Author: Times Of Bayaluseeme Staff

​11 ಮೇ 2026 ರ ಇಂದಿನ ರಾಶಿಫಲ: ಮೇಷ ರಾಶಿಯವರಿಗೆ ಹೊಸ ಅವಕಾಶ, ಧನು ರಾಶಿಯವರಿಗೆ ಶುಭ ಸುದ್ದಿ ಹಾಗೂ ಕಟಕ ರಾಶಿಯವರಿಗೆ ಆರ್ಥಿಕ ಲಾಭದ ಮುನ್ಸೂಚನೆ ಇದೆ. ನಿಮ್ಮ ರಾಶಿಯ ಸಂಪೂರ್ಣ ಭವಿಷ್ಯವನ್ನು ಇಲ್ಲಿ ಓದಿ. ಮೇಷ – ಉದ್ಯೋಗ ಮತ್ತು ವ್ಯವಹಾರದಲ್ಲಿ ಹೊಸ ಅವಕಾಶಗಳು ಸಿಗಬಹುದು. ಆತುರದ ನಿರ್ಧಾರಗಳನ್ನು ತಪ್ಪಿಸಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯದ ಬಗ್ಗೆ ಸ್ವಲ್ಪ ಗಮನ ಕೊಡಿ. ವೃಷಭ – ಹಣಕಾಸಿನ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಸ್ನೇಹಿತರಿಂದ ಸಹಾಯ ದೊರೆಯಬಹುದು. ಹಳೆಯ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮನಸ್ಸಿಗೆ ನೆಮ್ಮದಿ ಸಿಗಲಿದೆ. ಮಿಥುನ – ಹೊಸ ಪರಿಚಯಗಳು ಜೀವನದಲ್ಲಿ ಬದಲಾವಣೆ ತರಬಹುದು. ಉದ್ಯೋಗದಲ್ಲಿ ಮೆಚ್ಚುಗೆ ಸಿಗುವ ಸಾಧ್ಯತೆ ಇದೆ. ಪ್ರಯಾಣದ ಯೋಗವಿದೆ. ಆರೋಗ್ಯ ಸಾಮಾನ್ಯವಾಗಿರುತ್ತದೆ. ಕಟಕ – ಕುಟುಂಬದವರೊಂದಿಗೆ ಸಮಯ ಕಳೆಯುವ ಅವಕಾಶ ಸಿಗುತ್ತದೆ. ಆರ್ಥಿಕವಾಗಿ ಲಾಭದ ಸೂಚನೆ ಇದೆ. ಕೋಪವನ್ನು ನಿಯಂತ್ರಿಸುವುದು ಉತ್ತಮ. ವಿದ್ಯಾರ್ಥಿಗಳಿಗೆ ಶುಭ ದಿನ. ಸಿಂಹ – ನಿಮ್ಮ…

Read More

ಚಿತ್ರದುರ್ಗ: ಕರ್ನಾಟಕದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ ಅವರು ತೀವ್ರ ಅನಾರೋಗ್ಯದಿಂದ ಭಾನುವಾರ ಮುಂಜಾನೆ 3:15ರ ಸುಮಾರಿಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಳೆದ ಮಾರ್ಚ್ 27ರಂದು ಮೊಣಕಾಲು ನೋವಿನ ಚಿಕಿತ್ಸೆಗಾಗಿ (ಶಸ್ತ್ರಚಿಕಿತ್ಸೆ) ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಆಪರೇಷನ್ ಬಳಿಕ ಅವರಿಗೆ ಶ್ವಾಸಕೋಶದ ಸೋಂಕು ತೀವ್ರವಾಗಿ ಉಲ್ಬಣಿಸಿತ್ತು. ಸೋಂಕು ಕಡಿಮೆಯಾಗದ ಹಿನ್ನೆಲೆಯಲ್ಲಿ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೆಲವು ದಿನಗಳ ಹಿಂದೆ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ತೀವ್ರ ನಿಗಾವಹಿಸಿ ಚಿಕಿತ್ಸೆ ನೀಡಿದರೂ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಮಾರ್ಚ್ 28, 1961ರಂದು ಚಿತ್ರದುರ್ಗದ ಚಳ್ಳಕೆರೆಯಲ್ಲಿ ಜನಿಸಿದ್ದ ಸುಧಾಕರ್ ಅವರು, ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ಮೃತರು ಪತ್ನಿ ಹರ್ಷಿಣಿ ಸುಧಾಕರ್, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸದಾ ನಗುಮುಖದಿಂದಲೇ ಎಲ್ಲರನ್ನೂ ವಿಶ್ವಾಸಕ್ಕೆ…

