Author: ಮೃತ್ಯುಂಜಯಾಚಾರ್ ಬಿ

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

ಪ್ಲೆಕ್ಸ್ ಬೇಡ, ಸೇವೆ ಮಾಡಿ; ಯದುವೀರ್ ಮಾದರಿ ನಡೆ ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಬಾರದು ಎಂದು ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಮಾರ್ಚ್ 24ರಂದು ನಡೆಯುವ ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಅವರು, ಯಾವುದೇ ರೀತಿಯ ಆಡಂಬರ, ದುಬಾರಿ ವೆಚ್ಚ ಹಾಗೂ ಭರ್ಜರಿ ಸಂಭ್ರಮಗಳಿಂದ ದೂರವಿರಲು ಕರೆ ನೀಡಿದ್ದಾರೆ. ಬದಲಾಗಿ, ಸಮಾಜಮುಖಿ ಕಾರ್ಯಗಳ ಮೂಲಕ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ತಿಳಿಸಿದ್ದಾರೆ. ರಕ್ತದಾನ ಶಿಬಿರ, ಅನ್ನದಾನ, ಸಸಿ ನೆಡುವುದು ಹಾಗೂ ಜನೋಪಕಾರಿ ಸೇವೆಗಳಲ್ಲಿ ತೊಡಗಿಕೊಳ್ಳುವುದೇ ನಿಜವಾದ ಸಂಭ್ರಮ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ, ಮೈಸೂರು ನಗರದ ಸೌಂದರ್ಯ ಕಾಪಾಡುವ ನಿಟ್ಟಿನಲ್ಲಿ ಜನ್ಮದಿನದ ನೆಪದಲ್ಲಿ ಎಲ್ಲೆಡೆ ಪ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಅಳವಡಿಸಬಾರದು ಎಂದು ಸ್ಪಷ್ಟವಾಗಿ ಸೂಚಿಸಿದ್ದಾರೆ. ಪ್ಲೆಕ್ಸ್‌ಗಳಿಂದ ಪರಿಸರ ಹಾನಿಯಾಗುವುದಲ್ಲದೆ ನಗರದ ಅಂದವೂ ಹಾಳಾಗುತ್ತದೆ ಎಂದು ಹೇಳಿದ್ದಾರೆ. ಪ್ಲೆಕ್ಸ್ ಮುಕ್ತ ಮೈಸೂರು ಎಂಬುದು ತನ್ನ ಕನಸು…

Read More

ನಗರ ದೇವತೆ ಬರಗೇರಮ್ಮ ಜಾತ್ರೆಗೆ ದಿನಗಣನೆ ಶುರು ; ಭಕ್ತರಲ್ಲಿ ಮನೆ ಮಾಡಿದ ಸಂಭ್ರಮ ಚಿತ್ರದುರ್ಗ: ನಗರದೇವತೆ ಬರಗೇರಮ್ಮ ಜಾತ್ರಾ ಮಹೋತ್ಸವ ಮಾ. 27ರಂದು ರಾತ್ರಿ 8ಕ್ಕೆ ಕಂಕಣಧಾರಣೆ, ಮಧುವಣಗಿತ್ತಿ ಪೂಜಾ ಕೈಂಕರ್ಯದೊಂದಿಗೆ ಆರಂಭವಾಗಲಿದೆ. ದೇವಿಯ ಜಾತ್ರೆಯೂ 15 ದಿನ ಜರುಗಲಿದೆ. 31ರಂದು ರಾತ್ರಿ 8ಕ್ಕೆ ದೇವಿಯ ಉತ್ಸವ ಮೂರ್ತಿಯನ್ನು ಬುರುಜನಹಟ್ಟಿಯ ದೇಗುಲದಿಂದ ಊರ ಹೊರಗಿನ ದೇಗುಲಕ್ಕೆ ಕರೆ ತರುವುದು. ನಂತರ ಕರಿಯಟ್ಟಿಯಲ್ಲಿನ ಭಕ್ತರಿಂದ ಪೂಜೆ ಸ್ವೀಕಾರ. ಏ.1ರಂದು ಬೆಳಗ್ಗೆ 9ಕ್ಕೆ ಚಂದ್ರವಳ್ಳಿಯಲ್ಲಿ ದೇವಿಗೆ ಗಂಗಾಪೂಜೆ, ಕುಂಭಾಭಿಷೇಕ ನಂತರ ದೇಗುಲಕ್ಕೆ ಆಗಮನ. ಅನ್ನಸಂತರ್ಪಣೆ ನಂತರ ರಾತ್ರಿ ಈರಜ್ಜನಹಟ್ಟಿ ಹಾಗೂ ನಾಯಕರ ಸೊಲ್ಲಾಪುರ, ಐಯುಡಿಪಿ ಲೇಔಟ್, ಸರಸ್ವತಿಪುರದಲ್ಲಿ ಭಕ್ತರಿಂದ ಪೂಜೆ ಸ್ವೀಕಾರ. 2ರಂದು ದೇವಿಯು ಕೆಳಗಿನ ಸೊಲ್ಲಾಪುರ, ಗೊಲ್ಲರಹಟ್ಟಿ, ಟಗರನಹಟ್ಟಿ, ದೇವರಹಟ್ಟಿ, ಜಾಲಿಕಟ್ಟೆ ಮತ್ತು ಮಾಳಪ್ಪನಹಟ್ಟಿ ಭಕ್ತರ ಮನೆಗಳಲ್ಲಿ ಪೂಜೆ ಸ್ವೀಕರಿಸಿ ದೇಗುಲಕ್ಕೆ ಮರಳುವುದು. ಅಂದು ಬೆಳಗ್ಗೆ 7ಕ್ಕೆ ಪಿಳ್ಳೇಕೆರನಹಳ್ಳಿ, ಬಸವೇಶ್ವರ, ವಿದ್ಯಾ, ಮಾರುತಿ, ನೆಹರು, ಚೌಡೇಶ್ವರಿ ನಗರ, ಮೆದೇಹಳ್ಳಿ ರಸ್ತೆ, ಬಿವಿಕೆಎಸ್…

Read More

ಹೊಸ ಪಿಂಚಣಿ ನೀತಿಗೆ ವಿರೋಧ; ಪ್ರತಿಭಟನೆಗೆ ಮುಂದಾದ ನಿವೃತ್ತ ನೌಕರರ ​ಚಿತ್ರದುರ್ಗ: ಕೇಂದ್ರ ಸರ್ಕಾರದ ಹೊಸ ಪಿಂಚಣಿ ನೀತಿಯನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಮಾ. 25ರಂದು ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ ತಿಳಿಸಿದೆ. ​ಕೇಂದ್ರ ಸರ್ಕಾರವು ನಿವೃತ್ತ ನೌಕರರ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಲು ಹಾಗೂ ವಾರ್ಷಿಕ ಎರಡು ಹಂತದ ತುಟ್ಟಿಭತ್ಯೆ (ಡಿಎ) ನೀಡುವಲ್ಲಿ ಹೊಸ ನೀತಿಯನ್ನು ಜಾರಿಗೆ ತರಲು ಮುಂದಾಗಿದೆ. ಈ ನಿರ್ಧಾರವು ನಿವೃತ್ತ ನೌಕರರ ಮತ್ತು ಅವರ ಕುಟುಂಬದ ಹಿತಾಸಕ್ತಿಗೆ ಧಕ್ಕೆ ತರಲಿದೆ ಎಂಬುದು ಸಂಘದ ಆತಂಕವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಂಘದ ಸೂಚನೆಯಂತೆ ಜಿಲ್ಲಾ ಘಟಕವು ಪ್ರತಿಭಟನೆಗೆ ಕರೆ ನೀಡಿದೆ. ​ಬುಧವಾರ ಬೆಳಿಗ್ಗೆ 10:30ಕ್ಕೆ ನಗರದ ಓಬವ್ವ ವೃತ್ತದಲ್ಲಿ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರು ಜಮಾಯಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಯವರಿಗೆ ಮನವಿ…

