ಬೆಂಗಳೂರು: ಜಾತಿಗಣತಿ ವೇಳೆ ಉಪಜಾತಿಗಳ ಮೊದಲು ಒಕ್ಕಲಿಗ ಎಂದು ಬರೆಸಬೇಕು ಎಂದು ಒಕ್ಕಲಿಗ ಸಮುದಾಯದ ಸಭೆಯಲ್ಲಿ ಒಕ್ಕೊರಲ ಕೂಗು ಕೇಳಿಬಂದಿದೆ.ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂದ ಸ್ವಾಮಿಗಳ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದ ಜಾತಿಗಣತಿ ಜಾಗೃತಿ ಸಭೆ ನಡೆದಿದೆ. ಸಭೆಯಲ್ಲಿ ನಂಜಾವಧೂತ ಸ್ವಾಮೀಜಿ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ, ವಿಪಕ್ಷ ನಾಯಕ ಆರ್. ಅಶೋಕ್, ಸಚಿವ ಚಲುವರಾಯಸ್ವಾಮಿ, ಶಾಸಕ ಅಶ್ವಥ್ ನಾರಾಯಣ್, ನಿಖಿಲ್ ಕುಮಾರಸ್ವಾಮಿ, ಎಂ.ಸಿ.ಸುಧಾಕರ್, ಒಕ್ಕಲಿಗರ ಸಂಘದ ಅಧ್ಯಕ್ಷರು ಹಾಗೂ ವಿವಿಧ ಮಠಾಧೀಶರು ಭಾಗಿಯಾಗಿದ್ದಾರೆ. ಅಲ್ಲದೇ ಒಕ್ಕಲಿಗ ಶಾಸಕರು, ಸಂಸದರು, ಪರಿಷತ್ ಸದಸ್ಯರು, ಮಾಜಿ ಶಾಸಕರು ಪಕ್ಷಾತೀತವಾಗಿ ಪಾಲ್ಗೊಂಡಿದ್ದಾರೆ.ಸಮೀಕ್ಷೆ ಗೊಂದಲ, ಒಕ್ಕಲಿಗರ ಉಪ ಜಾತಿಯ ಕುರಿತು ಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಒಕ್ಕಲಿಗರನ್ನ ಏನೆಂದು ಉಲ್ಲೇಖಿಸಬೇಕು ಎಂದು ಸಮಾಲೋಚನೆ ನಡೆಸಿದ್ದಾರೆ.ಸಭೆ ಬಳಿಕ ಶ್ರೀಗಳು ಸುದ್ದಿಗೋಷ್ಠಿ ನಡೆಸಲಿದ್ದು ಜಾತಿ ಸಮೀಕ್ಷೆಯಲ್ಲಿ ಏನೆಂದು ನಮೂದಿಸಬೇಕು?ಒಕ್ಕಲಿಗ ಸಮುದಾಯಲ್ಲಿ ಉಪಜಾತಿಗಳಿವೆ. ಜಾತಿ ಕಲಂನಲ್ಲಿ ಏನೆಂದು ನಮೂದು ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.ಇನ್ನು ಸಭೆಗೂ ಮುನ್ನ ಹೆಚ್ಡಿಕೆ ಹಾಗೂ ಡಿಕೆಶಿ ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿ ಮಾಡಿದ್ದಾರೆ. ಸ್ವಾಮೀಜಿಗಳ ಜೊತೆಯಲ್ಲೇ ಇಬ್ಬರೂ ವೇದಿಕೆಗೆ ಆಗಮಿಸಿದರು. ಸ್ವಾಮೀಜಿ ಅಕ್ಕಪಕ್ಕದಲ್ಲಿ ಕುಳಿತರೂ ಡಿಕೆಶಿ ಹಾಗೂ ಹೆಚ್ಡಿಕೆ ಒಬ್ಬರನ್ನೊಬ್ಬರು ಮಾತನಾಡಿಸಲಿಲ್ಲ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







