Author: ಮೃತ್ಯುಂಜಯಾಚಾರ್ ಬಿ

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

ಸಾಕ್ಷಾತ್ಕಾರಗೊಂಡ ವಿಶ್ವಬಂಧುವಿನ ವೈಭವದ ರಥಪರ್ವ ದಾವಣಗೆರೆ: ತರಳಬಾಳು ಜಗದ್ಗುರು ಬೃಹನ್ಮಠದ ಮೂಲಪುರುಷನಾದ ಮರುಳಸಿದ್ಧರು ಈ ನಾಡು ಕಂಡ ಅಪೂರ್ವ ಯೋಗಿ. ರೇವಣಸಿದ್ಧರಿಂದ ದೀಕ್ಷಿತನಾದ ಮರುಳಸಿದ್ಧರು ಸಿದ್ಧ ಪರಂಪರೆಯಲ್ಲಿಯೇ ವಿಭಿನ್ನ ಮತ್ತು ವಿಶಿಷ್ಟ ವ್ಯಕ್ತಿತ್ವ ಹೊಂದಿದವರು. ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದ ಯೋಗಿ ಪುರುಷ. ತನ್ನ ಉದಾತ್ತ ಆಶಯಗಳನ್ನು ಮುಂದುವರಿಸಿಕೊಂಡು ಹೋಗಲು ತೆಲಗುಬಾಳು ಸಿದ್ಧನಿಗೆ ತರಳಾ.. ಬಾಳು ಎಂದು ಆಶೀರ್ವದಿಸಿದ ದೂರದೃಷ್ಟಿಯ ನೇತಾರ. ಅವರ ಸದಾಶಯಗಳ ಮುಂದುವರಿಕೆಯೇ ತರಳಬಾಳು ಗುರು ಪರಂಪರೆ. ಕನ್ನಡದ ಮೊದಲ ವಚನಕಾರ್ತಿ ಅಕ್ಕಮಹಾದೇವಿಗೆ ಲಿಂಗ ದೀಕ್ಷೆ ನೀಡಿ ಆಶೀರ್ವಾದಿಸಿದವರು ಗುರು ಮರುಳಸಿದ್ಧರು. ಅಕ್ಕನ ಹುಣ್ಣಿಮೆ ಎಂದೇ ಆಚರಿಸುತ್ತಿರುವ ಚೈತ್ರಮಾಸದ ಸೀಗಿ ಹುಣ್ಣಿಮೆಯ ದಿನವೇ ಸುಕ್ಷೇತ್ರ ಆನಗೋಡಿನಲ್ಲಿ ಮರುಳಸಿದ್ಧರ ರಥೋತ್ಸವ. ಪ್ರತಿವರ್ಷದ ಪದ್ಧತಿಯಂತೆ ಗುರುವಾರ ಸಂಜೆ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಮಠದ ಜಂಗಮರ ವಚನ , ಮಂತ್ರಘೋಶಗಳ ನಿನಾದದಲ್ಲಿ ಶ್ರೀ ಮರುಳಸಿದ್ಧರ ರಥೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು.…

Read More

ಗರ್ಭಕಂಠದ ಕ್ಯಾನ್ಸರ್ ತಡೆಗೆ ‘ಹೆಚ್‍ಪಿವಿ’ ಲಸಿಕೆ ಶ್ರೀರಕ್ಷೆ ಟಿಓಬಿ ನ್ಯೂಸ್ ಮಹಿಳೆಯರನ್ನು ಕಾಡುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಹೆಚ್.ಪಿ.ವಿ ಲಸಿಕೆ ಅತ್ಯಂತ ಪರಿಣಾಮಕಾರಿಯಾಗಿದ್ದು, ಅರ್ಹ ವಯಸ್ಸಿನ ಹೆಣ್ಣುಮಕ್ಕಳಿಗೆ ಪೋಷಕರು ತಪ್ಪದೇ ಲಸಿಕೆ ಹಾಕಿಸುವ ಮೂಲಕ ಅವರ ಭವಿಷ್ಯದ ಆರೋಗ್ಯಕ್ಕೆ ಭದ್ರತೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್ ಕರೆ ನೀಡಿದರು. ಚಿತ್ರದುರ್ಗ ತಾಲ್ಲೂಕಿನ ಡಿ. ಮದಕರಿಪುರ ಗ್ರಾಮಕ್ಕೆ ಗುರುವಾರ ಜಿಲ್ಲಾ ಮಟ್ಟದ ಐಇಸಿ ತಂಡ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಲಸಿಕೆ ಪಡೆಯಲು ನಿರಾಕರಿಸುತ್ತಿದ್ದ ಪೋಷಕರ ಮನವೊಲಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಲಸಿಕೆಯು ಹೊಸದೇನಲ್ಲ, ಜಗತ್ತಿನಾದ್ಯಂತ ಈಗಾಗಲೇ 50 ಕೋಟಿಗೂ ಅಧಿಕ ಲಸಿಕೆಗಳನ್ನು ನೀಡಲಾಗಿದೆ. ಕಳೆದ 15 ವರ್ಷಗಳ ಅಂಕಿ-ಅಂಶಗಳು ಈ ಲಸಿಕೆ ಸುರಕ್ಷಿತ ಮತ್ತು ಪರಿಣಾಮಕಾರಿ ಎಂಬುದನ್ನು ಸಾಬೀತುಪಡಿಸಿವೆ. ಸರ್ಕಾರದ ಮಾರ್ಗಸೂಚಿಯಂತೆ 14 ವರ್ಷ ಪೂರೈಸಿದ ಮತ್ತು 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತಿದ್ದು, ಪೋಷಕರು ಇದರ ಸದುಪಯೋಗ ಪಡೆದುಕೊಳ್ಳಬೇಕು…

