Author: ಮೃತ್ಯುಂಜಯಾಚಾರ್ ಬಿ
ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.
ಉಚಿತ ತರಬೇತಿ ಶೀಬಿರ ಚಿತ್ರದುರ್ಗ ಬಾಗಲಕೋಟೆಯ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಲ್ಲಿ ‘ಆಡು ಮತ್ತು ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಹಣ್ಣು ಬೆಳೆಗಳ ಕೃಷಿ, ಸಾವಯವ ಕೃಷಿ, ಸಮಗ್ರ ಕೃಷಿ, ಅಣಬೆ ಕೃಷಿ, ಜೇನು ಕೃಷಿ, ರೇಷ್ಮೆ ಕೃಷಿ ಮತ್ತು ಪುಷ್ಪ-ತರಕಾರಿ ಬೆಳೆಗಳ ಕೃಷಿ ತರಬೇತಿ ಶಿಬಿರವನ್ನು ಉಚಿತವಾಗಿ ಬಾಗಲಕೋಟೆಯಲ್ಲಿ 2026ರ ಫೆಬ್ರವರಿ ತಿಂಗಳಲ್ಲಿ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ 18 ರಿಂದ 55 ವರ್ಷದೊಳಗಿನ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು, ಮಹಿಳೆಯರು ಮೊಬೈಲ್ ನಂಬರ್ 9482630790 ಗೆ ಕರೆ ಮಾಡಿ ತಮ್ಮ ಹೆಸರನ್ನು ನೊಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಯುನಿಟ್-2, ಸೆಕ್ಟರ್ ನಂ-96, ಅಡ್ಡರಸ್ತೆ-3, ಪಬ್ಲಿಕ್ ಗಾರ್ಡ್‍ನ್ ಹತ್ತಿರ, ದುರ್ಗಾನಗರ, ನವನಗರ-ಬಾಗಲಕೋಟೆ-587103 ಅವರನ್ನು ಸಂಪರ್ಕಿಸಬಹದು ಎಂದು ಕಾರ್ಯನಿರ್ವಹಕ ನಿರ್ದೇಶಕ ರೇವಣಸಿದ್ಧ ಬಳ್ಳೊಳ್ಳಿ…
ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ: ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ ಚಿತ್ರದುರ್ಗ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಪರಿಶಿಷ್ಟ ವರ್ಗದ ಕಾನೂನು ಪದವೀಧರರನ್ನು ಆಯ್ಕೆ ಮಾಡಬೇಕಾಗಿರುವುದರಿಂದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫೆ.16 ಅರ್ಜಿ ಸಲ್ಲಿಸಲು ಕೊನೆಯ ದಿನ. ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ ಮಾಸಿಕ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕಾಲಮಿತಿಯ ಬದಲು ವರ್ಷದ ಎಲ್ಲ ದಿನಗಳಲ್ಲೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 2026ರ ಜನವರಿ 27 ರಿಂದ ಫೆಬ್ರವರಿ 16ರವರೆಗೆ ಆನ್‍ಲೈನ್ tw.kar.nic.in ನಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳವರ ಕಚೇರಿ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಲು 2026ರ ಫೆಬ್ರವರಿ 16 ಕೊನೆಯ ದಿನವಾಗಿದೆ. ಷರತ್ತುಗಳು: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪರಿಶಿಷ್ಟ ವರ್ಗಕ್ಕೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ದಿನಾಂಕಕ್ಕೆ ಕಾನೂನು ಪದವಿಯನ್ನು ಪಡೆದು 02 ವರ್ಷ ಮೀರಿರಬಾರದು. ಬಾರ್ ಕೌನ್ಸಿಲಿಂಗ್‍ನ ಖಾಯಂ ಸದಸ್ಯತ್ವ ಪ್ರಮಾಣ…
