ಚಿತ್ರದುರ್ಗ: ನಗರವನ್ನೇ ಬೆಚ್ಚಿ ಬೀಳಿಸಿದ್ದ ಆಟೋ ಡ್ರೈವರ್ ರವಿಕುಮಾರ್ ಕೊಲೆ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆಟೋ ಚಾಲಕ ರವಿಕುಮಾರ್ ಕೊಲೆ ಹಿಂದೆ ಆತನ ಪತ್ನಿ, ಪುತ್ರ ಹಾಗೂ ಬೆಂಗಳೂರು ಮೂಲದ ಗಣೇಶ್ ನನ್ನು ಬಂಧಿಸಲಾಗಿದೆ.ಚಿತ್ರದುರ್ಗ ಹೊರವಲಯದ ಜಾನುಕೊಂಡ ಬಳಿ ರವಿಕುಮಾರ್ ಕೊಲೆ ಮಾಡಿ ಗುರುತು ಪತ್ತೆಯಾಗದಂತೆ ಬೆಡ್ ಶೀಟ್ನಲ್ಲಿ ಸುತ್ತಿ ಬಿಸಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ.ರವಿಕುಮಾರ್ ಪತ್ನಿ ಸುನಿತಾ, ಪುತ್ರ ವಿಷ್ಣು ಹಾಗೂ ಬೆಂಗಳೂರು ಮೂಲದ ಟಚ್ ಗಣೇಶ್ ನನ್ನು ಪೊಲೀಸರು ಬಂಧಿಸಿದ್ದು, ರವಿಕುಮಾರ್ ಕುಟುಂಬಕ್ಕೆ ಸಾಲ ಕೊಟ್ಟು ಪರಿಚಿತನಾಗಿದ್ದ ಗಣೇಶ್ ಬಳಿಕ ರವಿಕುಮಾರ್ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಹೊಂದಿದ್ದ ಇದಕ್ಕೆ ಗಂಡ ಅಡ್ಡಿಯಾಗುತ್ತಾನೆ ಎಂದು ತಿಳಿದು ಗಂಡನನ್ನೇ ಕೊಲ್ಲಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ರವಿಕುಮಾರ್ ಕೊಲೆ ನಂತರ ಆತನ ಮೃತ ದೇಹವನ್ನು ಮಂಗಳಮುಖಿಯೊಬ್ಬರ ಬೆಡ್ ಶೀಟ್ ನಲ್ಲಿ ಸುತ್ತಿ ಎಸೆಯಲಾಗಿತ್ತು. ಈ ಬೆಡ್ಶೀಟ್ ಮಂಗಳಮುಖಿಯೊಬ್ಬರಿಗೆ ಸೇರಿದ್ದು ಎಂದು ಪತ್ತೆ ಹಚ್ಚಿದ ಪೊಲೀಸರು ಕೊನೆಗೆ ಆರೋಪಿ ಟಚ್ ಗಣೇಶ್ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.ಜುಲೈ 20 ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಪೊಲೀಸರು 15 ದಿನದಲ್ಲಿ PSI ಮುದ್ದುರಾಜ್, ಸುರೇಶ್ ನೇತೃತ್ವದಲ್ಲಿ ಪ್ರಕರಣ ಬೇಧಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







