಏರಿಕೆ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ದರ ಏರಿಕೆಗೆ ದ್ರವ್ಯಫುಲ್ಯ, ರಸ್ತೆ ನಿರ್ವಹಣೆ ವೆಚ್ಚ ಮತ್ತು ಒಪ್ಪಂದದ ನಿಯಮಗಳ ಪ್ರಕಾರ ನಡೆಯುವ ವಾರ್ಷಿಕ ತಿದ್ದುಪಡಿ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ದಿನನಿತ್ಯ ಪ್ರಯಾಣಿಕರು ಹಾಗೂ ವಾಣಿಜ್ಯ ವಾಹನ ಸವಾರರಿಗೆ ಹೆಚ್ಚುವರಿ ಖರ್ಚು ಭಾರವಾಗಲಿದ್ದು, ಸಾರಿಗೆ ವೆಚ್ಚ ಏರಿಕೆಯಿಂದ ವಸ್ತುಗಳ…
ರೈಲು ನಿಲ್ದಾಣದಲ್ಲಿ ದುರಂತ ; ಹಾರಿತು ಪ್ರಾಣಪಕ್ಷಿ ಚಿತ್ರದುರ್ಗ: ಚಿಕ್ಕಜಾಜೂರು ರೈಲು ನಿಲ್ದಾಣದ ಸಮೀಪ ರೈಲಿಗೆ ಬಿದ್ದು ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಕೊರಳಲ್ಲಿ ರುದ್ರಾಕ್ಷಿ ಮಾಲೆ ಧರಿಸಿದ್ದು, ಜೀನ್ಸ್ ಪ್ಯಾಂಟ್ ಹಾಗೂ ಶರ್ಟ್ ಧರಿಸಿರುವುದು ಕಂಡುಬಂದಿದೆ. ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಈತನ ಸಂಬಂಧಿಕರು ಅಥವಾ ಸ್ನೇಹಿತರು ಯಾರಾದರೂ ಇದ್ದಲ್ಲಿ ಚಿಕ್ಕಜಾಜೂರು ರೈಲ್ವೆ ಉಪ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ಪಡೆಯುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ; ಯಾವುದು ಗೊತ್ತಾ ? ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಅಭೂತಪೂರ್ವ ಮೈಲಿಗಲ್ಲು ಸಾಧಿಸಿದ್ದಾರೆ. ಅವರು ಚುನಾಯಿತ ಸರ್ಕಾರದ ಮುಖ್ಯಸ್ಥರಾಗಿ ಅತಿ ಹೆಚ್ಚು ದಿನ ಅಧಿಕಾರ ನಡೆಸಿದ ಮೊದಲ ನಾಯಕ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮೋದಿ ಅವರು ಮುಖ್ಯಮಂತ್ರಿ, ಪ್ರಧಾನಿಯಾಗಿ ಸರ್ಕಾರದ ಚುಕ್ಕಾಣಿಯನ್ನು ಹಿಡಿದು ಇಂದಿಗೆ 8931 ದಿನಗಳಾಗಿವೆ. ಈ ಮೂಲಕ ಸಿಕ್ಕೀಂನ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ದಾಖಲೆಯನ್ನು ಮುರಿದರು. ಚಾಮ್ಲಿಂಗ್ ಅವರು 8930 ದಿನಗಳು ಅಧಿಕಾರ ನಡೆಸಿ ದೇಶದಲ್ಲಿಯೇ ಅತಿಹೆಚ್ಚು ದಿನ ಆಡಳಿತ ನಡೆಸಿದ ಮೊದಲಿಗರಾಗಿದ್ದರು. ಮೋದಿ ಅವರ ಅಧಿಕಾರಾವಧಿಯನ್ನು ಎರಡು ಹಂತದಲ್ಲಿ ವಿಂಗಡಿಸಲಾಗಿದೆ. ಗುಜರಾತ್ ರಾಜ್ಯದ ಮುಖ್ಯಮಂತ್ರಿ, ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ದಿನಗಳನ್ನು ಒಟ್ಟುಗೂಡಿಸಲಾಗಿದೆ. ಸರ್ಕಾರದ ಮುಖ್ಯಸ್ಥರಾಗಿ 25ನೇ ವರ್ಷಕ್ಕೂ ಅವರು ಕಾಲಿಟ್ಟಿರುವುದು ವಿಶೇಷ. ಈ ಮೈಲಿಗಲ್ಲನ್ನು ಅಪರೂಪದ ಮತ್ತು ಮಹತ್ವದ ಸಾಧನೆ ಎಂದು ಪರಿಗಣಿಸಲಾಗಿದೆ. ಮೋದಿ ಅವರು ತಮ್ಮ ರಾಜಕೀಯ ಜೀವನದಲ್ಲಿ ಹಲವು ದಾಖಲೆಗಳನ್ನು…
