ಬೆಂಗಳೂರು: ಮನೆಯಿಂದ ಹೊರಹೋಗುವಾಗ ಚಪ್ಪಲಿ ಶೂ ಹಾಕುವ ಮುನ್ನ ಅವುಗಳನ್ನೊಮ್ಮೆ ಸೂಕ್ಷ್ಮವಾಗಿ ಪರಿಶೀಲನೆ ಮಾಡಬೇಕು. ಯಾಕಂದ್ರೆ ಕ್ರಾಕ್ಸ್ ಚಪ್ಪಲಿಯೊಳಗೆ ಸೇರಿಕೊಂಡಿದ್ದ ಕೊಳಕು ಮಂಡಲ ಹಾವು ಕಚ್ಚಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ರಂಗನಾಥ ಬಡಾವಣೆಯಲ್ಲಿ ಈ ದುರ್ಘಟನೆ ನಡೆದಿದೆ. ಮಂಜು ಪ್ರಕಾಶ್(41) ಮೃತ ದುರ್ವೈವಿ. ಪ್ರಕಾಶ್ ಅಪಘಾತದಲ್ಲಿ ಕಾಲಿನ ಸ್ಪರ್ಶಶಕ್ತಿ ಕಳೆದುಕೊಂಡಿದ್ದರಿಂದ ಹಾವು ಕಚ್ಚಿದ್ದನ್ನು ಗಮನಿಸಲಾಗದೆ ದುರಂತ ಸಂಭವಿಸಿದೆ.ಮಂಜು ಪ್ರಕಾಶ್ ಅವರು ಇಂದು (ಆಗಸ್ಟ್ 30) ಬೆಳಗ್ಗೆ ಮನೆಯ ಹೊರಗೆ ಹೋಗಲು ಸಿದ್ಧವಾಗುತ್ತಿದ್ದರು. ಸಾಮಾನ್ಯವಾಗಿ ಬಳಸುವ ಕ್ರಾಕ್ಸ್ ಚಪ್ಪಲಿ ಮನೆಯ ಅಂಗಳದಲ್ಲೇ ಇಟ್ಟುಕೊಂಡಿದ್ದರು. ಅಲ್ಲಿ ಯಾರಿಗೂ ಗಮನಿಸದಂತೆ ಕೊಳಕು ಮಂಡಲ ಹಾವು ಒಳನುಗ್ಗಿ ಚಪ್ಪಲಿಯೊಳಗೆ ಅಡಗಿಕೊಂಡಿತ್ತು. ಅದನ್ನು ಗಮನಿಸದ ಮಂಜು ಪ್ರಕಾಶ್, ಚಪ್ಪಲಿಯನ್ನು ಧರಿಸಿ ಹೊರಗೆ ಹೋಗಿದ್ದಾರೆ. ಕೆಲವು ಸಮಯದ ನಂತರ ಅವರು ವಾಪಸ್ ಮನೆಗೆ ಮರಳಿ ಬಂದು ಮಲಗಿದ್ದರು. ಆಗಲೇ ಚಪ್ಪಲಿಯೊಳಗೆ ಅಡಗಿದ್ದ ಹಾವು ಕಚ್ಚಿದ ಪರಿಣಾಮ ಅವರ ದೇಹದಲ್ಲಿ ವಿಷ ಏರಿದ್ದು, ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.
ಇನ್ನು ನೆರೆಮನೆಯ ನಿವಾಸಿಯೊಬ್ಬರು ಚಪ್ಪಲಿಯನ್ನು ಗಮನಿಸಿದಾಗ, ಅದರೊಳಗೆ ಹಾವು ಸತ್ತಿರುವುದು ಕಂಡು ಬೆಚ್ಚಿಬಿದ್ದಿದ್ದು, ಕೂಡಲೇ ಅವರು ಮಂಜು ಮನೆಯವರಿಗೆ ತಿಳಿಸಿದ್ದಾರೆ. ಆದರೆ ಆ ವೇಳೆಗೆ ಮಂಜು ಪ್ರಕಾಶ್ ಮಲಗಿದ್ದ ಹಾಸಿಗೆಯ ಮೇಲೆಯೇ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದರು. ಮನೆಯವರು ಬಂದು ನೋಡಿದಾಗ ಅದಾಗಲೇ ಅವರ ಮಂಜು ಅವರ ಸಾವನ್ನಪ್ಪಿದ್ದರು.ಮೃತ ಮಂಜು ಪ್ರಕಾಶ್ ಅವರು ಕಳೆದ ಕೆಲವು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ ತಮ್ಮ ಕಾಲಿನ ಸ್ಪರ್ಶಶಕ್ತಿಯನ್ನು ಕಳೆದುಕೊಂಡಿದ್ದರು. ಹಾವು ಸಹ ಅದೇ ಕಾಲಿಗೆ ಕಚ್ಚಿರುವುದರಿಂದ ಅವರಿಗೆ ಯಾವುದೇ ಗೊತ್ತಾಗಿಲ್ಲ. ಕೊನೆಗೆ ಮನೆಗೆ ಬಂದು ಮಲಗಿದ್ದಾಗ ದೇಹದಲ್ಲಿ ವಿಷ ಹರಡಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