Read More

ಚಿತ್ರದುರ್ಗ: ನಗರದ ದೊಡ್ಡಪೇಟೆಯಲ್ಲಿರುವ ಪ್ರಸಿದ್ಧ ಮೈಸೂರು ಕೆಫೆಯ ಮಾಲೀಕರಾಗಿದ್ದ ವೇದವ್ಯಾಸ ಆಚಾರ್ಯ (ಅಣ್ಣಾದೊರೈ) ಅವರು ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಸುಮಾರು ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಮೈಸೂರು ಕೆಫೆ ನಡೆಸುತ್ತಿದ್ದ ಅವರು, ಉತ್ತಮ ಸೇವೆ ಹಾಗೂ ಆತ್ಮೀಯ ನಡೆನುಡಿಗಳ ಮೂಲಕ ಅಪಾರ ಗ್ರಾಹಕ ವಲಯವನ್ನು ಹೊಂದಿದ್ದರು. ಗ್ರಾಹಕರೊಂದಿಗೆ ಸ್ನೇಹಭಾವದಿಂದ ಮಾತನಾಡುತ್ತಿದ್ದ ಅವರನ್ನು ಅಣ್ಣಾದೊರೈ ಎಂದೇ ಜನರು ಕರೆಯುತ್ತಿದ್ದರು. ಸಾಹಿತ್ಯ ಮತ್ತು ಕನ್ನಡ ಚಟುವಟಿಕೆಗಳಲ್ಲಿಯೂ ಆಸಕ್ತಿ ಹೊಂದಿದ್ದ ಅವರು, ದೊಡ್ಡಪೇಟೆಯಲ್ಲಿ ಕನ್ನಡ ಬಳಗ ಸ್ಥಾಪಿಸಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹಿರಿಯ ಸಾಹಿತಿಗಳಾದ ದ.ರಾ. ಬೇಂದ್ರೆ ಮತ್ತು ಜಿ.ಎಸ್. ಶಿವರುದ್ರಪ್ಪ ಅವರನ್ನು ಆಹ್ವಾನಿಸಿ ಕಾರ್ಯಕ್ರಮಗಳನ್ನು ನಡೆಸಿದ್ದನ್ನು ಸಾಹಿತ್ಯಾಸಕ್ತರು ಸ್ಮರಿಸಿದ್ದಾರೆ. ಅವರ ನಿಧನಕ್ಕೆ ವ್ಯಾಪಾರಿಗಳು, ಗ್ರಾಹಕರು ಕನ್ನಡಾಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Read More

