ಬೆಂಗಳೂರು: ಇನ್ವೆಸ್ಟ್ ಕರ್ನಾಟಕ 2025 ರಡಿ ಬಲ್ಡೋಟಾ ಕಂಪೆನಿಯ 54,000 ಕೋಟಿ ಬಂಡವಾಳ ಹೂಡಿಕೆಯ ವಿಸ್ತರಣಾ ಯೋಜನೆಗೆ ರಾಜ್ತ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್ ಅವರು ನಿಯಮ 330 ರಡಿ ಕೊಪ್ಪಳ ತಾಲೂಕಿನಲ್ಲಿರುವ ಕಾರ್ಖಾನೆಗಳಿಂದಾಗಿ ಸುತ್ತು ಮುತ್ತಲಿನ ಪರಿಸರಕ್ಕೆ, ಜನ ಜಾನುವಾರುಗಳಿಗೆ ಹಾನಿ ಉಂಟಾಗುವ ಕುರಿತು ಸದನದಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಸಚಿವರಾದ ಎಂ.ಬಿ. ಪಾಟೀಲ್, ಕೊಪ್ಪಳ ಜಿಲ್ಲೆಯಲ್ಲಿ 28 ಸ್ಪಾಂಜ್ ಐರನ್ ಘಟಕಗಳ ಜೊತೆಗೆ ಇತರ ಕಬ್ಬಿಣ ತಯಾರಿಕಾ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಿಂದ 4683 ಕೋಟಿ ಬಂಡವಾಳ ಹೂಡಿಕೆಯಾಗಿದ್ದು, 7048 ಜನರಿಗೆ ಉದ್ಯೋಗ ದೊರೆತಿದೆ. ಪರಿಸರ ಮಾಲಿನ್ಯ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಸಚಿವಾಲಯದ ಸೂಚನೆಯಂತೆ ತಜ್ಞರ ಸಮಿತಿ ರಚಿಸಿದ್ದು ಅದು ಕಾರ್ಖಾನೆಗಳನ್ನು ಪರಿಶೀಲಿಸಿ ಸಮಗ್ರ ವರದಿ ನೀಡಿದೆ. ಸಮಿತಿಯ ಶಿಫಾರಸ್ಸುಗಳನ್ನು ಅನಷ್ಠಾನಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