ಆದರ್ಶ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ ಚಿತ್ರದುರ್ಗ ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ಆದರ್ಶ ವಿದ್ಯಾಲಯ ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳಲ್ಲಿ 6ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಈಗಾಗಲೇ ಜನವರಿ 23 ರಿಂದ ಪ್ರಾರಂಭವಾಗಿದ್ದು, ಫೆ.25 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಪರೀಕ್ಷೆಗೆ ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 5ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು www.schooleducation.kar.nic.in ಮತ್ತು www.vidyavahini.karnataka.gov.in ವೆಬ್‍ಪುಟಗಳ ಮೂಲಕ ಅರ್ಜಿ ಸಲ್ಲಿಸಬಹುದು. ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳ ಖಾಯಂ ನಿವಾಸಿಗಳ ಮಕ್ಕಳು ಬೇರೆ ತಾಲ್ಲೂಕು, ಜಿಲ್ಲೆ, ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೂ ಸಹ 6ನೇ ತರಗತಿಯಿಂದ ಮೂಲ ತಾಲ್ಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಛಿಸಲು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಡಿಡಿಪಿಐ (ಆಡಳಿತ)/ಅಭಿವೃದ್ಧಿ, ಬಿಇಒ/ಬಿಆರ್‍ಸಿ ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕು, ಮುಖ್ಯ…
ಫೆ.01ರಂದು ಉದ್ಯೋಗ ಮೇಳ ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಸಂಯುಕ್ತಾಶ್ರಯದಲ್ಲಿ ಫೆ.01ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ “ಉದ್ಯೋಗ ಮೇಳ” ಆಯೋಜಿಸಲಾಗಿದೆ. ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣ ಪ್ರಕಾಶ ರುದ್ರಪ್ಪ ಪಾಟೀಲ, ಚಳ್ಳಕೆರೆ ಶಾಸಕರು ಹಾಗೂ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್…
ಸಕಲ ಸಿದ್ದತೆಗೆ ಸಚಿವ ಡಿ. ಸುಧಾಕರ್ ಕಟ್ಟುನಿಟ್ಟಿನ ಸೂಚನೆ ಚಿತ್ರದುರ್ಗ ಮುಂಬರುವ ಫೆಬ್ರವರಿ 27 ರಿಂದ ಮಾರ್ಚ್ 9 ರವರೆಗೆ ಐತಿಹಾಸಿಕ ಪ್ರಸಿದ್ಧ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಜರುಗಲಿದೆ. ಮಾರ್ಚ್ 06 ರಂದು ದೊಡ್ಡ ರಥೋತ್ಸವ ನಡೆಯಲಿದ್ದು, ಅತ್ಯಂತ ವಿಜೃಂಭಣೆ ಮತ್ತು ಭಕ್ತಿಪೂರ್ವಕ ಹಾಗೂ ಶಿಸ್ತುಬದ್ಧವಾಗಿ ರಥೋತ್ಸವ ಜರುಗಿಸಲು ಅಗತ್ಯ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ರಾಜ್ಯ ಯೋಜನೆ, ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ಒಳಮಠದ ಆವರಣದಲ್ಲಿ ಸೋಮವಾರ ಜರುಗಿದ ನಾಯಕನಹಟ್ಟಿ ಜಾತ್ರಾ ಪೂರ್ವ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನೆರೆ ಹೊರೆಯ ರಾಜ್ಯಗಳೂ ಸೇರಿದಂತೆ ವಿವಿಧ ಮೂಲೆಗಳಿಂದ ಲಕ್ಷಾಂತರ ಭಕ್ತರು ಜಾತ್ರಾ ಮಹೋತ್ಸವಕ್ಕೆ ಆಗಮಿಸುವುದರಿಂದ, ಯಾವುದೇ ಸಣ್ಣ ಲೋಪ-ದೋಷಗಳಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಭಕ್ತಾದಿಗಳಿಗೆ ಕುಡಿಯುವ ನೀರು, ಸ್ವಚ್ಛತೆ ಮತ್ತು ತುರ್ತು ವೈದ್ಯಕೀಯ ಸೇವೆಗಳಲ್ಲಿ ಯಾವುದೇ…
