ಬೆಂಗಳೂರು: ಸದನದಲ್ಲಿ ಆರ್ ಎಸ್ ಎಸ್ ಗೀತೆ ಹಾಡಿ ವಿವಾದಕ್ಕೀಡಾಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕ್ಷಮೆ ಕೇಳಬಾರದಿತ್ತು. ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ..? ಇಟಲಿಯಿಂದ ಬಂದ ಮೇಡಂಗಾ..? ಎಂದು ಪ್ರಶ್ನಿಸಿದ್ದಾರೆ.ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. “ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ ಮಾತೃ ಸಮಾನಳಾದ ತಾಯಿ ಭಾರತಾಂಬೆಗೆ ನನ್ನ ನಮಸ್ಕಾರಗಳು. ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ? ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ? ಎಂದಿದ್ದಾರೆ.ಒಂದು ಕಡೆ ವಿಧಾನಸೌಧದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಘೋಷಣೆ ಕೂಗಿದವರನ್ನ ಸಮರ್ಥನೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷ, ಮತ್ತೊಂದು ಕಡೆ ತಾಯಿ ಭಾರತಾಂಬೆಗೆ ನಮಸ್ಕರಿಸುವವರನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಇದನ್ನು ದೇಶದ್ರೋಹಿ ಮನಸ್ಥಿತಿ ಅನ್ನದೇ ಇನ್ನೇನನ್ನಲು ಸಾಧ್ಯ? ಎಂದು ಹೇಳಿದ್ದಾರೆ.
ಇಷ್ಟಕ್ಕೂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು? ಸೋನಿಯಾ ಗಾಂಧಿ ಅವರಾ? ರಾಹುಲ್ ಗಾಂಧಿ ಅವರಾ? ಕೆ.ಸಿ.ವೇಣುಗೋಪಾಲ್ ಅವರಾ? ಸುರ್ಜೆವಾಲಾ ಅವರಾ? ಅಥವಾ ಬಿಕೆ ಹರಿಪ್ರಸಾದ್ ಹೇಳಿದ್ದಕ್ಕೆ ಕ್ಷಮೆ ಕೇಳಿದರಾ? ಎಂದು ಟೀಕಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







