ಬಳ್ಳಾರಿ: ಚರಂಡಿ ಗುಂಡಿಗೆ (Drain) ಬಿದ್ದು ಬಾಲಕ ದಾರುಣವಾಗಿ ಮೃತಪಟ್ಟಿರುವ ಘಟನೆ ಬಳ್ಳಾರಿ (Ballari) ಜಿಲ್ಲೆ ಸಂಡೂರು (Sandur) ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ.ಕುರೇಕುಪ್ಪದ 6ನೇ ವಾರ್ಡ್ನ ಪಿ ಅರವಿಂದ್ (4) ಮೃತ ಬಾಲಕ. ಸಂಜೆ ಆಟವಾಡುತ್ತಾ ತಾತನ ಮನೆಗೆ ಹೊರಟಿದ್ದ ಬಾಲಕ, ಕಾಲು ಜಾರಿ ಚರಂಡಿ ನೀರು ತುಂಬಿದ್ದ ಗುಂಡಿಗೆ ಬಿದ್ದಿದ್ದಾನೆ. ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಹುಡುಕಾಡಿದ್ದಾರೆ. ತಡರಾತ್ರಿ ಚರಂಡಿ ನೀರಿನಲ್ಲಿ ಬಾಲಕನ ಮೃತದೇಹ ತೇಲಿದೆ. ಕೂಡಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನನ್ನ ಜಿಂದಾಲ್ ಆಸ್ಪತ್ರೆಗೆ ಪೋಷಕರು ದಾಖಲಿಸಿದರು. ನೀರಿನಲ್ಲೇ ಮಗು ಮೃತಪಟ್ಟಿದ್ದ ಬಗ್ಗೆ ವೈದ್ಯರು ಪೋಷಕರಿಗೆ ಮಾಹಿತಿ ನೀಡಿದ್ದಾರೆ.ಕೊನೇ ಕ್ಷಣದಲ್ಲಿ ಮಗು ಚರಂಡಿ ನೀರಿನಲ್ಲಿ ಬಿದ್ದು ಒದ್ದಾಡುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನೂ ಮಗು ಸಾವಿಗೆ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಬಾಲಕನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