Read More

ಪ್ರಿ-ವೆಡ್ಡಿಂಗ್ ಶೂಟ್ ಕ್ರೇಜ್‌ಗೆ ಬ್ರೇಕ್ ! ; ಹೊರಬಿತ್ತು ಹೊಸ ರೂಲ್ಸ್ ಚಿಕ್ಕಮಗಳೂರು: ಪ್ರವಾಸಿಗರ ಸ್ವರ್ಗ ಕಾಫಿನಾಡಿನಲ್ಲಿ ಇನ್ಮುಂದೆ ಪ್ರವಾಸಿಗರ ಆಟ ನಡೆಯಲ್ಲ! ಹೌದು, ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳು ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅತಿರೇಕದ ವರ್ತನೆಗಳಿಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಈಗ ‘ಬ್ರಹ್ಮಾಸ್ತ್ರ’ ಪ್ರಯೋಗಿಸಿದೆ. ಜಿಲ್ಲಾಧಿಕಾರಿ ಎಂ.ಎನ್. ನಾಗರಾಜ್ ಅವರು ಪ್ರವಾಸಿಗರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದು, ಜಿಲ್ಲೆಗೆ ಬರುವ ಕೋಟಿ ಕೋಟಿ ಪ್ರವಾಸಿಗರಿಗೆ ಆತಿಥ್ಯ ನೀಡಲು ನಾವು ಬದ್ಧ, ಆದರೆ ಧಾರ್ಮಿಕ ಕೇಂದ್ರಗಳ ಪಾವಿತ್ರ್ಯತೆಗೆ ಧಕ್ಕೆ ತಂದರೆ ಅಥವಾ ಸಾರ್ವಜನಿಕರಿಗೆ ಮುಜುಗರ ಉಂಟುಮಾಡಿದರೆ ಕಠಿಣ ಕ್ರಮ ಗ್ಯಾರಂಟಿ ಎಂದಿದ್ದಾರೆ. ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ನಡೆದ ಹಲ್ಲೆ ಪ್ರಕರಣದಿಂದ ಎಚ್ಚೆತ್ತಿರುವ ಜಿಲ್ಲಾಡಳಿತ, ದೇವಸ್ಥಾನದ ಆವರಣದಲ್ಲಿ ಪಾದರಕ್ಷೆ ಧರಿಸಿ ನಡೆಸುವ ಶೂಟಿಂಗ್‌ಗೆ ಬ್ರೇಕ್ ಹಾಕಲಿದೆ. ದೇವಸ್ಥಾನದ ಆವರಣ ಮತ್ತು ಪ್ರವಾಸಿ ತಾಣಗಳಲ್ಲಿ ಶೂಟಿಂಗ್ ಮಾಡಬೇಕೆಂದರೆ ಇನ್ಮುಂದೆ ಪರ್ಮಿಷನ್ ಕಡ್ಡಾಯ. ಜೊತೆಗೆ ಎಷ್ಟು ಶುಲ್ಕ ಕಟ್ಟಬೇಕು ಎಂಬ ಪಟ್ಟಿಯೂ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ರೆಸಾರ್ಟ್…

