ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕನ್ನಡ ಚಿತ್ರರಂಗದ ಕುಖ್ಯಾತ
ನಟ ದರ್ಶನ್ ಮತ್ತು ಅವರ ಸಹಚರರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಬೇಕೆಂದು ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟ್ ವಜಾ ಮಾಡಿದೆ.ಇದರಿಂದಾಗಿ ದರ್ಶನ್ ಮತ್ತು ಆತನ ಗ್ಯಾಂಗ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ತಮ್ಮ ವಾಸ ಮುಂದುವರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ದರ್ಶನ್ ಅಂಡ್ ಗ್ಯಾಂಗ್ ಶಿಫ್ಟ್ ಮಾಡಬೇಕೆಂದು ಜೈಲು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ನಟ ದರ್ಶನ್ ಪರ ವಕೀಲರು ಕೂಡ ದರ್ಶನ್ ಗ್ಯಾಂಗ್ ಅನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲು ವಿರೋಧಿಸಿದ್ದರು. ಹೀಗಾಗಿ ಈಗ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಬೇಕಾಗುತ್ತದೆ. ಬೇಸಿಗೆಯಲ್ಲಿ ಬಳ್ಳಾರಿಯ ಸುಡು ಬಿಸಿಲಿನ ವಾತಾವರಣದಿಂದ ದರ್ಶನ್ ಅಂಡ್ ಗ್ಯಾಂಗ್ ಎಸ್ಕೇಪ್ ಆಗಿದೆ.ಆದರೆ ನಟ ದರ್ಶನ್ ಗೆ ಕನಿಷ್ಠ ಮೂಲ ಸೌಕರ್ಯಗಳನ್ನು ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಕೋರ್ಟ್ ಮಾನ್ಯ ಮಾಡಿದೆ. ಜೈಲು ಮ್ಯಾನುಯಲ್ ಪ್ರಕಾರ ಏನೆಲ್ಲಾ ಸೌಲಭ್ಯ ಕೊಡಬೇಕು ಅದನ್ನು ಕೊಡಿ ಎಂದು ಕೋರ್ಟ್ ಆದೇಶ ನೀಡಿದೆ. ಮತ್ತೆ ಏನಾದ್ರು ಜೈಲಿನಲ್ಲಿ ರಾಜಾತಿಥ್ಯ ಕಂಡು ಬಂದ್ರೆ ಶಿಫ್ಟ್ ಮಾಡುವ ಅಧಿಕಾರಿಗೆ ಜೈಲಿನ ಐಜಿಗೆ ಇದೆ. ಜೈಲಿನ ಮ್ಯಾನ್ಯುಯಲ್ ಪ್ರಕಾರ ವಾಕಿಂಗ್ ಮಾಡಲು ಅವಕಾಶ ಕೊಡಿ ಎಂದು ಕೋರ್ಟ್ ಹೇಳಿದೆ. 64ನೇ ಸಿಸಿಹೆಚ್ ಕೋರ್ಟ್ ಈ ಆದೇಶ ನೀಡಿದ್ದು, ಜೈಲು ಮ್ಯಾನುಯಲ್ ಪ್ರಕಾರ ಕೋರ್ಟ್ ಅನುಮತಿ ನೀಡಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