Read More

ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ ಚಿತ್ರದುರ್ಗ: ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 2026-27ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು 5ನೇ ತರಗತಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಪರಿಶಿಷ್ಟ ಜಾತಿಗೆ ಸೇರಿದ್ದು, ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. 5ನೇ ತರಗತಿಯಲ್ಲಿ ಶೇ.60 ರಷ್ಟು ಅಂಕ ಪಡೆದಿರಬೇಕು. ಬಾಲಕಿಯರಿಗೆ ಶೇ50ರಷ್ಟು ಸ್ಥಾನಗಳು ಮೀಸಲು ಇರುತ್ತವೆ. ಪ್ರತಿಷ್ಠಿತ ಶಾಲೆಗಳ ಆಯ್ಕೆ ಒಂದು ಕುಟುಂಬದಲ್ಲಿ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗುವುದು. ವಿದ್ಯಾರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಕಚೇರಿಯಲ್ಲಿ ಆನ್‌ಲೈನ್ ನೊಂದಣಿ ಪ್ರಕ್ರಿಯೆ ನಡೆಯಲಿದೆ. ಪೋಷಕರು ನಿಗದಿತ ಅರ್ಜಿಯೊಂದಿಗೆ 4 ಪಾಸ್ ಪೋರ್ಟ್ ಸೈಜ್ ಭಾವಚಿತ್ರ, 5ನೇ ತರಗತಿಯ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಇತ್ಯಾದಿ ಅಗತ್ಯ ನಕಲು…

Read More

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ವೇಗ ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಸರ್ಕಾರ ಅಗತ್ಯ ಸಹಕಾರ ನೀಡಿದ್ದು, ಕಾಮಗಾರಿಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆಯಿದೆ ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಿ.ಕಿರಣ್ ಕುಮಾರ್ ಹೇಳಿದರು. ಭದ್ರಾ ಮೇಲ್ದಂಡೆ ಯೋಜನೆಯ ಬುರುಜನರೊಪ್ಪ ಉಪವಿಭಾಗ ಕಚೇರಿಗೆ ಸಹಾಯಕ ಕಾರ್ಯಪಾಲಕ ಎಂಜಿಯರ್ ಆಗಿ ಬಡ್ತಿ ಹೊಂದಿರುವ ಜಿ.ಕಿರಣ್ ಕುಮಾರ್ ಪದಗ್ರಹಣ ಸ್ವೀಕರಿಸಿ ಮಾತನಾಡಿದರು. ಮೈಸೂರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್‌ನಲ್ಲಿ ಎರಡು ಬಂಗಾರ ಪದಕಗಳೊಂದಿಗೆ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಕಿರಣ್ ಕುಮಾರ್.ಜಿ ಆಲಮಟ್ಟಿ ನೀರಾವರಿ ಯೋಜನೆಯಲ್ಲಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಭದ್ರಾ ಮೇಲ್ಡಂಡೆ ಯೋಜನೆಯಲ್ಲಿ ಏಳು ವರ್ಷಗಳ ಕೆಲಸದ ಅನುಭವ ಹೊಂದಿರುತ್ತಾರೆ. ದಕ್ಷತೆ ಮತ್ತು ಪ್ರಾಮಾಣಿಕತೆಗೆ ಹೆಸರು ವಾಸಿಯಾಗಿದ್ದಾರೆ. ಜಿಲ್ಲೆಯ ರೈತರಿಗೆ ಅತ್ಯಂತ ಪ್ರಮುಖವಾದ ಭದ್ರ ಮೇಲ್ದಂಡೆ ಯೋಜನೆಯ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಇವರ ಅನುಭವ ಸಹಕಾರಿಯಾಗಲಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಭಾರತ ಸರ್ಕಾರದ ಕೇಂದ್ರ ಜಲಶಕ್ತಿ ಸಚಿವಾಲಯದ…