Read More

ಮೌಲ್ಯಮಾಪನ ಪ್ರಾರಂಭಕ್ಕೆ 48 ಗಂಟೆ ಬಾಕಿ; ಫಲಿತಾಂಶ ಪ್ರಕಟಣೆಗೆ ಡೇಟ್ ಫೀಕ್ಸ್ ಚಿತ್ರದುರ್ಗ : ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿ ಬೆನ್ನಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಏಪ್ರಿಲ್ 5 ರಿಂದ ಏಪ್ರಿಲ್ 20ರವರೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯಲಿದೆ. ಈ ಬಾರಿ ಸುಮಾರು 8.65 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ ಸುಮಾರು 8.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪ್ರಾಥಮಿಕ ವರದಿಯ ಪ್ರಕಾರ ಶೇ. 2 ರಿಂದ 3 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದಾರೆ. ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ ಅಥವಾ ಅಂಕ ಸುಧಾರಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಸಲಾಗುವ ಪರೀಕ್ಷೆ-2 ಅನ್ನು ಮೇ 18 ರಿಂದ ಮೇ 25ರವರೆಗೆ ನಡೆಸಲು ಮಂಡಳಿಯು ನಿರ್ಧರಿಸಿದೆ. ಈ ಪರೀಕ್ಷೆಯ ಫಲಿತಾಂಶವು ಜೂನ್ 1ರಂದು ಪ್ರಕಟವಾಗುವ ಸಾಧ್ಯತೆಯಿದೆ. ಶಿಕ್ಷಣ ಇಲಾಖೆಯ ವೇಳಾಪಟ್ಟಿಯಂತೆ ಏಪ್ರಿಲ್ 24ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಲಿದೆ. ವಿಷಯವಾರು ಸವಿಸ್ತಾರವಾದ ವೇಳಾಪಟ್ಟಿಯನ್ನು ಮಂಡಳಿಯು ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸಲಿದೆ.…

Read More

ಪೂರ್ಣಗೊಂಡ ಮೌಲ್ಯಮಾಪನ ಕಾರ್ಯ; ಫಲಿತಾಂಶಕ್ಕೆ ದಿನಗಣನೆ ಶುರು ಚಿತ್ರದುರ್ಗ: ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದೀಗ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ಬಾರಿ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಮಾರ್ಚ್ 20 ರಿಂದಲೇ ಮೌಲ್ಯಮಾಪನ ಪ್ರಕ್ರಿಯೆಯನ್ನು ಆರಂಭಿಸಲಾಗಿತ್ತು. ರಾಜ್ಯಾದ್ಯಂತ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು. ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯಗೊಳ್ಳುವ ಸಮಯ ಹತ್ತಿರ ಬಂದಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಏಪ್ರಿಲ್ 7 ರಂದು ಪ್ರಕಟವಾಗುವ ದಟ್ಟ ಸಾಧ್ಯತೆಗಳಿವೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ. ಪರೀಕ್ಷೆಯ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಬಹುತೇಕ ಪೂರ್ಣಗೊಂಡಿದೆ. ಶಿಕ್ಷಣ ಇಲಾಖೆಯು ಈಗಾಗಲೇ ಸಂಭಾವ್ಯ ದಿನಾಂಕವನ್ನು ಘೋಷಿಸಿದ್ದು, ಏಪ್ರಿಲ್ 7 ರಂದು ಅಧಿಕೃತವಾಗಿ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ. ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ…

