Author: Times Of Bayaluseeme Staff
ಇಂದಿನ ರಾಶಿಫಲ (04/06/2026): ಜೂನ್ 4ರ ಗುರುವಾರದಂದು ಮೇಷ ರಾಶಿಯವರಿಗೆ ಹೊಸ ಅವಕಾಶಗಳು ಸಿಗಲಿವೆ. ವೃಷಭ, ಸಿಂಹ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ನಿತ್ಯ ಭವಿಷ್ಯ, ಶುಭ ಸಂಖ್ಯೆ ಮತ್ತು ಶುಭ ಸಮಯದ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮೇಷ (Aries): ಇಂದು ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ಉದ್ಯೋಗ ಮತ್ತು ವ್ಯವಹಾರದಲ್ಲಿ ನಿರ್ಧಾರಗಳನ್ನು ಆತುರಪಡದೆ ತೆಗೆದುಕೊಳ್ಳಿ. ಕುಟುಂಬದವರೊಂದಿಗೆ ಸಮಯ ಕಳೆಯುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ವೃಷಭ (Taurus): ಆರ್ಥಿಕ ವಿಚಾರಗಳಲ್ಲಿ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚುಗಳನ್ನು ನಿಯಂತ್ರಿಸಿ. ಆರೋಗ್ಯದ ಕಡೆ ಗಮನ ಹರಿಸಿ. ಹಳೆಯ ಸ್ನೇಹಿತರ ಭೇಟಿಯಿಂದ ಸಂತೋಷ ದೊರೆಯಬಹುದು. ಮಿಥುನ (Gemini): ಸಂವಹನ ಕೌಶಲ್ಯದಿಂದ ಯಶಸ್ಸು ಸಿಗುವ ದಿನ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ. ಪ್ರಯಾಣದ ಸಾಧ್ಯತೆಗಳಿವೆ. ಕಟಕ (Cancer): ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಬಹುದು. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಲು ವಿಶ್ರಾಂತಿಗೆ ಆದ್ಯತೆ ನೀಡಿ. ಸಿಂಹ (Leo): ಆತ್ಮವಿಶ್ವಾಸ ಹೆಚ್ಚಾಗುವ…
ಚಿತ್ರದುರ್ಗ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಕುರಿತು ಬೂತ್ ಮಟ್ಟದ ಏಜೆಂಟರುಉ (ಬಿಎಲ್‍ಒ) ಸಂಪೂರ್ಣ ಮಾಹಿತಿ ಹೊಂದುವುದು ಅಗತ್ಯವಾಗಿದ್ದು, ತಮಗೆ ನೀಡಿರುವ ಜವಾಬ್ದಾರಿ ಅರಿತು ನಿಷ್ಠೆಯಿಂದ ಕೆಲಸ ಮಾಡಬೇಕು. ಜಿಲ್ಲೆಯಲ್ಲಿ ಯಾವುದೇ ಒಬ್ಬ ಅರ್ಹ ಮತದಾರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಬೂತ್ ಮಟ್ಟದ ಏಜೆಂಟರಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಕುರಿತು ಮಾನ್ಯತಾ ಪಡೆದ ರಾಜಕೀಯ ಪಕ್ಷಗಳ ವತಿಯಿಂದ ವಿಧಾನಸಭಾ ಕ್ಷೇತ್ರವಾರು ನೇಮಕ ಮಾಡಲಾದ ಬಿಎಲ್‍ಎ-1 ಅವರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಕಳೆದ ಆರು ತಿಂಗಳಿನಿಂದ ಜಿಲ್ಲಾಡಳಿತವು ನಿರಂತರವಾಗಿ ನಡೆಸಿದ ಸರ್ವೇ ಕಾರ್ಯದಿಂದಾಗಿ 2025ರ ಮತದಾರರ ಪಟ್ಟಿಯ 14,40,316 ಮತದಾರರ ಪೈಕಿ ಈಗಾಗಲೇ 13,96,284 ಮತದಾರರನ್ನು ಗುರುತಿಸಿ, ಶೇ.96.94 ರಷ್ಟು ಮ್ಯಾಪಿಂಗ್ ಮಾಡಲಾಗಿದೆ. ಆದರೆ, ಇನ್ನೂ 40,032 ಮತದಾರರು ಪಟ್ಟಿಯಿಂದ ಹೊರಗುಳಿದಿದ್ದಾರೆ. ಬೂತ್ ಮಟ್ಟದ ಏಜೆಂಟರು…
03 ಜೂನ್ 2026ರ ಬುಧವಾರದ ನಿತ್ಯ ಭವಿಷ್ಯ ಇಲ್ಲಿದೆ. ಮೇಷ ರಾಶಿಯಿಂದ ಮೀನ ರಾಶಿಯವರೆಗಿನ ದ್ವಾದಶ ರಾಶಿಗಳ ಇಂದಿನ ಫಲ, ಶುಭ ಸಂಖ್ಯೆ, ಶುಭ ಬಣ್ಣ ಮತ್ತು ಶುಭ ಸಮಯದ ಸಂಪೂರ್ಣ ಮಾಹಿತಿ ಇಲ್ಲಿದೆ. ನಿಮ್ಮ ದಿನ ಹೇಗಿರಲಿದೆ ಎಂದು ಈಗಲೇ ತಿಳಿಯಿರಿ! ಮೇಷ (Aries): ಇಂದು ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆಗೆ ಮೆಚ್ಚುಗೆ ಸಿಗುವ ಸಾಧ್ಯತೆ ಇದೆ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕತೆ ಅಗತ್ಯ. ಕುಟುಂಬದೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯುವಿರಿ. ವೃಷಭ (Taurus): ದೀರ್ಘಕಾಲದಿಂದ ಬಾಕಿ ಉಳಿದಿದ್ದ ಕೆಲಸಗಳು ಪೂರ್ಣಗೊಳ್ಳುವ ಸೂಚನೆ ಇದೆ. ವ್ಯಾಪಾರಿಗಳಿಗೆ ಲಾಭದ ದಿನ. ಆರೋಗ್ಯದ ಕಡೆ ಸ್ವಲ್ಪ ಗಮನ ಕೊಡಿ. ಸ್ನೇಹಿತರ ಸಹಕಾರ ದೊರೆಯಲಿದೆ. ಮಿಥುನ (Gemini): ಸಂವಹನ ಕೌಶಲ್ಯದಿಂದ ಯಶಸ್ಸು ಪಡೆಯುವಿರಿ. ಹೊಸ ಪರಿಚಯಗಳು ಭವಿಷ್ಯದಲ್ಲಿ ಉಪಯುಕ್ತವಾಗಬಹುದು. ಅನಗತ್ಯ ಖರ್ಚುಗಳನ್ನು ನಿಯಂತ್ರಿಸುವುದು ಉತ್ತಮ. ಮನಸ್ಸಿನಲ್ಲಿ ಉತ್ಸಾಹ ಹೆಚ್ಚಿರುತ್ತದೆ. ಕಟಕ (Cancer): ಕುಟುಂಬದ ವಿಚಾರಗಳಲ್ಲಿ ಹೆಚ್ಚು ಸಮಯ ಕಳೆಯುವಿರಿ. ಉದ್ಯೋಗದಲ್ಲಿ…
ಚಿತ್ರದುರ್ಗ: ಸರ್ಕಾರಿ ಸೇವೆಯಲ್ಲಿ ಬಡ್ತಿ ಎನ್ನುವುದು ಪ್ರತಿಯೊಬ್ಬ ಉದ್ಯೋಗಿಯ ಕನಸು. ವರ್ಷಗಳ ಶ್ರಮ, ಸೇವಾ ಹಿರಿತನ ಮತ್ತು ನಿಷ್ಠೆಗೆ ಸಿಗುವ ಮಾನ್ಯತೆಯೇ ಪದೋನ್ನತಿ. ಆದರೆ ಆ ಬಹುನಿರೀಕ್ಷಿತ ಬಡ್ತಿ ದೊರೆತ ಮರುದಿನವೇ ನಿವೃತ್ತಿಯಾಗಬೇಕಾದರೆ ಅದು ಸಂತಸದ ಜೊತೆಗೆ ಒಂದು ರೀತಿಯ ಬೇಸರವನ್ನೂ ಉಂಟುಮಾಡುತ್ತದೆ. ಇಂತಹ ಅಪರೂಪದ ಘಟನೆ ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಸೇವೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸ್ಕಿಲ್ ಟ್ರೇಡ್ಸ್‌ಮನ್ (ವೃಂದ–ಸಿ) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈ.ಕೆ. ಮಲ್ಲಪ್ಪ ಅವರಿಗೆ ಹಲವು ವರ್ಷಗಳ ಸೇವೆಯ ಬಳಿಕ ಸೇವಾ ಹಿರಿತನದ ಆಧಾರದ ಮೇಲೆ ಸೇವಾ ಅಭಿಯಂತರರು (ವೃಂದ–ಬಿ) ಹುದ್ದೆಗೆ ಪದೋನ್ನತಿ ನೀಡಿ ಮೇ 29ರಂದು ಇಲಾಖೆ ಆದೇಶ ಹೊರಡಿಸಿತ್ತು. 1966ರ ಜೂನ್ 1ರಂದು ಜನಿಸಿದ ಮಲ್ಲಪ್ಪ ಅವರು ಮೇ 31ರಂದು 60 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಿವೃತ್ತಿಯಾಗಬೇಕಾಗಿತ್ತು. ಆದರೆ ಮೇ 31 ಭಾನುವಾರ ಸರ್ಕಾರಿ ರಜೆ ಆಗಿದ್ದರಿಂದ, ನಿಯಮಾನುಸಾರ ಮೇ 30ರ ಮಧ್ಯಾಹ್ನವೇ ಇಲಾಖೆಯು ಅವರನ್ನು ಸರ್ಕಾರಿ…
02 ಜೂನ್ 2026 ರ ಇಂದಿನ ರಾಶಿ ಭವಿಷ್ಯ: ಮೇಷ ರಾಶಿಯಿಂದ ಮೀನ ರಾಶಿಯವರೆಗಿನ ಎಲ್ಲಾ 12 ರಾಶಿಗಳ ಇಂದಿನ ನಕ್ಷತ್ರ ಫಲ ಇಲ್ಲಿದೆ. ನಿಮ್ಮ ಉದ್ಯೋಗ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿ ಹೇಗಿರಲಿದೆ ಎಂದು ತಿಳಿಯಿರಿ. ಮೇಷ (Aries) ಇಂದು ಕೆಲಸದ ಸ್ಥಳದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಆತುರದ ನಿರ್ಧಾರಗಳನ್ನು ತಪ್ಪಿಸಿ. ಕುಟುಂಬದವರೊಂದಿಗೆ ಸಮಯ ಕಳೆಯುವುದು ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ವೃಷಭ (Taurus) ಬಹುಕಾಲದಿಂದ ಬಾಕಿ ಉಳಿದಿದ್ದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಲಾಭದ ಸೂಚನೆ ಇದೆ. ಆರೋಗ್ಯದ ಕಡೆ ಸ್ವಲ್ಪ ಗಮನ ಹರಿಸಿ. ಮಿಥುನ (Gemini) ಸ್ನೇಹಿತರಿಂದ ಅಥವಾ ಬಂಧುಗಳಿಂದ ಶುಭ ಸುದ್ದಿ ಸಿಗಬಹುದು. ಹೊಸ ಪರಿಚಯಗಳು ಭವಿಷ್ಯದಲ್ಲಿ ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಕಟಕ (Cancer) ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಬಹುದು. ತಾಳ್ಮೆಯಿಂದ ವರ್ತಿಸಿದರೆ ಸಮಸ್ಯೆಗಳು ಸುಲಭವಾಗಿ ಪರಿಹಾರವಾಗುತ್ತವೆ. ಆರ್ಥಿಕ ಸ್ಥಿತಿ ಸ್ಥಿರವಾಗಿರುತ್ತದೆ. ಸಿಂಹ (Leo) ನಿಮ್ಮ ಆತ್ಮವಿಶ್ವಾಸವು ಇಂದು ಯಶಸ್ಸಿನ…
