ಬೆಂಗಳೂರು: ವಿಧಾನಸಭೆಯಲ್ಲಿ ಆರ್ಎಸ್ಎಸ್ ಪ್ರಾರ್ಥನಾ ಗೀತೆ ಹಾಡಿದ್ದಕ್ಕಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕ್ಷಮೆಯಾಚಿಸಿರುವುದನ್ನು ಸ್ವಾಗತಿಸಿದ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್, ಪಕ್ಷದಲ್ಲಿ ಯಾರೂ ಸಂಘವನ್ನು ಯಾವುದೇ ರೀತಿಯಲ್ಲೂ “ಸಮರ್ಥಿಸಿಕೊಳ್ಳಬಾರದು” ಎಂದುಹೇಳಿದ್ದಾರೆ.ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಬೇಕು ಎಂದು ಬಿಕೆ ಹರಿಪ್ರಸಾದ್ ಅವರು ಒತ್ತಾಯಿಸಿದ್ದರು.”ಕಾಂಗ್ರೆಸ್ ಪಕ್ಷವನ್ನು ನಾನು ಅಥವಾ ಡಿ.ಕೆ. ಶಿವಕುಮಾರ್ ಕಟ್ಟಿಲ್ಲ. ಭವಿಷ್ಯಕ್ಕಾಗಿ ಅದನ್ನು ಉಳಿಸಲು ಯಾರೋ ನಮಗೆ ನೀಡಿದ್ದಾರೆ, ನಮಗೆ ಶಕ್ತಿ ಇದ್ದರೆ, ನಾವು ಅದನ್ನು ಉಳಿಸಿ ಭವಿಷ್ಯದ ಪೀಳಿಗೆಗೆ ನೀಡಬೇಕಾಗುತ್ತದೆ. ಇಲ್ಲಿ ಯಾರೂ ಶಾಶ್ವತವಲ್ಲ, ಯಾರೂ 500 ವರ್ಷಗಳ ಕಾಲ ಬದುಕುವುದಿಲ್ಲ” ಎಂದು ಹರಿಪ್ರಸಾದ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರೊಂದಿಗೆ ವೈಯಕ್ತಿಕವಾಗಿ ಯಾವುದೇ ಸಮಸ್ಯೆ ಇಲ್ಲ. ಬದಲಾಗಿ ಮಹಾತ್ಮ ಗಾಂಧಿಯನ್ನು ಕೊಂದ ಸಂಘಟನೆಯ ಹಾಡು ಹಾಡಿದ್ದಕ್ಕೆ ಮಾತ್ರ ವಿರೋಧ ವ್ಯಕ್ತಪಡಿಸಿದ್ದೆ ಎಂದು ಹೇಳಿದ್ದಾರೆ.
“ಪಕ್ಷದ ಅಧ್ಯಕ್ಷರಾಗಿರುವ ಅವರು (ಶಿವಕುಮಾರ್) ಅಂತಹ ಮಾತುಗಳನ್ನು ಹೇಳಬಾರದಿತ್ತು. ಉಪಮುಖ್ಯಮಂತ್ರಿಯಾಗಿ ಅವರು ಅದನ್ನು ಪಠಿಸಿದರೆ ನನಗೆ ಯಾವುದೇ ಆಕ್ಷೇಪವಿಲ್ಲ. ಕಾಂಗ್ರೆಸ್ ಅಧ್ಯಕ್ಷರಾಗಿ, ಕಾಂಗ್ರೆಸ್, ಸಂವಿಧಾನ ಮತ್ತು ತ್ರಿವರ್ಣ ಧ್ವಜವನ್ನು ವಿರೋಧಿಸುವ ಆರ್ಎಸ್ಎಸ್ನ ಪ್ರಾರ್ಥನೆ ಹಾಡು ಹಾಡುವ ಅಗತ್ಯವಿಲ್ಲ ಎಂದಿದ್ದಾರೆ.ಪಕ್ಷದೊಳಗಿನ ಟೀಕೆಗಳಿಂದ ತೀವ್ರ ಬೇಸರಗೊಂಡಿರುವ ಡಿಕೆ ಶಿವಕುಮಾರ್, ರಾಜ್ಯ ವಿಧಾನಸಭೆಯಲ್ಲಿ ಆರ್ಎಸ್ಎಸ್ ಪ್ರಾರ್ಥನಾ ಗೀತೆ “ನಮಸ್ತೆ ಸದಾ ವತ್ಸಲೆ…” ಹಾಡು ಹಾಡಿದ್ದರಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