ಕೆಲಸ ಇಲ್ಲ ಸಿಗ್ತಾ ಇಲ್ಲ ಅಂತ ಮನೇಲಿ ಕೂತಿದ್ದೀರಾ …ಇಲ್ಲಿದೆ ಬಂಪರ್ ಆಫರ್ ಚಿಕ್ಕಮಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಐಡಿಎಸ್‍ಜಿ ಕಾಲೇಜು ಸಹಭಾಗಿತ್ವದಲ್ಲಿ ಮಾರ್ಚ್ 23 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಗರದ ಐಡಿಎಸ್‍ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಒಂದೇ ಸೂರಿನಡಿ 80ಕ್ಕೂ ಅಧಿಕ ಕಂಪನಿಗಳು, 5000 ಕ್ಕೂ ಹೆಚ್ಚು ಉದ್ಯೋಗ ಅವಕಾಶವಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವೀಧರರು ಭಾಗವಹಿಸಬಹುದು. ಉಚಿತ ಪ್ರವೇಶವಿದ್ದು, 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ರೆಸ್ಯೂಮ್‍ಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಬಯಸುವವರು ಉದ್ಯೋಗಕ್ಕೆ ಸಂಬಂಧಿಸಿದಂತೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಕೋರಿದೆ. ಜಿಲ್ಲೆಯ ಯುವನಿಧಿ ಫಲಾನುಭವಿಗಳು ಉದ್ಯೋಗ ಮೇಳದಲ್ಲಿ ಕಡ್ಡಾಯವಾಗಿ ಹಾಜರಾಗಿ ಮಾರ್ಚ್-2026ರ ಮಾಹೆಯ ಸ್ವಯಂ ಘೋಷಣೆಯನ್ನು ಸ್ಥಳದಲ್ಲಿ ಮಾಡಲಾಗುವುದು ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ…
ಏಪ್ರಿಲ್ 1ರಿಂದ ಡಿಜಿಟಲ್ ಪಾವತಿಗೆ ಹೆಚ್ಚುವರಿ ಭದ್ರತೆ: RBI ಹೊಸ ನಿಯಮ ಜಾರಿ ನವದೆಹಲಿ: ದೇಶಾದ್ಯಂತ ಡಿಜಿಟಲ್ ವಹಿವಾಟುಗಳನ್ನು ಇನ್ನಷ್ಟು ಸುರಕ್ಷಿತಗೊಳಿಸುವ ಉದ್ದೇಶದಿಂದ Reserve Bank of India ಮಹತ್ವದ ಕ್ರಮ ಕೈಗೊಂಡಿದೆ. ಏಪ್ರಿಲ್ 1ರಿಂದ ‘ಹೆಚ್ಚುವರಿ ದೃಢೀಕರಣ’ (Additional Authentication) ಕಡ್ಡಾಯಗೊಳಿಸುವಂತೆ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ನಿರ್ದೇಶನ ನೀಡಲಾಗಿದೆ. ಈ ಹೊಸ ನಿಯಮದ ಪ್ರಕಾರ, ಗ್ರಾಹಕರು ಆನ್‌ಲೈನ್ ಪಾವತಿ ಮಾಡುವಾಗ OTP, ಬಯೋಮೆಟ್ರಿಕ್ ಅಥವಾ ಪಿನ್‌ನಂತಹ ಹೆಚ್ಚುವರಿ ದೃಢೀಕರಣ ಹಂತಗಳನ್ನು ಪೂರೈಸಬೇಕು. ಇದರಿಂದ ಮೋಸ ಮತ್ತು