01 ಜೂನ್ 2026 ರ ಸೋಮವಾರದ ನಿತ್ಯ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗಿನ 12 ರಾಶಿಗಳ ಇಂದಿನ ದಿನ ಭವಿಷ್ಯ, ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯದ ನಿಖರ ಮಾಹಿತಿಯನ್ನು ಇಲ್ಲಿ ಓದಿ. ಮೇಷ (Aries) ಇಂದು ಹೊಸ ಕೆಲಸಗಳಿಗೆ ಚಾಲನೆ ನೀಡಲು ಉತ್ತಮ ದಿನ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪ್ರಯತ್ನಗಳಿಗೆ ಮೆಚ್ಚುಗೆ ಸಿಗಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರೊಂದಿಗೆ ಸಂತೋಷದ ಕ್ಷಣಗಳು ಕಳೆಯುವಿರಿ. ವೃಷಭ (Taurus) ಕಾರ್ಯಗಳಲ್ಲಿ ನಿಧಾನಗತಿ ಕಂಡುಬಂದರೂ ಅಂತಿಮವಾಗಿ ಯಶಸ್ಸು ನಿಮ್ಮದಾಗಲಿದೆ. ಆರೋಗ್ಯದ ಬಗ್ಗೆ ಸ್ವಲ್ಪ ಗಮನ ಹರಿಸಿ. ಅನಗತ್ಯ ಖರ್ಚುಗಳನ್ನು ನಿಯಂತ್ರಿಸುವುದು ಉತ್ತಮ. ಮಿಥುನ (Gemini) ಸ್ನೇಹಿತರು ಮತ್ತು ಬಂಧುಗಳ ಸಹಕಾರ ದೊರೆಯಲಿದೆ. ವ್ಯವಹಾರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಕಟಕ (Cancer) ಕೆಲಸದ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳಿ. ಹಿರಿಯರ ಸಲಹೆ ನಿಮಗೆ ಲಾಭ ತರಬಹುದು. ದಾಂಪತ್ಯ ಜೀವನ ಸುಖಕರವಾಗಿರುತ್ತದೆ. ಸಿಂಹ (Leo)…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ದೇಶದ ಲಕ್ಷಾಂತರ ರೈತರಿಗೆ ಸರ್ಕಾರ ಮಹತ್ವದ ಸೂಚನೆಯನ್ನು ನೀಡಿದೆ. ರೈತರ ಬ್ಯಾಂಕ್ ಖಾತೆಗೆ ನಿಯಮಿತವಾಗಿ ಕಂತಿನ ಹಣ ಜಮೆಯಾಗಬೇಕಾದರೆ ಕೆಲವು ಪ್ರಮುಖ ತಾಂತ್ರಿಕ ಹಾಗೂ ದಾಖಲಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದು ಅತ್ಯಂತ ಕಡ್ಡಾಯವಾಗಿದೆ. ಒಂದು ವೇಳೆ ಈ ನಿಯಮಗಳನ್ನು ಪಾಲಿಸದಿದ್ದರೆ ಮುಂದಿನ ಕಂತುಗಳ ಹಣ ಸ್ಥಗಿತಗೊಳ್ಳುವ ಸಾಧ್ಯತೆ ಇರುತ್ತದೆ. ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ ಹಣ ಯಾವುದೇ ಅಡಚಣೆಯಿಲ್ಲದೆ ಬರಲು ಪಾಲಿಸಬೇಕಾದ 3 ಪ್ರಮುಖ ನಿಯಮಗಳು ಮತ್ತು ನಿಮ್ಮ ಕಂತಿನ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸುವ ಸುಲಭ ವಿಧಾನದ ವಿವರ ಇಲ್ಲಿದೆ. ಕಡ್ಡಾಯವಾಗಿ ಪಾಲಿಸಬೇಕಾದ 3 ನಿಯಮಗಳು: 1. ಇ-ಕೆವೈಸಿ (e-KYC) ಪೂರ್ಣಗೊಳಿಸುವುದು: ಪಿಎಂ ಕಿಸಾನ್ ಪೋರ್ಟಲ್‌ನಲ್ಲಿ ರೈತರು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಇ-ಕೆವೈಸಿ ಯಶಸ್ವಿಯಾಗಿ ಮುಗಿಸಿದ ರೈತರಿಗೆ ಮಾತ್ರವೇ ಕಂತಿನ ಹಣ ಜಮಾ ಆಗುತ್ತದೆ. 2. ಆಧಾರ್-ಬ್ಯಾಂಕ್ ಖಾತೆ ಲಿಂಕ್ (Aadhaar-Bank Linking): ಯೋಜನೆಯ…
ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗದ ವತಿಯಿಂದ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಬಸ್ ಪಾಸ್‍ಗಳ ವಿತರಣೆಗೆ ಚಾಲನೆ ನೀಡಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಾಲಾ-ಕಾಲೇಜುಗಳು ಹಾಗೂ ಪದವಿ ಪೂರ್ವ ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದ ಆದೇಶದಂತೆ ಸಂಪೂರ್ಣ ವಿದ್ಯಾರ್ಥಿ ಬಸ್ ಪಾಸ್‍ಗಳನ್ನು ವಿತರಿಸಲು ನಿಗಮವು ಅಗತ್ಯ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳು ಸೇವಾಸಿಂಧು ಫೋರ್ಟಲ್ ನ ಲಿಂಕ್ https://sevasindhuservices.karnataka.gov.in/buspassservices ಮೂಲಕ ಆನ್‍ಲೈನ್‍ನಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ದಿನಾಂಕ 29-05-2026 ರಿಂದಲೇ ಸೇವಾಸಿಂಧು ಫೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್‍ಲೈನ್ ಫೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಚಿತ್ರದುರ್ಗ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು ತಮ್ಮ ಹತ್ತಿರದ ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂ. ಶುಲ್ಕ ನಿಗದಿಪಡಿಸಲಾಗಿದೆ. ವಿದ್ಯಾರ್ಥಿಗಳು ಬಸ್ ಪಾಸ್‍ಗಾಗಿ ಅರ್ಜಿ ಪಡೆಯಲು ಡಿಕ್ಲರೇಷನ್ ಫಾರಂ…
ಚಳ್ಳಕೆರೆ: ವಿಧಾನಸಭಾ ಕ್ಷೇತ್ರವನ್ನು ಅದ್ವಿತೀಯವಾಗಿ ಅಭಿವೃದ್ಧಿ ಪಡಿಸಿದ ಶಾಸಕ ಟಿ.ರಘುಮೂರ್ತಿ ಅವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನವನ್ನು ನೀಡಬೇಕೆಂದು ಚಳ್ಳಕೆರೆ ಮಕ್ಕಳ ಆಸ್ಪತ್ರೆಯ ಮಾಲೀಕ ಹಾಗೂ ಮಕ್ಕಳ ತಜ್ಞ ಡಾ. ಬಿ.ಚಂದ್ರನಾಯ್ಕ್ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ. ಅವರು, ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ, ಬಯಲುಸೀಮೆಯ ಬಂಗಾಡಿನಲ್ಲಿ ಶೈಕ್ಷಣಿಕ, ಸಾಮಾಜಿಕ, ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಿದಂತಹ ನಾಯಕ. ಪಕ್ಷಾತೀತ, ಜಾತ್ಯತೀತವಾಗಿ ಸಮಾಜ ಸೇವೆ ಮಾಡುವಂತಹ ಗುಣವನ್ನು ಹೊಂದಿರುವ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡುವುದರಿಂದ ಕ್ಷೇತ್ರ ಮಾತ್ರವಲ್ಲದೆ, ರಾಜ್ಯದ ಅಭಿವೃದ್ಧಿಯು ಕೂಡ ಆಗಲಿದೆ. ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಐದು ದಶಕದಿಂದ ನಿರಂತರವಾಗಿ ಗೆಲುವು ಸಾಧಿಸಿದವರೇ ಇಲ್ಲ, ಆದರೆ, ಶಾಸಕ ಟಿ.ರಘುಮೂರ್ತಿ ಕಾಂಗ್ರೆಸ್ ಪಕ್ಣದಿಂದ ಮೂರು ಬಾರಿ ಸ್ಪರ್ಧಿಸಿ ಮೂರುಭಾರಿಯೂ ಗೆಲುವು ಸಾಧಿಸಿ ಹ್ಯಾಟ್ರಿಕ್ ಗೆಲುವು ಕಂಡವರು. ಕಾಂಗ್ರೆಸ್ ಪಕ್ಷದಿಂದ 2013ರಲ್ಲಿ ಕಣಕ್ಕಿಳಿಯುವ ಮೂಲಕ ಮೂರು ಬಾರಿ ಜಯಶೀಲರಾಗಿ ಕ್ಷೇತ್ರದ ಅಭಿವೃದ್ಧಿಗೆ ಪಣತೊಟ್ಟು ನಿಂತವರಾಗಿದ್ದಾರೆ. ಎಲ್ಲಾ ಸಮುದಾಯಗಳಿಗೆ ಸಮುದಾಯ ಭವನ ಕಟ್ಟಿ…
ಬಳ್ಳಾರಿ: ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ 2026-27ನೇ ಸಾಲಿನ ಎಸ್.ಎಫ್.ಸಿ ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪುರಸಭೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಹಾಗೂ ವಿಶೇಷ ಚೇತನರಿಗೆ ಸಾಧನ ಸಲಕರಣೆಗಳನ್ನು ಪಡೆಯಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಅರ್ಹ ಫಲಾನುಭವಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 16ರ ಒಳಗೆ ಕುರೇಕುಪ್ಪ ಪುರಸಭೆ ಕಚೇರಿಗೆ ಸಲ್ಲಿಸಬೇಕಾಗಿದೆ. ನಿಗದಿತ ಅವಧಿಯ ನಂತರ ಬರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ. *ಅಗತ್ಯವಿರುವ ದಾಖಲೆಗಳು:* ಅರ್ಜಿಯೊಂದಿಗೆ ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಇತ್ತೀಚಿನ ಭಾವಚಿತ್ರ, ಹಿಂದಿನ ವರ್ಷದ ಅಂಕಪಟ್ಟಿ, ಕಾಲೇಜಿನ ಐಡಿ ಕಾರ್ಡ್, ಕಾಲೇಜಿನ ವ್ಯಾಸಂಗ ಪ್ರಮಾಣ ಪತ್ರ, ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ದಾಖಲೆಗಳ ನಕಲು ಪ್ರತಿಗಳನ್ನು (ಅಟೆಸ್ಟೆಡ್)ಲಗತ್ತಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿ ಮತ್ತು ವಿವರಗಳಿಗಾಗಿ ಕುರೇಕುಪ್ಪ ಪುರಸಭೆ…
Subscribe to Updates
Get the latest creative news from FooBar about art, design and business.