10 ಮೇ 2026 ರ ಇಂದಿನ ರಾಶಿ ಭವಿಷ್ಯ: ಇಂದು ಮೇಷ ರಾಶಿಯವರಿಗೆ ಕಾರ್ಯದಕ್ಷತೆ ಹೆಚ್ಚಲಿದೆ, ಕನ್ಯಾ ರಾಶಿಯವರಿಗೆ ತಾಳ್ಮೆಯ ಅಗತ್ಯವಿದೆ. ನಿಮ್ಮ ರಾಶಿಯ ಆರ್ಥಿಕ ಸ್ಥಿತಿ, ಉದ್ಯೋಗ ಮತ್ತು ಆರೋಗ್ಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಪಡೆಯಿರಿ. ಇಂದಿನ ಶುಭ ಬಣ್ಣ ಮತ್ತು ಸಂಖ್ಯೆ ಕೂಡ ಲಭ್ಯವಿದೆ. ಮೇಷ (Aries): ಇಂದು ಕೆಲಸಗಳಲ್ಲಿ ಚುರುಕು ಹೆಚ್ಚಿರುತ್ತದೆ. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಸಿಗಬಹುದು. ಆರ್ಥಿಕ ವಿಚಾರಗಳಲ್ಲಿ ಜಾಗರೂಕತೆ ಅಗತ್ಯ. ವೃಷಭ (Taurus): ಹೊಸ ಆಲೋಚನೆಗಳು ಮತ್ತು ಯೋಜನೆಗಳಿಗೆ ಉತ್ತಮ ದಿನ. ಉದ್ಯೋಗದಲ್ಲಿ ಮೆಚ್ಚುಗೆ ಸಿಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಸ್ವಲ್ಪ ಗಮನ ಕೊಡಿ. ಮಿಥುನ (Gemini): ಸ್ನೇಹಿತರ ಸಹಕಾರದಿಂದ ಕೆಲವು ಕೆಲಸಗಳು ಪೂರ್ಣಗೊಳ್ಳಬಹುದು. ಅನಗತ್ಯ ವಾದ-ವಿವಾದಗಳಿಂದ ದೂರವಿರಿ. ಹಣಕಾಸಿನಲ್ಲಿ ಸಮತೋಲನ ಕಾಪಾಡಿ. ಕಟಕ (Cancer): ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಬಹುದು. ಮನಸ್ಸಿಗೆ ಶಾಂತಿ ದೊರೆಯುವಂತಹ ಘಟನೆಗಳು ನಡೆಯಬಹುದು. ಹಳೆಯ ಸಮಸ್ಯೆಗೆ ಪರಿಹಾರ ಸಿಗುವ ಸೂಚನೆ ಇದೆ. ಸಿಂಹ (Leo):…

Read More

ಚಿತ್ರದುರ್ಗ: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ. ಸುಧಾಕರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಭಾನುವಾರ ಮುಂಜಾನೆ 3 ಗಂಟೆಗೆ ವಿಧಿವಶರಾದರು. ಅವರ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನಕ್ಕೆ ಹಿರಿಯೂರಿನ ನೆಹರೂ ಮೈದಾನದಲ್ಲಿ ಮಧ್ಯಾಹ್ನ 12ರಿಂದ ಸಂಜೆ 4 ಗಂಟೆಯವರೆಗೆ ವ್ಯವಸ್ಥೆ ಮಾಡಲಾಗಿದೆ. ನಂತರ ಪಾರ್ಥಿವ ಶರೀರವನ್ನು ಚಳ್ಳಕೆರೆಯ ಸ್ವಗೃಹಕ್ಕೆ ಕರೆದೊಯ್ಯಲಾಗುವುದು. ಅಲ್ಲಿ ಪೂಜೆ ಹಾಗೂ ವಿಧಿ-ವಿಧಾನಗಳು ನೆರವೇರಲಿವೆ. ಬಳಿಕ ಚಳ್ಳಕೆರೆಯ ಡಿ. ಸುಧಾಕರ್ ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೇ 11ರಂದು ಮಧ್ಯಾಹ್ನ 3ರಿಂದ 4 ಗಂಟೆಯವರೆಗೆ ಅಂತ್ಯಕ್ರಿಯೆಯ ವಿಧಿ-ವಿಧಾನಗಳು ನಡೆಯಲಿವೆ ಎಂದು ಕುಟುಂಬದ ಮೂಲಗಳು ಹಾಗೂ ಜಿಲ್ಲಾಡಳಿತ ತಿಳಿಸಿವೆ.