Read More

ಪೋಷಕರ ತುರ್ತು ಗಮನಕ್ಕೆ; ಕೇಂದ್ರೀಯ ವಿದ್ಯಾಲಯ ದಾಖಲಾತಿ ಪ್ರಾರಂಭ ಚಿತ್ರದುರ್ಗ: ಬಹು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಚಿತ್ರದುರ್ಗದ ಕೇಂದ್ರೀಯ ವಿದ್ಯಾಲಯ ಕೊನೆಗೂ ಕಾರ್ಯಾರಂಭಗೊಂಡಿದೆ ಎಂದು ಸಂಸದ ಗೋವಿಂದ ಎಂ.ಕಾರಜೋಳ ತಿಳಿಸಿದ್ದಾರೆ. 2026-27ನೇ ಶೈಕ್ಷಣಿಕ ಸಾಲಿಗೆ 1ನೇ ತರಗತಿಯಿಂದ 5ನೇ ತರಗತಿಯವರೆಗೆ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ಇಂದಿನಿಂದಲೇ ಅರ್ಜಿಗಳನ್ನು ವಿತರಣೆ ಮಾಡಲಾಗುತ್ತಿದೆ. ಈ ಕುರಿತು ಕೇಂದ್ರೀಯ ವಿದ್ಯಾಲಯ ಸಂಘಟನೆಯ ಕೇಂದ್ರ ಕಚೇರಿಯಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಹೊಸ ವಿಭಾಗದಲ್ಲಿ ತಾತ್ಕಾಲಿಕವಾಗಿ ಶಾಲೆ ಕಾರ್ಯನಿರ್ವಹಿಸಲಿದ್ದು, ಇದು ವಸತಿ ರಹಿತ ಶಾಲೆಯಾಗಿರುತ್ತದೆ. ಹಾಸ್ಟೆಲ್ ವ್ಯವಸ್ಥೆ ಇರುವುದಿಲ್ಲ. 1ನೇ ತರಗತಿಗೆ ಮಕ್ಕಳ ಪ್ರವೇಶಕ್ಕಾಗಿ ಪೋಷಕರು ಮಾ.20 ರಿಂದ ಏ.2 ರವರೆಗೆ KVS Admission Portal (admission.kvs.gov.in) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. 2ನೇ ತರಗತಿಯಿಂದ 5ನೇ ತರಗತಿವರೆಗೆ ದಾಖಲಾತಿ ಆಫ್‌ಲೈನ್ ಮೂಲಕ ನಡೆಯಲಿದ್ದು, ಪೋಷಕರು ಏ.2 ರ ಬೆಳಿಗ್ಗೆ 10 ಗಂಟೆಯಿಂದ ಏ.8ರ ಸಂಜೆ 4 ಗಂಟೆಯವರೆಗೆ ಸರ್ಕಾರಿ ವಿಜ್ಞಾನ…