Read More

ಮುರುಘಾ ಮಠದಲ್ಲಿ ಅಕ್ಕಮಹಾದೇವಿ ಶರಣೋತ್ಸವ; ಸ್ತ್ರೀಕುಲದ ಅಸ್ಮಿತೆ ಅಕ್ಕ ಚಿತ್ರದುರ್ಗ: ಅಕ್ಕ ವಚನಕಾರರ ಉಜ್ವಲ ನಕ್ಷತ್ರ. ಶ್ರೇಷ್ಠ ಅನುಭಾವಿ, ಕನ್ನಡದ ಮೊಟ್ಟಮೊದಲ ಕವಯತ್ರಿ ಅಷ್ಟೇ ಅಲ್ಲದೇ ಸ್ತ್ರೀ ಕುಲಕ್ಕೆ ಗೌರವ ತಂದುಕೊಡುವ ಕೆಲಸ ಆಕೆಯಿಂದ ನಡೆಯಿತು. ಹೆಣ್ಣಿಗೆ ಆ ಕಾಲದಲ್ಲಿ ಯಾವ ಸ್ಥಾನಮಾನ ಇತ್ತು ಎನ್ನುವುದನ್ನು ಊಹಿಸಿಕೊಂಡರೆ ಮೈ ರೋಮಾಂಚನವಾಗುತ್ತದೆ. ಅಂತಹ ಕಠಿಣ ವ್ಯವಸ್ಥೆಯಲ್ಲಿ ಸ್ತ್ರೀಕುಲದ ಅಸ್ಮಿತೆಯನ್ನು ಉಳಿಸಲು ಆದರ್ಶಕ್ಕಾಗಿ ಒಂದು ವ್ಯವಸ್ಥೆಯನ್ನೇ ಧಿಕ್ಕರಿಸಿ ಬಂದಿದ್ದು ಇತಿಹಾಸ ಎಂದು ಸಹಾಯಕ ಪ್ರಾಧ್ಯಾಪಕಿ ಟಿ.ಗಾಯತ್ರಿ ನಗರದ ಮುರುಘಾ ಮಠದಲ್ಲಿ ಆಯೋಜಿಸಿದ್ದ ಅಕ್ಕಮಹಾದೇವಿ ಶರಣೋತ್ಸವದಲ್ಲಿ ಮಾತನಾಡಿದರು. 12ನೇ ಶತಮಾನದಲ್ಲೇ ಬಸವಾದಿ ಶರಣರು ವಚನ ಸಾಹಿತ್ಯದ ಮೂಲಕ ವಿಶ್ವಕ್ಕೆ ಬಹುದೊಡ್ಡ ಕೊಡುಗೆ ನೀಡಿದರು. ಸಾಮಾಜಿಕ, ಆರ್ಥಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪ್ರಗತಿ ಸಾಧಿಸುವಲ್ಲಿ ಯಶಸ್ಸು ಕಂಡರು ಎಂದರು. ಬಸವಣ್ಣನವರ ನೇತೃತ್ವದಲ್ಲಿ ಅಂದಿನ ಹಿರಿಕಿರಿಯ ಶರಣರೆಲ್ಲ ಸೇರಿಕೊಂಡು ಉಜ್ವಲ ಪರಂಪರೆಗೆ ನಾಂದಿ ಹಾಡಿದರು. ಅದರ ಬಳುವಳಿಯೇ ಅಕ್ಕಮಹಾದೇವಿ’ ಎಂದು ತಿಳಿಸಿದರು. ಸಾಮಾಜಿಕ…

Read More

*ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧ* ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕು ಆಡಳಿತ,ಪೊಲೀಸ್ ಇಲಾಖೆ,ಶಿಕ್ಷಣ ಇಲಾಖೆಗಳು ಸ್ಥಳೀಯ ದಲಿತ,ಕನ್ನಡ ಪರ ಹಾಗೂ ಇತರೆ ಸಂಘಟನೆಗಳ ಸಹಯೋಗದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದೆ.ಸ್ಪರ್ಧೆಯು ಏಪ್ರೀಲ್ 12 ರಂದು ಬೆಳಿಗ್ಗೆ 9 ಗಂಟೆಗೆ ಕುಷ್ಟಗಿ ಪಟ್ಟಣದ ಕ್ರೈಸ್ಟ್ ದಿ ಕಿಂಗ್ ಶಾಲೆಯಲ್ಲಿ ನಡೆಯಲಿದೆ. ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಯಾವುದೇ ವಯೋಮಿತಿ ,ವಿದ್ಯಾರ್ಹತೆಯ ನಿರ್ಬಂಧ ಇರುವುದಿಲ್ಲ,ಎಲ್ಲ ಆಸಕ್ತರಿಗೂ ಮುಕ್ತ ಅವಕಾಶವಿರುತ್ತದೆ.ರಾಜ್ಯದ ಯಾವುದೇ ಜಿಲ್ಲೆಗಳ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡಿನ ನಕಲು ಪ್ರತಿ ಒದಗಿಸಿ ಭಾಗವಹಿಸಬಹುದು.ಮೊದಲ ಸುತ್ತಿನಲ್ಲಿ 50 ಅಂಕಗಳ ಬಹುಆಯ್ಕೆ ಮಾದರಿಯ ಸುತ್ತು , ಈ ಸುತ್ತಿನಲ್ಲಿ ಅತಿಹೆಚ್ಚು ಅಂಕಗಳಿಸಿದ ಮೊದಲ 12 ಅಭ್ಯರ್ಥಿಗಳು ಎರಡನೇ ಸುತ್ತಿಗೆ ಆಯ್ಕೆಯಾಗುತ್ತಾರೆ. ಈ 12 ಅಭ್ಯರ್ಥಿಗಳನ್ನು 6 ತಂಡಗಳಾಗಿ ವಿಂಗಡಿಸಿ…