ಅನಧಿಕೃತ ವ್ಯವಹಾರಗಳನ್ನು ಕಡಿಮೆ ಮಾಡುವ ಉದ್ದೇಶವಿದೆ. ವಿಶೇಷವಾಗಿ UPI, ಕಾರ್ಡ್ ಪಾವತಿ ಹಾಗೂ ಇ-ಕಾಮರ್ಸ್ ವ್ಯವಹಾರಗಳಲ್ಲಿ ಈ ನಿಯಮ ಅನ್ವಯವಾಗಲಿದೆ. ಗ್ರಾಹಕರ ಸುರಕ್ಷತೆಯನ್ನು ಹೆಚ್ಚಿಸುವತ್ತ RBIಯ ಈ ಕ್ರಮ ಮಹತ್ವದ್ದಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬ್ಯಾಂಕ್‌ಗಳು ಹಾಗೂ ಪಾವತಿ ಅಪ್ಲಿಕೇಶನ್‌ಗಳು ಈಗಾಗಲೇ ಈ ನಿಯಮಕ್ಕೆ ತಯಾರಿ ನಡೆಸುತ್ತಿದ್ದು, ಗ್ರಾಹಕರು ತಮ್ಮ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳನ್ನು ಅಪ್‌ಡೇಟ್ ಮಾಡಿಕೊಂಡಿರಲು ಸಲಹೆ…
ಸರ್ಕಾರದ ಒಳಮೀಸಲಾತಿ ನೀತಿ, ಆಯೋಗಗಳ ವರದಿ ಹಾಗೂ ರೋಸ್ಟರ್ ವ್ಯವಸ್ಥೆಗಳ ವಿರುದ್ಧವಾಗಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟವು ಮಾ.24ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಂಡಿದೆ ಎಂದು ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತಿಳಿಸಿದ್ದಾರೆ. ವಸಂತನಗರದ ಜಸ್ಮಾಭವನದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೋವಿ, ಬಂಜಾರ, ಕೊರಮ, ಕೊರಚ ಸೇರಿದಂತೆ ಸೂಕ್ಷ್ಮ, ಅತಿಸೂಕ್ಷ್ಮ ಮತ್ತು ಅಲೆಮಾರಿ ಸಮುದಾಯಗಳ 59 ಜಾತಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಚಾರದಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳು ಅವೈಜ್ಞಾನಿಕವಾಗಿದ್ದು, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಏಕಸದಸ್ಯ ಆಯೋಗದ ವರದಿ ಅಪೂರ್ಣವಾಗಿದೆ ಎಂದು ಟೀಕಿಸಿದರು. ಆಯೋಗದ ವರದಿಯಲ್ಲಿ ಸಮುದಾಯಗಳ ನಿಜವಾದ ಜನಸಂಖ್ಯೆ ಸರಿಯಾಗಿ ಪ್ರತಿಬಿಂಬಿತವಾಗಿಲ್ಲ. 2011ರ ಜನಗಣತಿಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿದ್ದ ಭೋವಿ ಸಮುದಾಯವನ್ನು ಕಡಿಮೆ ಪ್ರಮಾಣದಲ್ಲಿ ತೋರಿಸಲಾಗಿದೆ. ಇದೇ ವೇಳೆ ವರದಿಯಲ್ಲೇ ಈ ಸಮುದಾಯಗಳು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿವೆ ಎಂಬುದು ಸ್ಪಷ್ಟವಾಗಿದ್ದರೂ, ಸರ್ಕಾರ…
Subscribe to Updates
Get the latest creative news from FooBar about art, design and business.