ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಫೇಸ್ಬುಕ್ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ ಬಿಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಕುರಿತು ರಾಜೀವ್ ಕುಲಾಲ್ ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BNS 196 (1), 352, 353 (2) ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮಾದ ಬಳಿಕ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು 30 ಪೊಲೀಸರ ತಂಡ ಉಜೆರೆಯಲ್ಲಿರುವ ಅವರ ಮನೆಯಲ್ಲೇ ವಶಕ್ಕೆ ಪಡೆದಿದ್ದಾರೆ.ಪೊಲೀಸರು ವಶಕ್ಕೆ ಪಡೆಯುವ ಮುನ್ನ ತಿಮ್ಮರೊಡಿ ಮನೆಯ ಮುಂಭಾಗ ದೊಡ್ಡಮಟ್ಟದಲ್ಲಿ ಜಮಾಯಿಸಿದ್ದ ತಿಮರೋಡಿ ಬೆಂಬಲಿಗರು ಬಂಧಿಸದಂತೆ ಆಗ್ರಹಿಸಿದರು. ಏನೇ ವಿಚಾರಣೆ ಇದ್ದರೂ ಇಲ್ಲೇ ನಡೆಸಿ ಎಂದು ಪಟ್ಟು ಹಿಡಿದರು. ಗಿರೀಶ್ ಮಟ್ಟಣ್ಣನವರ್ ಕೂಡ ಕಾರಣ ಕೇಳಿ ಪೊಲೀಸರೊಂದಿಗೆ ವಾಗ್ದಾದ ನಡೆಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







