ಬೆಂಗಳೂರು: ಗಣಪತಿ ಮೆರವಣಿಗೆ ವೇಳೆ ನಡೆದ ಸ್ಫೋಟದಲ್ಲಿ 10ನೇ ತರಗತಿ ವಿದ್ಯಾರ್ಥಿ ಮೃತಪಟ್ಟು, ಒಂಬತ್ತು ಮಂದಿ ಗಾಯಗೊಂಡ ಘಟನೆ ನಡೆದ ಒಂದು ದಿನದ ನಂತರ ಗಣೇಶ ಮೂರ್ತಿ ವಿಸರ್ಜನೆ ಧಾರ್ಮಿಕ ಕಾರ್ಯಕ್ರಮಗಳು ಮತ್ತು ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಸಿಡಿಸುವುದನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಶನಿವಾರ ನಿಷೇಧಿಸಿದೆ.ದೊಡ್ಡಬಳ್ಳಾಪುರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಮತ್ತೂರು ಗ್ರಾಮದಲ್ಲಿ 15 ವರ್ಷದ ಮುನಿ ಅಲಿಯಾಸ್ ಧನುಷ್ ಎಂಬಾತ ತೀವ್ರ ಗಾಯಗೊಂಡು ಶುಕ್ರವಾರ ಸಂಜೆ ಮೃತಪಟ್ಟಿದ್ದಾನ. ಪೊಲೀಸ್ ಪೇದೆ ಜಾಕೀರ್ ಹುಸೇನ್, ಫೋರ್ಕ್ಲಿಫ್ಟ್ ಚಾಲಕ ಮುನಿರಾಜು ಮತ್ತು ನಿವಾಸಿಗಳಾದ ಯೋಗೇಶ್, ನಾಗರಾಜು, ಚೇತನ್, ಗಣೇಶ್, ಲೋಕೇಶ್, ಮಣಿಯಕ್ಕ ಮತ್ತು ಧನಂಜಯ್ ಸೇರಿದಂತೆ ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಯೋಗೇಶ್ ಸುಟ್ಟ ಗಾಯಗಳಿಂದ ಚಿಂತಾಜನಕ ಸ್ಥಿತಿಯಲ್ಲಿದ್ದು, ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಗಣೇಶ ಮೂರ್ತಿಯನ್ನು ಫೋರ್ಕ್ ಲಿಫ್ಟ್ ನಲ್ಲಿ ಇಡಲಾಗಿತ್ತು. ನಿಮಜ್ಜನಕ್ಕೆ ತೆರಳುತ್ತಿದ್ದಾಗ ಚಾಲಕನ ಸೀಟಿನ ಹಿಂದೆ ಇರಿಸಲಾಗಿದ್ದ ಪಟಾಕಿಗಳ ಪ್ಲಾಸ್ಟಿಕ್ ಚೀಲ ಸಂಜೆ 5.45 ರ ಸುಮಾರಿಗೆ ಸ್ಫೋಟಗೊಂಡಿದೆ. ಇಂಜಿನ್ ಬಿಸಿಯಾದಾಗ ಪಟಾಕಿಗಳು ಸ್ಪೋಟಗೊಂಡಿರಬಹುದು ಎಂದು ಪೊಲೀಸರು ಹೇಳಿದ್ದಾರೆ.
ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 105 (ಕೊಲೆಗೆ ಸಮನಾಗದ ಅಪರಾಧ) ಸೆಕ್ಷನ್ 125 ಎ (ಜೀವ ಅಥವಾ ಸುರಕ್ಷತೆಗೆ ಅಪಾಯ) ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆಯೋಜಕರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್ಎಸ್ಎಸ್) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಸುಮಾರು 1,800 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ ಮತ್ತು ಅಂತಹ ದುರಂತಗಳನ್ನು ತಡೆಯಲು ನಿಷೇಧವು ಅತ್ಯಗತ್ಯ ಎಂದು ಹೇಳಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