ಚಿತ್ರದುರ್ಗ, ಡಾ. ಬಿ.ವೈ. ಯುವರಾಜ್ ಭಾರತದ ಇತಿಹಾಸದಲ್ಲಿ ಜನವರಿ 26 ಒಂದು ಸುವರ್ಣ ದಿನ. ಈ ದಿನದಂದು ನಮ್ಮ ದೇಶವು ತನ್ನದೇ ಆದ ಸಂವಿಧಾನವನ್ನು ಅಳವಡಿಸಿಕೊಂಡು ಸಂಪೂರ್ಣ ಗಣರಾಜ್ಯವಾಯಿತು. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ‍್ಯ ಮತ್ತು ನ್ಯಾಯವನ್ನು ಒದಗಿಸಿದೆ. ಇಂತಹ ಸಂವಿಧಾನ ಆಶಯಗಳನ್ನು ಪಾಲಿಸುವುದು ನಮ್ಮಲ್ಲರ ಹೊಣೆ ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಬಿ.ವೈ. ಯುವರಾಜ್ ಹೇಳಿದರು. ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. 1947ರಲ್ಲಿ ನಮಗೆ ಸ್ವಾತಂತ್ರ‍್ಯ ಸಿಕ್ಕಿದ್ದರೂ, ಜನವರಿ 26, 1950ರಂದು ಸಂವಿಧಾನ ಜಾರಿಗೆ ಬಂದಾಗ ಮಾತ್ರ ನೈಜ ಅರ್ಥದಲ್ಲಿ ‘ಪ್ರಜಾಪ್ರಭುತ್ವ’ ಆರಂಭವಾಯಿತು. ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ನಮ್ಮ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದುದು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಅಂತಹ ಮಹನೀಯರನ್ನು ಹಾಗೂ ಗಡಿಯಲ್ಲಿ ನಮ್ಮನ್ನು ಕಾಯುತ್ತಿರುವ…
ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 77 ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ವಾರ್ತಾ ಭವನದಲ್ಲಿ ಸೋಮವಾರ ಜಿಲ್ಲಾ ವಾರ್ತಾಧಿಕಾರಿ ಬಿ.ವಿ. ತುಕಾರಾಂರಾವ್ ರಾಷ್ಟ್ರ ಧ್ವಜರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಎಂ. ಅವಿನಾಶ್, ಪಿ.ಎಂ.ವೇಣುಗೋಪಾಲ, ಜಿ.ವೆಂಕಟೇಶ್, ಅಲ್ಲದೆ ಎಂ.ಜೆ. ಬೋರೇಶ, ಪಾಶಾ, ಅಂಜನಮೂರ್ತಿ, ಅಪ್ರೆಂಟಿಸ್ ತರಬೇತಾರ್ಥಿ ಮುದ್ದುಕಿರಣ್, ಚಂದ್ರಶೇಖರ್, ಪತ್ರಕರ್ತ ಜಿ.ಒ.ಎನ್. ಮೂರ್ತಿ ಇದ್ದರು. ವಿವರ: ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ರಾಷ್ಟ್ರ ಧ್ವಜರೋಹಣ ನೆರೆವೇರಿಸಿದರು.
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜೀವನಾಡಿಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯಡಿ ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್ ಅಂತ್ಯದೊಳಗೆ ಗೋನೂರು ವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಗುರಿ ಹೊಂದಲಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ತಿಳಿಸಿದರು. ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ ಅವರು ನಂತರ ಗಣರಾಜ್ಯೋತ್ಸವ ಸಂದೇಶ ನೀಡಿದರು. ಯೋಜನೆಯ ಬಾಕಿ ಕಾಮಗಾರಿಗಳಿಗಾಗಿ 200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಸರ್ಕಾರ ಭರವಸೆ ನೀಡಿದೆ. ಹಿರಿಯೂರು, ಚಿತ್ರದುರ್ಗ, ಹೊಳಲ್ಕೆರೆ ಮತ್ತು ಚಳ್ಳಕೆರೆ ತಾಲ್ಲೂಕುಗಳ ಒಟ್ಟು 73,946 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ಹನಿ ನೀರಾವರಿ ಒದಗಿಸುವ 2677 ಕೋಟಿ ರೂ.ಗಳ ಬೃಹತ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು. ಕೃಷಿ ಸಾಧನೆಯಲ್ಲಿ ಜಿಲ್ಲೆ ನಂಬರ್ 1 ಜಿಲ್ಲೆಯ ರೈತರ ಸಾಧನೆಯನ್ನು…
Subscribe to Updates
Get the latest creative news from FooBar about art, design and business.