ಬಳ್ಳಾರಿ: ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಚಿತ್ರ ಕೆತ್ತಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ.ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಿ ತಮ್ಮ 15 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಮನೆ ಬಾಗಿಲು ಅಳವಡಿಕೆ ಮಾಡಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣದಿಂದಲೇ ಮಾಡಿಸಿರುವ ಬಾಗಿಲ ದ್ವಾರಕ್ಕೆ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಕೆತ್ತಿಸಿದ್ದಾರೆ. ಸಿದ್ದರಾಮಯ್ಯ ಅವರು ನಿಂತಿರುವ ಭಾವಚಿತ್ರ ಕೆತ್ತಿಸಿರುವ ಪಾರ್ವತಿ ಅವರು, ಚಿತ್ರದ ಮೇಲೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆ ಎಂದು ಬರೆಯಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಿಂದ ಬರುವ ಹಣದಿಂದ ಸಾಕಷ್ಟು ಮಹಿಳೆಯರು ಸ್ವಾವಲಂಬನೆ ಬದುಕು ಕಟ್ಟಿಕೊಂಡಿರೋ ನಿದರ್ಶನಗಳಿವೆ. ಈಗ ಅದೇ ರೀತಿ ಗೃಹಲಕ್ಷ್ಮಿ ಹಣದಿಂದಲೇ ಸಿಎಂಗೆ ವಿನೂತನ ರೀತಿಯಲ್ಲಿ ಈ ಬಡ ಕುಟುಂಬ ಅಭಿನಂದನೆ ಸಲ್ಲಿಸಿದೆ. ಇನ್ನೂ ಸಿದ್ದರಾಮಯ್ಯ ಭಾವಚಿತ್ರವಿರೋ ಮುಖ್ಯದ್ವಾರದ ವೀಕ್ಷಣೆಗೆ ಅಕ್ಕಪಕ್ಕದ ಗ್ರಾಮದವರು ಆಗಮಿಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