Read More

🔮 ನಿತ್ಯ ಭವಿಷ್ಯ – 03/04/2026 🔮 ಮೇಷ (Aries): ಇಂದು ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿರುತ್ತದೆ. ಕೆಲಸಗಳಲ್ಲಿ ಯಶಸ್ಸು ಕಾಣುವಿರಿ. ಆರ್ಥಿಕವಾಗಿ ಸುಧಾರಣೆ. ಕುಟುಂಬದಲ್ಲಿ ಸಂತೋಷದ ವಾತಾವರಣ. ವೃಷಭ (Taurus): ಸ್ವಲ್ಪ ಆತಂಕದ ದಿನ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಅಗತ್ಯ. ಆರೋಗ್ಯದ ಕಡೆ ಗಮನ ಕೊಡಿ. ಅನಾವಶ್ಯಕ ವಾದವಿವಾದ ತಪ್ಪಿಸಿ. ಮಿಥುನ (Gemini): ಹೊಸ ಅವಕಾಶಗಳು ದೊರೆಯುವ ದಿನ. ಸ್ನೇಹಿತರ ಸಹಾಯದಿಂದ ಕೆಲಸಗಳಲ್ಲಿ ಮುನ್ನಡೆ. ಪ್ರಯಾಣ ಸಾಧ್ಯತೆ ಇದೆ. ಕರ್ಕಾಟಕ (Cancer): ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು. ಆದರೆ ನಿಮ್ಮ ಶ್ರಮ ಫಲ ನೀಡುತ್ತದೆ. ಕುಟುಂಬದ ಬೆಂಬಲ ಲಭ್ಯ. ಸಿಂಹ (Leo): ಇಂದು ಶುಭ ದಿನ. ನಿರೀಕ್ಷಿತ ಕಾರ್ಯಗಳು ನೆರವೇರುತ್ತವೆ. ಧೈರ್ಯದಿಂದ ಮುಂದುವರಿದರೆ ಯಶಸ್ಸು ಖಚಿತ. ಕನ್ಯಾ (Virgo): ಕೆಲಸಗಳಲ್ಲಿ ವಿಳಂಬ ಉಂಟಾಗಬಹುದು. ತಾಳ್ಮೆ ಇರಲಿ. ಆರೋಗ್ಯದ ಕಡೆ ವಿಶೇಷ ಕಾಳಜಿ ಅಗತ್ಯ. ತುಲಾ (Libra): ಆರ್ಥಿಕವಾಗಿ ಲಾಭದ ಸೂಚನೆ. ಹೊಸ ಒಪ್ಪಂದಗಳು ಸಾಧ್ಯ. ಸ್ನೇಹಿತರ ಜೊತೆ ಉತ್ತಮ ಸಮಯ. ವೃಶ್ಚಿಕ…