Read More

ದಾವಣಗೆರೆ ದಕ್ಷಿಣದಲ್ಲಿ ‘ಶಿವ’ ನಡೆ ; ಯಾರಿಗೆ ಪ್ಲಸ್ ಯಾರಿಗೆ ಮೈನಸ್ ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಚುನಾವಣೆ ಕಳೆದ 24 ಗಂಟೆಯಿಂದ ಅನಿರೀಕ್ಷಿತ ರೋಚಕ ತಿರುವು ಪಡೆಯುತ್ತಿದೆ. ಇದೀಗ ಶಿವಸೇನೆಯ ನಡೆ ಯಾರಿಗೆ ಪ್ಲಸ್ ಯಾರಿಗೆ ಮೈನಸ್ ಎಂಬ ಲೆಕ್ಕಚಾರ ಶುರುವಾಗಿದೆ. ಸದ್ಯಕ್ಕೆ ಕೇಸರಿ ಪಾಳಯಕ್ಕೆ ಎದುರಾಗಿದ್ದ ಬಹುದೊಡ್ಡ ‘ಹಿಂದುತ್ವ’ದ ಕಂಟಕವೊಂದು ದಿಢೀರ್ ದೂರವಾಗಿದೆ. ಉಪಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದ ಶಿವಸೇನೆ (ಶಿಂಧೆ ಬಣ) ಕೊನೆಯ ಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಆರಂಭದಲ್ಲಿ ಶಿವಸೇನೆ ಈ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿತ್ತು. ಇಂದು ನಾಮಪತ್ರ ಸಲ್ಲಿಸಲು ಕೂಡ ಸಕಲ ಸಿದ್ಧತೆ ನಡೆಸಲಾಗಿತ್ತು. ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಚುನಾವಣಾ ಪ್ರಚಾರಕ್ಕೂ ಸಿದ್ಧರಾಗಿದ್ದರು. ಶಿವಸೇನೆ ಸ್ಪರ್ಧಿಸುವ ನಿರ್ಧಾರ ಬಿಜೆಪಿ ವಲಯದಲ್ಲಿ ಜಾಸ್ತಿ ಅಲ್ಲದಿದ್ದರೂ ಸ್ವಲ್ಪರ ಮಟ್ಟಿಗೆ ಮತ ವಿಭಜನೆಯಾಗುವ ಸಾಧ್ಯತೆ ಇತ್ತು ಎನ್ನುವುದು ರಾಜಕೀಯ ವಲಯದಲ್ಲಿ ಕೇಳಿಬಂದಿದೆ. ಕಾರಣ,…

Read More

ವಾಹನ ಸವಾರರಿಗೆ ಬಿಗ್ ಶಾಕ್: ಏಪ್ರಿಲ್ 1ರಿಂದ ಟೋಲ್ ದರ ಏರಿಕೆ : ರಾಜ್ಯದ ವಾಹನ ಸವಾರರಿಗೆ ಮತ್ತೊಂದು ಆರ್ಥಿಕ ಹೊರೆ ಬೀಳಲಿದ್ದು, ಏಪ್ರಿಲ್ 1ರಿಂದ ಕರ್ನಾಟಕದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಾರ್ಷಿಕ ಪರಿಷ್ಕರಣೆ ಕ್ರಮದಂತೆ ಈ ದರ ಏರಿಕೆ ಜಾರಿಗೆ ಬರಲಿದ್ದು, ಸಾಮಾನ್ಯವಾಗಿ 5ರಿಂದ 10 ಶೇಕಡಾವರೆಗೆ ಟೋಲ್ ಶುಲ್ಕ ಹೆಚ್ಚಾಗುವ ಸಾಧ್ಯತೆ ಇದೆ. ಕಾರು, ಬಸ್, ಲಾರಿ ಸೇರಿದಂತೆ ಎಲ್ಲಾ ವಾಹನಗಳಿಗೆ ಇದು ಅನ್ವಯವಾಗಲಿದೆ. ಬೆಂಗಳೂರು–ಮೈಸೂರು, ಬೆಂಗಳೂರು–ತುಮಕೂರು, ಬೆಂಗಳೂರು–ಹೈದರಾಬಾದ್ ಸೇರಿದಂತೆ ರಾಜ್ಯದ ಪ್ರಮುಖ ಸಂಚಾರ ಹೆದ್ದಾರಿಗಳಲ್ಲಿ ಈ ದರ ಏರಿಕೆ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ದರ ಏರಿಕೆಗೆ ದ್ರವ್ಯಫುಲ್ಯ, ರಸ್ತೆ ನಿರ್ವಹಣೆ ವೆಚ್ಚ ಮತ್ತು ಒಪ್ಪಂದದ ನಿಯಮಗಳ ಪ್ರಕಾರ ನಡೆಯುವ ವಾರ್ಷಿಕ ತಿದ್ದುಪಡಿ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ದಿನನಿತ್ಯ ಪ್ರಯಾಣಿಕರು ಹಾಗೂ ವಾಣಿಜ್ಯ ವಾಹನ ಸವಾರರಿಗೆ ಹೆಚ್ಚುವರಿ ಖರ್ಚು ಭಾರವಾಗಲಿದ್ದು, ಸಾರಿಗೆ ವೆಚ್ಚ ಏರಿಕೆಯಿಂದ ವಸ್ತುಗಳ…

