Author: Times Of Bayaluseeme Staff

ಬೀದರ್ ಏ11: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು. ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು. ಬಸವಣ್ಣ ತಿರಸ್ಕರಿದ್ದ ಕರ್ಮಸಿದ್ಧಾಂತವನ್ನು ಪಾಲಿಸುವವರು ಈಗ…

Read More