Read More

ಬೆಂಗಳೂರು: ಕರ್ನಾಟಕದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ ಅವರು ತೀವ್ರ ಅನಾರೋಗ್ಯದಿಂದ ಭಾನುವಾರ ಮುಂಜಾನೆ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಮುಂಜಾನೆ 3.15ರ ಸುಮಾರಿಗೆ ಕೊನೆಯುಸಿರೆಳೆದರು. ಮೊಣಕಾಲು ಶಸ್ತ್ರಚಿಕಿತ್ಸೆಯ ಬಳಿಕ ಉಂಟಾದ ಶ್ವಾಸಕೋಶದ ಸೋಂಕಿನಿಂದಾಗಿ ಅವರ ಆರೋಗ್ಯ ಹದಗೆಟ್ಟಿತ್ತು ಎಂದು ತಿಳಿದುಬಂದಿದೆ. ಕಳೆದ ಮಾರ್ಚ್ 27ರಂದು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕರ್ ಅವರಿಗೆ ನಂತರ ಸೋಂಕು ತೀವ್ರವಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ವೈದ್ಯರು ತೀವ್ರ ನಿಗಾವಹಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. 1961ರ ಮಾರ್ಚ್ 28ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಜನಿಸಿದ್ದ ಅವರು, ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರ್ಣಗೊಳಿಸಿದ್ದರು. ಪತ್ನಿ ಹರ್ಷಿಣಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಡಿ. ಸುಧಾಕರ್ ಅವರು ಜಿಲ್ಲೆಯ ರಾಜಕೀಯದಲ್ಲಿ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದರು. ಜನಪರ ಕೆಲಸಗಳು…

Read More

ಇಂದು ನಿಮ್ಮ ರಾಶಿಯ ಫಲ ಹೇಗಿರಲಿದೆ? ಮೇ 09, 2026ರ ದೈನಂದಿನ ಭವಿಷ್ಯ ಓದಿ. ಮೇಷದಿಂದ ಮೀನ ರಾಶಿಯವರ ವರೆಗಿನ ಉದ್ಯೋಗ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ ಇಲ್ಲಿದೆ. ಮೇಷ ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕೆಲಸಗಳಲ್ಲಿ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರೊಂದಿಗೆ ಮಾತಿನ ಜಾಗ್ರತೆ ಇರಲಿ. ಆರೋಗ್ಯದ ಕಡೆ ಗಮನ ಕೊಡಿ. ವೃಷಭ ಆರ್ಥಿಕವಾಗಿ ಉತ್ತಮ ದಿನ. ಹಳೆಯ ಸ್ನೇಹಿತರ ಭೇಟಿ ಸಂತೋಷ ತರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪ್ರಯತ್ನಗಳಿಗೆ ಮೆಚ್ಚುಗೆ ಸಿಗಲಿದೆ. ಮಿಥುನ ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ ಸಮಯ. ಆತುರದ ನಿರ್ಧಾರಗಳನ್ನು ತಪ್ಪಿಸಿ. ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕಟಕ ಮನಸ್ಸಿನಲ್ಲಿ ಗೊಂದಲ ಹೆಚ್ಚಾಗಬಹುದು. ಧೈರ್ಯದಿಂದ ಮುಂದುವರಿದರೆ ಸಮಸ್ಯೆಗಳು ಕಡಿಮೆಯಾಗುತ್ತವೆ. ಕುಟುಂಬದ ಬೆಂಬಲ ನಿಮ್ಮ ಜೊತೆ ಇರುತ್ತದೆ. ಸಿಂಹ ನಿಮ್ಮ ನಾಯಕತ್ವ ಗುಣಗಳು ಮೆರೆದಾಡುವ ದಿನ. ವ್ಯವಹಾರದಲ್ಲಿ ಲಾಭದ ಸೂಚನೆ ಇದೆ. ಅನಾವಶ್ಯಕ ಖರ್ಚುಗಳನ್ನು ನಿಯಂತ್ರಿಸಿ. ಕನ್ಯಾ ಇಂದು ಕೆಲಸದ ಒತ್ತಡ…