Read More

* ಅಪ್ಪನ ವಚನಗಳು:- ಶಿವಯೋಗಿಗಳಿಗೆ ಬಸವಣ್ಣನವರು ಎಲ್ಲ ವಿಧದಲ್ಲಿಯೂ ಮೇಲ್ಪಂಕ್ತಿ ಆಗಿದ್ದರು. ಶರಣರ ವಿಚಾರಗಳನ್ನು ಹೇಳುವುದು ಸರಳ, ಆದರೆ ಆಚರಿಸುವುದು ಕಷ್ಟ .ಆದರೆ ಶಿವಯೋಗಿಗಳಿಗೆ ಬಸವ ತತ್ವ ಆಚರಣೆ ಕಷ್ಟವಾಗಿರಲಿಲ್ಲ, ಇಷ್ಟವಾಗಿತ್ತು .ಕಾಶಿಯಿಂದ ಬಂದ ಸಂಸ್ಕೃತ ಪಂಡಿತ ಬೃಹತ್ತಾದ ಸಂಸ್ಕೃತ ಗ್ರಂಥ ತಂದುಕೊಟ್ಟ. ತಾವು ಇದನ್ನು ಓದಬೇಕೆಂದು ಒತ್ತಾಯಿಸುತ್ತಾನೆ. ನಾನು ಈಗಾಗಲೇ ಒಂದು ಗ್ರಂಥ ಓದುತ್ತಿದ್ದೇನೆ. ನಿಮ್ಮ ಹತ್ತಿರವೇ ಇರಲಿ ಎಂದು ನಯವಾಗಿ ಗುರುಗಳು ನಿರಾಕರಿಸಿದರು. ಮತ್ತೆ ಆ ಪಂಡಿತ ಬುದ್ಧೀ ಅದು ಮುಗಿದ ಮೇಲಾದರೂ ಇದನ್ನು ಓದಲೇಬೇಕೆಂದು ಒತ್ತಾಯಿಸಿದಾಗ” ಈ ಜನ್ಮ ಮುಗಿಯುವವರೆಗೂ ಅದು ಸಾಧ್ಯವಿಲ್ಲಪ್ಪಾ ಅದು ಮುಗಿಯದ ಮಾಣಿಕ್ಯ ದೀಪ್ತಿ” ಎನ್ನುತ್ತಾರೆ .ಯಾವುದದು ಬುದ್ಧಿ ಎಂದ. ಅದು” ಶರಣರ ವಚನ ಸಾಹಿತ್ಯ ದರ್ಶನ” ನಮಗೆಲ್ಲ ಅದೇ ದಾರಿದೀಪ ಶಾಸ್ತ್ರಿಗಳೆ ಎಂದು ವಚನಗಳ ಮನ್ನಣೆಯನ್ನು ಎತ್ತಿ ತೋರಿಸುತ್ತಾರೆ. ಮೈಸೂರಿನ ಕಡ್ಲೆಪುರಿ ನಂಜುಂಡಪ್ಪನವರು ಸೊಗಸಾದ ಮಂಚ ತಂದು, ಗಾದೆ -ಕುತನಿ ಅರಿವೇ ಹಾಸಿ, ಅಪ್ಪಾ ತಾವು ಇದರ ಮೇಲೆ ನಿತ್ಯವೂ ಪವಡಿಸಬೇಕು…

Read More

ಏ.30ರೊಳಗೆ ಕೆನಾಲ್‌ಗೆ ಟ್ರಯಲ್ ನೀರು: ಶಾಸಕ ಚಂದ್ರಪ್ಪ ಗಡುವು ಹೊಳಲ್ಕೆರೆ: ಭದ್ರಾ ಮೇಲ್ದಂಡೆ ಯೋಜನೆಯಡಿ ನಡೆಯುತ್ತಿರುವ ಕೆನಾಲ್ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಏಪ್ರಿಲ್ 30ರೊಳಗೆ ಟ್ರಯಲ್ ಆಧಾರದಲ್ಲಿ ನೀರು ಹರಿಸುವಂತೆ ಶಾಸಕ ಡಾ. ಎಂ. ಚಂದ್ರಪ್ಪ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಠಿಣ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳಲು, ಹೆಗಡೆಹಳ್ಳಿ ಮತ್ತು ಹೆಬ್ಬೂರು ಗ್ರಾಮಗಳಲ್ಲಿ ಕಾಮಗಾರಿಗಳನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆ ಈಗ ವೇಗ ಪಡೆದುಕೊಂಡಿದ್ದು, ಯಾವುದೇ ಕಾರಣಕ್ಕೂ ಮತ್ತಷ್ಟು ವಿಳಂಬವಾಗಬಾರದು ಎಂದರು. ಹೆಗಡೆಹಳ್ಳಿ ಬಳಿ ಕೆನಾಲ್ ಮಾರ್ಗದಲ್ಲಿ ಬಂಡೆ ಸಮಸ್ಯೆ ಇದ್ದು, ಅದನ್ನು ತೆರವುಗೊಳಿಸಲು ಅಧಿಕಾರಿಗಳು ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ. ಹತ್ತುದಿಂದ ಹದಿನೈದು ದಿನಗಳಲ್ಲಿ ಕೆಲಸ ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಗುತ್ತಿಗೆದಾರರಿಗೆ ಪಾವತಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕಾಮಗಾರಿ ವೇಗ ಹೆಚ್ಚಿಸಬೇಕು. ಏಪ್ರಿಲ್ ಅಂತ್ಯದೊಳಗೆ ಗೋನೂರುವರೆಗೂ ನೀರು ಟ್ರಯಲ್ ಆಗಿ ಹರಿಯಬೇಕು ಎಂಬುದು ನಮ್ಮ ಗುರಿ ಎಂದು ಹೇಳಿದರು. ಅಧಿಕಾರಿಗಳ ಕೆಲಸದ…

Read More