Read More

ರೈಲು ನಿಲ್ದಾಣದಲ್ಲಿ ದುರಂತ ; ಹಾರಿತು ಪ್ರಾಣಪಕ್ಷಿ ಚಿತ್ರದುರ್ಗ: ಚಿಕ್ಕಜಾಜೂರು ರೈಲು ನಿಲ್ದಾಣದ ಸಮೀಪ ರೈಲಿಗೆ ಬಿದ್ದು ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಕೊರಳಲ್ಲಿ ರುದ್ರಾಕ್ಷಿ ಮಾಲೆ ಧರಿಸಿದ್ದು, ಜೀನ್ಸ್ ಪ್ಯಾಂಟ್ ಹಾಗೂ ಶರ್ಟ್ ಧರಿಸಿರುವುದು ಕಂಡುಬಂದಿದೆ. ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಈತನ ಸಂಬಂಧಿಕರು ಅಥವಾ ಸ್ನೇಹಿತರು ಯಾರಾದರೂ ಇದ್ದಲ್ಲಿ ಚಿಕ್ಕಜಾಜೂರು ರೈಲ್ವೆ ಉಪ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ಪಡೆಯುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Read More

ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ; ಯಾವುದು ಗೊತ್ತಾ ? ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಅಭೂತಪೂರ್ವ ಮೈಲಿಗಲ್ಲು ಸಾಧಿಸಿದ್ದಾರೆ. ಅವರು ಚುನಾಯಿತ ಸರ್ಕಾರದ ಮುಖ್ಯಸ್ಥರಾಗಿ ಅತಿ ಹೆಚ್ಚು ದಿನ ಅಧಿಕಾರ ನಡೆಸಿದ ಮೊದಲ ನಾಯಕ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮೋದಿ ಅವರು ಮುಖ್ಯಮಂತ್ರಿ, ಪ್ರಧಾನಿಯಾಗಿ ಸರ್ಕಾರದ ಚುಕ್ಕಾಣಿಯನ್ನು ಹಿಡಿದು ಇಂದಿಗೆ 8931 ದಿನಗಳಾಗಿವೆ. ಈ ಮೂಲಕ ಸಿಕ್ಕೀಂನ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ದಾಖಲೆಯನ್ನು ಮುರಿದರು. ಚಾಮ್ಲಿಂಗ್ ಅವರು 8930 ದಿನಗಳು ಅಧಿಕಾರ ನಡೆಸಿ ದೇಶದಲ್ಲಿಯೇ ಅತಿಹೆಚ್ಚು ದಿನ ಆಡಳಿತ ನಡೆಸಿದ ಮೊದಲಿಗರಾಗಿದ್ದರು. ಮೋದಿ ಅವರ ಅಧಿಕಾರಾವಧಿಯನ್ನು ಎರಡು ಹಂತದಲ್ಲಿ ವಿಂಗಡಿಸಲಾಗಿದೆ. ಗುಜರಾತ್ ರಾಜ್ಯದ ಮುಖ್ಯಮಂತ್ರಿ, ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ದಿನಗಳನ್ನು ಒಟ್ಟುಗೂಡಿಸಲಾಗಿದೆ. ಸರ್ಕಾರದ ಮುಖ್ಯಸ್ಥರಾಗಿ 25ನೇ ವರ್ಷಕ್ಕೂ ಅವರು ಕಾಲಿಟ್ಟಿರುವುದು ವಿಶೇಷ. ಈ ಮೈಲಿಗಲ್ಲನ್ನು ಅಪರೂಪದ ಮತ್ತು ಮಹತ್ವದ ಸಾಧನೆ ಎಂದು ಪರಿಗಣಿಸಲಾಗಿದೆ. ಮೋದಿ ಅವರು ತಮ್ಮ ರಾಜಕೀಯ ಜೀವನದಲ್ಲಿ ಹಲವು ದಾಖಲೆಗಳನ್ನು…

Read More