Read More

​ಇಂದಿನ ರಾಶಿಫಲ (08/05/2026): ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಮೆಚ್ಚುಗೆ, ಸಿಂಹ ರಾಶಿಯವರಿಗೆ ಹೊಸ ಅವಕಾಶಗಳು ಹಾಗೂ ಮೀನ ರಾಶಿಯವರಿಗೆ ಮನಃಶಾಂತಿ ಸಿಗಲಿದೆ. ನಿಮ್ಮ ರಾಶಿಯ ಇಂದಿನ ಫಲವೇನಿದೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ. ಮೇಷ ಇಂದು ಹೊಸ ಕಾರ್ಯಗಳಿಗೆ ಚಾಲನೆ ನೀಡಲು ಉತ್ತಮ ದಿನ. ಉದ್ಯೋಗದಲ್ಲಿ ಮೆಚ್ಚುಗೆ ಸಿಗಬಹುದು. ಕುಟುಂಬದವರ ಜೊತೆ ಸಮಯ ಕಳೆಯುವುದು ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರಿಕೆ ಅಗತ್ಯ. ವೃಷಭ ದೀರ್ಘಕಾಲದಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಲಾಭದ ಸೂಚನೆ ಕಂಡುಬರುತ್ತದೆ. ಆರೋಗ್ಯದ ಕಡೆ ಸ್ವಲ್ಪ ಗಮನ ಕೊಡಿ. ಆತುರದ ನಿರ್ಧಾರ ಬೇಡ. ಮಿಥುನ ಮಾತಿನ ಮೂಲಕ ಗೌರವ ಹೆಚ್ಚಾಗುವ ದಿನ. ಸ್ನೇಹಿತರ ಸಹಕಾರ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಸಿಗಬಹುದು. ಪ್ರಯಾಣ ಸಾಧ್ಯತೆ ಇದೆ. ಕಟಕ ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಬಹುದು. ಮನಸ್ಸಿನಲ್ಲಿ ಗೊಂದಲ ಉಂಟಾದರೂ ತಾಳ್ಮೆಯಿಂದ ನಡೆದುಕೊಳ್ಳಿ. ಆರ್ಥಿಕವಾಗಿ ಸಮಾಧಾನಕರ ಸ್ಥಿತಿ ಇರುತ್ತದೆ. ಸಿಂಹ ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶಗಳು…

Read More

ಆಧುನಿಕತೆ ಮತ್ತು ಜಾಗತೀಕರಣದ ಪರಿಣಾಮವಾಗಿ ಖರ್ಚು ಮಾಡುವುದು ಸುಲಭವಾಗಿದೆ, ಆದರೆ ಸಂಪಾದನೆ ಸವಾಲಾಗಿದೆ. ನಮ್ಮ ಜೀವನಮಟ್ಟ ಸುಧಾರಿಸುತ್ತಿದೆಯೇ ಅಥವಾ ನಾವು ಕೇವಲ ವಸ್ತು ಸಂಸ್ಕೃತಿಯ ಗುಲಾಮರಾಗುತ್ತಿದ್ದೇವೆಯೇ? ಶಿಕ್ಷಣ, ಆರೋಗ್ಯ ಮತ್ತು ಹೆಚ್ಚುತ್ತಿರುವ ಅವಶ್ಯಕತೆಗಳ ನಡುವೆ ಮಧ್ಯಮ ವರ್ಗದ ಜನರ ಹೋರಾಟದ ಕುರಿತಾದ ಒಂದು ವಿಶೇಷ ಲೇಖನ. ಆಧುನಿಕತೆ – ಜಾಗತೀಕರಣದ ಬಹುದೊಡ್ಡ ಪರಿಣಾಮವೆಂದರೆ ಇರುವ ಹಣವನ್ನು ಅತ್ಯಂತ ಸುಲಭವಾಗಿ, ಸುಲಲಿತವಾಗಿ – ಸರಳವಾಗಿ ಕುಳಿತಲ್ಲಿಂದಲೇ ಹೇಗೆ ಬೇಕಾದರು, ಯಾರು ಬೇಕಾದರೂ ಹಣ ಖರ್ಚು ಮಾಡಬಹುದು. ನಮಗೆ ಬೇಕಾದ ವಸ್ತುಗಳನ್ನು, ಹೂಡಿಕೆಯನ್ನು, ಪಾವತಿಗಳನ್ನು, ವರ್ಗಾವಣೆಯನ್ನು ಮಾಡಬಹುದು ಮತ್ತು ಕೊಳ್ಳಬಹುದು. ಇದಕ್ಕೆ ಯಾವುದೇ ಶ್ರಮ ಬೇಕಿಲ್ಲ. ಒಂದು ಮೊಬೈಲಿನ ಮೂಲಕವೇ ಕೋಟ್ಯಾಂತರ ಹಣ ಖರ್ಚು ಮಾಡಬಹುದು. ಅದಕ್ಕಾಗಿ ಎಲ್ಲಾ ಬಗೆಯ ವೇದಿಕೆ – ಅವಕಾಶ – ಮೂಲ ಸೌಕರ್ಯ ಅಭಿವೃದ್ಧಿಪಡಿಸಲಾಗಿದೆ. ಹಣ ನಿಮ್ಮ ಬಳಿ ಇರಬೇಕಷ್ಟೇ… ಆದರೆ ಅದಕ್ಕೆ ವಿರುದ್ಧವಾಗಿ ಹಣ ಸಂಪಾದನೆಯ ಮಾರ್ಗಗಳ ಬಗ್ಗೆ ಒಮ್ಮೆ ಯೋಚಿಸಿ ನೋಡಿ. ಇಷ್ಟು ಸುಲಭವಾಗಿ, ಸರಳವಾಗಿ,…

Read More

ತಮಿಳುನಾಡು ಚುನಾವಣಾ ಫಲಿತಾಂಶದ ನಂತರ, ಅಲ್ಲಿನ ಜನಪ್ರಿಯ ಸಿನಿಮಾ ನಟ ವಿಜಯ್ ಅವರ ಜಯದ ನಂತರ, ಕರ್ನಾಟಕದಲ್ಲೂ ಒಂದು ಪರ್ಯಾಯ ರಾಜಕೀಯ ಶಕ್ತಿಯಾಗಿ ಪ್ರಾದೇಶಿಕ ಪಕ್ಷವೊಂದು ಯಶಸ್ವಿಯಾಗಬೇಕು ಎಂಬ ಚರ್ಚೆ ಸಮಾನ ಮನಸ್ಕರ ನಡುವೆ ತೀವ್ರವಾಗಿ ನಡೆಯುತ್ತಿದೆ. ಆ ರೀತಿಯ ರಾಜಕೀಯ ಯಶಸ್ಸು ಸಿಕ್ಕರೆ ಕರ್ನಾಟಕದ ಅಭಿವೃದ್ಧಿ, ಸ್ವಾಭಿಮಾನ, ಅಸ್ಮಿತೆಯ ದೃಷ್ಟಿಯಿಂದ ತುಂಬಾ ಒಳ್ಳೆಯ ಬೆಳವಣಿಗೆ ಎಂದು ಅನೇಕರು ಭಾವಿಸಿದ್ದಾರೆ. ಆ ಸಾಧ್ಯತೆ ಎಷ್ಟು ? ಪರ್ಯಾಯ ರಾಜಕೀಯ ಶಕ್ತಿಯ ನಿರೀಕ್ಷೆಯಲ್ಲಿ ಕನ್ನಡಿಗರು……. ಇತ್ತೀಚಿನ ಕೆಲವು ವರ್ಷಗಳಿಂದ ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಪಕ್ಷವೊಂದರ ಅವಶ್ಯಕತೆಯ ಬಗ್ಗೆ ಚರ್ಚೆಗಳು ಪ್ರಾರಂಭವಾಗಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹೊರತುಪಡಿಸಿದ, ಪ್ರಾದೇಶಿಕ ಹಿತಾಸಕ್ತಿಯನ್ನು ಕಾಪಾಡುವ, ಕರ್ನಾಟಕ ಮತ್ತು ಕನ್ನಡದ ಅಸ್ಮಿತೆಯನ್ನು ಉಳಿಸುವ ಮತ್ತೊಂದು ರಾಜಕೀಯ ಪಕ್ಷ ಬೇಕು ಎಂಬ ಕೂಗು ಬಹಳ ದಿನಗಳಿಂದಲೂ ಕೇಳಿ ಬರುತ್ತಿದೆ. ಆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಬಗ್ಗೆ ಒಂದು ಚಿಂತನೆ……. ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಯಶಸ್ಸಿನ ಸಾಧ್ಯತೆ…

Read More